ಲೇಖಕ: admin

ಕಡಂಗ ಮಾ.5 NEWS DESK : ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಚೆರುಪುಝ ಪುಳಿಂಙೋಂ ಔಲಿಯಾಕಳ ಹೆಸರಿನಲ್ಲಿ ವರ್ಷಂಪ್ರತಿ ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ ನಲ್ಲಿ ನಡೆಸಿಕೊಂಡು ಬರುವ ಉರೂಸ್ ಸಮಾರಂಭವು ಈ ಬಾರಿ ಏ.20 ಮತ್ತು 21 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಯಕೋಲ್ ಮಸ್ಜಿದುಲ್ ರಹ್ಮಾನ್ ಮತ್ತು ರೌಳತುಲ್ ಉಲೂಂ ಆಡಳಿತ ಮಂಡಳಿ ತಿಳಿಸಿದೆ. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಮಾ.5 NEWS DESK :  ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಸುಂಟಿಕೊಪ್ಪದ ಎಸ್ ಎಸ್ ಇಂಟರ್ ನ್ಯಾಷನಲ್ ಕನ್ವೆನ್ಷನ್ ಹಾಲ್ ನಲ್ಲಿ 8 ಜೋಡಿ ಮುಸ್ಲಿಂ ಬಡ ಕನ್ಯೆಯರ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. ಸಮುದಾಯದ ಧರ್ಮ ಗುರು ಸೈಯದ್ ಕೆ ಎಸ್ ಮುಕ್ತಾರ್ ತಂಙಳ್ ಕುಂಬೋಲ್ ಅವರು ನಿಖಾಹ್ನ ನೇತೃತ್ವ ವಹಿಸಿದ್ದರು. ಜಿಲ್ಲೆಯ ಮುಸ್ಲಿಂ ಮುಂದಾಳು ಹಾಜಿ ಕೆ.ಎಂ. ಇಬ್ರಾಹಿಂ ಮಾಸ್ಟರ್ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಿತು .ವಧುವಿಗೆ ಐದು ಪವನ್ ಚಿನ್ನಾಭರಣ ವಧೂ ವರರಿಗೆ ಹೊಸ ಉಡುಪು ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಭೋಜನ ನೀಡುವ ಮೂಲಕ ಅಲ್‍ಮೀನ್ ನ ಕಾರ್ಯಕರ್ತರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಎಸ್ ಎಸ್ ಕಲ್ಯಾಣ ಮಂಟಪದ ಮಾಲಿಕ ಎಂ.ಎಂ.ಸಾಹೀರ್ ಮಾತನಾಡಿ, ಮುಂದಿನ ದಿನಗಳಲ್ಲಿಯೂ ಬಡವರ ಸಾಮೂಹಿಕ ವಿವಾಹಕ್ಕಾಗಿ ಕಲ್ಯಾಣ ಮಂಟಪವನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದರು. ಸಮಿತಿಯ ಕೋಶಾಧಿಕಾರಿ ಅಬ್ದುಲ್ ಲತೀಫ್ ಹಾಜಿ ಮಾತನಾಡಿ, ಬಡ ಕನ್ಯೆರ ವಿವಾಹರ್ಥ…

Read More

ಬೆಂಗಳೂರು ಮಾ.5 NEWS DESK : ಶಿಕ್ಷಣ ಕ್ಷೇತ್ರದ ಕ್ರಾಂತಿಕಾರಕ ಯೋಜನೆಯಾದ *ನಮ್ಮ ಶಾಲೆ ನಮ್ಮ ಜವಾಬ್ದಾರಿ*- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ  ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು. ಮುಖ್ಯಮಂತ್ರಿಗಳು ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ  ಪ್ರಾಥಮಿಕ ಶಾಲೆ, ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿ ಇಲ್ಲಿಗೆ 10 ಲಕ್ಷ ರೂ. ಗಳ ದೇಣಿಗೆ ನೀಡುವ ಮೂಲಕ ಯೋಜನೆಯನ್ನು ಉದ್ಘಾಟಿಸಲಾಯಿತು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ  ಎಂ. ಬಿ.ಪಾಟೀಲ್ , ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.5 NEWS DESK : ಕಡಗದಾಳು ಗ್ರಾಮದಲ್ಲಿರುವ ಶ್ರೀ ಬೊಟ್ಲಪ್ಪೇಶ್ವರ ದೇವಾಲಯದಲ್ಲಿ ಮಾ.8 ಮತ್ತು 9 ರಂದು ಮಹಾಶಿವರಾತ್ರಿಯ ವಾರ್ಷಿಕ ಪೂಜೆ ನಡೆಯಲಿದೆ. ಮಾ.8  ರಂದು  ಬಿಲ್ವಪತ್ರೆ ಅರ್ಚನೆ, ಎಳೆನೀರು ಅಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ರಾತ್ರಿ ಜಾಗರಣೆ  ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 10 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊಂಡು ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನದಾನ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ  ಶ್ರೀ ಬೊಟ್ಲಪ್ಪ ಯುವ ಸಂಘದ ಪ್ರಮುಖರು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಮಾ.5 NEWS DESK : ದೇಶದಲ್ಲಿ ಅಕ್ಕಿ ಬೆಲೆಯಲ್ಲಿ ಶೇ.15ರಷ್ಟು ಹೆಚ್ಚಳವಾಗಿರುವ ಹಿನ್ನೆಲೆ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ನೀಡುತ್ತಿರುವ ಭಾರತ್ ಅಕ್ಕಿಯನ್ನು ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಕುಶಾಲನಗರದಲ್ಲಿ ವಿತರಿಸಿದರು. ಅಕ್ಕಿಯ ಬೆಲೆ ಕೆ.ಜಿ ಗೆ 29 ರೂ. ಆಗಿದ್ದು, 5 ಕೆ.ಜಿ ಮತ್ತು 10 ಕೆ.ಜಿ ಬ್ಯಾಗ್ ಗಳಲ್ಲಿ ಲಭ್ಯವಿದೆ. ಸಾರ್ವಜನಿಕರಿಗೆ ಅಕ್ಕಿ ವಿತರಿಸಿ ಮಾತನಾಡಿದ ಸಂಸದರು ಜನಸಾಮಾನ್ಯರಿಗೆ ಸಹಕಾರಿ ಆಗಲಿ ಎಂದು ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಭಾರತ್ ಅಕ್ಕಿಯನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಜನರು ಇದರ ಲಾಭ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕುಶಾಲನಗರ ಬಿಜೆಪಿ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Read More

ಸೋಮವಾರಪೇಟೆ ಮಾ.5 NEWS DESK : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ  3 ದಿನಗಳ ಕಾಲ ಆಯೋಜಿಸಿರುವ ‘ಮಕ್ಕಳ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮಕ್ಕೆ ಚೌಡ್ಲು ಗ್ರಾ.ಪಂ ಅಧ್ಯಕ್ಷೆ ಗೀತಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮಕ್ಕಳಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಇದೊಂದು ಕಲಿಕೆಗೆ ಪೂರಕ ಕಾರ್ಯಕ್ರಮವಾಗಿದೆ. ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹ ನೀಡಬೇಕಾಗಿದೆ. ಚಿಕ್ಕಂದಿನಿಂದಲೇ ಮಕ್ಕಳು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಭಾರತ ಜ್ಞಾನ ವಿಜ್ಞಾನ ಸಮಿತಿ ಸದಸ್ಯರಾದ ಸೌಭಾಗ್ಯ ಬೇಲೂರು ಅವರು ಮಾತನಾಡಿ, ಸಾಹಿತ್ಯಾಭಿರುಚಿಯನ್ನು ಬೆಳೆಸಿ, ಗ್ರಂಥಾಲಯದ ಕಡೆಗೆ ಮಕ್ಕಳನ್ನು ಸೆಳೆಯುವುದೆ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ರಾಜ್ಯದ ಆರು ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಸ್ಥಾಪಿಸಲಾಗಿದೆ. ಆದರೆ ಓದುವ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದನ್ನು ಮನಗಂಡ ಇಲಾಖೆ ಮಕ್ಕಳ ಸಾಹಿತ್ಯ…

Read More

ಮಡಿಕೇರಿ ಮಾ.5 NEWS DESK :  ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕೆಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್.ಆರ್.ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ನೇಮಕಾತಿಗೊಂಡು ಕೊಡಗು ವಿಶ್ವ ವಿದ್ಯಾನಿಲಯ ಚಿಕ್ಕಅಳುವಾರ ಹಾಗೂ ಅದರ ಘಟಕ ಫೀಲ್ಡ್ ಮಾರ್ಷಲ್  ಕಾರ್ಯಪ್ಪ  ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳುಗಳಿಂದ ವೇತನವಾಗಿರುವುದಿಲ್ಲ. ಮಡಿಕೇರಿಯಲ್ಲಿ ಕಾಲೇಜು ಉಪನ್ಯಾಸಕರು ಕಳೆದ ಐದಾರು ದಿನಗಳಿಂದ ಪ್ರತಿಭಟನಾ ನಿರತರಾಗಿದ್ದು, ಸಾರ್ವಜನಿಕರೂ ವಿವಿಯ ಬಗ್ಗೆ ಹತಾಶರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ವಿಶ್ವವಿದ್ಯಾನಿಲಯವು ತಕ್ಷಣವೇ ವಿವಿಯ ಆರ್ಥಿಕ ಶ್ವೇತಪತ್ರವನ್ನು ಸಾರ್ವಜನಿಕವಾಗಿ ಹೊರಡಿಸಬೇಕು. ವಿವಿಯ ಆರ್ಥಿಕ ಪುನರ್ಶ್ಚೇತನದ ದೃಷ್ಟಿಯಿಂದ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಡಾ.ಎಸ್.ಆರ್.ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಮಾ.5 NEWS DESK  : ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವರ ವಾರ್ಷಿಕ ಉತ್ಸವ ಪ್ರಯುಕ್ತ  ನೆರ್ಪು ಪ್ರಯುಕ್ತ “ಎತ್ತು ಪೊರಾಟ” ಶ್ರದ್ಧಾಭಕ್ತಿಯಿಂದ ನಡೆಯಿತು. ಕುಂದಾ ಮುಗುಟಗೇರಿ ಸಮೀಪದಲ್ಲಿರುವ ನಾಡ್ ದೇವಾಲಯ ಎಂದು ಖ್ಯಾತಿ ಪಡೆದಿರುವ ಶ್ರೀ ಈಶ್ವರ ದೇವಸ್ಥಾನ ಸಮೀಪದ ಅಂಬಲದಲ್ಲಿ ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಅರ್ವತೋಕ್ಲು ಹಾಗೂ ಈಚೂರು ಈ ಆರು ಊರುಗಳ ತಕ್ಕಮುಖ್ಯಸ್ಥರು ಸೇರಿದಂತೆ ಶ್ರೀ ಈಶ್ವರ ದೇವಸ್ಥಾನದ ದೇವತಕ್ಕರು, ಭಂಡಾರ ತಕ್ಕರು ಆಯಾಯ ಊರುಗಳಿಂದ ತರಲಾಗಿದ್ದ ದವಸಧಾನ್ಯಗಳನ್ನು ಎತ್ತು ಪೊರಾಟದ ಮೂಲಕ ತರಲಾಯಿತು. ದೇವಸ್ಥಾನಕ್ಕೆ ಎತ್ತು ಪೊರಾಟ ಬರುತ್ತಿದ್ದಂತೆ ಚೆಂಡೆ ಮದ್ದಳೆಯೊಂದಿಗೆ ಬರಮಾಡಿಕೊಂಡ ದೇವಸ್ಥಾನದ ಮುಖ್ಯ ಅರ್ಚಕರು ಎತ್ತುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆರು ಊರುಗಳಿಂದ ತರಲಾಗಿದ್ದ ದವಸಧಾನ್ಯಗಳನ್ನು ದೇವಸ್ಥಾನಕ್ಕೆ ಅರ್ಪಿಸಲಾಯಿತು.  ನಂತರ ನೆರ್ಪು ಪ್ರಯುಕ್ತ ದೇವರ ಉತ್ಸವ ಮೂರ್ತಿಯನ್ನು ಹೊತ್ತು ವಿವಿಧ ಪೂಜಾವಿಧಿ ವಿಧಾನಗಳೊಂದಿಗೆ ಚೆಂಡೆ ವಾದ್ಯಕ್ಕೆ ಹೆಜ್ಜೆ ಹಾಕಲಾಯಿತು. ಅಲಂಕಾರ ಪೂಜೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು…

Read More

ವಿರಾಜಪೇಟೆ ಮಾ.5  NEWS DESK : ಕೋಟೆಕೊಪ್ಪ ಗ್ರಾಮದ ಶ್ರೀ ಬೈತೂರೇಶ್ವರ ದೇವಾಲಯದ ಬನದಲ್ಲಿ ವಾರ್ಷಿಕ ಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ಬನದ ಬೈತೂರೇಶ್ವರ ದೇವರಿಗೆ ಮಹಾಪೂಜೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಹಬ್ಬ ಸಂಪನ್ನಗೊಂಡಿತು. ಬಳಿಕ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು, ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.4 NEWS DESK  : 2023-24ನೇ ಸಾಲಿನ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‍ಚೇರ್ ಗಳನ್ನು ನೀಡುವ ಸಲುವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೈಹಿಕ ವಿಕಲಚೇತನರಾಗಿರುವ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮಥ್ರ್ಯ ಹೊಂದಿರದ ಶೇ.75 ಕ್ಕಿಂತ ಹೆಚ್ಚಿನ ದೈಹಿಕ ಅಂಗವೈಕಲ್ಯತೆಯನ್ನು ಹೊಂದಿರುವ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್‍ಚೇರ್‍ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.7 ಕೊನೆಯ ದಿನವಾಗಿದೆ. ಈ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ. 08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ  ತಿಳಿಸಿದ್ದಾರೆ.

Read More