ಲೇಖಕ: admin

ಮಡಿಕೇರಿ ಮಾ.6 NEWS DESK : ಮಾ.9 ರಂದು ನಡೆಯಬೇಕಿದ್ದ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಮಾ.16 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ತಿಳಿಸಿದ್ದಾರೆ. ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: www.kslsa.kar.nic.in ಸಹಾಯವಾಣಿ ಸಂಖ್ಯೆ 15100 ಮತ್ತು 1800-425-90900 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು…

Read More

ಮಡಿಕೇರಿ ಮಾ.6 NEWS DESK : ಕೊಡವ ಮಹಿಳೆಯರ ಸಾಂವಿಧಾನಿಕ ಸಬಲೀಕರಣಕ್ಕಾಗಿ ಒತ್ತಾಯಿಸಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾ.8 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಧರಣಿ ಸತ್ಯಾಗ್ರಹ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರ್ಧರಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, “ಮಹಿಳೆಯರ ಸಬಲೀಕರಣಕ್ಕಾಗಿ ಸಂಪೂರ್ಣ ವೆಚ್ಚ ಭರಿಸಬೇಕು ಮತ್ತು ಅದರ ಪ್ರಗತಿಯನ್ನು ವೇಗಗೊಳಿಸಬೇಕು” ಎಂಬುವುದು 2024 ರ ಮಹಿಳಾ ದಿನಾಚರಣೆಯ ವಿಶ್ವಸಂಸ್ಥೆಯ ಘೋಷವಾಕ್ಯವಾಗಿದ್ದು, ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‍ಸಿ ಹಕ್ಕು ಮಂಡಿಸಲಿದೆ ಎಂದು ತಿಳಿಸಿದ್ದಾರೆ. ಆದಿಮಸಂಜಾತ ಅತ್ಯಂತ ಸೂಕ್ಷ್ಮ ಬುಡಕಟ್ಟು ಕೊಡವ ಜನಾಂಗದಲ್ಲಿರುವ ಮಹಿಳೆಯರ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಮಹಿಳಾ ದಿನಾಚರಣೆಯಂದು ಶಾಂತಿಯುತ ಧರಣಿ ನಡೆಸಲಾಗುವುದು. ಕೊಡವ ಭೂಮಿಯಲ್ಲಿ ಕೊಡವ ಮಹಿಳೆಯರ ಐತಿಹಾಸಿಕ ನಿರಂತರತೆ, ನೆಲ, ಭಾಷೆ, ಸಾಂಸ್ಕೃತಿಕ ಪರಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ “ಕೊಡವ ಲ್ಯಾಂಡ್” ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡವ…

Read More

ಸಿದ್ದಾಪುರ ಮಾ.6 NEWS DESK  : ನಲ್ವತ್ತೇಕರೆ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸುಳ್ಯ ಕೆವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ  ಸಹಯೋಗದೊಂದಿಗೆ ಮಾ.10ರಂದು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ,  ಮಾಹಿತಿ ಕಾರ್ಯಾಗಾರ, ಉಚಿತ ಔಷಧಿ ವಿತರಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ ಎಂದು ಶ್ರೀ ವಿನಾಯಕ ಸೇವಾ ಸಮಿತಿ ಕಾರ್ಯದರ್ಶಿ ಎಚ್.ಬಿ. ಅಕ್ಷಯ್ ತಿಳಿಸಿದ್ದಾರೆ. ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು,  ನೆಲ್ಯಹುದಿಕೇರಿ ಶಾದಿ ಮಹಲ್ ಸಭಾಂಗಣದಲ್ಲಿ ಶಿಬಿರ ಆಯೋಜಿಸಿದ್ದು, ಶಿಬಿರದಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಇಎನ್ ಟಿ, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಎಲುಬು ಮತ್ತು ಕೀಲು ರೋಗ, ದಂತ ಚಿಕಿತ್ಸೆ, ಶ್ವಾಸಕೋಶ ಹಾಗೂ ತುರ್ತು ಚಿಕಿತ್ಸೆ ವಿಭಾಗ ಸೇರಿದಂತೆ ನುರಿತ 15 ವೈಧ್ಯರುಗಳು ಆರೋಗ್ಯ ತಪಾಸಣೆ ಮಾಡಿ, ಔಷಧಿಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಟಿ.ಆರ್.ಮಣಿ,…

Read More

ಮಡಿಕೇರಿ ಮಾ.6 NEWS DESK :  ಬಾಳೆಲೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಯು ಬಾಳೆಲೆ ಕೊಡವ ಸಮಾಜದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಾಳೆಲೆ ಗ್ರಾ.ಪಂ ಅಧ್ಯಕ್ಷರಾದ ಮುಕ್ಕಾಟಿರ ಜಾನಕಿ ಕಾವೇರಪ್ಪ,  ಬಿಸಿಲಿನ ಬೇಗೆ ದಿನೇ ದಿನೇ ಹೆಚ್ಚುತ್ತಿದ್ದು ನೀರಿನ ಕೊರತೆಯನ್ನು ನಿಭಾಯಿಸಲು ಗ್ರಾಮ ಪಂಚಾಯಿತಿ ನಿರಂತರ ಶ್ರಮ ವಹಿಸುತಿದ್ದು, ಪಂಚಾಯಿತಿ ಆಡಳಿತದೊಂದಿಗೆ ಗ್ರಾಮಸ್ಥರು ಸಹಕರಿಸುವಂತೆ ಕರೆ ನೀಡಿದರು. ಇದಕ್ಕೆ ಧ್ವನಿಗೂಡಿಸಿದ ಗ್ರಾಮ ಪಂಚಾಯಿತಿ ಸದಸ್ಯ ಅದೇಂಗಡ ವಿನು ಉತ್ತಪ್ಪ, ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯು ಸರ್ಕಾರ ಮತ್ತು ಜಿಲ್ಲಾಡಳಿತದ ಸಹಕಾರದೊಂದಿಗೆ ಸದಾ ಸನ್ನದ್ಧವಾಗಿದೆ ಎಂದು ಭರವಸೆ ನೀಡಿದರು. ಗ್ರಾ.ಪಂ ಸದಸ್ಯ  ಪೊಡಮಾಡ ಸುಕೇಸ್ ಭೀಮಯ್ಯ, ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಯು ಬಾಳೆಲೆ ಮತ್ತು ದೇವನೂರು ಭಾಗದಲ್ಲಿ ಪ್ರಗತಿಯಲ್ಲಿದ್ದು, ಈ ಕಾಮಗಾರಿ ಪೂರ್ಣಗೊಂಡ ನಂತರ ನೀರು ಪೂರೈಕೆ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆ ಕಾಣಲಿದೆಯೆಂದು ಮಾಹಿತಿ ನೀಡಿದರು. ನರೇಗಾ ಯೋಜನೆ, ಸಾರ್ವಜನಿಕ ಶೌಚಾಲಯ, ತೋಟಗಾರಿಕೆ,…

Read More

ವಿರಾಜಪೇಟೆ ಮಾ.6 NEWS DESK : ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಆರ್ವತೋಕ್ಲು ಹಾಗೂ ಈಚೂರು ಸೇರಿದಂತೆ ಸುತ್ತಮುತ್ತಲ ಈ ಆರು ಗ್ರಾಮಗಳಿಗೆ ಸೇರಿದ ನಾಡ್ ದೇವಸ್ಥಾನ ಎಂದು ಕರೆಯಲ್ಪಡುವ ಶ್ರೀ ಈಶ್ವರ ದೇವಸ್ಥಾನದಲ್ಲಿ ಕೊಡಿಮರ ನಿಲ್ಲಿಸುವ ಮೂಲಕ 9 ದಿನಗಳ ಹಬ್ಬಕ್ಕೆ ಚಾಲನೆ ನೀಡಗಿದ್ದು, ದೇವರ ಅವಭೃತ ಸ್ನಾನದ ಮೂಲಕ ಹಬ್ಬಕ್ಕೆ ತೆರೆ ಎಳೆಯಲಾಯಿತು. ಕುಂದಾ ಮುಗುಟಗೇರಿ ಗ್ರಾಮದಲ್ಲಿರುವ ಶ್ರೀ ಈಶ್ವರ ದೇವಸ್ಥಾನ ಸಮೀಪದ ಅಂಬಲದಲ್ಲಿ ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಅರುವತೋಕ್ಲು ಹಾಗೂ ಈಚೂರು ಸೇರಿದಂತೆ ಆರು ಊರುಗಳ ತಕ್ಕಮುಖ್ಯಸ್ಥರು ಶ್ರೀ ಈಶ್ವರ ದೇವಸ್ಥಾನದ ದೇವತಕ್ಕರು, ಭಂಡಾರ ತಕ್ಕರು ಆಯಾಯ ಊರುಗಳಿಂದ ತರಲಾಗಿದ್ದ ದವಸ-ಧಾನ್ಯಗಳನ್ನು ಎತ್ತು ಪೊರಾಟದ ಮೂಲಕ ದೇವಾಲಯದಕ್ಕೆ ತರಲಾಯಿತು. ಚೆಂಡೆ ಮದ್ದಳೆ ಹಾಗೂ ಕೊಡವ ಸಾಂಪ್ರದಾಯಿಕ ವಾಲಗದೊಂದಿಗೆ ಎತ್ತು ಪೊರಾಟವನ್ನು ಬರಮಾಡಿಕೊಳ್ಳಲಾಯಿತು. ನಂತರ ದೇವಸ್ಥಾನದ ಮುಖ್ಯ ಅರ್ಚಕರು ಎತ್ತುಗಳಿಗೆ ವಿಶೇಷ ಪೂಜೆ ಸಲ್ಲಿಸಿ,…

Read More

ಮಡಿಕೇರಿ ಮಾ.6 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೊಡಗು ಜಿಲ್ಲಾ ಆದ್ಮಿ ಪಾರ್ಟಿ ವತಿಯಿಂದ ಜಿಲ್ಲೆಯ ಪ್ರತಿ ಗ್ರಾಮ ಮತ್ತು ಗ್ರಾ.ಪಂ ವ್ಯಾಪ್ತಿಯಲ್ಲಿ “ಬೈ ಬೈ ಮೋದಿ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ 10 ವರ್ಷಗಳಲ್ಲಿ ನಿರಂತರ ಬೆಲೆ ಏರಿಕೆ, ಆಹಾರ ವಸ್ತುಗಳ ಮೇಲೆ ತೆರಿಗೆ ಹೊರೆ, ದೇಶದ ಯುವ ಪೀಳಿಗೆಯನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ, ದೇಶದ ಮೇಲಿನ ಸಾಲ ಹೆಚ್ಚಾಗಿರುವುದು ಸೇರಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಜನಜಾಗೃತಿ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ. ಕೋವಿಡ್ ನಂತರದ ಬೆಲೆ ಏರಿಕೆಯ ಸುನಾಮಿ ಮಧ್ಯಮ ವರ್ಗದವರನ್ನು ಬಡತನ ರೇಖೆಗೆ ದೂಡಿದೆ. ಬಡವರು ಜೀವನ ನಡೆಸಲು ಹರಸಾಹಸ ಪಡಬೇಕಾಗಿದೆ. ದೇಶದ ಶೇ.70ರಷ್ಟು ಜನರ ಆದಾಯ ರೂ.10 ಸಾವಿರಗಿಂತ ಕಡಿಮೆ ಇದೆ. ಪ್ರಧಾನಿ ಮೋದಿ ಸರ್ಕಾರದ ಆರ್ಥಿಕ…

Read More

ವಿರಾಜಪೇಟೆ ಮಾ.6 NEWS DESK : ಮೈಸೂರು ವಿಶ್ವವಿದ್ಯಾಲಯದ ಎಂ.ಪಿ.ಎಡ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದು ಸಾಧನೆ ಮಾಡಿದ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ವಿ.ಆರ್.ಶಬರೀಶ್ ಅವರನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಅವರು ವಿ.ಆರ್.ಶಬರೀಶ್ ಅವರನ್ನು ಸನ್ಮಾನಿಸಿ, ಗೌರವಿಸಿದರು. ಬಳಿಕ ಮಾತನಾಡಿದ ಅವರು ನಮ್ಮ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ದೈಹಿಕ ಶಿಕ್ಷಕ ಶಬರೀಶ್ ಶೈಕ್ಷಣಿಕವಾಗಿ ಈ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದ್ದು, ಅವರ ಕ್ರಿಯಾಶೀಲತೆ, ಶಿಸ್ತು, ಮತ್ತು ಕಾರ್ಯ ವೈಖರಿ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ. ಈ ಹಿಂದೆಯೂ ಅವರು ಪದವಿ ಹಂತದಲ್ಲಿ ಚಿನ್ನದ ಪದಕವನ್ನು ಪಡೆದಿದ್ದು, ವಿದ್ಯಾಸಂಸ್ಥೆಗೆ ಹೆಮ್ಮೆಯಾಗಿದೆ ಎಂದರು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ರೋಸಿ, ಸಿಸ್ಟರ್ ಐಡಾ ಉಪಸ್ಥಿತರಿದ್ದರು.

Read More

ಪುತ್ತೂರು ಮಾ.6 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿಕೊಂಡಿದೆ. ತುಮಕೂರಿನ ಸಿದ್ದಗಂಗಾ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮ್ಯಾಟ್ ಅಂಕಣದಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳೂರಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ಛಾಂಪಿಯನ್ ಆಗಿ ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ತೃತೀಯ ಮೆಕ್ಯಾನಿಕಲ್ ವಿಭಾಗದ ದೀಕ್ಷಿತ್.ಬಿ, ತೃತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ಶ್ರವಣ್ ಕುಮಾರ್ ರೈ, ಗುರುಚರಣ್, ವಿಘ್ನೇಶ್ ಭಂಡಾರಿ, ತೃತೀಯ ಎಐಎಂಎಲ್ ವಿಭಾಗದ ಪ್ರಫುಲ್, ಪುಷ್ಪಕ್.ಕೆ.ಎ, ದ್ವಿತೀಯ ಮೆಕ್ಯಾನಿಕಲ್ ವಿಭಾಗದ ಹಿತೇಶ್.ಒ, ಅಂತಿಮ ಮೆಕ್ಯಾನಿಕಲ್ ವಿಭಾಗದ ಸ್ವಸ್ತಿಕ್.ಬಿ.ಎಸ್, ದ್ವಿತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ಗಣೇಶ್ ಕುಮಾರ್.ಸಿ.ಎಲ್, ದ್ವಿತೀಯ ಡಾಟಾ ಸೈನ್ಸ್ ವಿಭಾಗದ…

Read More

ಮಡಿಕೇರಿ ಮಾ.6 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯ ದೇವಾಲಯದಂತ್ತಿರುವ ಕರ್ನಾಟಕ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಕಾಂಗ್ರೆಸ್ ನ ನಾಸಿರ್ ಹುಸೇನ್ ಸಯ್ಯದ್ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬೇಕು ಮತ್ತು ರಾಜ್ಯಸಭಾ ಸ್ಥಾನದಿಂದ ವಜಾಗೊಳಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ದೃಢಪಟ್ಟಿದೆ. ಅವರ ಬೆಂಬಲಿಗರೇ ಘೋಷಣೆ ಕೂಗಿರುವುದರಿಂದ ನಾಸಿರ್ ಹುಸೇನ್ ಅವರು ರಾಜ್ಯಸಭಾ ಸ್ಥಾನವನ್ನು ಅಲಂಕರಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಕೆಲವು ಸಚಿವರು ವರದಿ ಬರುವ ಮೊದಲೇ ನಾವು ವಿಡಿಯೋ ನೋಡಿದ್ದೇವೆ, ಅದರಲ್ಲಿ ಪಾಕಿಸ್ತಾನದ ಪರ ಯಾವುದೇ ಘೋಷಣೆಗಳನ್ನು ಕೂಗಿಲ್ಲ. ಮಾಧ್ಯಮದವರು ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ ಎಂದು ಜನರ ಹಾದಿ ತಪ್ಪಿಸುವ ಯತ್ನ ಮಾಡಿದ್ದರು.…

Read More

ಮಡಿಕೇರಿ ಮಾ.6 NEWS DESK : ಮಡಿಕೇರಿ ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವವು ಮಾ.8 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ ನಡೆಯಲಿದ್ದು, 9 ಗಂಟೆಗೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯಕ್ಕೆ ಸಾಗಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಭಕ್ತಾಧಿಗಳಿಗೆ ಅನ್ನಸಂತರ್ಪಣೆಯಾಗಲಿದೆ. ಸಂಜೆ 6 ರಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ಜಾಮಪೂಜೆ ಜರುಗಲಿದೆ. ಸಂಜೆ 7 ಗಂಟೆಗೆ ಮಹಾ ಮೃತ್ಯುಂಜಯ ಹೋಮ ಹಾಗೂ ದೀಪಾರಾಧನೆ ನಡೆಯಲಿದ್ದು, ಜಾಗರಣೆ ಪ್ರಯುಕ್ತ ರಾತ್ರಿ 10 ಗಂಟೆಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಮನವಿ ಮಾಡಿದ್ದಾರೆ.

Read More