ಮಡಿಕೇರಿ ಏ.20 NEWS DESK : ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ರಸ್ತೆಯ ಬಿಟ್ಟಂಗಾಲದಲ್ಲಿ ನಡೆದಿದೆ. ಗಿರೀಶ್ (25) ಮೃತ ದುರ್ದೈವಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಹನ್ನೊಂದು ವರ್ಷದ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೇಖಕ: admin
ನಾಪೋಕ್ಲು ಏ.20 NEWS DESK : ಪಾಲೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಉತ್ಸವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪಾರ್ವತಿ-ಪರಮೇಶ್ವರ ಜೋಡು ದೇವರ ನೃತ್ಯಬಲಿ ನೆರವೇರಿತು. ಮಧ್ಯಾಹ್ನ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ತೀರ್ಥ ಪ್ರಸಾದ ವಿತರಣೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು . ಪಾಲೂರು ಗ್ರಾಮದಲ್ಲಿ ಒಂದು ವಾರಗಳ ಕಾಲ ಸಂಭ್ರಮದಿಂದ ಜರುಗಿದ ಉತ್ಸವದಲ್ಲಿ ಅಧಿಕ ಸಂಖ್ಯೆಯ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಎತ್ತುಪೆÇೀರಾಟ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. ಉತ್ಸವ ಸಮಿತಿಯ ಅಧ್ಯಕ್ಷ ಪೂದಾವಾಡ ಸುಜಯ್, ಕಾರ್ಯದರ್ಶಿ ಸೂದನ ಮದನ್, ಪಾರುಪತ್ತೆಗಾರ ಮನು ಸಮಿತಿಯ ಸದಸ್ಯರು, ಗ್ರಾಮದ ತಕ್ಕಮುಖ್ಯಸ್ಥರು, ಪಾಲ್ಗೊಂಡಿದ್ದರು. ಮುಖ್ಯ ಅರ್ಚಕ ದೇವಿಪ್ರಸಾದ್ ನೇತೃತ್ವದಲ್ಲಿ ತಂತ್ರಿಗಳಾಗಿ ಕೃಷ್ಣ ಪ್ರಸಾದ್ ಸತ್ಯಮೂರ್ತಿ, ಲೋಕೇಶ್ವಿ ಧಾರ್ಮಿಕ ವಿಧಿ ವಿಧಾನವನ್ನು ನೆರವೇರಿಸಿಕೊಟ್ಟರು. ತೆಂಗಿನಕಾಯಿಗೆ ಗುಂಡು ಹೊಡೆಯುವುದು, ದೇವರ ದರ್ಶನ, ಹರಿಶ್ಚಂದ್ರದಲ್ಲಿ ದೇವರ ಅವಭೃತ ಸ್ನಾನ, ದೀಪಾಲಂಕಾರ, ಮಹಾಪೂಜೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು ವಿಷ್ಣುಮೂರ್ತಿ ಕೋಲ, ಮೇಲೇರಿಯೊಂದಿಗೆ…
ಮಡಿಕೇರಿ ಏ.20 NEWS DESK : ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದ ಅಪಘಾತ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ದೌರ್ಜನ್ಯ ಮತ್ತು ಅಪರಾಧ ಪ್ರಕರಣಗಳು ಅಧಿಕವಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಪಕ್ಷದ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ, ತಳೂರು ಕಿಶೋರ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ವಿವಿಧ ಘಟಕಗಳ ಪದಾಧಿಕಾರಿಗಳು, ನಗರಸಭೆಯ ಬಿಜೆಪಿ ಸದಸ್ಯರುಗಳು ಹಾಗೂ ಕಾರ್ಯಕರ್ತರು…
ಮಡಿಕೇರಿ ಏ.20 NEWS DESK : ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಮತದಾರರಿಗೆ ತಿಳಿಸಿ, ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು. ಲೋಕಸಭಾ ಚುನಾವಣ ಹಿನ್ನೆಲೆ ನಗರದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಬೈಕ್ ಹಾಗೂ ಆಟೋ ಜಾಥಾದ ಮೂಲಕ ಬಿರುಸಿನ ಮತಪ್ರಚಾರದಲ್ಲಿ ಮಾತನಾಡಿದರು. ನಮ್ಮ ಸರಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದೆ. ಇದನ್ನು ಮತದಾರರಿಗೆ ತಿಳಿಸಿ ಮತ ಹಾಕಿಸುವಂತಾಗಬೇಕು. ಕಾರ್ಯಕರ್ತರು ಪಕ್ಷದ ಶಕ್ತಿ. ಭಿನ್ನಭಿಪ್ರಾಗಳನ್ನು ಬದಿಗೊತ್ತಿ ಎಲ್ಲರೂ ಒಂದಾಗಿ ಕಾಂಗ್ರೆಸ್ ಅಭ್ಯಥಿ ಲಕ್ಷ್ಮಣ್ ಅವರನ್ನು ಗೆಲ್ಲಿಸಬೇಕು ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಚುನಾವಣೆಯಲ್ಲಿ ಉತ್ಸಾಹದಿಂದ ಕಾರ್ಯಕರ್ತರು ಕೆಲಸ ಮಾಡಬೇಕು. ದೇಶ, ರಾಜ್ಯಕ್ಕೆ ನೀಡಿರುವ ಕಾಂಗ್ರೆಸ್ ಕೊಡುಗೆಯನ್ನು ಮನೆ ಮನೆಗೆ ತಲುಪಿಸಬೇಕು. ಮೂಲಭೂತ ಸೌಲಭ್ಯ, ಆಹಾರ ಕೊರತೆಯಿಂದ ಹಿಂದುಳಿದ್ದ ಭಾರತವನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ದಿದ್ದು, ಕಾಂಗ್ರೆಸ್ ಸರಕಾರ ಎಂದರು. ವಿಧಾನ ಪರಿಷತ್ತು ಮಾಜಿ ಸದಸ್ಯೆ ಶಾಂತೆಯಂಡ ವೀಣಾ…
ಮಡಿಕೇರಿ ಏ.20 NEWS DESK : ಸಿದ್ದಾಪುರ ಗ್ರಾ.ಪಂ ಅಧ್ಯಕ್ಷರಾದ ಪ್ರೇಮಾ ಗೋಪಾಲ, ಸದಸ್ಯರಾದ ಅಭಿತಾ, ಮೀನಾ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮೂವರಿಗೆ ಸಾಲು ಹೊದಿಸಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಏ.19 NEWS DESK : ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ (68) ಅವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ನಿವಾಸಿಗಳಾದ ವಾಹನದ ಮಾಲೀಕ ಮಹಮ್ಮದ್ ಹರ್ಷದ್ (26) ಹಾಗೂ ವಾಹನದ ಚಾಲಕ ಶೌಕತ್ ಅಲಿ (32) ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಎಸ್‌ಪಿ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರ್ ರಾಜ್, ಮಡಿಕೇರಿ ವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್, ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಸಿದ್ದಾಪುರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಮಡಿಕೇರಿ ಏ.19 NEWS DESK : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾರತದ ರಾಜಮನೆತನಗಳಲ್ಲಿ ಪ್ರತಿಷ್ಠಿತವಾದ ಮೈಸೂರು ರಾಜವಂಶಸ್ಥ ಕುಟುಂಬದವರು. ಮೈಸೂರಿನ ಹೆಸರಾಂತ ಮಹಾರಾಜರಾಗಿದ್ದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಮರಿ ಮೊಮ್ಮಗನಾಗಿರುವ ಯದುವೀರ್ ಮೈಸೂರಿನ ಮಹಾರಾಜ ಎಂದೇ ರಾಜಮನೆತನದಲ್ಲಿ, ಜನಮಾನಸದಲ್ಲಿ ಖ್ಯಾತಿ ಪಡೆದಿದ್ದಾರೆ. ಬೆಂಗಳೂರಿನ ವಿದ್ಯಾನಿಕೇತನ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಯದುವೀರ್ ತರುವಾಯ ಕೆನಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಶಿಕ್ಷಣ ಪಡೆದು, ಅಮ್ ರೆಸ್ಟ್ ನ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲೀಷ್ ಇತಿಹಾಸ ಮತ್ತು ಎಕಾನಾಮಿಕ್ಸ್ ನಲ್ಲಿ ಪದವಿ ಪಡೆದಿದ್ದಾರೆ. ತನ್ನ 23 ನೇ ವಯಸ್ಸಿನಲ್ಲಿಯೇ ಮೈಸೂರು ರಾಜಮನೆತನದ 27ನೇ ಮಹಾರಾಜರಾಗಿ ಅಧಿಕಾರ ಪಡೆದ ಯದುವೀರ್ ಅಂದಿನಿಂದ ಇಂದಿನವರೆಗೂ ರಾಜಪರಂಪರೆಗೆ ಚ್ಯುತಿ ಬಾರದಂತೆ ಜನಸೇವೆ ಮತ್ತು ಸಮಾಜಸೇವೆ ಮಾಡಿಕೊಂಡು ಬಂದಿದ್ದಾರೆ. ವಿಶ್ವವಿಖ್ಯಾತವಾಗಿರುವ ಮೈಸೂರು ದಸರಾ ಖಾಸಗಿ ದರ್ಬಾರ್ ನ್ನು 2015 ರಿಂದಲೂ ಯದುವೀರ್ ಪರಂಪರೆಗೆ ದಕ್ಕೆ ಬಾರದಂತೆ ನಿರ್ವಹಿಸಿಕೊಂಡು ಬಂದಿರುವುದು ಕೂಡ ಈ ತರುಣನ ಚಾಕಚಕ್ಯತೆಗೆ ಉದಾಹರಣೆಯಾಗಿದೆ. ಯದುವೀರ್…
ಮಡಿಕೇರಿ ಏ.19 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರೂ ಆದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಿದ್ದಾಪುರ ಆಸ್ಪತ್ರೆಗೆ ಭೇಟಿ ನೀಡಿ ಅಪಘಾತದಲ್ಲಿ ಮೃತಪಟ್ಟ ರಾಮಪ್ಪ ಅವರ ಅಂತಿಮ ದರ್ಶನ ಪಡೆದು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ಏ.19 NEWS DESK : ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ (68) ಅವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದವು. ಕಾರು ಡಿಕ್ಕಿಪಡಿಸಿ ಪರಾರಿಯಾದ ಆರೋಪಿಗಳ ಪೈಕಿ ಒಬ್ಬನನ್ನು ಮಾತ್ರ ಬಂಧಿಸಲಾಗಿದೆ. ಉಳಿದವರನ್ನು ತಕ್ಷಣ ಬಂಧಿಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ರಾಮಪ್ಪ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದರು. ::: ಯದುವೀರ್ ಭೇಟಿ ::: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಮಾಜಿ ಶಾಸಕರುಗಳಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ…
ಮಡಿಕೇರಿ ಏ.19 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಂಚೆ ಸೌಲಭ್ಯ ಕೇಂದ್ರ ಸ್ಥಾಪಿಸಲು ಚುನಾವಣಾ ಆಯೋಗದಿಂದ ನಿರ್ದೇಶನ ನೀಡಲಾಗಿರುತ್ತದೆ. ಅದರಂತೆ 21-ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-12 ರಲ್ಲಿ ನೀಡಲಾದ ಅರ್ಜಿಗಳಿಗೆ ಮತ ಚಲಾಯಿಸಲು ಸೌಲಭ್ಯವನ್ನು ಒದಗಿಸಬೇಕಾಗಿರುತ್ತದೆ. ಈ ಮತದಾರರಿಗೆ ಅನುಕೂಲವಾಗುವಂತೆ ಅಂಚೆ ಮತದಾನ ಸೌಲಭ್ಯ ಕೇಂದ್ರವನ್ನು (ಪೋಸ್ಟಲ್ ಬ್ಯಾಲೆಟ್ ಫೆಸಿಲಿಟೇಷನ್ ಸೆಂಟರ್) ವಿರಾಜಪೇಟೆ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿ/ಸಿಬ್ಬಂದಿಗಳಿಗೆ ಏ.20, ಏ. 21 ಮತ್ತು ಏ.22 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿರಾಜಪೇಟೆ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುವುದರಿಂದ ಅಂಚೆ ಮತದಾರರು ತಪ್ಪದೆ ಮತ ಚಲಾಯಿಸುವಂತೆ 209 ವಿರಾಜಪೇಟೆ ವಿಧಾನಸಭಾ ಕ್ಷೇತ್ರ, 21 ಮೈಸೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ…






