ಲೇಖಕ: admin

ಮಡಿಕೇರಿ ಏ.9 NEWS DESK : ಹರೇ ರಾಮ, ಕ್ರೋಧೀ ನಾಮ ಸಂವತ್ಸರದ ಇಂದು ಕೊಡಗು ಹವ್ಯಕ ವಲಯ, ಬ್ರಾಹ್ಮಣರ ವಿದ್ಯಾಭಿವೃದ್ಧಿ ನಿಧಿ ಹಾಗೂ ವೈಭವ* ತಂಡದ ಸಹಯೋಗದೊಂದಿಗೆ ಮಡಿಕೇರಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರುದ್ರ ಸಹಿತ ವರುಣ ಸೂಕ್ತ ಪಠಣ ಮಾಡಲಾಯಿತು. ಲೋಕಕ್ಕೆ ಕಾಲಕಾಲಕ್ಕೆ ಮಳೆಯ‌ ಮೂಲಕ ಸುಭೀಕ್ಷೆ ಒದಗಿಸಿ, ಕ್ಷೇಮವಾಗಲಿ ಎಂದು ಶ್ರೀ ಆಂಜನೇಯ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

Read More

ಮಡಿಕೇರಿ ಏ.9 NEWS DESK : ಕಾವೇರಿಯ ಉಗಮಸ್ಥಾನ ಕೊಡಗಿನಲ್ಲಿ ಮಳೆ ಬಾರದೆ ತಾಪಮಾನ ಮಿತಿಮೀರಿದೆ. ಹೂಮಳೆಗಾಗಿ ಎದುರು ನೋಡುತ್ತಿರುವ ಜನ ಮಳೆ ಬಾರದೆ ಕಂಗಾಲಾಗಿದ್ದಾರೆ. ಕೃಷಿ ಕ್ಷೇತ್ರ ಸಂಪೂರ್ಣ ಹಾನಿಗೊಳಗಾಗಿದ್ದು, ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಎದುರಾಗಿದೆ. ಕುಶಾಲನಗರ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಹೊರಭಾಗದಲ್ಲಿರುವ ಬಪ್ಪುರಾಯ ಸ್ವಾಮಿ ದೇವರಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಇಲ್ಲಿ ಪ್ರಾರ್ಥನೆ ಸಲ್ಲಿಸಿದರೆ ಮಳೆ ಸುರಿಯುತ್ತದೆ ಎನ್ನುವ ನಂಬಿಕೆ ಗ್ರಾಮಸ್ಥರದ್ದು. ಗ್ರಾಮದ ಪ್ರಗತಿ ಪರ ಕೃಷಿಕ ಹೆಚ್.ಎಸ್.ಮಹೇಶ್ ಮಾತನಾಡಿ ಈ ಬಾರಿಯ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ, ಬರ ಇಡೀ ನಾಡನ್ನು ಆವರಿಸಿದೆ. ನದಿ, ಕೆರೆ ಸೇರಿದಂತೆ ಕೊಳವೆ ಬಾವಿಗಳು ಬತ್ತಿವೆ. ಜೀವ ನದಿ ಕಾವೇರಿ ಸಂಪೂರ್ಣ ಒಣಗುತ್ತಿದೆ. ಹಾಗಾಗಿ ಮಳೆ ಸುರಿಸಿ ನಾಡಿನ ಜನರನ್ನು ಉದ್ಧರಿಸು ಎಂದು ಗ್ರಾಮದ ರೈತರು ಹಾಗೂ ಗ್ರಾಮಸ್ಥರೊಂದಿಗೆ ಮಳೆಯ ದೇವರನ್ನು ಪ್ರಾರ್ಥಿಸಿದ್ದಾಗಿ ಹೇಳಿದರು. ಮಹಾಪೂಜೆಯ ನಂತರ ಅನ್ನಸಂತರ್ಪಣೆಯಾಯಿತು. ಪೂಜಾ ಕೈಂಕರ್ಯದಲ್ಲಿ ಮರೂರು ಗ್ರಾಮಸ್ಥರು…

Read More

ಮಡಿಕೇರಿ ಏ.9 NEWS DESK : ಈದ್ ಉಲ್ ಫಿತರ್ ಹಬ್ಬದ ದಿನವಾದ ಏ.9 ರಂದು  ಮಡಿಕೇರಿಯ ಎಂ.ಎಂ ಮಸೀದಿಯಲ್ಲಿ ಬೆಳಿಗ್ಗೆ 8.30 ಗಂಟೆಗೆ ಧರ್ಮಗುರು ಅಬ್ದುಲ್ ಹಮೀದ್ ಮದನಿ ಅವರ ನೇತೃತ್ವದಲ್ಲಿ ಹಬ್ಬದ ವಿಶೇಷ ನಮಾಝ್ ನಡೆಯಲಿದೆ ಎಂದು ಮಸೀದಿಯ ಕಾರ್ಯದರ್ಶಿ  ಹಾಜಿ ಎಂ.ಎಂ. ಹಾರೂನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.9 NEWS DESK : ಲೋಕಸಭಾ ಚುನಾವಣೆಯಲ್ಲಿ ಕೊಡಗು- ಮೈಸೂರು ಕ್ಷೇತ್ರವನ್ನು ಗೆಲ್ಲಲೇಬೇಕಾಗಿರುವ ಅನಿವಾರ್ಯತೆಯಲ್ಲಿರುವ ಕಾಂಗ್ರೆಸ್ ದಕ್ಷಿಣ ಕೊಡಗಿನಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದೆ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಮತಯಾಚಿಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೊಳ್ಳು ಭರವಸೆಗಳ ಮೂಲಕ ಆಡಳಿತ ನಡೆಸುತ್ತಿದೆ. ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿ ಸಮಾಜದಲ್ಲಿ ಒಡಕು ಮೂಡಿಸುತ್ತಿದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಪ್ರಾಮಾಣಿಕತೆ ಬಿಜೆಪಿಗೆ ಇಲ್ಲವೆಂದು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ಎಲ್ಲರಿಗೂ ಸಹಕಾರಿ ಆಗಲಿ ಎಂದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದೆ. ಈ ಯೋಜನೆಗಳಿಂದ ಜನ ಸಂತೃಪ್ತಿಯಿಂದ ಇದ್ದಾರೆ. ಅಭಿವೃದ್ಧಿ ಕಾರ್ಯಗಳು ಕೂಡ ಜನರ ನಿರೀಕ್ಷೆಯಂತೆ ನಡೆಯುತ್ತಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ…

Read More

ಮಡಿಕೇರಿ ಏ.9 NEWS DESK : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಅಬ್ದುಲ್ ರಝಾಕ್ ರಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಆದೇಶ ಪತ್ರ ನೀಡಿದರು ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಜಿಲ್ಲಾ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷ ಪಿ.ಎ.ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಸಯ್ಯದ್ ಬಾವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಗೋಣಿಕೊಪ್ಪಲು ಏ.9 NEWS DESK : ನಿಟ್ಟೂರು ಗ್ರಾ.ಪಂ.ವ್ಯಾಪ್ತಿಯ ತಟ್ಟೆಕೆರೆ ಹಾಡಿಗೆ ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ವೀರಾಜಪೇಟೆ‌ ಶಾಸಕ ಎ.ಎಸ್.ಪೊನ್ನಣ್ಣ ಅವರು ಲೋಕಸಭಾ ಅಭ್ಯರ್ಥಿ ಪರ ಮತಯಾಚನೆಗೆ ಆಗಮಿಸಿದ ಸಂದರ್ಭ ಅಲ್ಲಿನ 150 ಕ್ಕೂ ಅಧಿಕ ಆದಿವಾಸಿ ನಿವಾಸಿಗಳು ನಮಗೆ ಕುಡಿಯುವ ನೀರು ಒದಗಿಸಿ ಎಂದು ಅಳಲು ತೋಡಿಕೊಂಡರು. ತಕ್ಷಣ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಉಪ ವಿಭಾಗ ಅಧಿಕಾರಿಗಳಿಗೆ ತುರ್ತು ಕರೆ ಮಾಡಿ ತಟ್ಟೆಕೆರೆ ಹಾಡಿಯಲ್ಲಿರುವ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕುಡಿಯುವ ನೀರು ಒದಗಿಸುವಂತೆ ಸೂಚನೆ ನೀಡಿದರು. ‌‌‌‌ಜಿಲ್ಲೆಯಲ್ಲಿ ಕುಡಿಯುವ ನೀರು ಅಗತ್ಯ ಇರುವಲ್ಲಿ ತ್ವರಿತ ನೀರು ಸರಬರಾಜು ಮಾಡಲು ಜಿಲ್ಲಾಧಿಕಾರಿ ಆದೇಶವಿದ್ದು, ಅಧಿಕಾರಿಗಳು ತಟ್ಟೆಕೆರೆ ಹಾಡಿಗೆ ಆಗಮಿಸಿ ನೀರು ಸರಬರಾಜಿಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು. ಕೊಡಗಿನಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ವಿಫಲಗೊಂಡಿದೆ ಎಂದು ಆರೋಪಿಸಿದ ಶಾಸಕರು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ…

Read More

*ದೇಶದ ಅಭಿವೃದ್ಧಿ ಮತ್ತು ಸುಭದ್ರತೆಗಾಗಿ ಪ್ರಾರ್ಥಿಸೋಣ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು*

Read More