ಲೇಖಕ: admin

ಮಡಿಕೇರಿ ಏ.18 NEWS DESK : ಆಸ್ಟ್ರಿಯಾದ ವಿಯೆನ್ನಾದಲ್ಲಿ ಏ.21ರಂದು ನಡೆಯಲಿರುವ ಮ್ಯಾರಥಾನ್ ಸ್ಪರ್ಧೆಯಲ್ಲಿ ಮ್ಯಾರಥಾನ್ ಓಟಗಾರ ಕೊಡಗಿನ ಅಪ್ಪಚಂಗಡ ಬಿ.ಬೆಳ್ಯಪ್ಪ ಭಾರತವನ್ನು ಪ್ರತಿನಿಧಿಸಲಿದ್ದಾರೆ. 42.195 ಕಿ.ಮೀ. ಮ್ಯಾರಥಾನ್ ಸ್ಪರ್ಧೆಯಲ್ಲಿ ಇಬ್ಬರು ಭಾರತೀಯರು ಸ್ಪರ್ಧಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದ ಕೊಡಗಿನ ಬೆಳ್ಯಪ್ಪ ಒಬ್ಬರಾಗಿದ್ದಾರೆ. ಮತ್ತೊಬ್ಬರು ಉತ್ತರಾಖಂಡ್‍ನ ಮಾನ್‍ಸಿಂಗ್. ಈ ಮ್ಯಾರಥಾನ್‍ನಲ್ಲಿ ವಿಶ್ವಾದ್ಯಂತ 40 ಸಾವಿರ ಓಟಗಾರರು ಭಾಗವಹಿಸುತ್ತಿದ್ದು, ಉತ್ತಮ ಪ್ರದರ್ಶನ ತೋರಿದವರನ್ನು ಪ್ಯಾರಿಸ್ ಒಲಿಂಪಿಕ್ಸ್ ಗೆ ಆಯ್ಕೆ ಮಾಡಲಾಗುತ್ತದೆ. ಈ ಮ್ಯಾರಥಾನ್‍ನಲ್ಲಿ 50 ವರ್ಷಗಳ ಹಿಂದೆ ಪಂಜಾಬ್‍ನ ಶಿವನಾಥ್ ಸಿಂಗ್ ಎಂಬುವರು 2 ಗಂಟೆ 11 ನಿಮಿಷ 59 ಸೆಕೆಂಡ್‍ಗಳಲ್ಲಿ 42.195 ಕಿಲೋ ಮೀಟರ್ ದೂರವನ್ನು ಕ್ರಮಿಸಿ ದಾಖಲೆ ನಿರ್ಮಿಸಿದ್ದರು.

Read More

ಮಡಿಕೇರಿ ಏ.18 NEWS DESK : ಸಮಾಜವಾದಿ ಪಕ್ಷದ ಕೊಡಗು ಜಿಲ್ಲಾ ಮಾಜಿ ಅಧ್ಯಕ್ಷ ಚೀಯಾಂಡಿರ ಕಿಶನ್ ಉತ್ತಪ್ಪ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡು ರಾಜ್ಯ ಸರಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಜನತೆಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿದ ದಿಟ್ಟ ಹೆಜ್ಜೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸ್ಫೂರ್ತಿ ನೀಡಿತು. ಇನ್ನು ಮುಂದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿರುವುದಾಗಿ ಎಂದು ಕಿಶನ್ ಉತ್ತಪ್ಪ ತಿಳಿಸಿದರು. ಇವರೊಂದಿಗೆ ಕೊರವಂಡ ದೇವಯ್ಯ ಅವರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Read More

ಸೋಮವಾರಪೇಟೆ ಏ.18 NEWS DESK : ಶ್ರೀ ರಾಮ ಉತ್ಸವ ಸಮಿತಿ ಮತ್ತು ಹಿಂದು ಜಾಗರಣಾ ವೇದಿಕೆ ವತಿಯಿಂದ ರಾಮನವಮಿ ಪ್ರಯುಕ್ತ ಪಟ್ಟಣದಲ್ಲಿ ಬೃಹತ್ ಶೋಭಯಾತ್ರೆ ನಡೆಯಿತು. ಶ್ರೀರಾಮ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯುತ್ ಅಲಂಕೃತ ಮಂಟಪಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ಜಾನಪದ ಕಲಾತಂಡಗಳ ನೃತ್ಯ ನೋಡುಗರನ್ನು ಆಕರ್ಷಿಸಿದವು. ಭಕ್ತಾಧಿಗಳು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಪಟಾಕಿ ಸಿಡಿಮದ್ದು ಪ್ರದರ್ಶನ ನಡೆಯಿತು. ವಿವಿಧ ಸ್ಥಳಗಳಲ್ಲಿ ಪಾನಕ, ಮಜ್ಜಿಗೆ ವಿತರಿಸಲಾಯಿತು. ಅಂಜನೇಯ ದೇವಾಲಯ ಹಾಗು ರಾಮಮಂದಿರದಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ನಡೆಯಿತು.

Read More

ಮಡಿಕೇರಿ ಏ.18 NEWS DESK : ಕೊಡವ ಜಾನಪದ ಹೇಳುವ ಸ್ಪರ್ಧೆಯಲ್ಲಿ ಬಾದುಮಂಡ ಬೀನಕಾಳಯ್ಯ ಪ್ರಥಮ, ಕೊಟ್ಟಂಗಡ ಕವಿತ ವಾಸುದೇವ ದ್ವಿತೀಯ ಮತ್ತು ಮಚ್ಚುರ ಶಾರದ ಅಪ್ಪಯ್ಯ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕೊಡವಾಮೆರ ಕೊಂಡಾಟ ಸಂಘಟನೆ ಕೊಡವ ಜಾನಪದ ಕಥೆ ಹೇಳುವ ಸ್ಪರ್ಧೆಯನ್ನು ಅಂತರ್ಜಾಲದಲ್ಲಿ ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ನಾನಾ ಭಾಗಗಳಿಂದ ಒಟ್ಟು 17 ಸ್ಪರ್ಧಿಗಳು ಭಾಗವಹಿಸಿ ತಮ್ಮ ಜಾನಪದ ಪ್ರೌಢಿಮೆ ಮೆರೆದರು. ಕೊಡವಾಮೆರ ಕೊಂಡಾಟ ಸಂಘಟನೆ ಸಂಸ್ಥಾಪಕರೂ ಆದ ಚಾಮೆರ ದಿನೇಶ್ ಬೆಳ್ಳಪ ಪರಿಕಲ್ಪನೆಯಲ್ಲಿ ಆಯೋಜನೆಗೊಂಡ ಈ ಸ್ಪರ್ಧೆಯ ಬಹುಮಾನ ದಾನಿಗಳಾಗಿ ರಾಷ್ಟ್ರ ಮಟ್ಟದ ಸಾಮಾಜಿಕ ಕಾರ್ಯಕರ್ತ ಕೆಂಜಂಗಡ ರೋಶನ್ ನಾಣಯ್ಯ ಅವರು ನೀಡಿದರೆ, ಹಿನ್ನೆಲೆ ಚಿತ್ರವನ್ನು ಸುಪ್ರಸಿದ್ದ ಚಿತ್ರಕಲಾವಿದ ಐಮಂಡ ರೂಪೇಶ್ ನಾಣಯ್ಯ ರಚಿಸಿದರು. ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಜಾನಪದ ತಜ್ಞರಾದ ಬಾಚರಣಿಯಂಡ ಅಪ್ಪಣ್ಣ, ರಾಣು ಅಪಣ್ಣ ಹಾಗೂ ಅಲ್ಲಾರಂಡ ವಿಠಲ್ ನಂಜಪ್ಪ ಅವರು ನಿರ್ವಹಿಸಿದರು. ಸರ್ಧಾ ಸಂಚಾಲಕರಾಗಿ ಕೊಡವಾಮೆರ ಕೊಂಡಾಟ ಸಂಘಟನೆ ಸಹ ಕಾರ್ಯದರ್ಶಿ ಮಲ್ಲಂಡ ದರ್ಶನ್…

Read More

ಮಡಿಕೇರಿ ಏ.18 NEWS DESK : ಲೋಕಸಭಾ ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು ಎಂದು ಸ್ಪಷ್ಟಪಡಿಸಿದರು. ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಬಳಿಕ ಕಾಂಗ್ರೆಸ್‍ನಿಂದ ಒಕ್ಕಲಿಗ ಸಮುದಾಯದ ಎಂ.ಲಕ್ಷ್ಮಣ್ ಅವರಿಗೆ ಟಿಕೆಟ್ ದೊರಕಿದೆ. ಇವರು ಒಕ್ಕಲಿಗರ ಸಭೆಯಲ್ಲಿ ಪಾಲ್ಗೊಂಡು ಮಾತನಾಡುವ ಸಂದರ್ಭ, ಸಹಜವಾಗಿ ಎಂಬಂತೆ ಸಮೂಹದ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಇದರಲ್ಲಿ ತಪ್ಪೇನು ಎಂದು ಪ್ರಶ್ನಿಸಿ, ಒಕ್ಕಲಿಗ ಸಮಾಜದ ಮಂದಿ ಪ್ರಬುದ್ಧರಾಗಿದ್ದು, ಬಿಜೆಪಿ ಆರೋಪಗಳನ್ನು ಅರ್ಥೈಸಿಕೊಳ್ಳಬಲ್ಲರು ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು…

Read More

ಮಡಿಕೇರಿ ಏ.18 NEWS DESK  : ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಉದ್ದೇಶದಿಂದ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಸಿಪಿಐ ರಾಜ್ಯ ಸಹ ಕಾರ್ಯದರ್ಶಿ ಬಿ.ಅಮ್ಜದ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಾನಂತರ ನಡೆಯುತ್ತಿರುವ 18ನೇ ಲೋಕಸಭಾ ಚುನಾವಣೆ ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ಚುನಾವಣೆಯಾಗಿದೆ. ಜನತಂತ್ರದ ಮೌಲ್ಯಗಳನ್ನು ಗಾಳಿಗೆ ತೂರಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿ ಪ್ರಜಾತಂತ್ರ ವ್ಯವಸ್ಥೆಯನ್ನೆ ಶಿಥಿಲಗೊಳಿಸುವ ನಿಟ್ಟಿನಲ್ಲಿ ಸಾಗಿರುವ ಬಿಜೆಪಿಯನ್ನು ಅಧಿಕಾರಕ್ಕೆ ಬಾರದಂತೆ ತಡೆಯುವ ಚುನಾವಣೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಕಳೆದ ಒಂದು ದಶಕಗಳ ಅವಧಿಯ ಕೇಂದ್ರದ ಮೋದಿ ನೇತೃತ್ವದ ಸರ್ವಾಧಿಕಾರಿ ಆಡಳಿತಕ್ಕೆ ಅಂತ್ಯಹಾಡಿ, ಇಂಡಿಯಾ ಒಕ್ಕೂಟ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ::: ತನಿಖೆಯಾಗಲಿ ::: ಭ್ರಷ್ಟಾಚಾರದ ವಿರುದ್ಧವಾಗಿ ಮಾತನಾಡುತ್ತಲೆ ಮೋದಿ ನೇತೃತ್ವದ ಸರ್ಕಾರ ‘ಇಲೆಕ್ಟ್ರಾಲ್ ಬಾಂಡ್’ ಎನ್ನುವ ಭ್ರಷ್ಟಾಚಾರದ ಭಾಗೀದಾರಿ ಪಕ್ಷವಾಗಿ ಇಂದು ಗೋಚರಿಸುತ್ತಿದೆ. ಇಲೆಕ್ಟ್ರಾಲ್…

Read More

ಮಡಿಕೇರಿ ಏ.18 NEWS DESK :  ವಿರಾಜಪೇಟೆಯಲ್ಲಿ  ಹಲವರು  ಕಾಂಗ್ರೆಸ್ ಸೇರ್ಪಡೆಗೊಂಡರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಮ್ಮುಖದಲ್ಲಿ  ನೂರ್ ಅಹಮದ್ , ಗಯಾಧ್ ಶರೀಫ್, ಸಲೀಂ, ನಹಿಂ,  ಶಮೀರ್, ಶಬ್ಬೀರ್ ಸೇರಿದಂತೆ ಹಲವು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

Read More

ಮಡಿಕೇರಿ ಏ.18  NEWS DESK : ವಿರಾಜಪೇಟೆಯ ತೆಲಗರ ಬೀದಿಯಲ್ಲಿರುವ ಶ್ರೀ ದಕ್ಷಿಣಮಾರಿಯಮ್ಮ ಮತ್ತು ಅಂಗಲಾಪರಮೇಶ್ವರಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಮತ್ತು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Read More

ಪುತ್ತೂರು ಏ.18 NEWS DESK : ಯುವ ಪದವೀಧರರು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಂಡು ವೃತ್ತಿ ಜೀವನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಪ್ರದವಿ ಪ್ರದಾನ ಸಮಾರಂಭವು ಒಂದು ಪ್ರೇರಣೆಯಾಗುತ್ತದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ನಡೆದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತಾಡಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಸ್ತಿಗೆ ಮಹತ್ವವನ್ನು ನೀಡಬೇಕು ಮತ್ತು ತನ್ನ ಏಳಿಗೆಗೆ ಜೀವನವನ್ನೇ ಮುಡಿಪಾಗಿಟ್ಟ ಪೋಷಕರ ತ್ಯಾಗವನ್ನು ಸ್ಮರಿಸಬೇಕೆಂದು ನುಡಿದರು. ಸಮಾಜದಲ್ಲಿ ಅಗತ್ಯವುಳ್ಳವರಿಗೆ ಸೂಕ್ತ ಸಹಾಯವನ್ನು ಮಾಡುತ್ತಾ ಜೀವನಾನುಭವವನ್ನು ಪಡೆಯಬೇಕು ಮತ್ತು ಸಂತೋಷದ ಜೀವನವನ್ನು ನಡೆಸಬೇಕು ಎಂದರು. ಸಮಾರಂಭಕ್ಕೆ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ವಿದ್ಯಾರ್ಜನೆಯ ಸಮಯದಲ್ಲಿ ಪ್ರತಿ ಹೆಜ್ಜೆಯಲ್ಲೂ ಮಾತಾಪಿತರು, ಪೋಷಕರು, ಉಪನ್ಯಾಸಕರು ಸಹಕಾರಿಗಳಾಗಿರುತ್ತಾರೆ. ಈಗ ವೈಯಕ್ತಿಕವಾಗಿ ಜೀವನವನ್ನು…

Read More

ಮಡಿಕೇರಿ ಏ.18 NEWS DESK : ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನ ಕೊಡಗು ಪ್ರಾದೇಶಿಕ ಆಡಳಿತಾಧಿಕಾರಿಯಾಗಿ 7ನೆ ಹೊಸಕೋಟೆಯ ಸ್ಟೇನಿ ಜೋಸೆಫ್ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಸ್ಥಾಪಕಾಧ್ಯಕ್ಷ ಶಿವಕುಮಾರ್ ಹೂಟಗಳ್ಳಿ ತಿಳಿಸಿದ್ದಾರೆ. ಸುಂಟಿಕೊಪ್ಪದ 7ನೇ ಹೊಸಕೋಟೆಯಲ್ಲಿ ಟ್ರಸ್ಟ್ ನ ಕಚೇರಿಯಲ್ಲಿ ಮಾತನಾಡಿದ ಅವರು ಸರ್ಕಾರದಿಂದ ಮಾನ್ಯತೆ ಪಡೆದಿರುವ ಉದ್ದೇಶಗಳನ್ನು ಮೊದಲ ಹಂತದಲ್ಲಿ ಕೊಡಗಿನಲ್ಲಿ ಪ್ರಾರಂಭಿಸಲು ಟ್ರಸ್ಟ್ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಟೇನಿ ಜೋಸೆಫ್ ಅವರನ್ನು ನೇಮಕ ಮಾಡಿರುವುದಾಗಿ ಹೇಳಿದರು. ದುಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಟೇನಿ ಜೋಸೆಫ್ ಅವರು ನಮ್ಮ ಸಂಸ್ಥೆಯ ಮೂಲಕ ಬಡವರಿಗೆ ಸಹಾಯ ಮಾಡಲು ಮತ್ತು ಮಾನವೀಯತೆಯ ಮೌಲ್ಯಗಳನ್ನು ಎಲ್ಲರಿಗೂ ತಿಳಿಸಲು ತಮ್ಮ ಹುದ್ದೆಗೆ ರಾಜಿನಾಮೆ ನೀಡಿ ಇಲ್ಲಿಗೆ ಮರಳಿದ್ದಾರೆ. ಟ್ರಸ್ಟ್ ನ ಆಡಳಿತಾಧಿಕಾರಿ ಜವಾಬ್ದಾರಿಯನ್ನು ಹೆಮ್ಮೆಯಿಂದ ಸ್ವೀಕರಿಸಿದ್ದಾರೆ ಎಂದರು. ಕ್ರಿಮಿನಲ್ ಚಟುವಟಿಕೆ ಅಥವಾ ಮೊಕದ್ದಮೆ ಇಲ್ಲದೆ ಇರುವ ಯಾವುದೇ ಪ್ರದೇಶದ ವ್ಯಕ್ತಿಗಳು ನಮ್ಮ ಸಂಸ್ಥೆಗೆ ಸೇರಿಕೊಳ್ಳಬಹುದಾಗಿದೆ. ಆದರೆ ಮಾನವೀಯತೆಯ ಗುಣ ಇರಬೇಕು ಮತ್ತು ಅದರ ಮೌಲ್ಯಗಳನ್ನು ತಿಳಿದಿರಬೇಕು. ಸಂಸ್ಥೆ ಒಂದು…

Read More