ಲೇಖಕ: admin

ಮಡಿಕೇರಿ ಏ.25 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತಗಟ್ಟೆಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸುವ ‘ಮಸ್ಟರಿಂಗ್’ ಕಾರ್ಯ ಸಕಲ ಪೊಲೀಸ್ ಬಂದೋಬಸ್ತ್ ನೊಂದಿ  ಸುಸೂತ್ರವಾಗಿ ನಡೆಯಿತು. ಜಿಲ್ಲಾ ಕೇಂದ್ರ ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್‌ನಲ್ಲಿ ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ 273 ಮತಗಟ್ಟೆಗಳಿಗೆ 1208 ಸಿಬ್ಬಂದಿಗಳನ್ನು ನಿಯೋಜಿಸಲಾಯಿತು. ಇಷ್ಟೇ ಸಂಖ್ಯೆಯ ಸಿಬ್ಬಂದಿಗಳನ್ನು ವಿರಾಜಪೇಟೆಯಲ್ಲಿ ನಡೆದ ಮಸ್ಟರಿಂಗ್ ಕಾರ್ಯದ ಮೂಲಕ ಆ ಕ್ಷೇತ್ರ ವ್ಯಾಪ್ತಿಯ 273 ಮತಗಟ್ಟೆಗಳಿಗೆ ನಿಯೋಜಿಸಲಾಯಿತು. ಚುನಾವಣೆ ಪ್ರಜಾಪ್ರಭುತ್ವದ ಹಬ್ಬ- ಮಡಿಕೇರಿಯ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿಯನ್ನಿತ್ತು, ಅಲ್ಲಿನ ಸಿಬ್ಬಂದಿ ನಿಯೋಜನೆ ಕಾರ್ಯಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮತ್ತು ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ ವೀಕ್ಷಿಸಿದರು. ಮತಗಟ್ಟೆಗಳಿಗೆ ನಿಯುಕ್ತರಾದ ಸಿಬ್ಬಂದಿಗಳಿಗೆ ಕೊನೆಯ ಹಂತದ ಮಾಹಿತಿ ಮತ್ತು ತರಬೇತಿಯನ್ನು ಈ ಸಂದರ್ಭ ನೀಡಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಎನ್ನುವುದು ಒಂದು ಹಬ್ಬವಾಗಿದೆ. ಇದನ್ನು ಅತ್ಯಂತ ಶಾಂತಿಯುತವಾಗಿ…

Read More

ಮಡಿಕೇರಿ ಏ.25 NEWS DESK : ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.1312779, ನೇಹಾ ಕೆ ಉದಪುಡಿ 98.9485981, ಪ್ರಣವ್ ಟಿ ಎಮ್ 98.6313992, ಆದಿತ್ಯ ಅಲಗೌಡ ಪಾಟೀಲ್ 98.5573008, ಯುವರಾಜ್ ಬಿ ಕೆ 98.287914, ಅಕುಲ್ ಕೃಷ್ಣ ಎಮ್ ಎಸ್ 98.0229479, ಪಾರ್ಥ ಎ ಬಿ 98.0229479 ಪರ್ಸಂಟೈಲ್ ಗಳಿಸಿರುತ್ತಾರೆ. ಈ ಮೂಲಕ ಪರೀಕ್ಷೆ ಬರೆದ 441 ವಿದ್ಯಾರ್ಥಿಗಳಲ್ಲಿ 126 ವಿದ್ಯಾರ್ಥಿಗಳು ಮುಂಬರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳು ಎನ್.ಐ.ಟಿ ಅಂತಹ ಸಂಸ್ಥೆಗಳಲ್ಲಿ ಬಿ.ಇ ಪದವಿಗೆ ಪ್ರವೇಶ ಪಡೆಯುವ ಅವಕಾಶದ ಜೊತೆಗೆ ಐ.ಐ.ಟಿ ಸಂಸ್ಥೆ ಸೇರಲು ಮಾನದಂಡವಾಗಿರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆದಿರುತ್ತಾರೆ. ಜೆ.ಇ.ಇ (ಮೈನ್) ಪರೀಕ್ಷೆಯಲ್ಲಿ ಸಾಧನೆಗೈದ ಎಲ್ಲಾ…

Read More

ಮಡಿಕೇರಿ ಏ.25 NEWS DESK : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್9 ಬಲಮುರಿ, ಎಫ್6 ಇಂಡಸ್ಟ್ರೀಯಲ್ ಏರಿಯಾ, ಎಫ್8 ಸೋಮೇಶ್ವರ, ಎಫ್6 ಕೂಡಿಗೆ, ಎಫ್2 ಕಾವೇರಿ, ಎಫ್ 13 ಎಸ್‍ಎಲ್‍ಎನ್, ಎಫ್15 ಭುವನಗಿರಿ, ಹಾಗೂ ಎಫ್1 ಹೆಬ್ಬಾಲೆ ಫೀಢರ್‍ನಲ್ಲಿ ಎಂಐಡಿ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹಳೆಮಾರ್ಕೆಟ್ ರಸ್ತೆ, ತ್ಯಾಗರಾಜ ರಸ್ತೆ, ಕೆಪಿಟಿಸಿಎಲ್ ಜಂಕ್ಷನ್, ಗೊಂದಿ ಬಸವನಹಳ್ಳಿ, ಮುಳ್ಳುಸೋಗೆ, ಗುಮ್ಮನಕೊಲ್ಲಿ, ಸಾಯಿ ಲೇಔಟ್, ಜನತಾ ಕಾಲೋನಿ, ಹಾರಂಗಿ, ವೀರಭೂಮಿ ಸರ್ಕಲ್, ದೊಡ್ಡತ್ತೂರು, ಬಸವನತ್ತೂರು, ಕೂಡಿಗೆ, ಕೂಡುಮಂಗಳೂರು, ಕುವೆಂಪು ಲೇಔಟ್, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್  ತಿಳಿಸಿದ್ದಾರೆ.

Read More

ಮಡಿಕೇರಿ ಏ.25  NEWS DESK : ಕೊಡವ ಕುಟುಂಬಗಳ ನಡುವಿನ 24ನೇ ಹಾಕಿ ಹಬ್ಬ ಪ್ರತಿಷ್ಠಿತ “ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024” ರ ಅಂತಿಮ ಪಂದ್ಯಾಟ ಮತ್ತು ಸಮಾರೋಪ ಸಮಾರಂಭ ಏ.28 ರಂದು ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎ ಕ್ರೀಡಾಕೂಟದ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಕಿ ಹಬ್ಬದ ಕೊನೆಯ ಎರಡು ದಿನಗಳ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಕೊಡವ ಕೌಟುಂಬಿಕ ಹಾಕಿ ಹಬ್ಬದ ಸೆಮಿಫೈನಲ್ ಪಂದ್ಯಾವಳಿ ಏ.27 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಪಾಲ್ಗೊಳ್ಳಲಿದ್ದಾರೆ. ಏ.27 ರ ಶನಿವಾರ ಬೆಳಗ್ಗೆ 7 ಗಂಟೆಗೆ ಕಕ್ಕಬ್ಬೆಯಿಂದ ನಾಪೋಕ್ಲುವರೆಗೆ ಕೊಡವ ಕುಟುಂಬಗಳ ನಡುವೆ 2.50 * 4 ಕಿ.ಮೀ…

Read More

ಮಡಿಕೇರಿ ಏ.25 NEWS DESK : ಲೋಕಸಭಾ ಚುನಾವಣೆ-2024 ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏ.24 ರ ಸಂಜೆ 5 ಗಂಟೆಯಿಂದ ಏ.26 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂ.3 ರ ಮಧ್ಯರಾತ್ರಿ 12 ಗಂಟೆಯಿಂದ ಜೂ.4 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ ಏ.25 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ `ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5118 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5103 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24ನೇ ಆರ್ಥಿಕ ಸಾಲಿನಲ್ಲಿ 314 ಪ್ರಕರಣಗಳು ದಾಖಲಾಗಿ 299 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 15 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ. 35 ಲಕ್ಷ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2023-24ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ…

Read More

ಮಡಿಕೇರಿ ಏ.25  NEWS DESK : ಮಡಿಕೇರಿ ನಗರಸಭಾ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಕೇಂದ್ರಗಳಿಗೆ ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರೊಂದಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಪಿಆರ್‍ಓ ಗಳಿಂದ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದು, ಸ್ವಚ್ಛತೆ ಕುಡಿಯುವ ನೀರು ಹಾಗೂ ಮೇಜು ಕುರ್ಚಿಗಳನ್ನು ಒದಗಿಸಲಾಯಿತು. ಅಲ್ಲದೆ ಸಖಿ ಬೂತ್ ಗಳು ಮತ್ತು ಮಾದರಿ ಬೂತ್ ಗಳನ್ನು ಪರಿಶೀಲನೆ ಮಾಡಿದರು.

Read More

ಮಡಿಕೇರಿ ಏ.25 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಏ.26 ರಂದು ಮತದಾನ ನಡೆಯಲಿದ್ದು, ನಗರದ ಸಂತ ಜೋಸೆಫರ ಶಾಲೆ, ವಿರಾಜಪೇಟೆ ಸಂತ ಅನ್ನಮ್ಮ ಶಾಲಾ ಆವರಣದಲ್ಲಿ ಮಸ್ಟರಿಂಗ್ ಕಾರ್ಯ ಸುಸೂತ್ರವಾಗಿ ನಡೆಯಿತು. ಚುನಾವಣೆ ಮತಗಟ್ಟೆಗಳಿಗೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿಗಳು ಮತಯಂತ್ರ ಹಾಗೂ ಇತರೆ ಸಲಕರಣೆಗಳನ್ನು ಪಡೆದು ಮತಗಟ್ಟೆ ಕಡೆದ ಸಾಗಿದರು. ಚುನಾವಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಯಾ ತಾಲೂಕು ಮಾಸ್ಟರಿಂಗ್ ಕೇಂದ್ರಗಳಲ್ಲಿ ಮತಯಂತ್ರ ಬಳಕೆ ಕುರಿತು ಕೊನೆಯ ಸುತ್ತಿನ ಮಾಹಿತಿ ಪಡೆದರು ಪಡೆದುಕೊಂಡರು.

Read More

ಮಡಿಕೇರಿ ಏ.25 NEWS DESK : ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ “ಕಾಂಗತ ಮೂಡ್” (The Shadow) ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಮೂರ್ನಾಡಿನ ಬಿದ್ದಂಡ ಪೊನ್ನಪ್ಪ ಅವರ ನಿವಾಸದಲ್ಲಿ ಆರಂಭಗೊಂಡ ಚಿತ್ರೀಕರಣವು ಕಳೆದ 11 ದಿನಗಳಲ್ಲಿ ಕೊಡಗಿನ ವಿವಿಧೆಡೆ ಚಿತ್ರೀಕರಿಸಿ ಇದೀಗ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಚಿತ್ರೀಕರಣಕ್ಕೆ ಸಹಕರಿಸಿದ ಮೂರ್ನಾಡು ಕಾಂತೂರು ಗ್ರಾಮದ ಕಾಫಿ ಬೆಳೆಗಾರರಾದ ಬಿದ್ದಂಡ ಲೀಲಾ ಪೊನ್ನಪ್ಪ ಚಿತ್ರೀಕರಣ ಪೂರ್ಣಗೊಂಡ ಹಿನ್ನಲೆ ಕುಂಬಳಕಾಯಿ ಒಡೆದು, ಮಾತನಾಡಿ “ಕಾಂಗತ ಮೂಡ್” ಚಿತ್ರ ಕೊಡಗು ಸೇರಿದಂತೆ ಎಲ್ಲೆಡೆ ಉತ್ತಮ ಪ್ರದರ್ಶನ ಕಂಡು ಯಶಸ್ವಿಯಾಗಲಿ ಎಂದು ಚಿತ್ರತಂಡಕ್ಕೆ ಶುಭಹಾರೈಸಿದರು. ಚಿತ್ರದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಮಾತನಾಡಿ, ಕೊಡವ ಭಾಷೆಯ ಉಳಿವು, ಜನರಿಗೆ ಹಾಗೂ ಸಮಾಜಕ್ಕೆ ಕೊಡವ ಸಂಸ್ಕೃತಿ, ಆಚಾರ, ವಿಚಾರಗಳನ್ನು ತಲುಪಿಸುವ ನಿಟ್ಟಿನಲ್ಲಿ ವರ್ಷಂಪ್ರತಿ ಕೊಡವ ಸಿನಿಮಾವನ್ನು ನಮ್ಮ ತಂಡದೊಂದಿಗೆ ನಿರ್ಮಿಸಲಾಗುತ್ತಿದ್ದು, ಕೊಡಗಿನಾದ್ಯಂತ ಜನರು…

Read More

ಮಡಿಕೇರಿ ಏ.25 NEWS DESK : ಕೊಡಗು ಜಿಲ್ಲಾ ಎನ್.ಎಸ್.ಯು.ಐ (ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ)ದ ವತಿಯಿಂದ ಜಿಲ್ಲಾ ಮಟ್ಟದ ಯುವ ನ್ಯಾಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಎನ್‍ಎಸ್‍ಯುಐ ಪ್ರಥಮ ಜಿಲ್ಲಾ ಮಟ್ಟದ ಸಭೆಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಯುವ ನ್ಯಾಯ ಯೋಜನೆಯ ಪ್ರತಿಯನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಜಗತ್ತಿನಲ್ಲಿ ಅತ್ಯಂತ ಹೆಚ್ಚು ಯುವಕರನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆ ಭಾರತ ದೇಶದ್ದಾಗಿದೆ. ಯುವಕರಿಗೆ ಸೂಕ್ತ ನ್ಯಾಯ ದೊರೆಯದೆ ಇರುವುದು ವಿಷಾದನೀಯ ಎಂದರು. ದೂರದೃಷ್ಟಿಯುಳ್ಳ ನ್ಯಾಯಕರಾದ ರಾಹುಲ್ ಗಾಂಧಿ ಅವರು ದೇಶದ ಯುವ ಸಮೂಹದ ಏಳಿಗೆಗೆ ಹಲವು ಸುಧಾರಣೆಗಳನ್ನು ರೂಪಿಸಿ ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡಿದ್ದಾರೆ. ಅವರಿಗೆ ದೇಶದ ಮೇಲೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಾಶಿದ್, ಕೊಡಗು ಜಿಲ್ಲಾದ್ಯಂತ ಎನ್.ಎಸ್.ಯು.ಐ ಸಂಘಟನೆಯನ್ನು ಬಲಿಷ್ಟ ಪಡಿಸುವುದಾಗಿ…

Read More