ಲೇಖಕ: admin

ಮಡಿಕೇರಿ ಏ.22 NEWS DESK : ವಾಲ್ನೂರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿದ್ದವರ ವಿರುದ್ಧ ಹೂಡಲಾಗಿರುವ ಐಪಿಸಿ 302, 307 ಕಲಂಗಳಡಿಯ ಕೇಸ್ ಗಳನ್ನು ವಾಪಾಸ್ ಪಡೆಯದಿದ್ದಲ್ಲಿ ಎಸ್‍ಪಿ ಕಚೇರಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಘಟಕ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಆಕಸ್ಮಿಕವಾಗಿ ನಡೆದ ಅಪಘಾತ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ, ಕೊಲೆ ಯತ್ನದಂತಹ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸುವ ಮೂಲಕ ಪೊಲೀಸ್ ಇಲಾಖೆ ದ್ವಿಮುಖ ನೀತಿ ಅನುಸರಿಸಿದೆ ಎಂದು ಆರೋಪಿಸಿದರು. ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ಭಾನುವಾರ ಇದೇ ಮಾದರಿಯಲ್ಲಿ ಅಪಘಾತವೊಂದು ನಡೆದು ಕಾಸರಗೋಡಿನ ರಾಬಿಯ ಎಂಬ ಮಹಿಳೆ ಮೃತಪಟ್ಟು, ಉಳಿದ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 302, 307 ಕಲಂಗಳಡಿಯ ಕೇಸ್ ಯಾಕೆ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು. ಹುಬ್ಬಳ್ಳಿಯ ನೇಹ ಹತ್ಯೆ ಪ್ರಕರಣವನ್ನು ಎಸ್‍ಡಿಪಿಐ ತೀವ್ರವಾಗಿ ಖಂಡಿಸುತ್ತದೆ, ತಪ್ಪಿತಸ್ಥರಿಗೆ ಶಿಕ್ಷಯಾಗಬೇಕೆಂದು ಒತ್ತಾಯಿಸುತ್ತದೆ. ಆದರೆ…

Read More

ಮಡಿಕೇರಿ ಏ.22 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಸೆಲ್ಫಿ contest ನಡೆಸಲು ತೀರ್ಮಾನಿಸಲಾಗಿರುತ್ತದೆ. ಈ ಸೆಲ್ಫಿ contest ನಲ್ಲಿ #Lets Vote Kodagu! ಶೀರ್ಷಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿ, ನಗರದ ರಾಜಾಸೀಟು, ಸೋಮವಾರಪೇಟೆ ತಾಲೂಕು ಪಂಚಾಯತ್ ಕಚೇರಿ, ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಕಚೇರಿ, ವಿರಾಜಪೇಟೆ ತಹಸೀಲ್ದಾರ್ ಕಚೇರಿ, ಕುಶಾಲನಗರ ಕಾವೇರಿ ನಿಸರ್ಗಧಾಮ ಈ 6 ಸ್ಥಳಗಳಲ್ಲಿ ಮತದಾನ ಜಾಗೃತಿಗಾಗಿ ಸೆಲ್ಫಿ ಪಾಯಿಂಟ್‍ಗಳನ್ನು ನಿರ್ಮಿಸಲಾಗಿರುತ್ತದೆ. ಸಾರ್ವಜನಿಕರು ಮತ್ತು ಯುವ ಮತದಾರರು ಪೋಟೊವನ್ನು ಕಳುಹಿಸಬಹುದಾಗಿದೆ. ಅಲ್ಲದೆ ಏ.26 ರಂದು ಮತದಾನ ನಡೆಯಲಿರುವ ಆಯ್ದ ವಿಶೇಷ ಮತಗಟ್ಟೆಗಳಲ್ಲಿಯೂ ಸೆಲ್ಪಿ ಪಾಯಿಂಟ್ ಗಳನ್ನು ಸ್ಥಾಪಿಸಲಿದ್ದು, ಈ ಮತಗಟ್ಟೆಗಳಲ್ಲಿ ಮತದಾನ ಮಾಡಿದ ನಂತರ ಸೆಲ್ಪಿ ಪಾಯಿಂಟ್‍ನಲ್ಲಿ ಪೋಟೋಗಳನ್ನು ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಾದ್ಯಂತ ಎಲ್ಲಾ ಸಾರ್ವಜನಿಕರು, ಮತದಾರರು ಮತದಾನದ ಪೂರ್ವದಲ್ಲಿ ನಾನು ಮತ ಚಲಾಯಿಸುತ್ತೇನೆ…

Read More

ಸುಂಟಿಕೊಪ್ಪ ಏ.22 NEWS DESK : ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾಗಿ ರಜಾಕ್, ನಗರ ಅಧ್ಯಕ್ಷರಾಗಿ ರಫೀಕ್‍ಖಾನ್, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನೂಪ್ ಹಾಗೂ ಸುಂಟಿಕೊಪ್ಪ ಪಂಚಾಯಿತಿ ವಲಯ ಅಲ್ಪಸಂಖ್ಯಾತ ಘಟಕಕ್ಕೆ ಅಬ್ಧುಲ್ ಅಜೀಜ್ ಆಯ್ಕೆಯಾಗಿದ್ದಾರೆ. ಗದ್ದೆಹಳ್ಳದ ಎಸ್.ಎಸ್. ಇಂಟನ್ರ್ಯಾಷನಲ್ ಸಭಾಂಗಣದಲ್ಲಿ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಕಾಂಗ್ರೆಸ್‍ನ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದರು. ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್, ಸುಂಟಿಕೊಪ್ಪ ಗ್ರಾ.ಪಂ ಉಪಾಧ್ಯಕ್ಷೆ ಶಿವಮ್ಮ, ಸದಸ್ಯರಾದ ಸಬಾಸ್ಟೀನ್, ಮಾಜಿ ಸದಸ್ಯರಾದ ರೋಸ್‍ಮೇರಿ ರಾಡ್ರಿಗಸ್, ನಿರ್ಮಲಾ ಶೇಷಪ್ಪ, ರತ್ನ, ರಜಾಕ್, ಬೂತ್ ಅಧ್ಯಕ್ಷ ಷರೀಪ್, ಕುಶಾಲನಗರ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್, ಸುಂಟಿಕೊಪ್ಪ ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಅಜೀಜ್, ಎನ್‍ಎಸ್‍ಯುಐ ಘಟಕದ ಜಿಲ್ಲಾ ಉಪಾದ್ಯಕ್ಷ…

Read More

ಮಡಿಕೇರಿ ಏ.22 NEWS DESK : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ `ಪುಸ್ತಕ ಮನೆ’ಯಲ್ಲಿ ಏ.23 ರಿಂದ ಏ.29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ `ಪುಸ್ತಕ ಸಂತೆ’ ಕಾರ್ಯಕ್ರಮ ನಡೆಯಲಿದೆ. ಏ.23ರ ಬೆಳಿಗ್ಗೆ 11 ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಎಲ್ಲಾ ಪುಸ್ತಕಗಳಿಗೂ ಶೇ.10 ರಿಂದ 50 ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ ಖರೀದಿಯೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. ಪುಸ್ತಕ ಪ್ರೇಮಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Read More

ಮಡಿಕೇರಿ ಏ.22 NEWS DESK : ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ನೀರಿನ ಅಭಾವ ಉಂಟಾಗಿದೆ. ಅಲ್ಲದೆ ಕಾಲರಾ ಮತ್ತು ವಾಂತಿ, ಬೇದಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ರಸ್ತೆಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ, ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್‍ಗೆಸ್ಟ್, ಹೋಮ್-ಸ್ಟೇ, ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರನ್ನು ನೀಡುವಂತೆ ಸೂಚಿಸಿದೆ. ಆಹಾರ ತಯಾರಿಕಾ ಮತ್ತು ಸಂಗ್ರಹಣಾ ಸ್ಥಳಗಳಲ್ಲಿ ನೊಣಗಳು, ಸೊಳ್ಳೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ, ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಮತ್ತು ತಯಾರಿಸಿರುವ ಎಲ್ಲಾ ಆಹಾರ ಪದಾರ್ಥಗಳನ್ನು ಸೂಕ್ತ ರಿತಿಯಲ್ಲಿ ಮುಚ್ಚಿಟ್ಟು ಸ್ವಚ್ಚವಾದ ವಿಧಾನದ ಮೂಲಕ ತಯಾರಿಕೆ ಮತ್ತು ವಿತರಣೆಯನ್ನು ಮಾಡುವಂತೆ ತಿಳಿಸಿದೆ. ಎಲ್ಲಾ ಆಹಾರ ಉದ್ದಿಮೆದಾರರು…

Read More

ಮಡಿಕೇರಿ ಏ.22 NEWS DESK : ಸೋಮವಾರಪೇಟೆಯ ಕಿರಗಂದೂರು ಗ್ರಾಮದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಿರಂಗದೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ವಿ.ಎಸ್.ಉಗ್ರಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಎಂ.ಚಂಗಪ್ಪ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕೆ.ಎಂ.ರಿತಿನ್, ಕೆ.ಟಿ.ರವಿಚಂದ್ರ, ಬಿ.ಎನ್.ರವಿ, ಎ.ಕೆ.ಬೊಪಯ್ಯ, ಎ.ಎಸ್.ಬೋಪಯ್ಯ, ಕೆ.ಪಿ.ಬೊಪಯ್ಯ ಹಾಗೂ ಕೆ.ಈ.ಸುರೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ, ನಟೇಶ್ ಗೌಡ, ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಬ್ಲಾಕ್ ಅಧ್ಯಕ್ಷ ಸತೀಶ್ ಮತ್ತಿತರ ಪ್ರಮುಖರು ಹಾಜರಿದ್ದರು.

Read More

ಮಡಿಕೇರಿ ಏ.22 NEWS DESK ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಾಲೆಮಾಡುವಿನಲ್ಲಿ ನಡೆದ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಸಹಾಯವಾಗಿದೆ ಎಂದರು. ಜನಪರ ಕಾಳಜಿಯ ಕಾಂಗ್ರೆಸ್ ಸರಕಾರ ಮತ್ತು ಪ್ರತಿಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸುವ ಗುಣ ಹೊಂದಿರುವ ಎಂ.ಲಕ್ಷ್ಮಣ್ ಅವರ ಪರ ಜಿಲ್ಲೆಯ ಮತದಾರರು ಒಲವು ತೋರುತ್ತಿದ್ದಾರೆ ಎಂದು ತಿಳಿಸಿದರು. ಪ್ರಚಾರದ ಸಂದರ್ಭ ಹಂಸ ಅವರು ಐದು ಗ್ಯಾರಂಟಿ ಯೋಜನೆಗಳು ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದರೆ ಜಾರಿಗೆ ಬರಲಿರುವ 25 ಭರವಸೆಗಳ ಪ್ರಣಾಳಿಕೆಯಲ್ಲಿನ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟರು. ಸಭೆಯಲ್ಲಿ ಕಾನ್ಶಿರಾಂ ನಗರದ ಅಧ್ಯಕ್ಷ ಹಾಗೂ ಗ್ರಾ.ಪಂ…

Read More

ಮಡಿಕೇರಿ ಏ.22 NEWS DESK : ಪ್ರವಾಸಿತಾಣವಾಗಿರುವ ಕೊಡಗು ಜಿಲ್ಲೆಗೆ ಹೊರ ಜಿಲ್ಲೆ, ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಹಾಗೂ ಜಿಲ್ಲೆಯಲ್ಲಿನ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಗಳು ನಡೆಯುತ್ತಿದೆ. ಜಿಲ್ಲೆಯಲ್ಲಿ ತಾಪಮಾನ ಹೆಚ್ಚಿರುವುದರಿಂದ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲರಾ, ವಾಂತಿ ಭೇದಿ ಪ್ರಕರಣಗಳು, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಇತ್ಯಾದಿ ಸಾಂಕ್ರಾಮಿಕ ರೋಗಗಳು ಸ್ಪೋಟಗೊಳ್ಳುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಸಂಭವಿಸದಂತೆ ಮತ್ತು ಉಲ್ಭಣಗೊಳ್ಳದಂತೆ ತೆಗೆದುಕೊಳ್ಳಬಹುದಾದ ಅಗತ್ಯ ಮುಂಜಾಗ್ರತಾ ಕ್ರಮಗಳು. ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ…

Read More

ಮಡಿಕೇರಿ ಏ.22 NEWS DESK : ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನ ಕಾರ್ಯದರ್ಶಿಯಾಗಿ ಹಂಚೆಟ್ಟಿರ ಮನು ಮುದ್ದಪ್ಪ ಹಾಗೂ ಖಜಾಂಚಿಯಾಗಿ ರೋಷನ್ ಕೊಂಬಾರನ ನೇಮಕಗೊಂಡಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ತಿಳಿಸಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನ ಮೇರೆಗೆ ಇವರಿಬ್ಬರನ್ನು ಆಯ್ಕೆ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಏ.22 NEWS DESK : ಕಾಂಗ್ರೆಸ್ ಪಕ್ಷದ ವತಿಯಿಂದ ಬಿಟ್ಟಂಗಾಲದ ಹೆಗಡೆ ಸಮಾಜದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಮತಯಾಚಿಸಿ, ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮಾತನಾಡಿದರು. ಸಮಾವೇಶದಲ್ಲಿ  ರಾಮದಾಸ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಮುಖಂಡರಾದ ಮಾಜಿ ವಿಧಾನ ಪರಿಷತ್ತಿನ ಸದಸ್ಯ  ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ  ಟಿ.ಪಿ.ರಮೇಶ್, ವಿರಾಜಪೇಟೆ- ಪೊನ್ನಂಪೇಟೆ ಹಾಗೂ ನಾಪೋಕ್ಲು ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ,  ಮಿದೇರಿರ ನವೀನ್ , ಇಸ್ಮಾಯಿಲ್ ಹಾಗೂ ಇತರ ಪ್ರಮುಖ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.   

Read More