ಹುಣುಸೂರು ಏ.18 NEWS DESK : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಸರಕಾರ ಮತ್ತೊಮ್ಮೆ ದೇಶದಲ್ಲಿ ಅಧಿಕಾರಕ್ಕೆ ಬರಲಿದೆ, ಸೌಮ್ಯ ಸ್ವಭಾವದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಅತ್ಯಧಿಕ ಮತಗಳನ್ನು ನೀಡಿ ಗೆಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಪರ ಹುಣುಸೂರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಮೋದಿ ಅವರ ನೇತೃತ್ವದ ಸರಕಾರದಿಂದ ಹೊಗೆಸೊಪ್ಪು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದರು. ದೇಶದ ಅಭಿವೃದ್ಧಿಯನ್ನೇ ಅಜೆಂಡವಾಗಿಸಿಕೊಂಡಿರುವ ಬಿಜೆಪಿಗೆ ಜೆಡಿಎಸ್ ಬೆಂಬಲ ಸೂಚಿಸಿದ್ದು, ಅಭ್ಯರ್ಥಿ ಯದುವೀರ್ ಅವರಿಗೆ ಬಹುಮತ ನೀಡಿ ವಿಜಯಶಾಲಿಯನ್ನಾಗಿ ಮಾಡಿ ಎಂದು ಮನವಿ ಮಾಡಿದರು. ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾತನಾಡಿ ವಿಕಾಸ ಭಾರತ ನಿರ್ಮಾಣದ ಸಂಕಲ್ಪ ತೊಟ್ಟಿರುವ ನರೇಂದ್ರಮೋದಿಯವರ ಕನಸನ್ನು ನನಸಾಗಿಸಲು ತಮ್ಮನ್ನು ಬೆಂಬಲಿಸುವಂತೆ ಕೋರಿದರು. ನಮ್ಮ ಕುಟುಂಬ ಈ ನಾಡಿನ ಪ್ರಗತಿಗಾಗಿ ನೀಡಿರುವ ಕೊಡುಗೆಯಂತೆ…
ಲೇಖಕ: admin
ಮಡಿಕೇರಿ ಏ.18 NEWS DESK : ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಅಂಗವಾಗಿ ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚನೆ ಮಾಡಿದರು. ಮೂರ್ನಾಡು, ಹೊದ್ದಾರು, ಹಾಕತ್ತೂರು, ಮೇಕೇರಿ ಹಾಗೂ ಹೊಸ್ಕೇರಿ ಮರಗೋಡು ಗ್ರಾಮಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಪಕ್ಷದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು. ನಂತರ ಅಮ್ಮತಿ, ಕಾರ್ಮಡು, ಹೊಸೂರು, ಚೆನ್ನಯ್ಯನಕೋಟೆ, ಮಾಲ್ದರೆ, ಪಾಲಿಬೆಟ್ಟ ಪಂಚಾಯಿತಿಗಳು ಸೇರಿದಂತೆ ಸಿದ್ದಾಪುರದಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಕಾರ್ಯಕರ್ತರ ಸಭೆ ಮತ್ತು ಚುನಾವಣೆಯ ಪ್ರಚಾರ ನಡೆಸಿದರು. ನಾಪೋಕ್ಲು, ಕಕ್ಕಬ್ಬೆ, ಪಾರಾಣೆ, ಬಲ್ಲಮಾವಟಿ, ಎಮ್ಮೆಮಾಡು, ಬೆಟ್ಟಗೇರಿ, ನರಿಯಂಡದ ಪ್ರಚಾರ ಮಾಡಿದರು.
ಮಡಿಕೇರಿ ಏ.18 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾಂತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಮಾತನಾಡಿ ನಮಗೆಲ್ಲ ಈ ಚುನಾವಣೆ ಪರೀಕ್ಷೆ ಇದ್ದಂತೆ. ಬಿಜೆಪಿ ಕಳೆದ ಹತ್ತು ವರ್ಷದಿಂದ ಜನರ ದಿಕ್ಕು ತಪ್ಪಿಸುತ್ತಿದ್ದು, ದೇಶಕ್ಕೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಮನುಷ್ಯನಿಗೆ ಊಟ ಇಲ್ಲ ಎಂದರು ನೆಮ್ಮದಿ ಇರಬೇಕು. ಆದ್ದರಿಂದ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದರು. ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ಸಾವಿರ ನೀಡುತ್ತಿದ್ದಾರೆ. ಅಲ್ಲದೇ 5 ಗ್ಯಾರಂಟಿ ಯೋಜನೆಗಳ ಮೂಲಕ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ ಎಂದು ಹೇಳಿದರು. ಬಿಜೆಪಿಗರು ಜಾತಿ ವ್ಯವಸ್ಥೆಯನ್ನು ತಂದು ಜಾತಿ, ಜಾತಿಗಳ…
ಮಡಿಕೇರಿ ಏ.18 NEWS DESK : ಆಕಸ್ಮಿಕವಾಗಿ ಕಾಡು ಹಂದಿ ನುಗ್ಗಿದ ಪರಿಣಾಮ ಬೈಕ್ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನ ಶೈಲಾಪುರ ಮತ್ತು ಕೊಟಗುಡ್ಡ ಗ್ರಾಮಗಳ ಮಧ್ಯ ಮದ್ರೇನಹಳ್ಳಿ ಅರಣ್ಯ ಪ್ರದೇಶದ ಬಳಿ ನಡೆದಿದೆ. ಪಾವಗಡ ತಾಲ್ಲೂಕಿನ ಬೆಳ್ಳಿಬಟ್ಟಲು ಗ್ರಾಮದ ನಿವಾಸಿ ಗ್ರಾ.ಪಂ ಸದಸ್ಯ ಕೃಷ್ಣಪ್ಪ ಮೃತ ದುರ್ದೈವಿ. ಬುಧವಾರ ರಾತ್ರಿ 9ಗಂಟೆ ಸಮಯದಲ್ಲಿ ಅಚ್ಚಮ್ಮನಹಳ್ಳಿ ಗ್ರಾಮದಿಂದ ಬೆಳ್ಳಿಬಟ್ಟಲು ಗ್ರಾಮಕ್ಕೆ ಕೃಷ್ಣಪ್ಪ ಹಾಗೂ ಪತ್ನಿ ಗುಂಡಮ್ಮ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾಡು ಹಂದಿ ಆಕಸ್ಮಿಕವಾಗಿ ನುಗ್ಗಿದೆ. ಇದರ ಪರಿಣಾಮ ದಂಪತಿ ಬೈಕ್ ಸಹಿತ ರಸ್ತೆಗೆ ಬಿದ್ದಿದ್ದಾರೆ. ಇಬ್ಬರನ್ನು ಪಾವಗಡ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಕೃಷ್ಣಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಡಿಕೇರಿ, ಏ.18 NEWS DESK : ನಗರದ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದ ವತಿಯಿಂದ ಶ್ರೀ ರಾಮಮಂದಿರ ಟ್ರಸ್ಟ್, ಶ್ರೀರಾಮ ಸೇವಾ ಸಮಿತಿ, ಜ್ಯೋತಿ ಯುವಕ, ಕೋದಂಡ ರಾಮ ಭಜನಾ ಮಂಡಳಿ ಸಹಯೋಗದೊಂದಿಗೆ ದೇವಾಲಯದ ಪುನರ್ ಪ್ರತಿಷ್ಠಾಪನ ವಾರ್ಷಿಕೋತ್ಸವ ಹಾಗೂ ರಾಮನವಮಿ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಮುಂಜಾನೆ ತತ್ವ ಕಲಶ ಹೋಮ, ನವಗ್ರಹ ಹೋಮ, ತತ್ವ ಕಲಶಾಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿತು. ನಂತರ ದೇವಾಲಯದ ಆವರಣದಿಂದ ಉತ್ಸವ ಮೂರ್ತಿ ಹೊತ್ತ ಹೂವಿನ ಅಲಂಕೃತ ಮಂಟಪದೊಂದಿಗೆ ಹೊರಟ ಮೆರವಣಿಗೆಯು ಮಹಾದೇವಪೇಟೆಗಾಗಿ, ಚೌಕಿ, ಹಳೆ ಖಾಸಗಿ ಬಸ್ ನಿಲ್ದಾಣ, ಗಣಪತಿ ಬೀದಿಗಾಗಿ ಸಾಗಿ ದೇವಾಲಯಲ್ಲಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಚಂಡೆ ವಾದ್ಯ ಗಮನ ಸೆಳೆಯಿತು. ಮಹಿಳೆಯರು ಕಲಶ ಹೊತ್ತ ತಂಡ, ಭಜನಾ ತಂಡ ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಬಂದೋಬಸ್ತ್ ಕಲ್ಪಿಸಿತ್ತು. ಬಂಟಿಂಗ್ಸ್…
ಸುಂಟಿಕೊಪ್ಪ ಏ.18 NEWS DESK : ಕೆದಕಲ್ ಭದ್ರಕಾಳೇಶ್ವರಿ ದೇವಾಲಯದ ವತಿಯಿಂದ ವಿಷ್ಣುಮೂರ್ತಿ ದೇವರ ಕಟ್ಟಿತೆರೆ ಹಾಗೂ ಕೋಲಗಳು ಶ್ರದ್ಧಾಭಕ್ತಿಯಿಂದ ನಡೆಯಿತು. ತೆರೆಯ ಅಂಗವಾಗಿ ಭದ್ರಕಾಳೇಶ್ಚರಿ, ಈಶ್ವರ, ವಿಷ್ಣುಮೂರ್ತಿ ಹಾಗೂ ಅಜ್ಜಪ್ಪ ದೇವರ ಕೋಲ ಮತ್ತು ದರ್ಶನಗಳು ನಡೆದವು. ಇದೇ ಮೊದಲ ಬಾರಿಗೆ ವಿಷ್ಣುಮೂರ್ತಿಯ ಕಟ್ಟಿತೆರೆ ನಡೆದಿತ್ತು. ವಿಷ್ಣುಮೂರ್ತಿ ದೇವರಿಗೆ ತೆರೆ ಕಟ್ಟುವ ಮೊದಲು ತೆರೆಯನ್ನು ಕೆದಕಲ್ ಮುಖ್ಯ ರಸ್ತೆಯಲ್ಲಿ ಕೇರಳದ ಚಂಡೆ ವಾದ್ಯ ದೊಂದಿಗೆ ಮೆರವಣಿಗೆ ನಡೆಸಲಾಯಿತು. ರಾತ್ರಿ ಮಹಾಮಂಗಳಾರತಿ, ಭಂಡಾರ ಹಾಕುವುದು, ದೇವರ ಹರಕೆ ಸೇರಿದಂತೆ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿತು. ಕೆದಕಲ್, ಬಾಳೆಕಾಡು, ಸುಂಟಿಕೊಪ್ಪ, ಹಾಲೇರಿ, ಬೋಯಿಕೇರಿ, ಮಡಿಕೇರಿ, ಕಾಂಡನಕೊಲ್ಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಏ.18 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡರಾಮ ದೇವಾಲಯದಲ್ಲಿ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊದಂಡರಾಮ ಮಂದಿರದಲ್ಲಿ ಬೆಳಿಗ್ಗೆ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ಸ್ವಾಮಿಗೆ ಬೆಳ್ಳಿಯ ಕವಚವನ್ನು ಅಳವಡಿಸಿ, ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ರಾಮನಿಗೆ ಪಂಚಾಮೃತ ಅಭಿಷೇಕ, ರಾಮತಾರಕ ಹೋಮ ನಡೆದು ಮಹಾಪೂಜೆ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಿಸಲಾಯಿತು. ಪೂಜಾ ಕೈಂಕಾರ್ಯವನ್ನು ದೇವಾಲಯದ ಮುಖ್ಯ ಅರ್ಚಕ ಜಯಂತ್ ಭಟ್ ಅವರ ನೇತೃತ್ವದಲ್ಲಿ ಅರ್ಚಕರುಗಳಾದ ಗಣೇಶ್ ಉಪಾಧ್ಯಯ, ಮಂಜುನಾಥ್ ಭಟ್, ಮಂಜುನಾಥ್ ಉಡುಪ, ಗಣೇಶ್ ಭಟ್ ನೆರವೇರಿಸಿದರು. ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ಪದಾಧಿಕಾರಿಗಳು ಗೌರಿ ಗಣೇಶೋತ್ಸವ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಬಿ.ಎಂ.ಸುರೇಶ್, ನಿಕಟಪೂರ್ವ ಕಾರ್ಯದರ್ಶಿ ಸುರೇಶ್ ಗೋಪಿ, ಮುಖಂಡರಾದ ಪಿ.ಆರ್.ಸುನಿಲ್‍ಕುಮಾರ್, ಧನುಕಾವೇರಪ್ಪ, ಶಾಂತರಾಮ್ ಕಾಮತ್, ರಾಮ ಸೇವಾ ಸಮಿತಿಯ ಅಶೋಕ್ ಶೇಟ್, ಪ್ರೀತಂ ಪ್ರಭಾಕರ್, ವಿಜಯ ಸೇರಿದಂತೆ ಮತ್ತಿತರರು…
ಸುಂಟಿಕೊಪ್ಪ ಏ.18 NEWS DESK : ಸುಂಟಿಕೊಪ್ಪದಲ್ಲಿ ಆಯೋಜಿಸಲಾದ ವಿಪಿ ಯೋಧ ಕ್ರಿಯೇಟಿವ್ ಅಕಾಡೆಮಿ ಮಾರ್ಷಲ್ ಆರ್ಟ್ ಅಂಡ್ ಫಿಟ್ನೆಸ್ ವತಿಯಿಂದ ಕರಾಟೆ ಬ್ಲಾಕ್‍ಬೆಲ್ಟ್ ಪರೀಕ್ಷೆಯನ್ನು ಪದವಿ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದು ಉತ್ತೀರ್ಣರಾದ ಪ್ರಮಾಣಪತ್ರ ಹಾಗೂ ಬ್ಲಾಕ್‍ಬೆಲ್ಟ್‍ಗಳನ್ನು ವಿತರಿಸಲಾಯಿತು. ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ವಿವಿಧ ಬೆಲ್ಟ್ ಸ್ಥಾನಗಳಿಗೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಒಟ್ಟು 40 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸತೀಶ್, ಪ್ರಶಾಂತಿನಿ ದಂಪತಿಗಳ ಪುತ್ರ ಕೆ.ಎಸ್.ಅಕ್ಷಯ್ ಬ್ಲಾಕ್ ಬೆಲ್ಟ್, ಎಫ್ ಎಂ ಸಿ ಕಾಲೇಜಿನ ದ್ವಿತೀಯ ಬಿ ಸಿ ಎ ವಿದ್ಯಾರ್ಥಿ ಡಾನ್ ದ್ವಿತೀಯ ಸ್ಥಾನ ಪಡೆದಿದ್ದಾನೆ. 7ನೇ ಹೊಸಕೋಟೆ ನಿವಾಸಿ ಎಚ್.ಎನ್.ಶ್ರೀಧರ್ ಹಾಗೂ ಅನಿತಾ ದಂಪತಿಗಳ ಪುತ್ರ ಎಸ್. ಅಂಕಿತ್ ಬ್ಲಾಕ್ ಬೆಲ್ಟ್, ಎಫ್ ಎಂ ಸಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಡಾನ್ ದ್ವಿತೀಯ. ಕೊಡಗರಹಳ್ಳಿ ಅಂದಗೋವೆಯ ವಲ್ಲಂಡ ಕಾಶಿಯಪ್ಪ ಹಾಗೂ ವಲ್ಲಂಡ ಗೌರಮ್ಮ ಅವರ ಪುತ್ರಿ ವಲ್ಲಂಡ ಕೆ.ಹರಿಪ್ರಿಯ ಬ್ಯಾಕ್ ಬೆಲ್ಟ್, ಇವಳು ಸಂತ…
ಮಡಿಕೇರಿ ಏ.17 NEWS DESK : ಕೊಡಗು ಮತ್ತು ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರು ಇಂದು ನಗರದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಮೈಸೂರು-ಕೊಡಗು ರೈಲು ಸಂಪರ್ಕ, ಐಟಿ-ಬಿಟಿ ಕಂಪೆನಿಗಳಲ್ಲಿ ಕೊಡಗಿನವರಿಗೆ ಆದ್ಯತೆ, ಸಮಗ್ರ ನೀರು ಸರಬರಾಜು ವ್ಯವಸ್ಥೆ, ಪಿರಿಯಾಪಟ್ಟಣದಲ್ಲಿ ಕೃಷಿ ಸಂಶೋಧನಾ ಕೇಂದ್ರ, ಮಡಿಕೇರಿಯಲ್ಲಿ ವೈದ್ಯಕೀಯ ಟ್ರಾಮಾ ಕೇಂದ್ರ ಸ್ಥಾಪನೆ, ಸೋಮವಾರಪೇಟೆಯಲ್ಲಿ ಟೆಕ್ನಾಲಜಿ ಪಾರ್ಕ್, ಕಾಫಿ ಮತ್ತು ಕರಿಮೆಣಸು ಬೆಳೆಗಾರರ ಸಮಸ್ಯೆಗೆ ಪರಿಹಾರ, ಮಡಿಕೇರಿಯಲ್ಲಿ ಮಿನಿ ಏರ್‍ಪೋರ್ಟ್, ಯೋಗ ಶಾಲೆಗಳ ಸ್ಫಾಪನೆ, ಕ್ರೀಡಾಭಿವೃದ್ಧಿ ಪ್ರಾಧಿಕಾರ ಪ್ರಾರಂಭ, ಹುಣಸೂರಿನಲ್ಲಿ ಸೆಂಟ್ರಲ್ ಯೂನಿವರ್ಸಿಟಿ ಸ್ಥಾಪನೆ, ವಿರಾಜಪೇಟೆಯಲ್ಲಿ ಕಂಪ್ಯೂಟರ್ ಹಾರ್ಡ್‍ವೇರ್ ಕೇಂದ್ರ ಆರಂಭ, ಗೋಣಿಕೊಪ್ಪಲುವಿನಲ್ಲಿ ಕಾಫಿ ರಫ್ತು ಕೇಂದ್ರ ಸೇರಿದಂತೆ ವಿವಿಧ ಯೋಜನೆಗಳ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ ಎಂದು ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಹೇಳಿದರು. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಇಂದು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಲಕ್ಷ್ಮಣ್ ಗೌಡ ಹೇಳಿದರು. ಈ…
ಸೋಮವಾರಪೇಟೆ ಏ.17 NEWS DESK : ಶ್ರೀ ರಾಮನವಮಿ ಉತ್ಸವ ಸಮಿತಿ ಮತ್ತು ಹಿಂದುಜಾಗರಣಾ ವೇದಿಕೆ ವತಿಯಿಂದ ಆಂಜನೇಯ ದೇವಾಲಯದಲ್ಲಿ ಶ್ರೀ ರಾಮನವಮಿ ಆಚರಿಸಲಾಯಿತು. ಪಟ್ಟಣದ ರಾಮಮಂದಿರದಲ್ಲಿ ರಾಮನವಮಿ ಅಂಗವಾಗಿ ಮುಂಜಾನೆಯಿಂದಲೇ ವಿಶೇಷ ಪೂಜೆ, ಹೋಮಹವನ ನಡೆಯಿತು. ದೇವಾಲಯದಲ್ಲಿ ಭಕ್ತಾದಿಗಳಿಗೆ ಪಾನಕ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಮತ್ತು ನೆರೆದಿದ್ದ ಭಕ್ತಾದಿಗಳಿಗೆ ಅನ್ನದಾನ ನಡೆಯಿತು. ಪಟ್ಟಣದ ಬಸ್ ನಿಲ್ದಾಣ ಮತ್ತು ಮಹಾತ್ಮಗಾಂಧಿ ವೃತ್ತದ ಬಳಿ ಸಾರ್ವಜನಿಕರಿಗೆ ಪಾನಕ ವಿತರಿಸಲಾಯಿತು. ರಾಮನವಮಿ ಶೋಭ ಯಾತ್ರೆ, ಶಾಂತಿಯುವವಾಗಿ ನಡೆಯಲು ಡಿವೈಎಸ್‍ಪಿ ಗಂಗಾಧರಪ್ಪ ಮತ್ತು ಇನ್ಸ್‍ಪೆಕ್ಟರ್ ವಸಂತ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ನಡೆಯಿತು.






