ಮಡಿಕೇರಿ ಏ.24 NEWS DESK : ಚುನಾವಣಾ ಮತದಾನದ ಸಂದರ್ಭ ಸಾರ್ವಜನಿಕರೊಂದಿಗೆ ಅತ್ಯಂತ ಸೌಜನ್ಯಯುತವಾಗಿ ವರ್ತಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಗಳಿಂದ ಚುನಾವಣಾ ಸಂದರ್ಭ ತೊಂದರೆಯಾಗ ಕೂಡದೆಂದು ಸ್ಪಷ್ಟಪಡಿಸಿ, ಜಿಲ್ಲೆಯ ಜನತೆ ಶಿಕ್ಷಣವಂತರು ಮತ್ತು ಸೌಜನ್ಯಪರರು ಹೌದು. ಇವರೊಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯುಕ್ತರಾದ ಪೊಲೀಸ್ ಸಿಬ್ಬಂದಿಗಳು ಗೌರವಯುತವಾಗಿ ನಡೆದುಕೊಳ್ಳಬೇಕೆಂದು ಸ್ಪಷ್ಟಪಡಿಸಿದರು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯ ಸಮಸ್ಯೆಗಳಿಗೆ ನಾವು ಸ್ಪಂದಿಸುತ್ತೇವೆ. ಆದರೆ, ನಿಮ್ಮಿಂದ ಯಾವುದೇ ತೊಂದರೆಗಳು ಉಂಟಾಗಕೂಡದು. ಆ ರೀತಿಯಲ್ಲಿ ಕಾನೂನಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಲೇಖಕ: admin
ಮಡಿಕೇರಿ ಏ.24 NEWS DESK : ಲೋಕಸಭಾ ಚುನಾವಣೆಯನ್ನು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಸಲು ಕೊಡಗು ಜಿಲ್ಲಾ ವ್ಯಾಪಿ 1600 ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯುಕ್ತರಾದ ಪೊಲೀಸ್ ಸಿಬ್ಬಂದಿಗಳಿಗೆ, ಚುನಾವಣಾ ಸಂದರ್ಭ ಕರ್ತವ್ಯ ನಿರ್ವಹಿಸುವ ಬಗ್ಗೆ ಅಗತ್ಯ ಮಾಹಿತಿಗಳನ್ನು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬವಾಗಿದ್ದು, ಇದನ್ನು ಅತ್ಯಂತ ಶಾಂತಿಯುತವಾಗಿ ನಡೆಸುವುದಕ್ಕೆ ನಡೆಸುವುದಕ್ಕೆ ಪೂರಕವಾಗಿ ಈ ಬಾರಿ ಒಬ್ಬರು ಎಸ್‍ಪಿ, ಆರು ಡಿವೈಎಸ್‍ಪಿ, 14, ವೃತ್ತ ನಿರೀಕ್ಷಕರು, 45 ಎಸ್‍ಐ, 59 ಎಎಸ್‍ಐ, 678 ಸಿಬ್ಬಂದಿಗಳು, 280 ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು. ::: ಗುಜರಾತ್ ಪೊಲೀಸರ ನೆರವು ::: ಈ ಬಾರಿ ಗುಜರಾತ್‍ನ 2 ಕಂಪೆನಿ (180 ಮಂದಿ) ಪಲೀಸ್ ಸಿಬ್ಬಂದಿಗಳನ್ನು, 8 ಕೆಎಸ್‌ಆರ್‌ಪಿ, ಜಿಲ್ಲಾ ಸಶಸ್ತ್ರ ಪೊಲೀಸ್ ದಳವನ್ನು ಬಂದೋಬಸ್ತ್ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು…
ವಿರಾಜಪೇಟೆ ಏ.24 NEWS DESK : ಮೈಸೂರು ನಾರಾಯಣ ಆಸ್ಪತ್ರೆ ವತಿಯಿಂದ ವಿರಾಜಪೇಟೆಯ ಕ್ರೆಡೋ ಮೆಡಿಕಲ್ ಕೇಂದ್ರದಲ್ಲಿ 24*7 ಮೀಸಲಾದ ಆ್ಯಂಬುಲೆನ್ಸ್ ಸೇವೆಯೊಂದಿಗೆ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಮತ್ತು ತುರ್ತು ವೈದ್ಯಕೀಯ ಸೇವೆಗಳಿಗೆ ಚಾಲನೆ ನೀಡಲಾಯಿತು. ಮೈಸೂರಿನ ನಾರಾಯಣ ಆಸ್ಪತ್ರೆಯಲ್ಲಿ ಕಾರ್ಡಿಯಾಲಜಿ ಸೇವೆಗಳು ಮತ್ತು ಕ್ಲಿನಿಕಲ್ ಅಲಯನ್ಸ್ನ ನಿರ್ದೇಶಕರಾದ ಡಾ. ವಿ.ಕೇಶವಮೂರ್ತಿ, ವಿರಾಜಪೇಟೆ ನಗರ ಠಾಣಾಧಿಕಾರಿ ರವೀಂದ್ರ, ಕ್ರೆಡೋ ಮೆಡಿಕಲ್ ಸೆಂಟರ್ನ ಡಾ. ಕಟ್ಟೇರ ಪೂಣಚ್ಚ ವೈದ್ಯಕೀಯ ಸೇವೆಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೈಸೂರಿನ ನಾರಾಯಣ ಆಸ್ಪತ್ರೆಯ ಕಾರ್ಡಿಯಾಲಜಿ ಸೇವೆಗಳು ಮತ್ತು ಕ್ಲಿನಿಕಲ್ ಅಲಯನ್ಸ್ ನಿರ್ದೇಶಕ ಡಾ.ಕೇಶವಮೂರ್ತಿ, ವಿರಾಜಪೇಟೆಯಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಲಭ್ಯವಾಗುವಂತೆ ಮಾಡುವ ನಮ್ಮ ಬದ್ಧತೆಯನ್ನು ಈ ಹೊಸ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಹೊಸದಾಗಿ ಪ್ರಾರಂಭಿಸಲಾದ ತುರ್ತು ವೈದ್ಯಕೀಯ ಸೇವಾ ಕೇಂದ್ರವು ಅಗತ್ಯ ತುರ್ತು ಸೇವೆಗಳನ್ನು ಒದಗಿಸುತ್ತದೆ ಮತ್ತು ತುರ್ತು ಪರಿಸ್ಥಿತಿಗಳಿಗಾಗಿ 24/7 ಆಂಬ್ಯುಲೆನ್ಸ್ ಸೇವೆಯನ್ನು ಒದಗಿಸುತ್ತದೆ, ಈ ಸೇವೆಯಿಂದ ಜೀವ ಉಳಿಸುವ ಚಿಕಿತ್ಸೆಗಳಿಗಾಗಿ…
ಮಡಿಕೇರಿ ಏ.24 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭವು ಏ.26 ರಿಂದ ಮೇ 3ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಪಿ.ಅಬೂಬಕ್ಕರ್ ಸಖಾಫಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯಿದ್ ಹಸನ್ ಸಖಾಫ್ ಅಲ್ ಹಳ್ರಮಿ(ರ) ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ಎಮ್ಮೆಮಾಡಿನಲ್ಲಿ ವರ್ಷಂಪ್ರತಿ ನಡೆಯುವ ವಾರ್ಷಿಕ ಉರೂಸ್ ಸಮಾರಂಭದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆಯನ್ನು ಅನುಸರಿಸಲಾಗುವುದೆಂದು ಹೇಳಿದರು. ಏ.26 ರಂದು ಬೆಳ್ತಂಗಡಿ ದಾರುಸ್ಸಲಾಂ ಚೇರ್ಮೆನ್ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಅವರ ನೇತೃತ್ವದಲ್ಲಿ ಮಖಾಂ ಝಿಯಾರತ್ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಪಿ.ಅಬೂಬಕ್ಕರ್ ಸಖಾಫಿ ಧ್ವಜಾರೋಗಣದ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ರಾತ್ರಿ 8 ಗಂಟೆಗೆ ಕೊಡಗು ನಾಇಬ್ ಖಾಝಿ ಅಬ್ದುಲ್ಲ…
ಮಡಿಕೇರಿ ಏ.24 NEWS DESK : ಗ್ಯಾರಂಟಿ ಯೋಜನೆಗಳು ಕೆಲವೇ ತಿಂಗಳಿನಲ್ಲಿ ಸ್ಥಗಿತಗೊಳ್ಳಲಿದ್ದು, ಯಾರು ಕೂಡ ಗ್ಯಾರಂಟಿ ಯೋಜನೆಗಳಿಗೆ ಮರುಳಾಗಬೇಡಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಹೇಳಿದರು. ಕೊಡಗು ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚದಿಂದ ವಿರಾಜಪೇಟೆ ಕ್ಷೇತ್ರದ ತಿತಿಮತಿ, ಗಂಧದ ಕಾಡು, ಚೆನ್ನಯ್ಯನ ಕೋಟೆ ಪರಿಶಿಷ್ಟ ಜಾತಿಯ ಕಾಲೋನಿಗಳಿಗೆ ಭೇಟಿ ನೀಡಿದ ಶ್ರೀನಿವಾಸ್, ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದ ಭದ್ರತೆಗಾಗಿ ಮತ್ತು ಎಲ್ಲ ವರ್ಗದ ಕಲ್ಯಾಣಕ್ಕಾಗಿ ಮೋದಿ ಸರ್ಕಾರವು ಹಲವಾರು ಶಾಶ್ವತ ಯೋಜನೆಗಳನ್ನು ತಂದಿದ್ದು, ಅದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಪರಿಶಿಷ್ಟ ಜನಾಂಗದ ಏಳಿಗೆಗೆ ಹಲವಾರು ಯೋಜನೆಗಳಿದ್ದು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ತಾವುಗಳು ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ತಿಳಿಸಿದರು. ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚಾದ ಅಧ್ಯಕ್ಷ ಪಿ.ಎಂ.ರವಿ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದು, ನಮ್ಮ ಸಮುದಾಯದಲ್ಲಿ ಇತ್ತೀಚಿನ ದಿನದಲ್ಲಿ ಎಲ್ಲರೂ ವಿದ್ಯಾವಂತರಾಗಿದ್ದಾರೆ. ನಾವು ದೇಶದ ಸುಭದ್ರತೆಗೆ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು. ರಾಜಕೀಯದಲ್ಲಿ ನಾವುಗಳು ಬೆಳೆಯಬೇಕೆಂದರೆ ಬಿಜೆಪಿ…
ಮಡಿಕೇರಿ ಏ.24 NEWS DESK : ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ನಡೆದ ಅಪಘಾತದ ಪ್ರಕರಣದ ವಿಚಾರದಲ್ಲಿ ಮಡಿಕೇರಿ ಕ್ಷೇತ್ರದಸ ಶಾಸಕರ ಹೆಸರನ್ನು ಎಳೆದು ತರುವ ಮೂಲಕ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ದುರುದ್ದೇಶಪೂರಿತ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್ ಸುಂಟಿಕೊಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗದ್ದೆಹಳ್ಳದಲ್ಲಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡಿದ್ದಾರೆಯೇ ಹೊರತು ಯಾವುದೇ ರೀತಿಯಲ್ಲಿ ಕರ್ತವ್ಯಲೋಪ ಮಾಡಿಲ್ಲ. ಮಡಿಕೇರಿ ಶಾಸಕರು ಕಾನೂನು ಏನು ಹೇಳುತ್ತದೆ ಅದನ್ನು ಮಾಡಿ ಎಂದು ಕಾನೂನಿಗೆ ಗೌರವ ನೀಡಿ ಮಾತನಾಡಿದ್ದಾರೆಯೇ ಹೊರತು ಎಲ್ಲೂ ತಪ್ಪಾಗಿ ನಡೆದುಕೊಂಡಿಲ್ಲವೆಂದು ಸ್ಪಷ್ಟಪಡಿಸಿದರು. ಪ್ರತಿ ಚುನಾವಣೆ ಸಂದರ್ಭ ಎಸ್‌ಡಿಪಿಐ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಅಪಘಾತ ನಡೆದ ಸಂದರ್ಭ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳಾದ ನಮಗೆ ಸತ್ಯ ಏನು ಎನ್ನುವುದು ತಿಳಿದಿದೆ. ವಿನಾಕಾರಣ ಪ್ರಚಾರಕ್ಕಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರ ಹಾದಿ ತಪ್ಪಿಸುವುದನ್ನು…
ಮಡಿಕೇರಿ ಏ.24 NEWS DESK : ಕಲಬುರ್ಗಿಯಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಮುಸಲ್ಮಾನರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರಿಗೆ ದೂರು ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಎಂ.ಎ.ಕಲೀಲ್ ಬಾಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್, ಉಪಾಧ್ಯಕ್ಷ ಎಂ.ಬಿ.ಕೌಸರ್, ಖಜಾಂಚಿ ಎಂ.ಹೆಚ್.ಅಜೀಜ್ ಹಾಗೂ ನಗರ ಸಂಘಟನಾ ಕಾರ್ಯದರ್ಶಿ ಎಂ.ಎಂ.ಅಬ್ದುಲ್ ಅಜೀಜ್ ಅವರುಗಳು ದೂರು ನೀಡಿ ಯತ್ನಾಳ್ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಮುಸ್ಲಿಮರನ್ನು ಕಲ್ಲಿನಿಂದ ಹೊಡೆಯಿರಿ ಎಂದು ಪ್ರಚೋದನಾಕಾರಿ ಭಾಷಣ ಮಾಡಿರುವ ಯತ್ನಾಳ್ ಅವರು ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು…
ಮಡಿಕೇರಿ ಏ.24 NEWS DESK : ಬ್ರೈನೋಬೈನ್ ಇಂಟರ್‍ನ್ಯಾಷನಲ್ ವತಿಯಿಂದ ದೆಹಲಿಯ ತ್ಯಾಗ ರಾಜ್ ಸ್ಟೇಡಿಯಂನಲ್ಲಿ ನಡೆದ 43ನೇ ರಾಷ್ಟ್ರಮಟ್ಟದ ಬ್ರೈನೋಬೈನ್ ಅಬಕಾಸ್ ಸ್ಪರ್ಧೆ-2024 ರಲ್ಲಿ ಮಡಿಕೇರಿಯ ಬ್ರೈನೋಬೈನ್ ಕೇಂದ್ರದ ನುಷ್ಕಾ ಕಾವೇರಮ್ಮ ಕೊಡಂದೇರ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾಳೆ. ಬ್ರೈನೋಬೈನ್ ಇಂಟರ್ ನ್ಯಾಷನಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಮ್, ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಅವರು ನುಷ್ಕಾಳಿಗೆ ಪದಕ ಪ್ರದಾನ ಮಾಡಿದರು. ನುಷ್ಕಾ ಕೊಡಂದೇರ ಬ್ರೈನೋಬೈನ್ ಮಡಿಕೇರಿ ಕೇಂದ್ರದ ಮುಖ್ಯಸ್ಥರು ಹಾಗೂ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರಿಂದ ತರಬೇತಿ ಪಡೆದಿದ್ದಾಳೆ. ಮೈಸೂರಿನ ಐ ಕೇನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ 6 ವರ್ಷದ ನುಷ್ಕಾ ಕೊಡಂದೇರ ವಿಕ್ರಮ್ ಕುಟ್ಟಯ್ಯ ಹಾಗೂ ಕಾವ್ಯ ದಂಪತಿ ಪುತ್ರಿ. ಚಾಂಪಿಯನ್ ಟ್ರೋಫಿ ಗಳಿಸಿರುವ ವಿದ್ಯಾರ್ಥಿನಿಯ ಸಾಧನೆ ಅಮೋಘ ಎಂದು ಹರ್ಷ ವ್ಯಕ್ತಪಡಿಸಿರುವ ಕವಿತಾ ಕರುಂಬಯ್ಯ ಅವರು, ವಿದ್ಯಾರ್ಥಿನಿಯ ಸಾಧನೆಯ ಹೆಗ್ಗಳಿಕೆ ಪೋಷಕರಿಗೆ ಸಲ್ಲಬೇಕು ಎಂದು ಹೇಳಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ದೇಶದ…
ಮಡಿಕೇರಿ ಏ.24 NEWS DESK : ವಿರಾಜಪೇಟೆಯ ತೋರ ಗ್ರಾಮದಲ್ಲಿ ಹಾಕಿ ಮೈದಾನಕ್ಕಾಗಿ ಸುಮಾರು ಐದೂವರೆ ಎಕರೆ ಭೂಮಿ ಕಾಯ್ದಿರಿಸಿ ಮಂಜೂರಾತಿಗಾಗಿ ಸಹಕಾರ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೊಡವ ಹಾಕಿ ಹಾಕಿ ಅಕಾಡೆಮಿ ಸನ್ಮಾನಿಸಿ ಗೌರವಿಸಿತು ವಿರಾಜಪೇಟೆಯಲ್ಲಿ ಶಾಸಕರ ಗೃಹ ಕಚೇರಿಯಲ್ಲಿ ಭೇಟಿಯಾದ ಹಾಕಿ ಅಕಾಡೆಮಿ ಪ್ರಮುಖರು ಪೊನ್ನಣ್ಣ ಅವರಿಗೆ ಧನ್ಯವಾದ ಪತ್ರ ಸಲ್ಲಿಸಿ ಅಭಿನಂದಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೊಡಗಿನ ಕ್ರೀಡಾ ಪ್ರತಿಭೆಗಳು ಐದೂವರೆ ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುವ ಮೈದಾನದ ಸದುಪಯೋಗ ಪಡೆದುಕೊಂಡು ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಗಳಿಸಲಿ ಎಂದು ಶುಭ ಹಾರೈಸಿದರು. ಕೊಡವ ಹಾಕಿ ಅಕಾಡೆಮಿಯ ಪ್ರಯತ್ನಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರು ಮಾತನಾಡಿ 1997 ರಲ್ಲಿ ಸ್ಥಾಪಿಸಲ್ಪಟ್ಟ ಕೊಡವ ಹಾಕಿ ಅಕಾಡೆಮಿ ಸಾವಿರಾರು ಹಾಕಿ ಪ್ರತಿಭೆಗಳನ್ನು ಕ್ರೀಡಾ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡುವಲ್ಲಿ ಯಶಸ್ವಿಯಾಗಿದೆ…
ಮಡಿಕೇರಿ ಏ.24 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರು ಕೊಡಗು ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಅರಿತಿದ್ದು, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಗುಣ ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಇವರ ಗೆಲುವು ನಿಶ್ಚಿತವಾಗಿದೆ ಎಂದು ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನಸಾಮಾನ್ಯರೊಂದಿಗೆ ಬೆರೆತು ಕಷ್ಟಗಳನ್ನು ಅರಿಯುವ ಮತ್ತು ಸುಲಭವಾಗಿ ಸಿಗಬಲ್ಲ ಸಂಸದರೊಬ್ಬರು ಕೊಡಗು ಜಿಲ್ಲೆಗೆ ಬೇಕಾಗಿದ್ದಾರೆ. ಈ ಗುಣವನ್ನು ಜಿಲ್ಲೆಯ ಜನ ಲಕ್ಷ್ಮಣ್ ವರಲ್ಲಿ ಕಂಡಿದ್ದಾರೆ, ಆದ್ದರಿಂದ ಅತ್ಯಧಿಕ ಮತಗಳು ಅವರ ಪಾಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಲಕ್ಷ್ಮಣ್ ಅವರು ಕೊಡಗಿನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದೀಗ ಇಬ್ಬರು ಶಾಸಕರೊಂದಿಗೆ ಸಮನ್ವಯತೆಯನ್ನು ಕಾಯ್ದುಕೊಂಡಿದ್ದು, ಸಂಸದರಾಗಿ ಆಯ್ಕೆಯಾದರೆ ಜಿಲ್ಲೆ ಮತ್ತಷ್ಟು ಪ್ರಗತಿಯನ್ನು ಸಾಧಿಸಲಿದೆ ಎಂದು ತಿಳಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ,…






