ಮಡಿಕೇರಿ ಏ.15 NEWS DESK : 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಡಿಕೇರಿಯ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಮೊದಲೇ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಪ್ರಶ್ನಿಸಿದರು. ಮೋದಿ ಅವರು ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೊದಲು ಹೇಳಬೇಕು. ಅದರ ಅವಲೋಕನ ಆದ ನಂತರ ಮುಂದಿನದ್ದು…
ಲೇಖಕ: admin
ಮಡಿಕೇರಿ ಏ.15 NEWS DESK : ಆದಿ ದ್ರಾವಿಡ ಸಮಾಜ ಸೇವಾ ಸಂಘ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನವನ್ನು ಬಿಳಿಗೇರಿ ಗ್ರಾಮದಲ್ಲಿ ಅರ್ಥಪೂರ್ಣವಾಗಿ ಆಚರಿಸಿತು. ಗ್ರಾಮದ ಜಂಬೂರು ತೋಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಶಿಕ್ಷಣದಿಂದ ಮಾತ್ರ ಈ ದೇಶದ ಅಭಿವೃದ್ಧಿ ಸಾಧ್ಯ ಎಂದರು. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಸಂದೇಶ ನೀಡಿದ್ದಾರೆ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಇಂದು ಸಂವಿಧಾನ ನಮಗೆ ನೆರವಾಗಿದೆ. ಸಮಾನತೆ, ಮತದಾನದ ಹಕ್ಕು ಮತ್ತು ಪ್ರಶ್ನೆ ಮಾಡುವ ಅವಕಾಶವನ್ನು ಕಲ್ಪಿಸಿದೆ. ಶಿಕ್ಷಣದಿಂದ ಮಾತ್ರ ಈ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯುವ ಮೂಲಕ ದೇಶವನ್ನು ಕಟ್ಟಿ ಬೆಳೆಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಬೇಕು ಎಂದು ಸೋಮಪ್ಪ ಹೇಳಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ…
ಮಡಿಕೇರಿ ಏ.15 NEWS DESK : ಬಿಜೆಪಿ ಸಂವಿಧಾನ ವಿರೋಧಿಯಾಗಿದೆ, ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ ಜನಧ್ವನಿ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ, ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು. ಸಂವಿಧಾನ ವಿರೋಧಿ, ಸಂವಿಧಾನ ಬದಲಾಯಿಸುವುದು ಬಿಜೆಪಿ ಪರಿವಾರದ ಹುನ್ನಾರ. ಆರ್‍ಎಸ್‍ಎಸ್ ಪರಿವಾರ ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇವರು ದೇಶಭಕ್ತರಾಗಲು ಸಾಧ್ಯವೇ ಇಲ್ಲ ಎಂದರು. ಸಮಾಜದಲ್ಲಿನ ಎಲ್ಲಾ ಜಾತಿ, ವರ್ಗ ಮತ್ತು ಧರ್ಮದ ಬಡವರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವುದಕ್ಕಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ.…
ಮಡಿಕೇರಿ ಏ.15 NEWS DESK : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬೀರುಗ ಗ್ರಾಮದ ಅಯ್ಯಮಾಡ ಮಾದಯ್ಯ(63) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಇಂದು ಬೆಳಗ್ಗೆ ಮಾದಯ್ಯ ಅವರು ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯ ಮೂಲಕ ತೆರಳುತ್ತಿದ್ದ ಸಂದರ್ಭ ಕಾಡಾನೆ ಇವರ ಮೇಲೆ ದಾಳಿ ಮಾಡಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ::: ತೀವ್ರ ಅಸಮಾಧಾನ ::: ಘಟನಾ ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳು ಬರುವವರೆಗೆ ಮೃತದೇಹವನ್ನು ಸ್ಥಳದಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇಂದಿನಿAದಲೇ ಕಾರ್ಯಾಚರಣೆ ಆರಂಭಿಸಿ, ನಾಡಿನಿಂದ ಕಾಡಿಗೆ ಆನೆಗಳನ್ನು ಅಟ್ಟುವಂತೆ ತಾಕೀತು ಮಾಡಿದರು. ಇದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಮ್ಮತಿಯನ್ನು ಸೂಚಿಸಿದರು. ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ಅವರು ಮಾತನಾಡಿ,…
ಮಡಿಕೇರಿ ಏ.15 NEWS DESK : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಘಟಕದ ಕಾರ್ಯಕಾರಿಣಿ ಸಮಿತಿ ಮತ್ತು ಮುಂಚೂಣಿ ನಾಯಕರುಗಳ ಸಭೆ ಮಡಿಕೇರಿಯಲ್ಲಿ ನಡೆಯಿತು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ಲ ಅಡ್ಕರ್ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲಾಯಿತು. ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೂ ಮತದಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸಭೆ ನಿರ್ಧರಿಸಿತು. ಎಸ್‍ಡಿಪಿಐ ಪಕ್ಷದ ಆಂತರಿಕ ಚುನಾವಣೆ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು. ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಜಿಲ್ಲಾ ಉಸ್ತುವಾರಿ ನವಾಜ್ ಉಳ್ಳಾಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹಮ್ಮದ್, ಪ್ರಮುಖರಾದ ಮನ್ಸೂರ್, ಮೇರಿ ವೇಗಸ್, ಅಮೀನ್ ಮೊಹಿಸಿನ್, ಟಿ.ಹೆಚ್.ಅಬೂಬಕರ್, ಉಸ್ಮಾನ್ ಸುಂಟಿಕೊಪ್ಪ ಮತ್ತಿತರ ಮುಂಚೂಣಿ ಘಟಕದ ನಾಯಕರುಗಳು ಉಪಸ್ಥಿತರಿದ್ದರು.
ಮಡಿಕೇರಿ ಏ.15 NEWS DESK : ಕೊಡವರ ಹೊಸ ವರ್ಷ ಎಡಮ್ಯಾರ್ ನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮದೆನಾಡಿನ ಬೆಟ್ಟತ್ತೂರು ಗ್ರಾಮದಲ್ಲಿ ಅರ್ಥಪೂರ್ಣವಾಗಿ ಆಚರಿಸಿತು. ಗ್ರಾಮದ ಕೂಪದಿರ ಎನ್.ಮೋಹನ್ ಅವರ ಗದ್ದೆಯಲ್ಲಿ ಭೂತಾಯಿಗೆ ವಿಧಿವತ್ತಾಗಿ ಪೂಜೆ ಸಲ್ಲಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಕೆಂಪಯ್ಯ, ಕರಿಯಣ್ಣ ಜೋಡೆತ್ತುಗಳ ಮೂಲಕ ಉಳುಮೆ ಮಾಡಿದರು. ಭೂತಾಯಿ ಹಾಗೂ ಆದಿಮಸಂಜಾತ ಕೊಡವ ಬುಡಕಟ್ಟು ಜನರ ನಡುವಿನ ಅವಿನಾಭಾವ ಸಂಬಂಧವನ್ನು ಪ್ರತಿಪಾದಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿದರು, ಊರು ಮಂದ್ ನಲ್ಲಿ ಹಿರಿಯರನ್ನು ಸ್ಮರಿಸಿದರು. ಪ್ರಕೃತಿ ಆರಾಧಕರಾದ ಕೊಡವರ ವಿಶಿಷ್ಟವಾದ ಆಚರಣೆಯನ್ನು ವಿಶ್ವ ಮಟ್ಟಕ್ಕೆ ಪರಿಚಯಿಸುವ ಸಲುವಾಗಿ ಹೊಸ ವರ್ಷ “ಎಡಮ್ಯಾರ್” ನ್ನು ಸಿಎನ್‌ಸಿ ಸಂಘಟನೆ ಪ್ರತಿವರ್ಷ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದ್ದು, ಇದು 30ನೇ ವರ್ಷದ ಕಾರ್ಯಕ್ರಮವಾಗಿದೆ ಎಂದರು. ನಮ್ಮ ಸಂಸ್ಕೃತಿ, ಪರಂಪರೆಯನ್ನು ಈ ರೀತಿಯಲ್ಲಿ ಪ್ರತಿಬಿಂಬಿಸುವುದರಿಂದ ಕೊಡವರ ಅಸ್ತಿತ್ವದ ಬಗ್ಗೆ ಇಡೀ ವಿಶ್ವಕ್ಕೆ ತಿಳಿಯಲಿದೆ. ಅತ್ಯಂತ ಸೂಕ್ಷ್ಮ ಆದಿಮಸಂಜಾತ ಕೊಡವರ ಸ್ಥಿತಿಗತಿಯ ಬಗ್ಗೆ ಅರಿವು ಮೂಡಲಿದ್ದು,…
ಮಡಿಕೇರಿ ಏ.13 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡರ ಪರ ಮತಯಾಚಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಭೋಸರಾಜು, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೊಡಗು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಸೇರಿದಂತೆ ಹಿರಿಯ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಈಗಾಗಲೇ ಕೊಡಗು ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ಕಾರ್ಯ ನಡೆದಿದೆ. ಜನರಿಂದ ಎಂ.ಲಕ್ಷ್ಮಣ ಗೌಡರ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್…
ಸೋಮವಾರಪೇಟೆ ಏ.13 NEWS DESK : ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡವಣೆಯ ಶ್ರೀ ಚೌಡೇಶ್ವರಿ(ಮಸಣಿಕಮ್ಮ) ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಗಣಪತಿ ಹೋಮ, ಶುದ್ಧ ಪುಣ್ಯಾಹ, ವಾಸ್ತು ಹೋಮ, ರಕ್ಷೋಘ್ನ ಹೋಮ ಜಲಧಿವಾಸ, ಕ್ಷೀರಾಧಿವಾಸ, ನಾಣ್ಯಧಿವಾಸ, ಧಾನ್ಯಧಿವಾಸ ಹಾಗೂ ಶಯ್ಯಾಧಿವಾಸ ನಡೆಯಿತು. ನಂತರ ಗಂಗೆಸ್ನಾನ, ಪ್ರತಿಷ್ಠಾಪನಾ ಹೋಮ, ಕಲಶ ಅಭಿಷೇಕ, ಅಲಂಕಾರ ಪೂಜೆ, ಮಹಾ ಮಂಗಳಾರತಿ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ವಿಜಯ, ಪದಾಧಿಕಾರಿಗಳಾದ ರವಿ, ಸುಬ್ಬಯ್ಯ, ಮಹೇಂದ್ರ ಇದ್ದರು.
ಸೋಮವಾರಪೇಟೆ ಏ.13 NEWS DESK : ಸೋಮವಾರಪೇಟೆ ಶ್ರೀ ಆಂಜನೇಯ ದೇವಾಲಯದಲ್ಲಿ ಶ್ರೀ ರಾಮನವಮಿ ಉತ್ಸವ ಅಂಗವಾಗಿ ವಿಶೇಷ ಪೂಜೆ ನಡೆಯುತ್ತಿದ್ದು, ಆಂಜನೇಯ ದೇವರಿಗೆ ಬೆಣ್ಣೆ ಅಲಂಕಾರ ಮಾಡಿ ಪೂಜಿಸಿಲಾಯಿತು.
ಮಡಿಕೇರಿ. ಏ.13 NEWS DESK : ಕೊಡಗು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಡಿಸಿ-XI ಮತ್ತು ಜಿಲ್ಲೆಯ ಪತ್ರಕರ್ತರ ತಂಡದ ಪ್ರೆಸ್-XI ನಡುವೆ 8 ಓವರ್ ಗಳ ಪಂದ್ಯಾವಳಿ ನಡೆಯಿತು. ಪಂದ್ಯ ಆರಂಭಕ್ಕೂ ಮುನ್ನ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಚುನಾವಣೆಯಂತಹ ಪ್ರಜಾಪ್ರಭತ್ವದ ಹಬ್ಬದಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ಮತದಾನ ಮಾಡುವವರು ಎಂದಿಗೂ ಚಾಂಪಿಯನ್ ಇದ್ದಂತೆ ಎಂದು ಬಣ್ಣಿಸಿದರು. ನೈತಿಕ ಮತದಾನಕ್ಕಾಗಿ ಪತ್ರಕರ್ತರ ಸಹಕಾರವೂ ಅಗತ್ಯ. ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದರು. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಡಿಸಿ-XI ತಂಡ ಉತ್ತಮ ಬೌಲಿಂಗ್ ದಾಳಿ ಪ್ರದರ್ಶಿಸಿತು. ಪ್ರೆಸ್- XI ತಂಡವು ನಿಗದಿತ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 68 ರನ್ ಗಳ ಸವಾಲಿನ ಗುರಿ…






