ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಿಟ್ಟೂರು ಕಾರ್ಮಾಡು ಅರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಅಭಿಯಾನ ನಡೆಯಿತು. ಕಾರ್ಯಕ್ರಮಕ್ಕೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮ್ಮಣಿ ದೀಪ ಚಾಲನೆ ನೀಡಿದರು. ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ ಮಾತನಾಡಿ ಪೋಲಿಯೋ ಹನಿ ಹಾಕುವ ಮೂಲಕ ಐದು ವರ್ಷದೊಳಗಿನ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಗ್ರಾ.ಪಂ ಸದಸ್ಯ ಕಾಟಿಮಾಡ ಶರೀನ್ ಮುತ್ತಣ್ಣ ಮಾತನಾಡಿ ಭಾರತವು ಪೋಲಿಯೊ ಮುಕ್ತ ದೇಶವಾಗಿದೆ. ಕೆಲವು ದೇಶಗಳಲ್ಲಿ ಇನ್ನೂ ಪೋಲಿಯೋ ರೋಗದ ಭೀತಿ ಇದ್ದು, ಪೋಲಿಯೊ ಹನಿ ಹಾಕುವ ಅಭಿಯಾನದಲ್ಲಿ ಕೈ ಜೋಡಿಸಿ ರಾಷ್ಟ್ರದ ಅರೋಗ್ಯ ಸುರಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಪಂಚಾಯಿತಿ ಸದಸ್ಯರಾದ ಪಡಿಞರಂಡ ಕವಿತಾ ಪ್ರಭು ಹಾಗೂ ಬಾಳೆಲೆ ಸಮುದಾಯ ಆರೋಗ್ಯ ಅಧಿಕಾರಿ ನಿಯಾಜ್ ಮಗುವಿಗೆ ಪೋಲಿಯೋ…
ಲೇಖಕ: admin
ಮಡಿಕೇರಿ ಮಾ.3 NEWS DESK :‘ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ಭಾನುವಾರ ಚಾಲನೆ ನೀಡಿದರು. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ (ಜಿಲ್ಲಾಸ್ಪತ್ರೆ) ಶಿಶುವಿಗೆ ಪೋಲಿಯೊ ಹನಿ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಕ್ಕಳಿಗೆ ವಿಕಲತೆ ತಪ್ಪಿಸುವಲ್ಲಿ 1995 ರಿಂದ ಪೋಲಿಯೊ ಹನಿ ನೀಡುತ್ತಾ ಬರಲಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸಕರಿಸುವಂತೆ ಮನವಿ ಮಾಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್ ಅವರು ಮಾತನಾಡಿ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಹನಿ ಕೊಡಿಸಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಬೇಡ ಎಂದು ಕೋರಿದರು. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಮಾತನಾಡಿ ಭಾತರವು ಈಗಾಗಲೇ ಪೋಲಿಯೊ ಮುಕ್ತವಾಗಿದೆ. ಆದರೂ ಹತ್ತಿರದ ರಾಷ್ಟ್ರಗಳಲ್ಲಿ ಪೋಲಿಯೊ ಕಾಣಿಕೊಂಡಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಐದು…
ಮಡಿಕೇರಿ ಮಾ.3 NEWS DESK : ಪಲ್ಸ್ ಪೊಲಿಯೋ ಅಭಿಯಾನದ ಅಂಗವಾಗಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 5 ವಷ೯ದೊಳಗಿನ ಪುಟಾಣಿಗಳಿಗೆ ಪೋಲಿಯೋ ಹನಿ ಹಾಕಲಾಯಿತು. ಮಡಿಕೇರಿ ನಗರದ ಅಶೋಕಪುರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾಯ೯ಕ್ರಮದಲ್ಲಿ 5 ವಷ೯ದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು. ಈ ಸಂದಭ೯ ಮಾತನಾಡಿದ ರೋಟರಿ ವಲಯ 6 ರ ಸಹಾಯಕ ಗವನ೯ರ್ ದೇವಣಿರ ತಿಲಕ್, ಅಂತರರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೋ ನಿವಾರಣೆಗಾಗಿ ರೋಟರಿ ಸಂಸ್ಥೆಯು ಬೃಹತ್ ಆಂದೋಲನ ಕೈಗೊಂಡಿದೆ. ಇದರ ಪರಿಣಾಮವಾಗಿಯೇ ಇಂದು ಬಹುತೇಕ ದೇಶಗಳಲ್ಲಿ ಪೊಲಿಯೋ ಕಣ್ಮರೆಯಾಗಿದೆ ಎಂದು ತಿಳಿಸಿದರು. ರೋಟರಿ ಮಿಸ್ಟಿ ಹಿಲ್ಸ್ ನ ಪಲ್ಸ್ ಪೊಲಿಯೋ ಯೋಜನೆಯ ನಿದೇ೯ಶಕ ಡಾ.ಚೇತನ್ ಶೆಟ್ಟಿ ಮಾತನಾಡಿ, ಪೊಲಿಯೋ ನಿರೋಧಕ ಲಸಿಕೆಯಲ್ಲಿ ಬಹಳಷ್ಟು ಆರೋಗ್ಯಕಾರಿ ಅಂಶಗಳಿದೆ. ಪೋಲಿಯೋ ಹನಿ ಹಾಕುವ ಮಗುವಿನಲ್ಲಿ ರೋಗ ನಿರೋಧಕ ಶಕ್ತಿಯು ಪ್ರಬಲವಾಗಿ ರೂಪುಗೊಳ್ಳುತ್ತದೆ. ಹೀಗಾಗಿ 5 ವಷ೯ದೊಳಗಿನ ಪ್ರತೀ ಮಗುವೂ ಪೊಲಿಯೋ ಹನಿ ಹಾಕಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮಿಸ್ಟಿ ಹಿಲ್ಸ್…
ಮಡಿಕೇರಿ ಮಾ.3 NEWS DESK : ಮೂರ್ನಾಡುವಿನ ಎಂ.ಬಾಡಗ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿ ನೀಡಲಾಯಿತು. ಪೋಷಕರು ಲಸಿಕಾ ಕೇಂದ್ರಕ್ಕೆ ಮಕ್ಕಳನ್ನು ಉತ್ಸಾಹದಿಂದ ಕರೆದುಕೊಂಡು ಬಂದರು. ಎಂ.ಬಾಡಗ 1 ರ ಅಂಗನವಾಡಿ ಕಾರ್ಯಕರ್ತೆ ಜಯಂತಿ ಬಿ.ಬಿ, ಎಂ.ಬಾಡಗ 2 ರ ಅಂಗನವಾಡಿ ಕಾರ್ಯಕರ್ತೆ ಭವ್ಯ, ಅರೋಗ್ಯ ಕಾರ್ಯಕರ್ತೆ ಲಲಿತ ಹಾಗೂ ಆಶಾ ಕಾರ್ಯಕರ್ತೆ ಚಂದ್ರಿಕಾ ಉಪಸ್ಥಿತರಿದ್ದರು.
ಮಡಿಕೇರಿ ಮಾ.2 NEWS DESK : ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದೊಂದಿಗೆ ಸಮುದಾಯ ಶಿಕ್ಷಣ ಅತ್ಯಂತ ಅವಶ್ಯವಾಗಿದ್ದು, ಅದನ್ನು ಎನ್.ಎಸ್.ಎಸ್ ಕಲಿಸುತ್ತದೆ ಎಂದು ಕೊಡಗು ಜಿಲ್ಲಾ ಎನ್.ಎಸ್.ಎಸ್ ನೋಡಲ್ ಅಧಿಕಾರಿ ವನಿತ್ ಕುಮಾರ್ ಅಭಿಪ್ರಾಯ ಪಟ್ಟರು. ಪೊನ್ನಂಪೇಟೆ ಸಮೀಪದ ಹಳಿಗಟ್ಟು ಸಿ.ಐ.ಟಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಹಳಿಗಟ್ಟು ಸ.ಹಿ.ಪಾ.ಶಾಲೆಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಅಧುನಿಕ ಯುಗದಲ್ಲಿ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಸಮುದಾಯದ ಶಿಕ್ಷಣದಿಂದ ವಿದ್ಯಾರ್ಥಿಗಳು ದೂರವಾಗುತ್ತಿದ್ದಾರೆ. ಮೊಬೈಲ್, ಕಂಪ್ಯೂಟರ್ ಹಿಡಿದು ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸಮುದಾಯದ ಜನರೊಂದಿಗೆ ಹೇಗೆ ಮಾತನಾಡಬೇಕು, ಮಾನವಿಯತೆಯನ್ನು ಹೇಗೆ ರೂಪಿಸಿಕೊಳ್ಳಬೇಕು, ಕೃಷಿ ಚಟುವಟಿಕೆ ತೊಡಗಿಕೊಳ್ಳುವುದು ಹೇಗೆ?, ಜನರ ಕಷ್ಟಗಳನ್ನು ಅರಿತು ಹೇಗೆ ಸಮಸ್ಯೆ ಬಗ್ಗೆ ಹರಿಸಬೇಕು ಎಂಬುದನ್ನು ತಿಳಿಯಲು ಎನ್.ಎಸ್.ಎಸ್ ಶಿಬಿರ ಸಹಕಾರಿಯಾಗಿದೆ ಎಂದು ಹೇಳಿದರು. ಮಹಾತ್ಮ ಗಾಂಧಿ 100 ಜನ್ಮ ದಿನದಂದು ಪಾರಂಭವಾದ ಈ ಯೋಜನೆ 6 ಲಕ್ಷಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಹೊಂದಿ ಶಿಸ್ತು,…
ಮಡಿಕೇರಿ ಮಾ.2 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್.ಎಲ್.ಎಂ) ಸಂಜೀವಿನಿ ಯೋಜನೆ, ಕೊಡಗು ಜಿ.ಪಂ ವತಿಯಿಂದ ಮಾ.5 ರಿಂದ ಮಾ.7ರ ವರೆಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದ ಬಾಲಭವನದ ಆವರಣದಲ್ಲಿ ನಡೆಯಲಿರುವ ಮೇಳಕ್ಕೆ ಜಿಲ್ಲೆಯ ಎಲ್ಲಾ ಗ್ರಾ.ಪಂ ಮಟ್ಟದ ಒಕ್ಕೂಟಗಳಲ್ಲಿ ಇರುವ ಗ್ರಾಮೀಣ ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ.
ಮಡಿಕೇರಿ ಮಾ.2 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 20 ಗ್ರಾ.ಪಂ ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಕರಿಕೆ, ಅಯ್ಯಂಗೇರಿ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು, ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು, ನಾಲ್ಕೇರಿ, ಶ್ರೀಮಂಗಲ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ, ಹಾನಗಲ್ಲು, ವಿರಾಜಪೇಟೆ ತಾಲ್ಲೂಕಿನ ಬೆಟೋಳಿ, ಅಮ್ಮತ್ತಿ, ಮಾಲ್ದಾರೆ, ಹೊಸೂರು, ಆರ್ಜಿ ಮತ್ತು ಚೆನ್ನಯ್ಯನಕೋಟೆ ಗ್ರಾ.ಪಂ. ಆಸಕ್ತ ಪ್ರಾಂಚೈಸಿಗಳುhttps://kal-mys.gramaone.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9148712473 ಇ-ಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ.
ಮಡಿಕೇರಿ ಮಾ.2 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮಡಿಕೇರಿ ಬಾಹ್ಯ ಸೇವಾ ಕೇಂದ್ರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿಯಲ್ಲಿ ಮಾ.4 ರಂದು ಬೆಳಗ್ಗೆ 10.30 ಗಂಟೆಗೆ ವಿಶ್ವ ಶ್ರವಣ ದಿನಾಚರಣೆ/ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನದ ಸಭಾ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉಪನ್ಯಾಸ ಕೊಠಡಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಮಾ.2 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವಾಲಯದ ವಾರ್ಷಿಕೋತ್ಸವವು ಮಾ.4 ಹಾಗೂ ಮಾ. 5ರಂದು ನಡೆಯಲಿದೆ ಎಂದು ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕುಂದಾ ಮುಗಟಗೇರಿ ಗ್ರಾಮದಲ್ಲಿರುವ ಸಾವಿರಾರು ವರ್ಷಗಳ ಇತಿಹಾಸವಿರುವ ನಾಡ್ ದೇವಸ್ಥಾನ ಎಂದು ಕರೆಯಲ್ಪಡುವ ಶ್ರೀ ಈಶ್ವರ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವ ಫೆ.26ರಂದು ಕೊಡಿಮರ ನಿಲ್ಲಿಸುವ ಮೂಲಕ ಆರಂಭಗೊಂಡಿದ್ದು, ಮಾ.4ರಂದು ನೆರ್ಪು ಹಾಗೂ ಮಾ. 5ರಂದು ಸಂಜೆ ದೇವರ ಅವಭೃತ ಸ್ನಾನ (ದೇವ ಕುಳಿಪೊ) ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಕ್ಕಮುಖ್ಯಸ್ಥರು ಮನವಿ ಮಾಡಿದರು. ಬೊಟ್ಟಿಯತ್ ನಾಡಿಗೆ ಸೇರಿದ ಮುಗಟಗೇರಿ, ಕುಂದಾ, ಹುದೂರು, ಹಳ್ಳಿಗಟ್ಟು, ಈಚೂರು, ಆರ್ವತೋಕ್ಲು ಸುತ್ತಾಮುತ್ತಲ ಗ್ರಾಮಗಳು ಒಂದೆಡೆ ಸೇರಿ ನಡೆಸುವ ವಾರ್ಷಿಕ ಉತ್ಸವ ಇದಾಗಿದ್ದು, ನಿರಂತರವಾಗಿ ಒಂಬತ್ತು ದಿನಗಳ ಕಾಲ ಅನ್ನಸಂತರ್ಪಣೆ ಇರುತ್ತದೆ. ಭಕ್ತರು ಯಾರು ಬೇಕಾದರೂ ಅನ್ನಸಂತರ್ಪಣೆಗೆ ಬೇಕಾದ ಸಾಮಗ್ರಿಗಳನ್ನು…
ಮಡಿಕೇರಿ ಮಾ.2 NEWS DESK : ಮಹಾಶಿವರಾತ್ರಿ ಪ್ರಯುಕ್ತ ಮಾ.8 ರಂದು ಶ್ರೀ ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 7 ಗಂಟೆಗೆ ಶತರುದ್ರಾಭಿಷೇಕ, ಬೆಳಿಗ್ಗೆ 9.30 ಗಂಟೆಗೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಜರುಗಲಿದೆ. ಸಂಜೆ 6 ಗಂಟೆಗೆ ತಾಯಂಬಕ ಸೇವೆ, 6.30 ಗಂಟೆಗೆ ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ಸಂಜೆ 7.30 ಗಂಟೆಗೆ ಲಘು ಉಪಹಾರ ನಡೆಯಲಿದ್ದು, ರಾತ್ರಿ 11 ಗಂಟೆಗೆ ಯಕ್ಷಗಾನ ಬಯಲಾಟ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಿಗ್ಗೆ 9.30 ಗಂಟೆಗೆ ಶತರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 7 ಗಂಟೆಗೆ ಏಕಾದಶರುದ್ರಾಭಿಷೇಕ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರಿ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.






