ಮಡಿಕೇರಿ ಏ.16 NEWS DESK : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್10 ಕುಂಡಾಮೇಸ್ತ್ರಿ ಮತ್ತು ಎಫ್11 ಗಾಳಿಬೀಡು ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಏ.17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗಾಳಿಬೀಡು, ಕಾಲೂರು, ಹೆಬ್ಬೆಟ್ಟಗೇರಿ, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕೂಟುಹೊಳೆ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಏ.15 NEWS DESK : ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸಲ್ಲ, ಈ ಕುರಿತು ಪ್ರಧಾನಿ ನರೇಂದ್ರಮೋದಿ ಅವರೇ ಭರವಸೆ ನೀಡಿದ್ದಾರೆ. ಮತ ಗಳಿಕೆಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಸ್ಪಷ್ಟಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್, ಬಿಜೆಪಿ ಗೆಲುವು ಸಾಧಿಸಿದರೆ ಸಂವಿಧಾನ ಬದಲಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಮಂತ್ರಿಗಳೇ ಸಂವಿಧಾನವನ್ನು ಬದಲಾಯಿಸುವ ಪ್ರಶ್ನೇಯೇ ಇಲ್ಲ ಎಂದು ಬೃಹತ್ ಸಮಾವೇಶದಲ್ಲೇ ಹೇಳಿದ್ದಾರೆ. ಡಾ.ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷವೇ ಅಗೌರವದಿಂದ ನೋಡಿಕೊಂಡಿತ್ತು, ಚುನಾವಣೆಗಳಲ್ಲಿ ಸೋಲಿಸಿತ್ತು ಎಂದು ಟೀಕಿಸಿದರು. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎನ್ನುವುದಕ್ಕೆ ಭಾನುವಾರ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ನಡೆದ ಬೃಹತ್ ಸಮಾವೇಶವೇ ಸಾಕ್ಷಿಯಾಗಿದೆ. ಈ…
ಕುಶಾಲನಗರ NEWS DESK ಏ.15 : ಕುಶಾಲನಗರದ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2024-25 ನೇ ಸಾಲಿಗೆ ಪ್ರಥಮ ಬಿ.ಎ. ಬಿ.ಕಾಂ, ಬಿಸಿಎ, ಮತ್ತು ಬಿಬಿಎ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಏಪ್ರಿಲ್ 20 ರಿಂದ ಕಾಲೇಜಿನ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು. ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಅಧ್ಯಾಪಕರುಗಳು , ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರನ್ನು ಒಳಗೊಂಡಿದ್ದು, ಕಾಲೇಜಿನಲ್ಲಿ ಸರ್ಕಾರದ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಸ್ಟೆಲ್ ವ್ಯವಸ್ಥೆ ಲಭ್ಯವಿದೆ. ಇದರೊಂದಿಗೆ ಡಿಜಿಟಲ್ ಗ್ರಂಥಾಲಯ, ಸುಸಜ್ಜಿತವಾದ ಕ್ರೀಡಾ ಮೈದಾನ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಿಸಿ ಕ್ಯಾಮರಾ,ಮನೋರಂಜನ ಕಾರ್ಯಕ್ರಮಗಳ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂ. ಸಂಖ್ಯೆ +91 94804 48000, +919663557448, +919844897554 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಪ್ರವೀಣ್ ಕುಮಾರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.15 NEWS DESK : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬೀರುಗ ಗ್ರಾಮದ ಅಯ್ಯಮಾಡ ಮಾದಯ್ಯ(63) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಇಂದು ಬೆಳಗ್ಗೆ ಮಾದಯ್ಯ ಅವರು ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯ ಮೂಲಕ ತೆರಳುತ್ತಿದ್ದ ಸಂದರ್ಭ ಕಾಡಾನೆ ಇವರ ಮೇಲೆ ದಾಳಿ ಮಾಡಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ::: ತೀವ್ರ ಅಸಮಾಧಾನ ::: ಘಟನಾ ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳು ಬರುವವರೆಗೆ ಮೃತದೇಹವನ್ನು ಸ್ಥಳದಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇಂದಿನಿAದಲೇ ಕಾರ್ಯಾಚರಣೆ ಆರಂಭಿಸಿ, ನಾಡಿನಿಂದ ಕಾಡಿಗೆ ಆನೆಗಳನ್ನು ಅಟ್ಟುವಂತೆ ತಾಕೀತು ಮಾಡಿದರು. ಇದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಮ್ಮತಿಯನ್ನು ಸೂಚಿಸಿದರು. ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ಅವರು ಮಾತನಾಡಿ,…
ಮಡಿಕೇರಿ ಏ.15 NEWS DESK : ಕೊಡವರ ಹೊಸ ವರ್ಷ ಎಡಮ್ಯಾರ್ ಆಚರಣೆ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೋಣಿಕೊಪ್ಪದಲ್ಲಿ ಪಂಜಿನ ಮೆರವಣಿಗೆ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಉಮಾಮಹೇಶ್ವರಿ ದೇವಾಲಯದ ಬಳಿಯಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಪ್ರಮುಖರು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ಶಾಂತಿಧೂತ ಮಹಾತ್ಮಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶವಾದದ ಮಹತ್ವ ಮತ್ತು ಪ್ರಸ್ತುತತೆಯ ಬಗ್ಗೆ ವಿವರಿಸಿದರು. ಡಾ.ಅಂಬೇಡ್ಕರ್ ಅವರು ರಾಷ್ಟçದಾದ್ಯಂತ ಜಾತಿ, ಮತ, ಧರ್ಮ, ಜನಾಂಗ, ಲಿಂಗ, ಜನಾಂಗೀಯತೆ, ಸಮುದಾಯದ ಗಾತ್ರ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಜನರ ಯೋಗಕ್ಷೇಮಕ್ಕಾಗಿ ಭೂಮಿಯ ಮೇಲಿನ ಶ್ರೇಷ್ಠ ಸಂವಿಧಾನವನ್ನು ಜನತೆಗೆ ಅರ್ಪಿಸಿದ್ದಾರೆ. ಮಹಾತ್ಮ ಗಾಂಧಿ ಅವರು ಹಕ್ಕುಗಳನ್ನು ಸಾಧಿಸಲು ಇಡೀ ಜಗತ್ತಿಗೆ ಶಾಂತಿಯುತ ಮತ್ತು ಸತ್ಯವಾದ ಅಹಿಂಸಾತ್ಮಕ ಸತ್ಯಾಗ್ರಹವನ್ನು ಕಲಿಸಿದರು. ಸಿಎನ್‌ಸಿ ತನ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಸಾಧಿಸಲು ಸಂವಿಧಾನದ ತತ್ವಗಳನ್ನು ನಂಬುತ್ತದೆ…
ಮಡಿಕೇರಿ ಏ.15 NEWS DESK : ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಾಣ -ನಿರ್ದೇಶನದ ಕೊಡವ ಚಲನಚಿತ್ರ “ಕಾಂಗತ ಮೂಡ್” (The shadow) ಚಿತ್ರದ ಮುಹೂರ್ತ ಮೂರ್ನಾಡಿನ ಬಿದ್ದಂಡ ಪೊನ್ನಪ್ಪ ಅವರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿ ಮಾತನಾಡಿದ ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ನಾವು ಎಷ್ಟು ಓದುತ್ತೇವೆ ಎಂಬುದು ಮುಖ್ಯವಲ್ಲ. ನಾವು ಜೀವನದಲ್ಲಿ ಎಷ್ಟರ ಮಟ್ಟಿಗೆ ಮನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುತ್ತಿದ್ದೇವೆ ಎಂಬುದು ಮುಖ್ಯ ಗ್ರಂಥಾಲಯಕ್ಕೆ ಎಲ್ಲರೂ ಹೋಗುತ್ತಾರೆ. ಅಲ್ಲಿರುವ ಪ್ರತಿ ಪುಸ್ತಕಗಳನ್ನು ಓದುತ್ತಾರೆ. ಆದರೆ ಅದನ್ನು ಓದುವಿಕೆಗೆ ಅಷ್ಟೇ ಸೀಮಿತ ಪಡಿಸದೇ ಅದರಿಂದ ಪಡೆದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಳ್ಳಬೇಕು ಎಂದು ಹೇಳಿದರು. ಬಾಹ್ಯಕ್ಕಿಂತಲೂ ಅಂತರಾಳದಲ್ಲಿ ನೋಡುವ ದೃಷ್ಠಿಕೋನ ಬಾಳನ್ನು ಅಭ್ಯಾಸ ಮಾಡುತ್ತದೆ. ನಮ್ಮ ಒಳಗಿನ ಬಾಳನ್ನು ನಮ್ಮ ಮನಸ್ಸನ್ನು ನಾವು ಓಡಾಡುವ ನೆಲ, ಜಲ ಹಾಗೂ ಪರಿಸರವನ್ನು ನಾವು ಗಮನದಲ್ಲಿಟ್ಟುಕೊಳ್ಳುವುದು ಅತ್ಯಂತ…
ಮಡಿಕೇರಿ ಏ.15 NEWS DESK : ಕೊಡಗು ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ.ಶಾಂತಪ್ಪ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ಅನುಮೋದನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಪತ್ರ ನೀಡಿದ್ದು, ಇಂದು ನಡೆದ ಜೂ಼಼ಮ್ ಸಭೆಯಲ್ಲಿ ಪಾಲ್ಗೊಂಡು ಚುನಾವಣೆಯ ಜವಾಬ್ದಾರಿಯ ಕುರಿತು ಚರ್ಚಿಸಿರುವುದಾಗಿ ಶಾಂತಪ್ಪ ತಿಳಿಸಿದ್ದಾರೆ. ಜಿಲ್ಲಾ ಪರಿಷತ್ ನ ಮಾಜಿ ಸದಸ್ಯರಾಗಿರುವ ಕೆ.ಬಿ.ಶಾಂತಪ್ಪ ಅವರು ರಾಜ್ಯ ಕುರುಬರ ಸಂಘದ ಕಾರ್ಯಾಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.
ಸುಂಟಿಕೊಪ್ಪ ಏ.15 NEWS DESK : ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಸಮಾರಂಭದಲ್ಲಿ ದಿನದ ಮಹತ್ವತೆ ಕುರಿತು ಮಾತನಾಡಿದರು. ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ದೇಶದಲ್ಲಿ ಐಕ್ಯತೆ, ಸಾಮಾಜಿಕತೆ, ರಾಜಕೀಯ, ಆರ್ಥಿಕವಾಗಿ ದೇಶವು ಬಲಿಷ್ಠಗೊಳ್ಳಬೇಕಿದರೆ ದೇಶದ ಪ್ರತಿಯೊಬ್ಬ ಪ್ರಜೆಯು ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ದೇಶವು ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಲು ಸಾಧ್ಯವೆಂದು ಮನಗಂಡಿದ್ದರು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ದೇಶವು ಬಲಿಷ್ಠ ರಾಷ್ಟ್ರವಾಗಲೂ ಕಾರಣಿಭೂತರಾಗಿದ್ದಾರೆಂದು ಅವರು ನುಡಿದರು. ಗಣ್ಯರು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ನಿವಾಸಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಸುಂಟಿಕೊಪ್ಪ ಏ.15 NEWS DESK : ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಗದ್ದೆಹಳ್ಳ, ಕೆದಕಲ್, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ ಮಾದಾಪುರ, ಗರಗಂದೂರು ಇನ್ನಿತರ ಕಡೆಗಳಲ್ಲಿ ಹಿಂದೂ ಮಲಯಾಳಿ ಭಾಂದವರು ಬಿಶು ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಕೇರಳದಲ್ಲಿ ಸಂಭ್ರಮದಿಂದ ಆಚರಿಸುತ್ತಿರುವ ಬಿಶು ಹಬ್ಬವನ್ನು ಕೊಡಗಿನ ಹಿಂದೂ ಮಲಯಾಳಿ ಭಾಂದವರು ಸಂಭ್ರಮದಿಂದ ಆಚರಿಸುತ್ತಾರೆ. ದವಸ ದಾನ್ಯ ಹೂ ಹಣ್ಣು ಹಂಪಲು (ಕಣಿ) ಹಳದಿ ಬಣ್ಣದ ಬಿಶು ಪುಷ್ಪ ಇರಿಸಿ ಬಿಶು ಹಬ್ಬ ದೇವರನಾಡು ಕೇರಳದಲ್ಲಿ ಹಿಂದೂ ಮಲಯಾಳಿ ನೆಲೆಸಿರುವ ಎಲ್ಲಾ ರಾಜ್ಯ ಹಾಗೂ ವಿದೇಶಗಳಲ್ಲೂ ಬಿಶು ಹಬ್ಬವನ್ನು ಆಚರಿಸುತ್ತಾರೆ. ಸುಂಟಿಕೊಪ್ಪ ಸುರೇಶ್ ಗೋಪಿ ಮನೆಯಲ್ಲಿ ಫಲಪುಷ್ಪಗಳನ್ನು ಇರಿಸಿ ಪೂಜೆಯನ್ನು ಸಲ್ಲಿಸಿದರು. ಹಿಂದೂ ಮಾಲಯಾಳಿಗಳ ಮನೆಂiÀಲ್ಲಿ ದವಸ ಧಾನ್ಯ, ಹೂ ಹಣ್ಣು ಹಂಪಲು (ಕಣಿ) ಹಳದಿ ಬಣ್ಣದ ಬಿಶು ಪುಷ್ಪ ಇರಿಸಿ ಬಿಶು ಹಬ್ಬ ಬರಚಿಸಿ ಹೊಸ ಬಟ್ಟೆ ಧರಿಸಿ ಇನ್ನಿತರ ತರಕಾರಿಗಳಿಂದ ತಯಾರಿಸಿದ ಭಕ್ಷ ಬೋಜನ ಸವಿಯುವುದು ಬಿಶು ಹಬ್ಬದ ವಿಶೇಷವಾಗಿದೆ.
ಸೋಮವಾರಪೇಟೆ ಏ.15 NEWS DESK : ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ವಾಸ್ತುಶಿಲ್ಪಿ, ದಲಿತ ಚಳುವಳಿಯ ಪಿತಾಮಹಾ ಎಂದು ಪರಿಗಣಿಸಲಾಗಿದೆ. ಅವರು ಸಂವಿಧಾನದ ಹಕ್ಕುಗಳಿಂದ ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಮುಖ್ಯ ಶಿಕ್ಷಕ ಶಿರಂಗಾಲ ಲೋಕೇಶ್ ಅಭಿಪ್ರಾಯಿಸಿದರು. ತಾಲೂಕು ಆಡಳಿತ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಮಾನವ ಧರ್ಮದ ಪ್ರತಿಪಾದಕ, ಸಮಾಜ ಸುಧಾರಕ, ಸಂವಿಧಾನ ತಜ್ಞ, ಮಾನವ ಹಕ್ಕುಗಳ ಹೋರಾಟಗಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಅವರು ಭಾರತದಲ್ಲಿಯ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯರು, ಎದುರಿಸುತ್ತಿದ್ದ ತಾರತಮ್ಯ ಮತ್ತು ದಬ್ಬಾಳಿಕೆಯ ವಿರುದ್ಧದ ಹೋರಾಟ ಮಾಡಿ, ನ್ಯಾಯ ಒದಗಿಸಿಕೊಟ್ಟ ಮಹಾನ್ ಚೇತನ ಎಂದು ಬಣ್ಣಿಸಿದರು. ಅಂಬೇಡ್ಕರ್ ಅವರು ಸ್ವಾತಂತ್ರ್ಯ ಭಾರತದ ಸಂವಿಧಾನವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮಹಿಳೆಯರು, ಕಾರ್ಮಿಕರು, ಅಸ್ಪೃಶ್ಯರು, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಹಿತಾಸಕ್ತಿ ಕಾಪಾಡಲು ಶ್ರಮಿಸಿದ್ದಾರೆ. ಇವತ್ತು ನಾವೆಲ್ಲಾ ಪಡೆಯುತ್ತಿರುವ…






