ಮಡಿಕೇರಿ ಏ.12 NEWS DESK : ಸರಕಾರಿ ಜಮೀನುಗಳಲ್ಲಿ ಅನಧೀಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಗುತ್ತಿಗೆ ಆಧಾರದಲ್ಲಿ ಸರಕಾರಿ ಜಾಗವನ್ನು ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಏ.15ರಂದು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭೂ-ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆ, ಆದಿವಾಸಿ, ಮೂಲ ನಿವಾಸಿ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಒಳಗೊಂಡು ಕೊಡಗಿನ ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ಏ.15 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಏಕಕಾಲದಲ್ಲಿ ಪ್ರತಿಭಟನೆ ನಡೆಸಿ, ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗುವುದೆಂದರು. ರಾಜ್ಯ ಸರ್ಕಾರ ತರಾತುರಿಯಲ್ಲಿ ಕಾನೂನಿಗೆ ತಿದ್ದುಪಡಿ ತಂದಿದ್ದು, ಕಲಂ 94(ಇ)ಯನ್ನು ಹೊಸದಾಗಿ ಸೇರಿಸಲಾಗಿದೆ. ಇದರಿಂದ ಸರಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಅಂತಹ ಜಮೀನನ್ನು ಗುತ್ತಿಗೆ…
ಲೇಖಕ: admin
ಮಡಿಕೇರಿ ಏ.12 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಏ.13 ರಿಂದ 17 ರವರೆಗೆ 85 ವರ್ಷ ಮೇಲ್ಪಟ್ಟ ಹಿರಿಯನಾಗರೀಕ ಮತದಾರರು ಹಾಗೂ ಶೇ.40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಇರುವ ವಿಶೇಷ ಚೇತನ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಎಲೆಕ್ಟಾನ್ ತಂತ್ರಾಂಶದಲ್ಲಿ ಮಾಹಿತಿಯನ್ನು ದಾಖಲಿಸಿ, ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಾನಸಭಾ ಕ್ಷೇತ್ರವಾರು ಹೋಂ ವೋಟಿಂಗ್ ನಡೆಯುವ ದಿನಾಂಕಗಳು: ಮಡಿಕೇರಿಯಲ್ಲಿ(208) ಏ.15 ರಿಂದ 17 ರವರೆಗೆ, ವಿರಾಜಪೇಟೆ(209) ಏ.15 ರಿಂದ 17ರವರೆಗೆ, ಪಿರಿಯಾಪಟ್ಟಣ(210) ಏ.14 ರಿಂದ 15ರವರೆಗೆ, ಹುಣಸೂರು(212) ಏ.15 ರಿಂದ 16ರವರೆಗೆ, ಚಾಮುಂಡೇಶ್ವರಿ(215) ಏ.13 ರಿಂದ 14ರವರೆಗೆ, ಕೃಷ್ಣರಾಜ(216) ಏ.13 ರಿಂದ 14ರವರೆಗೆ, ಚಾಮರಾಜ(217) ಏ.14 ರಿಂದ 15 ಹಾಗೂ ನರಸಿಂಹರಾಜ(218)ದಲ್ಲಿ ಏ.13 ರಿಂದ 14 ರವರೆಗೆ ಹೋಮ ವೋಟಿಂಗ್ಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಏ.12 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ-ಪಂಗಡದ ಮತಗಳು ನಿರ್ಣಾಯಕ ಪಾತ್ರ ವಹಿಸಲಿರುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚಾದ ಅಧ್ಯಕ್ಷ ಪಿ.ಎಂ.ರವಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸುಮಾರು 1.5 ಲಕ್ಷ ಮತಗಳಿದ್ದು, ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಈ ಸಮೂಹವನ್ನು ಮತ ಬ್ಯಾಂಕ್‍ಗೊಸ್ಕರ ಓಲೈಕೆ ಮಾಡುತ್ತ ಬಂದಿದೆಯೆ ಹೊರತು ಅವರ ಬಗ್ಗೆ ನೈಜ ಕಾಳಜಿ ತೋರಿಲ್ಲ. ಈ ಬಾರಿ ಪರಿಶಿಷ್ಟ ಸಮೂಹ ಬಿಜೆಪಿ ಪರ ವಿಶ್ವಾಸವನ್ನು ಹೊಂದಿರುವುದಾಗಿ ಹೇಳಿದರು. ನರೇಂದ್ರ ಮೋದಿ ಅವರು ಈ ರಾಷ್ಟ್ರದ ಪ್ರಧಾನಮಂತ್ರಿಗಳಾದ ಬಳಿಕ ಪರಿಶಿಷ್ಟ ಸಮೂಹದ ಏಳಿಗೆಗೆ ಹತ್ತು ಹಲವು ಶಾಶ್ವತ ಯೋಜನೆಗಳನ್ನು ನೀಡಿರುವುದಲ್ಲದೆ, ಹಿಂದುಳಿದ ಸಮೂಹಕ್ಕೆ ಸೇರಿದವರಿಗೆ ರಾಷ್ಟ್ರಪತಿ ಸ್ಥಾನವನ್ನು ನೀಡಿದೆ. ಬಿಜೆಪಿ ಪಕ್ಷ ದಲಿತ ಸಮೂಹದವರಿಗೆ ಮಹತ್ವದ ಸ್ಥಾನಗಳನ್ನು ನೀಡುವ ಮೂಲಕ ರಾಷ್ಟ್ರ ಸೇವೆಯಲ್ಲಿ ಅವರ ಪಾಲು ಹೆಚ್ಚಾಗಿರುವುವಂತೆ ನೋಡಿಕೊಂಡಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್…
ಮಡಿಕೇರಿ ಏ.12 NEWS DESK : ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಬಾಂಧವರ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದ ಏ.26 ರಂದು ನಡೆಯುವ ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದೆ ಇರಲು ನಿರ್ಧರಿಸಿದ್ದೇವೆ ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಸುಮಾರು 30 ಸಾವಿರ ಮಂದಿ ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಜನರಿದ್ದು, ಎಲ್ಲರೂ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ ಎಂದರು. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿ ಬಾಂಧವರಿಗೆ 8 ವಿವಿಧ ರೀತಿಯ `ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ. ಆದ್ದರಿಂದ “ಆದಿ ದ್ರಾವಿಡ” ಪರಿಶಿಷ್ಟ ಜಾತಿ ಎಂದು ಜಾತಿ ಪ್ರಮಾಣಪತ್ರ ನೀಡಲು ಸರಕಾರÀ ಕ್ರಮ ಕೈಗೊಳ್ಳಬೇಕೆಂದು ಕಳೆದ ಅನೇಕ ವರ್ಷಗಳಿಂದ ಸಂಘಟನೆ ಮೂಲಕ…
ಮಡಿಕೇರಿ ಏ.12 NEWS DESK : ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‍ಸಿ(ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಯು ಏಪ್ರಿಲ್, 18 ಮತ್ತು 19 ರಂದು ಮಡಿಕೇರಿ 5 ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕೊಡಗು ವಿದ್ಯಾಲಯ ಈ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಕಾರ್ಯವನ್ನು ಯಾವುದೇ ಅಡಚಣೆ ಮತ್ತು ಅವ್ಯವಹಾರಗಳಿಲ್ಲದೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಈ ಅವಧಿಯಲ್ಲಿ ನಿಷೇಧಿತ ಪ್ರದೇಶದ…
ಮಡಿಕೇರಿ ಏ.12 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ಮತದಾನದ ಪ್ರಮಾಣ ಅಧಿಕಗೊಳಿಸಲು ಈಗಾಗಲೇ ನಾನಾ ರೀತಿಯ ಚಟುವಟಿಕೆಗಳ ಮೂಲಕ ಕ್ರೀಯಾಶೀಲವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದೆಲ್ಲದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ಗ್ರಾಮದ ಕಶೆಗೋಡಿ ಭಾಗದ ಮಾಣಿ ಪರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿಗಳಾದ ಸನ್ನಿಧಿ ಕಶೆಕೋಡಿ, ಸಾರ್ವಿ ಸ್ಕಂದ, ಸ್ತುತಿ, ಆದ್ಯ, ಹಾಗೂ ಸಮೃದ್ಧಿ ಇವರುಗಳು ಮಡಿಕೇರಿಯ ವಿವಿಧ ಪ್ರದೇಶಗಳಲ್ಲಿ ತಮ್ಮದೇ ಹಾಡಿನ ಶೈಲಿ ಮೂಲಕ ಮತದಾನ ಜಾಗೃತಿ ಮೂಡಿಸಿದರು. ಉಪವಿಭಾಗಾಧಿಕಾರಿ ವಿನಾಯಕ್ ನಾರ್ವಡೆ ಅವರು ಈ ಮಕ್ಕಳ ಮತದಾನದ ಜಾಗೃತಿ ಕಾರ್ಯಕ್ಕೆಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಕಚೇರಿಯಲ್ಲಿ ಮಕ್ಕಳನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಪುಟ್ಟ ಮಕ್ಕಳ ಚುನಾವಣಾ ಮತದಾನದ ಜಾಗೃತಿ ಕಾರ್ಯವನ್ನು ನಿರಂತರವಾಗಿ ನಡೆಸುವ ಮೂಲಕ ಮತದಾನದ ಪ್ರಮಾಣ ಅಧಿಕಗೊಳಿಸಲು ಮಕ್ಕಳು ತಮ್ಮದೇ ಆದ ಭಾಷೆ ಹಾಗೂ…
ಮಡಿಕೇರಿ ಏ.12 NEWS DESK : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ 134ನೇ ವಾರ್ಷಿಕೋತ್ಸವವು ಏ.15 ರಿಂದ 17ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಏ.15 ರಂದು ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಡಿಕೇರಿ ನಗರದ ಮುಖ್ಯ ಬೀದಿಗಳಲ್ಲಿ ದೇವಿಯ ಮೆರವಣಿಗೆ ನಡೆಯಲಿದೆ. ಏ.16 ರಂದು ಮಧ್ಯಾಹ್ನ 3 ಗಂಟೆಗೆ ಮನೆ ಮನೆಯಿಂದ ಪೂಜೆಯನ್ನು ದೇವಾಲಯಕ್ಕೆ ತಂದೊಪ್ಪಿಸುವುದು, ರಾತ್ರಿ 8 ಗಂಟೆಗೆ ಹೂವಿನ ವರ ಬೇಡುವುದು, ಮನೆ, ಮನೆಯಿಂದ ಆರತಿಯನ್ನು ದೇವಾಲಯಕ್ಕೆ ತರುವುದು, ರಾತ್ರಿ 9 ಗಂಟೆಗೆ ದೇವಿಗೆ ಮಹಾ ಮಂಗಳಾರತಿ ಮತ್ತು ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಲಿದೆ. ಏ.17 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಶ್ರೀ ದೇವಿಗೆ ಹರಕೆ ಮತ್ತು ಕಾಣಿಕೆ ಒಪ್ಪಿಸುವುದು, ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಏ.21 ರಂದು ಅಪರಾಹ್ನ 3 ಗಂಟೆಗೆ ಗುಳಿಗನ ಪೂಜೆ ನಡೆಯಲಿದೆ.…
ಕುಶಾಲನಗರ, ಏ.12 NEWS DESK : ಉತ್ತರ ಕೊಡಗಿನ ಹಾರಂಗಿ ನೀರಾವರಿ ಬಯಲು ಪ್ರದೇಶದಲ್ಲಿರುವ ಜಿಲ್ಲೆಯ ದೊಡ್ಡ ಗ್ರಾಮವೆನಿಸಿದ ಹೆಬ್ಬಾಲೆ ಗ್ರಾಮದಲ್ಲಿ ರೈತರು ಸಂಭ್ರಮ, ಸಾಗರದಿಂದ ಹೊನ್ನಾರು ಉತ್ಸವವನ್ನು ಆಚರಿಸಿದರು. ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ 50 ಕ್ಕೂ ಹೆಚ್ಚು ಜೋಡಿ ಜಾನುವಾರುಗಳೊಂದಿಗೆ ಕೃಷಿ ಉಪಕರಣಗಳೊಂದಿಗೆ ಆಗಮಿಸಿದ ರೈತರು ಜಾನುವಾರುಗಳಿಗೆ ಪೂಜೆ ಸಲ್ಲಿಸಿ ಮಳೆಗಾಗಿ ಸಾಮೂಹಿಕವಾಗಿ ಪ್ರಾರ್ಥಿಸಿದರು. ಬಸವೇಶ್ವರ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ತೆರಳಿದ ಹೊನ್ನಾರು ಉತ್ಸವವು ಗ್ರಾಮದ ಬನಶಂಕರಿ ದೇವಸ್ಥಾನದ ಬಳಿ ಸಮಾಪನಗೊಂಡಿತು. ನಂತರ ಅಲ್ಲಿಂದ ಶ್ರೀ ಕಾಳಿಕಾಂಭ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಿದ ನಂತರ ಹೊನ್ನಾರು ಹೊಂದಿದ್ದ ಎಲ್ಲಾ ರೈತರು ತಮ್ಮ ತಮ್ಮ ಜನೀನುಗಳಿಗೆ ತೆರಳಿ ನೇಗಿಲನ್ನು ಹೂಡಿ ಹೊನ್ನಾರು ಉಳುಮೆಗೆ ಚಾಲನೆ ನೀಡಿದರು. ಗ್ರಾಮ ದೇವಾಲಯ ಸಮಿತಿ ಅಧ್ಯಕ್ಷ ಯಜಮಾನ್ ಬಸವರಾಜು ಮಾತನಾಡಿ, “ಹೊನ್ನಾರು” ಉಳುಮೆ ಕಾರ್ಯವು ಬರಗಾಲವನ್ನು ತೊಲಗಿಸಿ ರೈತರಲ್ಲಿ ಹೊಸ ಉತ್ಸಾಹ ತರಲಿ ಎಂದು ಆಶಯ ವ್ಯಕ್ತಪಡಿಸಿದರು. ದೇವಾಲಯ ಸಮಿತಿಯ…
ಕುಶಾಲನಗರ, ಏ.12 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಗ್ರಾಮದ ದೇವಾಲಯ ಸಮಿತಿ ವತಿಯಿಂದ ಹೊಸ ವರ್ಷ ಯುಗಾದಿ ಹಬ್ಬದ ಅಂಗವಾಗಿ ಗ್ರಾಮೀಣ ಜನಪದ ಸಂಸ್ಕೃತಿಯ ‘ಹೊನ್ನಾರು’ ಉತ್ಸವ( ಚಿನ್ನದ ಉಳುಮೆ)ಕ್ಕೆ ರೈತರು ಸಂಭ್ರಮ, ಸಡಗರದಿಂದ ಆಚರಿಸಿದರು. ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಅಲಂಕೃತ ಜಾನುವಾರುಗಳಿಗೆ ಸಾಮೂಹಿಕ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು. ಹೊನ್ನಾರು ಉತ್ಸವಕ್ಕೆ ಚಾಲನೆ ನೀಡಿದ ಮಾತನಾಡಿದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಯುಗಾದಿ ಹಬ್ಬವು ರೈತರ ಪಾಲಿಗೆ ಹೊಸ ವರ್ಷವಾಗಿದ್ದು, “ಹೊನ್ನಾರು” ಉಳುಮೆ ಕಾರ್ಯವು ರೈತರಲ್ಲಿ ಹೊಸ ಉತ್ಸಾಹ ತರಲಿದೆ. ಹೊನ್ನಾರು ಉತ್ಸವದ ಮೂಲಕ ರೈತರ ಕೃಷಿ ಫಸಲಿಗೆ ಉತ್ತಮ ಮಳೆ ಬೆಳೆ ಬಂದು ಕೃಷಿ ಕಾರ್ಯ ದೇಶ ಸಂವೃದ್ದಿಗೊಳ್ಳಲಿ ಎಂದು ಆಶಯ ವ್ಯಕ್ತಪಡಿಸಿದರು. ನಂತರ ರೈತರು ಗ್ರಾಮದ ದೇವಾಲಯಕ್ಕೆ ಸೇರಿದ ಜಮೀನಿನಲ್ಲಿ ಗ್ರಾಮದಲ್ಲಿ ಗ್ರಾಮ ದೇವಾಲಯ ಸಮಿತಿ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ದೇವಸ್ಥಾನಕ್ಕೆ ಸೇರಿದ ಜಮೀನಿನಲ್ಲಿ ಮೊದಲಿಗೆ ರೈತ ಗಂಗಾರಾಜು…
ಮಡಿಕೇರಿ ಏ.12 NEWS DESK : ಮೂಡಿಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು ಘೋಷಿಸಿದೆ ಎಂದು ಕಾಲೇಜಿನ ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಸಿಬಿಎಸ್‍ಸಿ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್‍ಇ(ಭಾರತೀಯ ಪ್ರೌಢ ಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ(ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗುತ್ತಾರೆ ಎಂದು ಮಾಹಿತಿ ನೀಡಿದರು. ಗಣಿತ, ವಿಜ್ಞಾನ ಹಾಗೂ…






