ವಿರಾಜಪೇಟೆ ಫೆ.17 NEWS DESK : ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಸುವರ್ಣ ಸಂಭ್ರಮ ಕನ್ನಡಿಗ ಮತ್ತು ಸುವರ್ಣ ಶ್ರೀ ಕನ್ನಡ ಪ್ರಶಸ್ತಿ ಹಾಗೂ ನೃತ್ಯೋತ್ಸವದಲ್ಲಿ ಸಂತ ಅನ್ನಮ್ಮ ಶಾಲೆಯ 1ನೇ ತರಗತಿಯ ವಿದ್ಯಾರ್ಥಿನಿ ಸಂಚಿತ ಆಚಾರ್ಯ ವಿವಿಧ ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಗಮನ ಸೆಳೆದರು. ಈ ಸಂದರ್ಭ ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿ ಗಣ್ಯರು ಪುಟ್ಟ ಬಾಲೆಯ ನೃತ್ಯಕ್ಕೆ ಮನಸೋತು ಸಂಚಿತಾ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ವಿರಾಜಪೇಟೆಯ ಪ್ರೇಮಾಂಜಲಿ ಆಚಾರ್ಯ ಮತ್ತು ಚಂದ್ರು ಆಚಾರ್ಯ ಅವರ ಪುತ್ರಿಯಾಗಿರುವ ಸಂಚಿತ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿನಿ.
ಲೇಖಕ: admin
ಬೆಂಗಳೂರು, ಫೆ.17 NEWS DESK : ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಭಾರತ ಸಂವಿಧಾನ ಹಾಗೂ ಉರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬOಧಿಸಿದಂತೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತದ ಸಂವಿಧಾನ ಜಾರಿಗೆ ಬಂದು 75 ನೇ ವರ್ಷಕ್ಕೆ ಕಾಲಿಟ್ಟಿದೆ. 75 ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಭಾಷಣಕಾರರು, ಖ್ಯಾತ ಚಿಂತಕರಾದ ಪ್ರೊ: ಅಸುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖದೇವ್ ಥೋರಟ್,…
ಮಡಿಕೇರಿ ಫೆ.17 NEWS DESK : ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ವಿಜಯನಗರದಲ್ಲಿ ಆರಂಭಿಸಿರುವ ಕೂಸಿನ ಮನೆಯನ್ನು ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸರಕಾರದ ಮಹತ್ವಾಕಾಂಕ್ಷೆಯ ಈ ಯೋಜನೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕಾರ್ಮಿಕರ ಮಕ್ಕಳ ಪಾಲನೆಗೆ ಸಹಕಾರಿಯಾಗಲಿದೆ. ಇತರೆ ಕೂಲಿ ಕಾರ್ಮಿಕರು ಕೂಡ ತಮ್ಮ ಮಕ್ಕಳನ್ನು ಇಲ್ಲಿಗೆ ದಾಖಲಿಸಿ ನಿಶ್ಚಿಂತೆಯಾಗಿ ಕೆಲಸಕ್ಕೆ ತೆರಳಬಹುದು ಎಂದರು. 6 ತಿಂಗಳಿಂದ ಮೂರು ವರ್ಷದ ಮಕ್ಕಳನ್ನು ಇಲ್ಲಿ ದಾಖಲಿಸಬಹುದು. ದಾಖಲಾದ ಮಕ್ಕಳನ್ನು ನಿಭಾಯಿಸಲು ಮೂವರು ಕೇರ್ ಟೇಕರ್ ಗಳನ್ನು ನಿಯೋಜಿಸಿ ತೆರಬೇತಿ ನೀಡಲಾಗಿದೆ. ಮಕ್ಕಳಿಗೆ ಇಲ್ಲಿ ಪ್ರತಿದಿನ ಪೌಷ್ಠಿಕ ಆಹಾರ ಒದಗಿಸಲಾಗುವುದು. ಜಿಲ್ಲೆಯಲ್ಲಿಯೇ ನಮ್ಮ ಗ್ರಾ.ಪಂ ವತಿಯಿಂದ ಈ ಯೋಜನೆ ಅನುಷ್ಠಾನ ಸಮರ್ಪಕವಾಗಿ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಗ್ರಾಪಂ ಸದಸ್ಯರಾದ ಗಿರೀಶ್, ಖತೀಜ, ಜ್ಯೋತಿ, ಈರಯ್ಯ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಫೆ.17 NEWS DESK : ಮೇಕೇರಿಯ ಸಕಾ೯ರಿ ಪ್ರಾಥಮಿಕ ಶಾಲೆಯ ವಿದ್ಯಾಥಿ೯ಗಳಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 41 ಟ್ರ್ಯಾಕ್ ಸೂಟ್ ಗಳನ್ನು ವಿತರಿಸಲಾಯಿತು. ರೋಟರಿ ಜಿಲ್ಲಾ ಗವನ೯ರ್ ಹೆಚ್.ಆರ್.ಕೇಶವ್ ಶಾಲಾ ಸಭಾಂಗಣದಲ್ಲಿ ಶಾಲೆಯ 41 ವಿದ್ಯಾಥಿ೯ಗಳಿಗೆ ಟ್ರ್ಯಾಕ್ ಸೂಟ್ ವಿತರಿಸಿದರು. ವಿದ್ಯಾಥಿ೯ಗಳು ತಾವು ಶಿಕ್ಷಣ ಪಡೆದ ಶಾಲೆಯನ್ನು ಸದಾ ಯೋಚನೆಯಲ್ಲಿರಿಸಿಕೊಂಡು ಉತ್ತಮ ಸ್ಥಾನ ಪಡೆದ ಬಳಿಕ ಆ ಶಾಲೆಗೆ ಸೂಕ್ತ ನೆರವು ನೀಡಿ ಮಾದರಿಗಳಾಗಬೇಕೆಂದು ಕಿವಿಮಾತು ಹೇಳಿದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ, ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್ , ರೋಟರಿ ಮಿಸ್ಟಿ ಹಿಲ್ಸ್ ಪ್ರಮುಖರಾದ ಬಿ.ಜಿ.ಅನಂತಶಯನ, ಅನಿಲ್ ಹೆಚ್.ಟಿ, ಅನಿತಾಪೂವಯ್ಯ, ಪೊನ್ನಚ್ಚನ ಮಧುಸೂದನ್, ನಮಿತಾ ರೈ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ಅನಿತಾ, ಶಾಲಾ ಮುಖ್ಯಶಿಕ್ಷಕಿ ಸಬಿತ, ಗ್ರಾ.ಪಂ.ಸದಸ್ಯರಾದ ಹನೀಫ್, ಮುತ್ತಮ್ಮ, ಪಿಡಿಓ ಶ್ರೀಧರ್, ಶಿಕ್ಷಕಿಯರಾದ ಲಾವಣ್ಯ, ಶ್ರೀಲತಾ, ರೇಖಾ , ವಿದ್ಯಾಥಿ೯ಗಳ…
ಮಡಿಕೇರಿ ಫೆ.17 NEWS DESK : ಬಹಳ ವಷ೯ಗಳಿಂದ ದುರಸ್ತಿಗೊಳಗಾಗಿದ್ದ ಅಪ್ಪಂಗಳ – ಜ್ಯೋತಿ ಕಾಲೋನಿ – ಅರವತ್ತೋಕ್ಲು ರಸ್ತೆ ದುರಸ್ಥಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ಮನವಿಗೆ ರಾಜ್ಯ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖಗೆ೯ ಸ್ಪಂದಿಸಿದ್ದಾರೆ. ಅಪ್ಪಂಗಳದ ಸಾಂಬಾರ ಮಂಡಳಿ ಕಚೇರಿಯಿಂದ ಜ್ಯೋತಿಕಾಲೋನಿಗಾಗಿ ಅರವತ್ತೋಕ್ಲು ಗ್ರಾಮಕ್ಕೆ ತೆರಳುವ 1.50 ಕಿ.ಮೀ. ಅಂತರದ ರಸ್ತೆ 25 ವಷ೯ಗಳಿಂದ ಹಾಳಾಗಿದೆ. ಇದರಿಂದಾಗಿ ಈ ವ್ಯಾಪ್ತಿಯ ಗ್ರಾಮಸ್ಥರು, ವಿದ್ಯಾಥಿ೯ಗಳು, ವಯೋವೃದ್ಧರು, ರೋಗಿಗಳಿಗೆ ಸಾಕಷ್ಟು ಸಮಸ್ಯೆಯಾಗಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಜ್ಯೋತಿ ಕಾಲೋನಿಗಾಗಿ ಸಾಗುವ ರಸ್ತೆ ಹಾಳಾಗಿ ನೂರಾರು ಮಂದಿಗೆ ಸಮಸ್ಯೆಯಾಗಿತ್ತು. ಈ ನಿಟ್ಟಿನಲ್ಲಿ ಗ್ರಾಮಸ್ಥರಾದ ನಿವೖತ್ತ ವಾಯುಪಡೆಯ ನಿವೃತ್ತ ಅಧಿಕಾರಿ ಮುಂಜಾಂದೀರ ಅಪ್ಪಯ್ಯ ರಾಜಾ ಅವರು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ ಖಗೆ೯ ಅವರನ್ನು ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ ಸಹಕಾರದಲ್ಲಿ ಭೇಟಿಯಾಗಿ ರಸ್ತೆ ದುರಸ್ಥಿಗೆ ಮನವಿ ಸಲ್ಲಿಸಿದರು. ಕಾಂಕ್ರೀಟ್ ರಸ್ತೆಯನ್ನು ನಿಮಿ೯ಸುವ ಮೂಲಕ ಸವ೯ಋತು ರಸ್ತೆಯನ್ನು ನೀಡುವಂತೆ ಕೋರಿದರು. ಈ ಸಂದಭ೯…
ಮಡಿಕೇರಿ ಫೆ.17 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಬಾಪೂಜಿ ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಹುಮಾನ ಪಡೆದ ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ಕೆ.ಎಸ್.ಹೃತ್ಪೂರ್ವಕ್ ಅವರನ್ನು ಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಆಡಳಿತ ಮಂಡಳಿಯ ಸಂಚಾಲಕ ರೆ.ಫಾ. ನವೀನ್‍ಕುಮಾರ್, ಪ್ರಾಂಶುಪಾಲರಾದ ಕೆ.ಎಸ್. ಸುಮಂತ್, ಮುಖ್ಯೋಪಾಧ್ಯಯರಾದ ಕೆ.ಎ.ಜಾನ್ಸನ್, ಸಿಸ್ಟರ್ ಸರಿತಾ ಮಾರ್ತಾ, ಸಿಸ್ಟರ್ ಪ್ರತಿಮಾ ಇತರರು ಇದ್ದರು.
ಮಡಿಕೇರಿ ಫೆ.17 NEWS DESK : ಇತ್ತೀಚೆಗೆ ದಾರವಾಡದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ಸಂತ ಮೈಕಲರ ಪ್ರೌಢಶಾಲೆಯ ವಿದ್ಯಾರ್ಥಿಗಳು ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸಾಮೂಹಿಕ ಜಾನಪದ ನೃತ್ಯ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಮೌಲ್ಯ, ಗಾನ, ಸಂಜನಾ, ಅನುಷ್ಕ, ಶ್ರೇಯಸ್, ಹರ್ಷವರ್ಧನ್, ನೀಲ್, ಪೂವಯ್ಯ ಭಾಗವಹಿಸಿದ್ದರು. ಹಿಂದಿ ಭಾಷಣ ಸ್ಪರ್ಧೆಯಲ್ಲಿ ಸೌಮ್ಯ ಭಾಗವಹಿಸಿದ್ದರು. ಅಲ್ಲದೆ, ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಅಲೆನ್ ಥೋಮಸ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶಿಕ್ಷಕರಾದ ಪುನೀತ್, ಶಾರದ, ಸವರಿನ್ ಡಿಸೋಜ, ಸಂಕೇತ್ ತರಬೇತಿ ನೀಡಿದ್ದಾರೆ. ಅಧಿಕಾರಿ, ಶಿಕ್ಷಕರು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದ ಈ ವಿದ್ಯಾರ್ಥಿಗಳನ್ನು ಸಂತ ಮೈಕಲರ ವಿದ್ಯಾಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು.
ನಾಪೋಕ್ಲು ಫೆ.17 NEWS DESK : ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ಮಡಿಕೇರಿ ಅಕ್ರಮ ಸಕ್ರಮ ಮಾಜಿ ಅಧ್ಯಕ್ಷ ನಾಗೇಶ್ ಕುಂದಲಪಾಡಿ, ಪ್ರಧಾನ ಕಾರ್ಯದರ್ಶಿಗಳಾಗಿ ಜಿ.ಪಂ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಮತ್ತು ಕೆ.ನಿಡುಗಡೆ ಗ್ರಾ.ಪಂ ಮಾಜಿ ಅಧ್ಯಕ್ಷ ಡೀನ್ ಬೋಪಣ್ಣ ಅವರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಫೆ.17 NEWS DESK : ನಿಟ್ಟೂರು ಗ್ರಾ.ಪಂ ವತಿಯಿಂದ ಸಂವಿಧಾನ ಜಾಗೃತಿ ಜಾಥಾಕ್ಕೆ ಭವ್ಯ ಸ್ವಾಗತ ನೀಡಲಾಯಿತು. ಜಾಥಾ ಅಂಗವಾಗಿ ಅಂಬೇಡ್ಕರ ಪ್ರತಿಮೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಯುವಕ ಯುವತಿಯರು ಬೈಕ್ ರ‌್ಯಾಲಿ ಆಯೋಜಿಸಿದ್ದರು. ಗಿರಿಜನರ ಕಲಾತಂಡಗಳು ನೃತ್ಯ ದೊಂದಿಗೆ ಮಹಿಳೆಯರು ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿ ಗಮನ ಸೆಳೆದರು. ಕಾರ್ಮಾಡು ಪ್ರಾಥಮಿಕ ಶಾಲೆ ಗೇಟಿನಿಂದ ಗ್ರಾ.ಪಂ ಸಭಾಂಗಣದ ತನಕ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಂವಿಧಾನದ ಮಹತ್ವ ತಿಳಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕ ಮಾದಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ್ರತಿ ಗ್ರಾಮ ಪಂಚಾಯಿತಿಗೂ ತೆರಳುವ ಸಂವಿಧಾನ ಜಾಗೃತಿ ಜಾಥಾದ ಮೂಲಕ ಗ್ರಾಮೀಣ ಭಾಗದ ಜನರಲ್ಲಿ ಸಂವಿಧಾನದ ಧ್ಯೇಯೋದ್ದೇಶದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ…
ಮಡಿಕೇರಿ ಫೆ.17 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಕುಶಾಲನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ದುಡಿಯುವ ಜನರ ಶೋಷಣೆ ತಪ್ಪಿಸಲು, ಉದ್ಯೋಗ ಸೃಷ್ಟಿಸಲು, ಅಗತ್ಯ ವಸ್ತುಗಳ ಬೆಲೆ ಇಳಿಸಲು ಕ್ರಮ ಕೈಗೊಳ್ಳಬೇಕು, ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು, ರೈಲ್ವೆ, ವಿದ್ಯುತ್ ಒಳಗೊಂಡ ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಖಾಸಗೀಕರಣವನ್ನು ಕೈಬಿಡಬೇಕು, ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು, ಡಾ.ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಟ ಬೆಂಬಲ ಬೆಲೆಗೆ ಕಾನೂನು ರಚಿಸಬೇಕು, ಕೃಷಿ ಕಾರ್ಮಿಕರಿಗೆ ಸಮಗ್ರವಾದ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್…






