ಮಡಿಕೇರಿ ಮೇ 6 NEWS DESK : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ತತ್ವಪದ ವಿಮರ್ಶಾ ಲೇಖನ ಸ್ಪರ್ಧೆಯನ್ನು ಏರ್ಪಡಿಸಲು ಉದ್ದೇಶಿಸಿದೆ. 18 ರಿಂದ 40 ವರ್ಷ ವಯೋಮಿತಿಯುಳ್ಳವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಗೆ ಅಧ್ಯಯನ ಕೇಂದ್ರವು ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ವಿಮರ್ಶಾ ಲೇಖನವನ್ನು ರಚಿಸಿ ಸ್ಪರ್ಧೆಗೆ ಆಹ್ವಾನ ನೀಡಿದ ದಿನಾಂಕದಿಂದ ಒಂದು ತಿಂಗಳ ಒಳಗೆ ಅಂದರೆ ಜೂನ್, 05 ರೊಳಗೆ ಭಾಗವಹಿಸುವ ಸ್ಪರ್ಧಿಯು ಅರ್ಜಿ ಮತ್ತು ವಿಮರ್ಶಾ ಲೇಖನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಅರ್ಜಿಯನ್ನು ಮತ್ತು ಲೇಖನವನ್ನು ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ವೆಬ್‍ಸೈಟ್ https://kanakadasaresearchcenter.karnataka.gov.in/ ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ಅರ್ಜಿಯನ್ನು ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9743545865 ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಸಂತಕವಿ ಕನಕದಾಸ ಮತ್ತು…
ಲೇಖಕ: admin
ಮಡಿಕೇರಿ ಮೇ 6 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುವ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಬಿ.ಶಿವಪ್ಪ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿಯ ಪತ್ರಿಕಾ ಭವನದಲ್ಲಿ ಏರ್ಪಡಿಸಿದ 112ನೇ ಪರಿಷತ್ ಸಂಸ್ಥಾಪನ ದಿನದ ಮಹತ್ವದ ಕುರಿತು ಉಪನ್ಯಾಸ ನೀಡುತ್ತಿದ್ದರು. ಮುಂದುವರೆದ ಅವರು ಕನ್ನಡ ಸಾಹಿತ್ಯ ಪರಿಷತ್ ಎಂದೊಡನೆ ಕನ್ನಡಿಗರಲ್ಲಿ ರೋಮಾಂಚನವಾಗುತ್ತದೆ ಯಾವ ಉದ್ದೇಶದಿಂದ 112 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರ ಚಿಂತನೆಯಿಂದ ಕನ್ನಡ ಸಾಹಿತ್ಯ ಪರಿಷತ್ ಪ್ರಾರಂಭವಾಯಿತೋ ಆ ಉದ್ದೇಶ ಸಫಲವಾಗಿದೆ. ಕನ್ನಡ ನಾಡು-ನುಡಿ, ಆಚಾರ-ವಿಚಾರ, ಸಾಹಿತ್ಯ-ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಮಾಡಿಕೊಂಡು ಬರುತ್ತಿದೆ ಎಂದರು. ಯುವಜನರು ಹೆಚ್ಚು ಹೆಚ್ಚು ಸಾಹಿತ್ಯಿಕ ವಿಚಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಲ್ಲಿ ಹೆಚ್ಚು ಯುವಜನರು…
ಕುಶಾಲನಗರ ಮೇ 6 NEWS DESK : ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿಯಲ್ಲಿ ಕುಶಾಲನಗರ ರೋಟರಿ ವತಿಯಿಂದ ರೂ.20 ಲಕ್ಷ ವೆಚ್ಚದಲ್ಲಿ ಸ್ಥಾಪಿಸಿರುವ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ಘಟಕಕ್ಕೆ ರೋಟರಿ 3181 ಜಿಲ್ಲಾ ರಾಜ್ಯಪಾಲ ಪಿ.ಕೆ.ರಾಮಕೃಷ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಕಸ ವಿಲೇವಾರಿ ಜವಾಬ್ದಾರಿ ಬಹು ಮುಖ್ಯವಾಗಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಭುವನಗಿರಿ ಕಸ ವಿಲೇವಾರಿ ಘಟಕದ ಅಭಿವೃದ್ಧಿ ಗೆ ಪೂರಕವಾದ ಯೋಜನೆಗಳನ್ನು ಕೈಗೊಂಡು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಎಸ್.ಎಲ್.ಎನ್ ಸಂಸ್ಥೆಯ ಪ್ರಮುಖರಾದ ವೆಂಚಟಾಚಲಂ ಹಾಜರಿದ್ದು, ಯೋಜನೆ ಬಗ್ಗೆ ಮಾತಾನಾಡಿದರು. ಕುಶಾಲನಗರ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಸ್ವಚ್ಚ ಕುಶಾಲನಗರ ಅಭಿಯಾನಕ್ಕೆ ಎಸ್.ಎಲ್.ಎನ್ ನ ಸಿಎಸ್ಆರ್ ಫಂಡ್ ಮೂಲಕ 15 ಲಕ್ಷ ವೆಚ್ಚದಲ್ಲಿ ಯಂತ್ರವನ್ನು ಕೊಡುಗೆ ನೀಡಲಾಗಿದೆ. ಕುಶಾಲನಗರ…
ಗೋಣಿಕೊಪ್ಪ ಮೇ 6 NEWS DESK : “ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ಸಂಯೋಜಕ ನಿರ್ದೇಶಕರಾಗಿ ಬಿ.ಎನ್ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ. ಸೀನಿಯರ್ ಚೇಂಬರ್ ಇಂಟನ್ರ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ವಾಸುದೇವನ್ ನೇಮಕಾತಿ ಆದೇಶವನ್ನು ನೀಡಿದ್ದಾರೆ. ಕೇರಳದ ಕ್ಯಾಲಿಕೆಟ್ ನಲ್ಲಿ ಪ್ಯಾರಾ ಮೌಂಟ್ ಟವರ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶವನ್ನು ರಾಷ್ಟ್ರೀಯ ಅಧ್ಯಕ್ಷರು ವಲಯ ಅಧ್ಯಕ್ಷರ ಸಮ್ಮುಖದಲ್ಲಿ ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಬಿ.ಎನ್.ಪ್ರಕಾಶ್ ಅವರು ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ 2025-26ನೇ ಸಾಲಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ಸದಸ್ಯರಾಗಿ, ಪೊನ್ನಂಪೇಟೆ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಅಧ್ಯಕ್ಷರಾಗಿ, ಚೇಂಬರ್ ಆಫ್‍ಕಾಮರ್ಸ್ ನಿರ್ದೇಶಕರಾಗಿ, ಮಚೆರ್ಂಟ್ ಬ್ಯಾಂಕ್ ನಿರ್ದೇಶಕರಾಗಿ ಮತ್ತು ಇತರ ಪ್ರಮುಖವಾದ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಗೋಣಿಕೊಪ್ಪ ಮೇ 6 NEWS DESK : ಅಕ್ಷಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಮತ್ತು ಅಂಗಾಂಗ ದಾನ ಶಿಬಿರ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ, ಇಂಡಿಯನ್‍ರೆಡ್‍ಕ್ರಾಸ್ ಸೊಸೈಟಿ ಪೊನ್ನಂಪೇಟೆ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಅಂಗಾಂಗ ದಾನ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಯಿತು. ಅಕ್ಷಯ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಕೆ.ಕೆ.ಸೋಮಯ್ಯ ಸಭಾಧ್ಯಕ್ಷತೆಯಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಮತ್ತು ಪತ್ರಕರ್ತ, ಸಮಾಜ ಸೇವಕ ಜಗದೀಶ್ ಜೋಡಬೀಟಿ ಶಿಬಿರಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಕುಲ್ಲಚಂಡ ಪ್ರಮೋದ್ ಗಣಪತಿ, ರಕ್ತದಾನದ ಶ್ರೇಷ್ಠತೆಯನ್ನು ಸಮಾಜಕ್ಕೆ ತಿಳಿಸುವ ಮೂಲಕ ಯುವ ಸಮುದಾಯದಲ್ಲಿ ಪ್ರೇರಣೆಯನ್ನು ತುಂಬಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕಾರ್ಯೋನ್ಮುಖವಾಗಿ ಜನರಡೆಗೆ ರಕ್ತದಾನ ಶಿಬಿರವನ್ನು ಕೊಂಡೊಯ್ಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು. ಕಥೆಗಾರ, ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ರಕ್ತದಾನ ಮತ್ತು ಅಂಗಾಂಗ…
*ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ : ಪೊಲೀಸರ ಕ್ರಮಕ್ಕೆ ಸೋಮವಾರಪೇಟೆ ಬಿಜೆಪಿ ಅಸಮಾಧಾನ* ಮಡಿಕೇರಿ ಮೇ 6 : ಕೊಡಗು ಜಿಲ್ಲೆಯಲ್ಲಿ ಮಿತಿ ಮೀರಿರುವ ವನ್ಯಜೀವಿಗಳ ಉಪಟಳ ಹಾಗೂ ಸಿ ಮತ್ತು ಡಿ ಭೂಮಿಯ ಸಮಸ್ಯೆಯ ಕುರಿತು ಅರಣ್ಯ ಸಚಿವರ ಗಮನ ಸೆಳೆಯಲು ಗುಡ್ಡೆಹೊಸೂರು ವೃತ್ತದಲ್ಲಿ ನಿಂತಿದ್ದ ಬಿಜೆಪಿ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮ ಖಂಡನೀಯವೆAದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ವನ್ಯಜೀವಿ ದಾಳಿ ಮತ್ತು ಭೂಮಿ ಸಮಸ್ಯೆ ಜನರ ನಿದ್ದೆಗೆಡಿಸಿದೆ. ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬಂದಿರುವ ರೈತರು ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ವನ್ಯಜೀವಿಗಳ ದಾಳಿಯಿಂದ ಅಮಾಯಕ ಮಾನವ ಜೀವಗಳು ಹಾಗೂ ಜಾನುವಾರುಗಳು ಬಲಿಯಾಗುತ್ತಿವೆ. ಪರಿಸ್ಥಿತಿ ಗಂಭೀರವಾಗಿದ್ದರೂ ಮತ್ತು ನಿರಂತರ ಪ್ರತಿಭಟನೆಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಸ್ಪಂದನೆಯನ್ನು ನೀಡುತ್ತಿಲ್ಲ. ಈ ಕಾರಣದಿಂದ ಅರಣ್ಯ ಸಚಿವರನ್ನು ಖುದ್ದಾಗಿ ಭೇಟಿಯಾಗಿ ಜಿಲ್ಲೆಯನ್ನು ಕಾಡುತ್ತಿರುವ ಅರಣ್ಯ ಇಲಾಖೆ ವ್ಯಾಪ್ತಿಯ ಸಮಸ್ಯೆಗಳನ್ನು ಗುಡ್ಡೆಹೊಸೂರಿನಲ್ಲಿ ವಿವರಿಸುವ ಪ್ರಯತ್ನವನ್ನು…
ಮಡಿಕೇರಿ NEWS DESK ಮೇ 6 : ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ತಜ್ಞರ ಮಟ್ಟದಲ್ಲಿ ಚರ್ಚೆ ಆಗುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನೂತನ ವಾಹನಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು. ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣಕ್ಕೆ ಹಣಕಾಸಿನ ಕೊರತೆ ಇಲ್ಲ. ಅನುದಾನದ ಕೊರತೆ ಇಲ್ಲ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಆದಷ್ಟು ಶೀಘ್ರ ಹೆಚ್ಚಿನ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದರು. ಅರಣ್ಯವಾಸಿಗಳು ಮತ್ತು ಅರಣ್ಯದಂಚಿನ…
ಮಡಿಕೇರಿ ಮೇ 6 NEWS DESK : ಕೊಡಗು ಹೆಗ್ಗಡೆ ಸಮಾಜದ ವತಿಯಿಂದ ಹಾತೂರು ಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಕ್ರೀಡೋತ್ಸವಕ್ಕೆ ತೆರೆ ಎಳೆಯಲಾಯಿತು. ಕ್ರಿಕೆಟ್, ಥ್ರೋಬಾಲ್, ಹಗ್ಗಜಗ್ಗಾಟ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಜನಾಂಗ ಬಾಂಧವರು ಉತ್ಸಾಹದಿಂದ ಭಾಗವಹಿಸಿದ್ದರು. :: ಹಿರಿಯರ ಕ್ರಿಕೆಟ್ : ಪಂದ್ಯದ ಫೈನಲ್ ನಲ್ಲಿ ಹಾತೂರು ತಂಡ, ಕಳೆದ ಬಾರಿಯ ಚಾಂಪಿಯನ್ ಹಾಲುಗುಂದ ತಂಡವನ್ನು ಸೋಲಿಸಿ ಈ ಬಾರಿಯ ಚಾಂಪಿಯನ್ ಪಟ್ಟ ಅಲಂಕರಿಸಿತು. ಟಾಸ್ ಗೆದ್ದ ಹಾತೂರು ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡು, ಹಾಲುಗುಂದ ತಂಡವನ್ನು 56 ರನ್‌ಗಳಿಗೆ ಆಲ್‌ಔಟ್ ಮಾಡಿತು. ಪ್ರತಿಯಾಗಿ ಹಾತೂರು ತಂಡ 1.4 ಓವರ್ ಬಾಕಿ ಇರುವಾಗಲೇ 57 ರನ್ ಗುರಿ ತಲುಪಿ ಸುಲಭ ಜಯ ಸಾಧಿಸಿತು. :: ಹಾಲುಗುಂದ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು.: ಕಿರಿಯರ ಕ್ರಿಕೆಟ್ ನಲ್ಲಿ ಪೊನ್ನಂಪೇಟೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಬಿಟ್ಟಂಗಾಲ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. :: ಮಹಿಳೆಯರ…
ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಪಾಲ್ಗೊಂಡು ಶೇ100/ರ ಫಲಿತಾಂಶದೊಂದಿಗೆ ರಾಜ್ಯದಲ್ಲಿ 12ನೇ ಸ್ಥಾನ, ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆಯೊಂದಿಗೆ ಅಭಿನಂದನ ಕಾರ್ಯಕ್ರಮ ಅಕಾಡೆಮಿ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ದುದ್ದಿಯಂಡ ಎಚ್ ಸೂಫಿ ಹಾಜಿ ಅಭಿನಂದನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮುಂದಿನ ಭವಿಷ್ಯದ ಬಗ್ಗೆ ಚಿಂತನೆ ಮಾಡುವುದರ ಮೂಲಕ ಶಿಕ್ಷಣ ಕಲಿಕೆಯೊಂದಿಗೆ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಂಡು ಸಾಧಿಸುವ ಛಲದೊಂದಿಗೆ ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಲಿದ್ದು, ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕಲಿಕೆಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದ ಅವರು ಸಂಶುಲ್ ಉಲಮ ಎಜುಕೇಶನಲ್ ಅಕಾಡೆಮಿ ಶಿಕ್ಷಣ ಸಂಸ್ಥೆ ಹೆಣ್ಣು ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಲು…
ಸೋಮವಾರಪೇಟೆ ಮೇ 5 NEWS DESK : ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 5ನೇ ದಿನಕ್ಕೆ ಕಾಲಿಟ್ಟಿದೆ. ಧರಣಿಯಲ್ಲಿ ವಸತಿ ರಹಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲ ದಿನ ತಹಸೀಲ್ದಾರ್, ಡಿಎಫ್‍ಒ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಭೇಟಿ ನೀಡಿ ಧರಣಿನಿರತರನ್ನು ಚರ್ಚೆ ಮಾಡಿದ್ದು ಬಿಟ್ಟರೆ, ಧರಣಿ ಸ್ಥಳದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಾಣಿಸಿಕೊಂಡಿಲ್ಲ. ಪ್ರಾರಂಭದಲ್ಲಿ 400ಕುಟಂಬಗಳು ಧರಣಿಯಲ್ಲಿ ಭಾಗವಹಿಸಿದ್ದರು. ಮಂಗಳವಾರ ಧರಣಿನಿರತರ ಸಂಖ್ಯೆ 600ಕ್ಕೆ ಏರಿದೆ. ವಸತಿರಹಿತರ ಧರಣಿಗೆ ಸಂಬಂಧಿಸಿದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ತಾತ್ಕಲಿಕ ಶೌಚಾಲಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯಲು ಟಾರ್ಪಲ್ ಹೊದಿಕೆಯ ಪೆಂಡಾಲ್ ಮಾಡಿಕೊಂಡಿದ್ದಾರೆ. ವಸತಿರಹಿತರು ಮನೆಯಿಂದ ಪಡಿತರ ತಂದುಕೊಂಡು ಅಡುಗೆ ಮಾಡಿಕೊಳ್ಳುಕೊಳ್ಳುತ್ತಿದ್ದಾರೆ. ವೃದ್ದ ಮಹಿಳೆಯರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ರಾತ್ರಿ ಮಲಗಿದ್ದಾಗ ಹಾವುಗಳ ಭಯವಿದೆ. ಇನ್ನೊಂದು ಕಾಡಾನೆಗಳ ಆತಂಕವೂ ಇದೆ ಎಂದು…






