ಮಡಿಕೇರಿ ಜೂ.8 NEWS DESK : ಇಂದಿನ ಆಧುನಿಕ ಯುಗದಲ್ಲಿ ಮಕ್ಕಳ ಮುಗ್ಧ ಮನಸ್ಸುಗಳಲ್ಲಿ ಭಾರತೀಯ ಸಂಸ್ಕಾರ, ಉತ್ತಮ ನೈತಿಕ ಮೌಲ್ಯಗಳು ಹಾಗೂ ದೇಶಭಕ್ತಿಯನ್ನು ಬಿತ್ತುವ ಸದುದ್ದೇಶದಿಂದ ಮಡಿಕೇರಿ ನಗರದ ಸಮರ್ಥ ವಸತಿಯಲ್ಲಿ ನೂತನ ‘ಬೃಂದಾವನ ಬಾಲಗೋಕುಲ’ ಶಾಖೆ ಉದ್ಘಾಟಿಸಲಾಯಿತು. ಸಮಾರಂಭಕ್ಕೆ ಪ್ರಮುಖರಾದ ಮಂಜುನಾಥ್ ಜಿ ಅವರು ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಸಂಸ್ಕಾರ ಕೇಂದ್ರಗಳು ಇಂದಿನ ಅಗತ್ಯವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಸಂಭ್ರಮದ ಉದ್ಘಾಟನಾ ಕಾರ್ಯಕ್ರಮ: ಸಮಾರಂಭದಲ್ಲಿ ಪುಟಾಣಿಗಳಿಂದ ಶ್ಲೋಕ ಮತ್ತು ಕಥಾ ಸಮಯದ ಕಾರ್ಯಕ್ರಮಗಳು ಜರುಗಿದವು. ಗೌರಿ ಅವರ ನಿತ್ಯ ಶ್ಲೋಕ ಪಠಣದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ಶ್ರುತಿ ಅವರು ಏಕಲವ್ಯನ ಕಥೆಯನ್ನು ರೋಚಕವಾಗಿ ಪ್ರಸ್ತುತಪಡಿಸಿದರು. ಮೇಘ ಅವರು ಭಗವದ್ಗೀತೆ ಪಠಣ ಮಾಡಿದರು ಹಾಗೂ ಸುಜಾತ ಅವರ ನೇತೃತ್ವದಲ್ಲಿ ಹನುಮಾನ್ ಚಾಲೀಸ ಭಜನೆ ನಡೆಯಿತು. ದಿನೇಶಣ್ಣ ಅವರ ನೇತೃತ್ವದಲ್ಲಿ ಮಕ್ಕಳಿಗೆ ವಿವಿಧ ಸಾಂಪ್ರದಾಯಿಕ ಆಟಗಳನ್ನು ಆಡಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ರಾಧಿಕಾ ನೆರವೇರಿಸಿದರು. ಪ್ರತಿ ಶನಿವಾರ ಉಚಿತ…
ಲೇಖಕ: admin
ಮಡಿಕೇರಿ NEWS DESK ಜೂ.8 : ರಾಜ್ಯದ ಸರಕಾರಿ ಶಾಲೆಗಳಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ಅನೇಕ ಸಮಸ್ಯೆಗಳು ಮತ್ತು ಕೊರತೆಗಳು ಶಾಲೆಗಳನ್ನು ಕಾಡುತ್ತಿದೆ. ನೂತನ ಮುಖ್ಯಮಂತ್ರಿಗಳು ಸಂಭ್ರಮಾಚರಣೆಯನ್ನು ಬಿಟ್ಟು ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಿ ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದ್ದು, ಶಾಲಾ ಕೊಠಡಿ, ಪೀಠೋಪಕರಣಗಳು, ಶೌಚಾಲಯ ಸಮರ್ಪಕವಾಗಿಲ್ಲ. ನಲಿ-ಕಲಿ ಪದ್ಧತಿಯಿಂದ ದ್ವಿಭಾಷಾ ತರಗತಿಗಳ ವ್ಯವಸ್ಥೆಗೆ ಬದಲಾವಣೆ ಮಾಡಿರುವುದಾಗಿ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಮಾಡಿಕೊಂಡಿದ್ದರೂ, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಸರಕಾರಿ ಶಾಲೆಗಳು ದಾನಿಗಳಿಂದ ನೆರವು ಕೇಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ. ಕೆಲವು ಶಾಲೆಗಳಲ್ಲಿ ಬಿಸಿಯೂಟಕ್ಕೆ ಅಡುಗೆ ಅನಿಲದ ಕೊರತೆಯೂ ಎದುರಾಗಿರುವ ಮಾಹಿತಿ ಲಭಿಸಿದೆ. ರಾಜ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಗೌರವಯುತ ಕಲಿಕಾ ವಾತಾವರಣ ಒದಗಿಸುವುದು ಸರಕಾರದ ಜವಾಬ್ದಾರಿಯಾಗಿದೆ.…
ಮಡಿಕೇರಿ NEWS DESK ಜೂ.8 : ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪಾತಕ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ವಿರಾಜಪೇಟೆಯ ಶಾನ್‌ಭಾಗ್ ಸೆಂಟರ್ ರೂಫ್ ಟಾಪ್‌ನಲ್ಲಿ ಮಿಸೆಸ್, ಮಿಸ್, ಮಿಸ್ಟರ್, ಟೀನ್ ಬಾಯ್, ಟೀನ್ ಗರ್ಲ್, ಪ್ರಿನ್ಸ್ ಹಾಗೂ ಪ್ರಿನ್ಸೆಸ್ 2026 ಸ್ಪರ್ಧೆ ನಡೆಯಿತು. ಸ್ಪರ್ಧಿಗಳು ಆತ್ಮವಿಶ್ವಾಸ, ಪ್ರತಿಭೆ ಮತ್ತು ವ್ಯಕ್ತಿತ್ವದ ಮೂಲಕ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮನಗೆದ್ದರು. ಎಲ್ಲಾ ವಿಭಾಗಗಳಲ್ಲಿಯೂ ತೀವ್ರ ಪೈಪೋಟಿ ಕಂಡು ಬಂದಿತು. ಕಾರ್ಯಕ್ರಮದ ತೀರ್ಪುಗಾರರಾಗಿ ನಟಿ ಹಾಗೂ ಸಮಾಜಸೇವಕಿ ಕಾಣತಂಡ ಬೀನಾ ಜಗದೀಶ್, ಮಿಸ್ ಸೌತ್ ಇಂಡಿಯಾ ಮಾಡೆಲ್ 2026ರ ಮೊಳ್ಳೆರ ನಿಶಿ ಅಪ್ಪಣ್ಣ ಹಾಗೂ ಮಿಸ್ಟರ್ ಕೂರ್ಗ್ 2023ರ ತಿತ್ತಿರ ಕುಟ್ಟಪ್ಪ ಭಾಗವಹಿಸಿದ್ದರು. ತಮ್ಮ ಅನುಭವ ಹಾಗೂ ಪರಿಣತಿಯಿಂದ ಸ್ಪರ್ಧೆಯನ್ನು ನ್ಯಾಯಯುತವಾಗಿ ಮೌಲ್ಯಮಾಪನ ಮಾಡಿದರು. ಕೊಡವ ಚಿತ್ರರಂಗ ಹಾಗೂ ಮನೋರಂಜನಾ ಕ್ಷೇತ್ರದ ಪುಗ್ಗೇರ ಆಕಾಶ್, ಚೇನಂಡ ಗಿರೀಶ್ ಪೂಣಚ್ಚ, ಸೋಮೆಯಂಡ ಬೋಸ್ ಬೆಳ್ಳಿಯಪ್ಪ, ತಾತಂಡ ಮಿನ್ನು, ಕುಪ್ಪಣಮಾಡ ಭೂಮಿಕಾ, ಕುಪ್ಪಣಮಾಡ ಜಾನ್ಸಿ, ಟಿ.ಡಿ.ಮೋಹನ್, ಸಂಕೇತ್ ಶಿವಪ್ಪ,…
ಮಡಿಕೇರಿ NEWS DESK ಜೂ.8 : ವಿರಾಜಪೇಟೆ ಕ್ಷೇತ್ರದ ಜನಸ್ನೇಹಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ಸಚಿವ ಸ್ಥಾನ ಸಿಗಲಿದೆ ಎಂದು ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ವಿಶ್ವಾಸ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್ ಅಧ್ಯಕ್ಷ ಎ.ಜೆ.ಬಾಬು ಅವರು ಮೊದಲ ಸಂಪುಟ ರಚನೆಯ ಸಂದರ್ಭವೇ ಪೊನ್ನಣ್ಣ ಅವರು ಸಚಿವರಾಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದರೆ ಸಚಿವ ಸ್ಥಾನ ಘೋಷಣೆಯಾಗಿಲ್ಲ, ಇದರಿಂದ ನಾವು ನಿರಾಶೆಗೊಂಡಿಲ್ಲ. ಬದಲಿಗೆ ಅತ್ಯಂತ ತಾಳ್ಮೆ ಮತ್ತು ವಿಶ್ವಾಸದೊಂದಿಗೆ ಸಚಿವ ಸಂಪುಟ ವಿಸ್ತರಣೆಯನ್ನು ಎದುರು ನೋಡುತ್ತಿದ್ದೇವೆ. ಕರ್ನಾಟಕದ ಆರ್ಥಿಕತೆ, ಪರಿಸರ ವ್ಯವಸ್ಥೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿರುವ ಕೊಡಗು ಜಿಲ್ಲೆಯ ಬೇಡಿಕೆಗೆ ಸೂಕ್ತ ಮನ್ನಣೆ ದೊರೆಯುತ್ತದೆ ಎನ್ನುವ ವಿಶ್ವಾಸ ನಮ್ಮಲ್ಲಿದೆ ಎಂದು ತಿಳಿಸಿದ್ದಾರೆ. ಸಚಿವ ಸಂಪುಟ ರಚನೆಗೆ ಮೊದಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್…
ಮಡಿಕೇರಿ ಜೂ.6 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂದಿಸುವ ಬಗ್ಗೆ ತೀರ್ಮಾನಿಸಲಾಗಿರುತ್ತದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ಆದ್ದರಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ…
ಮಡಿಕೇರಿ ಜೂ.6 NEWS DESK : ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12-ಪಾಲಿಬೆಟ್ಟ, ಎಪ್13- ಹೊಸೂರು, ಫೀಡರ್‍ನಲ್ಲಿ ಜೂನ್, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊಸೂರು, ಜಾಗರಿ, ಗದ್ದೆಮನೆ, ಬೆಟ್ಟಗೇರಿ, ಲೋಪಮುದ್ರ ಆಸ್ಪತ್ರೆ ವ್ಯಾಪ್ತಿ, ಅತ್ತೂರು, ಪಾಲಿಬೆಟ್ಟ, ಹುಂಡಿ, ಚೆನ್ನಯ್ಯನಕೋಟೆ, ಅಬ್ಬೂರು, ಅಂಚಿಕಾಡು, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜೂ.6 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲೆಯ ನಡಿಗೆ ಜನರ ಬಳಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಪರಿಚಯಿಸುತ್ತಿರುವುದು ಅದ್ಭುತ ಕಲ್ಪನೆ ಎಂದು ತೆನ್ನಿರ ಮೈನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನವೀನ ಕಾರ್ಯಕ್ರಮದ ಆರಂಭಿಕ ಕಾರ್ಯಕ್ರಮವನ್ನು ಮಡಿಕೇರಿ ನಗರದ ರಿಲೆಯನ್ಸ್ ಮಾಲ್ ನಲ್ಲಿ ಏರ್ಪಡಿಸಿದ್ದು, ಕಾರ್ಯಕ್ರಮದಲ್ಲಿ ಸ್ಯಾಕ್ಸೋ ಪೋನ್ ವಾದ್ಯವನ್ನು ಅಸ್ವಾದಿಸಿ ಮಾತನಾಡಿದ ತೆನ್ನಿರ ಮೈನಾ ಇಂತಹ ಕಾರ್ಯಕ್ರಮಗಳಿಗೆ ಪ್ರಚಾರ ಪಡಿಸಿದರೆ ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಆನಂದಿಸುತ್ತಾರೆ ಎಂದು ಹೇಳಿದರು. ಮೊದಲು ರಾಜಾಶ್ರಯ ,ನಂತರ ಕಲಾ ಮಂದಿರ,ದೈವಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಾತ್ರ ವೀಕ್ಷಿಸಲು ಮತ್ತು ಆಲಿಸಲು ಸಾಧ್ಯವಾಗಿದ್ದ ಕಲಾ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ಎಲ್ಲರಿಗೂ ಅನುಭವಿಸಲು ಅವಕಾಶ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗೆ ಅಭಿನಂದನೆಗಳನ್ನು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ರವರು ಪ್ರತಿ ತಿಂಗಳ ಮೊದಲನೆ ಶನಿವಾರ ಜಿಲ್ಲೆಯ ಜನನಿಬಿಡ ಪ್ರದೇಶಗಳಲ್ಲಿ ಈ…
ಮಡಿಕೇರಿ ಜೂ.6 NEWS DESK : ಭಾರತ ಚುನಾವಣಾ ಆಯೋಗವು ದಿನಾಂಕ:14-05-2026ರ ಪತ್ರಿಕಾ ಪ್ರಕಟಣೆಯ ಮೂಲಕ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ಕೈಗೊಳ್ಳಲು ಕಾರ್ಯಕ್ರಮ ವೇಳಾಪಟ್ಟಿ ಹೊರಡಿಸಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ 2026 ಅಕ್ಟೋಬರ್ 1 ನ್ನು ಘೋಷಿಸಿದ್ದು, ಜೂ.20 ರಿಂದ 29ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂ.30 ರಿಂದ ಜು.29ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ, ಆಗಸ್ಟ್, 5 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ.5 ರಿಂದ ಸೆ.4ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.5 ರಿಂದ ಅಕ್ಟೋಬರ್, 3 ರವರೆಗೆ ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ…
ಮಡಿಕೇರಿ ಜೂ.6 NEWS DESK : ಕರ್ನಾಟಕ ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಗೌರವಯುತವಾಗಿ ಬಾಳ್ವೆ ನಡೆಸಲು ಬೇಕಾದ ಎಲ್ಲಾ ಸವಲತ್ತುಗಳನ್ನು ಆದ್ಯತೆ ಮೇರೆಗೆ ಒದಗಿಸುತ್ತಾ ಬಂದಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕು 18 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಆಯ್ಕೆ ಆಗಿರುವ ಅರ್ಹ ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 400 ಕ್ಕೂ ಅಧಿಕ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದರು. ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ. ಹಲವು ವರ್ಷಗಳಿಂದ ಸರ್ಕಾರದಿಂದ ಮನೆ ನಿರ್ಮಿಸಬೇಕು, ನಿವೇಶನ ರಹಿತರು, ವಸತಿ ರಹಿತರಿಗೆ ಆದ್ಯತೆ ಮೇರೆಗೆ ಸ್ವಂತ ಸೂರು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಹಲವಾರು ಜನಪರ…
ಮಡಿಕೇರಿ NEWS DESK ಜೂ.6 : ಸಹಕಾರ ಕ್ಷೇತ್ರ ರೈತರ ಬೆನ್ನುಲುಬಾಗಿದ್ದು, ಇಂತಹ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ಕೆಲಸವನ್ನು ದೇಶ ಸೇವೆ ಎಂದು ಅರಿತುಕೊಂಡು ತೃಪ್ತಿದಾಯಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಕರೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾಹಾ ಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಿಕಾರ್ಡ್ ಬ್ಯಾಂಕ್, ಎಪಿಸಿಎಂಎಸ್, ಜೇನು ಸಹಕಾರ ಸಂಘ, ಪತ್ತಿನ ಹಾಗೂ ಮಾರಾಟ ಸಹಕಾರ ಸಂಘಗಳ ಲೆಕ್ಕಿಗರು, ಸಹಾಯಕ ಸಿಬ್ಬಂದಿಗಳಿಗೆ ಜಿಎಸ್‌ಟಿ ಮತ್ತು ಆದಾಯ ತೆರಿಗೆ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶಿಕ್ಷಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿಯು.ರಾಬಿನ್ ದೇವಯ್ಯ, ಮೊಟ್ಟ ಮೊದಲು ಗದಗ ಜಿಲ್ಲೆಯಲ್ಲಿ ಆರಂಭ ಕಂಡ ಸಹಕಾರ ಕ್ಷೇತ್ರ ಇಂದು ಬೃಹತ್ತಾಗಿ ಬೆಳೆದಿದ್ದು, ದೇಶ ವ್ಯಾಪಿ…






