ಮಡಿಕೇರಿ ಏ.6 NEWS DESK : ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆಯಾಗಿ ಕರ್ತಂಡ ಶೈಲಾ ಕುಟ್ಟಪ್ಪ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಆದೇಶದ ಮೇರೆಗೆ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ್ ಅವರು ಶೈಲಾ ಕುಟ್ಟಪ್ಪ ಅವರನ್ನು ನೇಮಕ ಮಾಡಿ ಪಕ್ಷದ ಮಹಿಳಾ ಘಟಕವನ್ನು ಸಂಘಟಿಸಲು ಸೂಚನೆ ನೀಡಿದ್ದಾರೆ.
ಲೇಖಕ: admin
ಮಡಿಕೇರಿ ಏ.6 NEWS DESK : ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಗಳ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಮತ್ತು ಉಲ್ಭಣಗೊಳ್ಳದಂತೆ ತೆಗೆದುಕೊಳ್ಳಬಹುದಾದ ಅಗತ್ಯ ಮುಂಜಾಗ್ರತಾ ಕ್ರಮಗಳು: ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟೆಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ ಮಾಹಿತಿ ಕಲೆ ಹಾಕಿ, ಎಲ್ಲಾ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ…
ಮಡಿಕೇರಿ ಏ.6 NEWS DESK : ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್‍ವೇವ್ (ಶಾಖದ ಹೊಡೆತ) ಸ್ಟ್ರೋಕ್‍ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಲಹೆಗಳನ್ನು ನೀಡಿದೆ. ಬೇಸಿಗೆಯಲ್ಲಿನ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನು ಅನುಸರಿಸಬೇಕಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. (ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್‍ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಹಾಗೂ ತಂಪು ಕನ್ನಡಕ, ಟವಲ್ ಹಾಗೂ ಸಾಧ್ಯವಾದಷ್ಟು…
ಪುತ್ತೂರು NEWS DESK ಏ.6 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಮೇದಿನೀ ಟೆಕ್ನಾಲಜೀಸ್ ಬೆಂಗಳೂರು ಇದರ ಸಹಯೋಗದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನೈಪುಣ್ಯತೆಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಂಶೋಧನಾ ನಿರತರಿಗೆ ಹಾಗೂ ವೃತ್ತಿಪರರಿಗೆ ಅನುಕೂಲವಾಗುವ ರೀತಿಯಲ್ಲಿ ತಂತ್ರಜ್ಞಾನಗಳ ಬದಲಾವಣೆ, ನೂತನ ಸಾಫ್ಟ್ವೇರ್‌ಗಳ ಬಳಕೆಯ ಬಗ್ಗೆ ಮಾಹಿತಿ, ವೃತ್ತಿಪರರಿಗೆ ಹೊಸ ಸಾಫ್ಟ್ವೇರ್‌ಗಳ ಮೂಲಕ ಮಾಡೆಲ್‌ಗಳ ರಚನೆ, ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಗಳನ್ನು ಮಾಡುವುದಕ್ಕೆ ಸೂಕ್ತ ಮಾರ್ಗದರ್ಶನ ಇವೇ ಮುಂತಾದ ವಿಷಯಗಳ ಬಗ್ಗೆ ಪರಸ್ಪರ ಸಹಕಾರದ ಬಗ್ಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಮೇದಿನಿ ಟೆಕ್ನಾಲಜೀಸ್ ಸಂಸ್ಥೆಯು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿವಿಧ ವಲಯಗಳಲ್ಲಿ ಇಂತಹ ಕೇಂದ್ರವನ್ನು ತೆರೆದಿದ್ದು ಮಂಗಳೂರು ವಲಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯಲ್ಲಿ ನೈಪುಣ್ಯತೆಯ ಕೇಂದ್ರವನ್ನು ತೆರೆಯಲಾಗಿದೆ. ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರ ಸಮ್ಮುಖದಲ್ಲಿ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಹಾಗೂ ಮೇದಿನಿ ಸಂಸ್ಥೆಯ…
ಮಡಿಕೇರಿ ಏ.6 NEWS DESK : ಲೋಕಸಭಾ ಚುನಾವಣಾ ಸಂಬಂಧ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಭದ್ರತಾ ಕೊಠಡಿ ಮತ್ತು ಮತಗಟ್ಟೆ ಅಧಿಕಾರಿಗಳಿಗೆ ನೀಡುವ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ, ಪರಿಶೀಲಿಸಿದರು. ತಾಲೂಕು ಕಚೇರಿಯಲ್ಲಿ ಚುನಾವಣೆ ಕರ್ತವ್ಯದ ಬಗ್ಗೆ ಕೈಕೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು. ಅಲ್ಲದೇ ತಾಲೂಕು ಕಚೇರಿ ರೆಕಾರ್ಡ್ ಶಾಖೆಯಲ್ಲಿ ನಡೆಯುತ್ತಿರುವ ಕಡತಗಳ ಡಿಜಿಟಲೀಕರಣ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ತಹಶಿಲ್ದಾರರಾದ ರಾಮಚಂದ್ರ ಹಾಗೂ ಇತರರು ಇದ್ದರು.
ಮಡಿಕೇರಿ ಏ.6 NEWS DESK : ನಗರದ ಕೊಡಗು ವಿದ್ಯಾಲಯ ಶಾಲೆಯಲ್ಲಿ ಯು ಕೆ ಜಿ ಮಕ್ಕಳಿಗೆ ಪದವಿ ಪ್ರದಾನ ಸಮಾರಂಭ ಜರುಗಿತು. ಸುಂಟಿಕೊಪ್ಪದ ಶಾಂತಿ ಭವನ್ ನರ್ಸರಿ ಶಾಲೆಯ ಸಂಸ್ಥಾಪಕಿ ಲಿಂಡಾ ಸಿಂಗಮ್ ಯು.ಕೆ.ಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಸಣ್ಣ ಮಕ್ಕಳು ಉದ್ಯಾನವನದಲ್ಲಿ ಇರುವ ಹೂವಿನ ಹಾಗೆ, ಪುಪ್ಪ ಸಸಿಯಲ್ಲಿರುವ ಮೊಗ್ಗು ಎಷ್ಟು ಸುಂದರವಾದ ಹೂವಾಗಿ ಅರಳುತ್ತದೋ,, ಅದೇ ರೀತಿ ಸುಂದರ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಕ್ಕಳ ಬೆಳವಣಿಗೆಗೆ ತಾಳ್ಮೆ ಮುಖ್ಯ ಎಂದು ಪೋಷಕರಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಕೆ.ಎಸ್.ಸುಮಿತ್ರ, ಆಡಳಿತ ನಿರ್ವಹಣಾಧಿಕಾರಿ ಪಿ.ರವಿ, ಆಡಳಿತ ಮಂಡಳಿ ಸದಸ್ಯ ಸಿ.ಎಸ್.ಗುರುದತ್ತ್, ಹಿರಿಯ ವಕೀಲರು ಹಾಗೂ ಶಾಲೆಯ ಕಾನೂನು ಸಲಹೆಗಾರ ಡಿ.ಜಿ.ಕಿಶೋರ್, ಪೋಷಕರು, ಬೋಧಕ ಹಾಗೂ ಬೋಧಕೇತರ ವರ್ಗದವರು ಪಾಲ್ಗೊಂಡಿದ್ದರು. ಪ್ಲೆ ಹೋಮ್, ಎಲ್ ಕೆ ಜಿ, ಯು ಕೆ ಜಿ ಹಾಗೂ ಒಂದನೇ ತರಗತಿಯ ಪುಟಾಣಿ ಮಕ್ಕಳಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ನೆರೆದಿದ್ದ…
ಮಡಿಕೇರಿ ಏ.6 NEWS DESK : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಡಾ.ಮಮತಾ ಕೇಶವ್ ಅವರು ಬಿಜೆಪಿ ವೃತ್ತಿಪರ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ತಳಮಟ್ಟದಲ್ಲಿ ಪಕ್ಷ ಸಂಘಟನೆಗೊಳಿಸಿ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಮತ್ತು ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ವೃತ್ತಿಪರ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿರಣ್‍ಕುಮಾರ್ ಅಣ್ಣೇಗೇರಿ ತಿಳಿಸಿದ್ದಾರೆ. ಮಮತಾ ಕೇಶವ್ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇವರ ಸೇವಾ ಮನೋಭಾವವನ್ನು ಗುರುತಿಸಿ ಹೊಸುರು ಏಷ್ಯಾ ಕಲ್ಚರಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಅಲ್ಲದೆ ದೆಹಲಿಯಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ , ಹೃದಯ ವಾಹಿನಿ ಲಯನ್ಸ್ ಇಂಟರ್ ನ್ಯಾಷನಲ್ ಅವರಿಂದ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಗ್ಲೋಬಲ್ ಮೆನ್ ಅವಾರ್ಡ್, ಅಂತರಾಷ್ಟ್ರೀಯ ಸಾಧನೆ ಐಕಾನ್ ಪ್ರಶಸ್ತಿ ,…
ನಾಪೋಕ್ಲು ಏ.1 NEWS DESK : ದೊಡ್ಡ ಪುಲಿಕೋಟು ಗ್ರಾಮದ ಕೋಟೆ ಭಗವತಿ ದೇವಿಯ ವಾರ್ಷಿಕ ಉತ್ಸವವು ಏ.7 ರಿಂದ ಏ.9ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದೆ. ಏ.7 ರಂದು ರಾತ್ರಿ ಅಂದಿ ಬೊಳಕ್, ಮಹಾಪೂಜೆ, ಏ.8 ರಂದು ಎತ್ತು ಪೋರಾಟ, ಪಟ್ಟಣಿ ದೇವಿಯ ದರ್ಶನ ಬಲಿ ಜರುಗಲಿದೆ. ಏ.9 ರಂದು ಬೊಳಕಾಟ್, ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಬಳಿಕ ಕಾವೇರಿ ನದಿಯಲ್ಲಿ ಭಗವತಿ ದೇವಿಯ ಜಳಕ ನಡೆಯಲಿದೆ. ದೇವಾಲಯದ ಸುತ್ತ ದೇವಿಯ ನೃತ್ಯಬಲಿ ಪ್ರದರ್ಶನ, ಆರಾಟು ಒಪ್ಪಿಸುವುದು ಹಾಗೂ ಮಹಾಪೂಜೆ ನೆರವೇರಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ವಿನಂತಿಸಿಕೊಂಡಿದ್ದಾರೆ.
ನಾಪೋಕ್ಲು ಏ.6 NEWS DESK : ಪೊನ್ನುಮುತ್ತಪ್ಪ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ಗಣಪತಿ ಹೋಮ ಹಾಗೂ ಶುದ್ಧ ಕಳಸ ನಡೆಯಿತು. ಕೇರಳದ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿ ಅವರ ನೇತೃತ್ವದಲ್ಲಿ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಿತು. ಸಂಜೆ ಮುತ್ತಪ್ಪ ದೇವರ ಕಳಸ ಜರುಗಿತು. ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳದ ಚಂಡೆಯೊಂದಿಗೆ ಪಟ್ಟಣದ ಮುಖ್ಯಬೀದಿಯಲ್ಲಿ ಮೆರವಣಿಗೆ ನೆರವೇರಿತು. ಮೆರವಣಿಗೆಯಲ್ಲಿ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಕೇರಳದ ಚಂಡೆ ಹಾಗೂ ನೃತ್ಯ ಜನಮನ ಸೆಳೆಯಿತು. ಆಕರ್ಷಕ ಬಿರುಸು ಬಾಣದ ಪ್ರದರ್ಶನವು ನಡೆಯಿತು. ಬಳಿಕ ಮುತ್ತಪ್ಪ ದೇವರ ವೆಳ್ಳಾಟಂ, ಕುಟ್ಟಿಚ್ಚಾತ ದೇವರ ಹಾಗೂ ಗುಳಿಗ ದೇವರ ವೆಳ್ಳಾಟಂ ನಡೆಯಿತು. ತಿರುವಪ್ಪ ಮತ್ತು ಮುತ್ತಪ್ಪ ಕೊಲಗಳು ಜನರನ್ನು ಆಕರ್ಷಿಸಿದವು. ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಭಕ್ತಾರಿಗೆ ಅನ್ನದಾನ ನಡೆಯಿತು. ವಿವಿಧೆಡೆಯಿಂದ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಅಧ್ಯಕ್ಷ ಎ.ಕೆ.ಚಂದ್ರನ್,…
ನಾಪೋಕ್ಲು ಏ.6 NEWS DESK : ಕಕ್ಕುಂದಕಾಡು ಶ್ರೀ ಕರಿಚಾಮುಂಡಿ ದೈವಸ್ಥಾನದ ವಾರ್ಷಿಕೋತ್ಸವವು ಏ.13 ಮತ್ತು 14 ರಂದು ನಡೆಯಲಿದೆ. ಏ.13 ರಂದು ರಾತ್ರಿ 8.30 ಗಂಟೆಗೆ ಭಂಡಾರ ಹೊರಡುವುದು, ನಂತರ ತೋತ, ಚನ್ನಾಲೆ ಮೂರ್ತಿ, ತಮ್ಮಚ್ಚ, ಪೊಟ್ಟುಗುಳಿಗ, ಕೊರತಿ, ಅಂಗಾರೆ ದೈವಗಳ ಕೋಲ ನಡೆಯಲಿದೆ. ಏ.14 ರಂದು ಬೆಳಗ್ಗೆ 10 ಗಂಟೆಗೆ “ಗುಳಿಗ ” ಕೋಲ ಜರುಗಲಿದೆ. ಪ್ರಸಾದ ವಿತರಣೆ ನಂತರ ಮಧ್ಯಾಹ್ನ 2 ಗಂಟೆಗೆ “ಶ್ರೀ ಚಾಮುಂಡಿ” ದೈವದ ಕೋಲ ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ. ವರದಿ : ದುಗ್ಗಳ ಸದಾನಂದ.






