ಚೆಟ್ಟಳ್ಳಿ ಏ.25 NEWS DESK : ವಿರಾಜಪೇಟೆಯ ಚೆಂಬೆಬೆಳ್ಳೂರಿನ ವಾರ್ಷಿಕ ಬೋಡ್‍ನಮ್ಮೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ಹುಲಿವೇಷದಾರಿಗಳು, ದೋಳ್ ಪಾಟ್, ಬಂಡ್ ಕಳಿ( ಕೆಸರು ವೇಷ), ಪಿಲ್ಲ್ ಭೂತ, ಕಾಪಳ ವೇಷದಾರಿಗಳ ಕುಣಿತ ಗಮನ ಸೆಳೆಯಿತು. ಪಟ್ಟಣಿ ಹಬ್ಬದೊಂದಿಗೆ ಆರಂಭವಾದ ಬೋಡ್‍ನಮ್ಮೆಯು ಪಣಿಕರಡೋಲಿನಕೊಟ್ಟು ಹಾಗೂ ಕೊಂಬಿನ ಊದಿದ ನಂತರ ಊರಿನವರು ಸಂಪ್ರದಾಯದಂತೆ ಪಟ್ಟಣಿ ಮುರಿಯಲಾಯಿತು. ಹಿರಿಯರು, ಕಿರಿಯರೆಲ್ಲ ದೇವರ ನೆಲೆಯ ಸುತ್ತಲೂ ಕುಣಿಯುತಾ ಪ್ರದಕದಕ್ಷಿಣೆ ಬಂದು ಹರಕೆ ಕಾಣಿಕೆಯನ್ನು ದೇವರಿಗೆ ಅರ್ಪಿಸಿದರು. ವಿವಿಧ ಬಗೆಯ ಹೆಣ್ಣಿನ ವೇಷ, ಗಗನ ಸಖಿಯರ ತಂಡ, ಲಂಬಾಣಿ ವೇಷ, ರಾಮಲಕ್ಷ್ಮಣರು, ರಾಜಸ್ತಾನಿ ನೃತ್ಯ ಇತ್ಯಾದಿ ವೈಭವ ಕಣ್ಮನ ಸೆಳೆಯಿತು. ಹಬ್ಬದ ಅಂಗವಾಗಿ ಭದ್ರಕಾಳಿ ದೇವಾಲಯವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಪೊದಕೇರಿ, ಪೊದಕೋಟೆ ಹಾಗೂ ನಡಿಕೇರಿ ಊರಿನ ಮೂರು ಕೇರಿಯಿಂದ ಬೆತ್ತದಿಂದ ಮಾಡಿ ಶೃಗಂರಿಸಿದ ಕೃತಕ ಮೂರು ಕುದುರೆಯೊಂದಿಗೆ ಊರಿನವರು ಅಂಬಲಕ್ಕೆ ಬಂದು ದೇವಾಲಯದಲ್ಲಿ ಸೇರುವ ಮೂಲಕ ಪೂಜಾ ಕೈಂಕರ್ಯವನ್ನು ನೆರವೇರಿಸಿದರು. ರಾತ್ರಿ ಊರಿನವರು, ಹರಕ್ಕೆ ಹೊತ್ತವರು ಮೈ ಯಲ್ಲೆಲ್ಲ…
ಲೇಖಕ: admin
ಸೋಮವಾರಪೇಟೆ ಏ.25 NEWS DESK : ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಖ್ಯಾತಿಯಾಗಿರುವ ನಗರಳ್ಳಿ ಸುಗ್ಗಿ ಉತ್ಸವವು ಏ.29 ರಂದು ನಗರಳ್ಳಿಯ ಸುಗ್ಗಿ ಬನದಲ್ಲಿ ನಡೆಯಲಿದೆ. ಸಂಪ್ರಾದಾಯಿಕ ಸುಗ್ಗಿ ಆಚರಣೆಯಂತೆ ಸಬ್ಬಮ್ಮ ದೇವಿಯ ತವರೂರು ಎಂದೆ ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ವಿಶೇಷ ಆಯುದ ಪೂಜೆ ನಡೆಯಿತು. ಅನಾದಿಕಾಲದಿಂದಲೂ ನಡೆದು ಕೊಂಡು ಬಂದಂತೆ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಗ್ರಾಮದ ಮನೆಗಳಲ್ಲಿರುವ ಬಂದೂಕುಗಳನ್ನು ತಂದಿಟ್ಟು ನಂತರ ಸಾಮೂಹಿಕವಾಗಿ ಪೂಜೆ ಸಲ್ಲಿಸಲಾಯಿತು. ನಂತರ ದೇವರ ಕಟ್ಟೆಗೆ ಗ್ರಾಮಸ್ಥರು ಬಂದೂಕು ಹಿಡಿದು ಪ್ರದಕ್ಷಿಣೆ ಹಾಕಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಉತ್ಸವಕ್ಕೆ ಚಾಲನೆ ನೀಡಿದರು. ಕೂತಿನಾಡು ವ್ಯಾಪ್ತಿಗೆ ಒಳಪಡುವ ಕೂತಿ ಗ್ರಾಮ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೇಕನಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟಡಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಳ್ಳಿ, ಬಿಕಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ ಹಾಗೂ ಸಕಲೇಶಪುರ ತಾಲೂಕಿನ ಒಡಳ್ಳಿ ಗ್ರಾಮಸ್ಥರು ಸುಗ್ಗಿ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.…
ಚೆಟ್ಟಳ್ಳಿ ಏ.25 NEWS DESK : ಚೆಟ್ಟಳ್ಳಿಯ ಪುರಾತನ ಇತಿಹಾಸ ನೆಲೆಯಾದ ಬೇಟೆಗಾರ ಅಯ್ಯಪ್ಪ ನೆಲೆಯಲ್ಲಿ ವಾರ್ಷಿಕ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೆಳಿಗ್ಗೆ ಗಣಪತಿ ಪೂಜೆ ಸಲ್ಲಿಸಿ, ನಂತರ ಭನದಲ್ಲಿರುವ ಬೇಟೆಗಾರ ಅಯ್ಯಪ್ಪ ನೆಲೆಯಲ್ಲಿ ಚಪ್ಪರ ಹಾಕಿ ಹಾಲು, ಹಣ್ಣು, ಕಜ್ಜಾಯ, ಬಿಲ್ಲುಬಾಣವನ್ನೆಲ್ಲ ಅರ್ಪಿಸಿ ಮಹಾಪೂಜೆಯನ್ನು ನೆರವೇರಿಸಲಾಯಿತು. ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಣೆ ಬಳಿಕ ನೆರವೇರಿತು.
ಮಡಿಕೇರಿ ಏ.25 NEWS DESK : ಕೊಡಗು ಜಿಲ್ಲೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಏಪ್ರಿಲ್, 26 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸಾರ್ವಜನಿಕರು ಪ್ರಜಾತಂತ್ರದ ಮತದಾನದ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಕೋರಿದರು. ಮತದಾರರ ವಿವರ: 21-ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನಕ್ಕಾಗಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಒಟ್ಟು 4,70,766 ಮತದಾರರಿದ್ದು, 2,30,568 ಪುರುಷರು ಮತ್ತು 2,40,182 ಮಹಿಳಾ ಮತದಾರರು, 16 ಇತರ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ…
ಮಡಿಕೇರಿ ಏ.25 NEWS DESK : ಭಾರತ ಚುನಾವಣಾ ಆಯೋಗವು ಏ.26 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಕೊಡಗು ಜಿಲ್ಲೆಯಲ್ಲಿ ಮತದಾನ ದಿನವಾಗಿದ್ದು, ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ಸಂಸ್ಥೆಯವರು ಅನುವು ಮಾಡಿಕೊಡಬೇಕಾಗಿದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಈ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ತಿಳಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಮಾಲೀಕರು, ಸಂಸ್ಥೆಯವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಡಗು ಉಪವಿಭಾಗದ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಎಸ್.ಎಲ್. ತಿಳಿಸಿದ್ದಾರೆ.
ಮಡಿಕೇರಿ ಏ.25 NEWS DESK : ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಡಾ.ರಾಜ್‍ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತ ಮಡ್ಲೂರು ಅವರು ಡಾ.ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳಾದ ದೇವಕಿ, ಪ್ರೀತಂ ಇದ್ದರು.
ಮಡಿಕೇರಿ ಏ.24 NEWS DESK : ಜಾತ್ಯತೀತ ಜನತಾದಳದ ರಾಜ್ಯ ಉಪಾಧ್ಯಕ್ಷ ಹಾಗೂ ಖ್ಯಾತ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ಅವರು ಇಂದು ತಮ್ಮ ಬೆಂಬಲಗರೊAದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಿರಾಜಪೇಟೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಮ್ಮುಖದಲ್ಲಿ ಮನೋಜ್ ಬೋಪಯ್ಯ ಅವರು ತಮ್ಮ ಪುತ್ರ ಅನೀಶ್ ಹಾಗೂ ವಕೀಲ ಸ್ನೇಹಿತರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಕಾಂಗ್ರೆಸ್ ಶಲ್ಯವನ್ನು ನೀಡಿ ಬರಮಾಡಿಕೊಂಡ ಪೊನ್ನಣ್ಣ ಅವರು ಮನೋಜ್ ಬೋಪಯ್ಯರಿಗೆ ಶುಭ ಕೋರಿದರು. ಈ ಸಂದರ್ಭ ಮಾತನಾಡಿದ ಡಾ.ಯಾಲದಾಳು ಮನೋಜ್ ಬೋಪಯ್ಯ ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತಗಳು ಸಿಗಲಿದೆ, ಪೊನ್ನಣ್ಣ ಅವರು ಸಚಿವರಾಗಬೇಕು ಮತ್ತು ರಾಜಕೀಯವಾಗಿ ಬೆಳೆಯಬೇಕು ಎನ್ನುವ ಉದ್ದೇಶದಿಂದ ಅವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡಿರ ಪವನ್ ಪೆಮ್ಮಯ್ಯ ಸೇರಿದಂತೆ ವಿರಾಜಪೇಟೆ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
ಮಡಿಕೇರಿ ಏ.24 NEWS DESK : ಖಾಸಗಿ ಬಸ್ ಮತ್ತು ಕಾರೊಂದರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರು ಚಾಲಕ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಡಿಕೇರಿ ಸಮೀಪ ಮೇಕೇರಿ ಗ್ರಾಮದಲ್ಲಿ ನಡೆದಿದೆ. ಮಡಿಕೇರಿಯಿಂದ ಮೂರ್ನಾಡಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ವಿರಾಜಪೇಟೆ ಕಡೆಯಿಂದ ಮಡಿಕೇರಿಯತ್ತ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಸಂದರ್ಭ ಕಾರು ಚಾಲಕ, ಮೂಲತಃ ವಿರಾಜಪೇಟೆ ಸಮೀಪದ ಪೆರುಂಬಾಡಿ ಗ್ರಾಮದ ಅಶ್ವತ್ಥ್ ಎಂಬವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಏ.24 NEWS DESK : ಪ್ರತಿಷ್ಠಿತ ಮೈಸೂರು-ಕೊಡಗು ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ, ಬಿಜೆಪಿ ಅಭ್ಯರ್ಥಿ ಯದುವೀರ್ ಅವರ ‘ರೋಡ್ ಶೋ’ ನಡೆಯಿತು. ಬಿಜೆಪಿಯ ತಾರಾ ಪ್ರಚಾರಕಿ ಸಿನಿಮಾ ನಟಿ ತಾರಾ ಅನುರಾಧ ಹಾಗೂ ಜಿಲ್ಲೆಯ ಬಿಜೆಪಿ ಮುಖಂಡರು ಪಾಲ್ಗೊಂಡು ಬಿಜೆಪಿ ಪರ ಮತಯಾಚಿಸಿದರು. ನಗರದ ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಯದುವೀರ್ ಅವರು ಪಕ್ಷದ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ರೋಡ್ ಶೋ ನಡೆಸಿದರು. ಶ್ರೀಚೌಡೇಶ್ವರಿ ದೇವಾಲಯದಿಂದ ಆರಂಭಗೊಂಡ ಮೆರವಣಿಗೆ, ಮಹದೇವಪೇಟೆ, ಹಳೆಯ ಖಾಸಗಿ ಬಸ್ ನಿಲ್ದಾಣವನ್ನು ಹಾದು ಕೋಟೆಯ ಮುಖ್ಯ ಬೀದಿಗಳಲ್ಲಿ ಸಾಗಿತು. ರೋಡ್ ಶೋ ಆರಂಭಕ್ಕೂ ಮೊದಲು ತಾರಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಪರವಾಗಿ ರಾಜ್ಯ ಮತ್ತು ದೇಶದಲ್ಲಿ ಉತ್ತಮ ವಾತಾವರಣವಿದೆ. ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಅವರ ಬಗ್ಗೆ ಕ್ಷೇತ್ರದಾದ್ಯಂತ ಜನರ ಒಲವು ಕಂಡು ಬರುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ಹಿಂದಿನಿಂದಲು ಮೈಸೂರು ರಾಜವಂಶಸ್ಥರು ಮತ್ತು…
ಮಡಿಕೇರಿ ಏ.24 NEWS DESK : ಯಾವುದೇ ರಾಜಕೀಯ ಪಕ್ಷಗಳು ಅಥವಾ ವ್ಯಕ್ತಿಗಳು ಚುನಾವಣೆ ಪ್ರಚಾರ ಕೈಗೊಳ್ಳುವ ಸಂದರ್ಭ ಮತದಾನ ಮಾಡುವ ಸಲುವಾಗಿ ಹಣ ಅಥವಾ ಇತರೇ ವಸ್ತುಗಳನ್ನು ಹಂಚುತ್ತಿರುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300 ಮತ್ತು 9480804900 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಸಹಕರಿಸುವಂತೆ ಎಸ್‍ಪಿ ರಾಮರಾಜನ್ ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.






