ಲೇಖಕ: admin

ಮಡಿಕೇರಿ ಮಾ.2 NEWS DESK : ನೂತನವಾಗಿ ನಿರ್ಮಾಣ ಗೊಂಡಿರುವ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕ  ಮೃತಪಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಮೃತ ದುರ್ದೈವಿ. ರಾಕಿಬ್‌ ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್‌‌ನಿಂದ ಬಿದ್ದಿದ್ದಾರೆ. 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಶವಗಾರಕ್ಕೆ ರವಾನಿಸಿದ್ದಾರೆ. ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದೇ ಈ ಅನಾಹುತಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read More

ಮಡಿಕೇರಿ ಮಾ.2 NEWS DESK : ಟೀಮ್ ಬ್ರದರ್ಸ್ ವತಿಯಿಂದ ಮಾ.3 ರಂದು ಕ್ರೀಡಾಪಟು ದಿವಂಗತ ಧರ್ಮ ಅವರ ಮೂರನೇ ವರ್ಷದ  ಜ್ಞಾಪಕರ್ಥವಾಗಿ ಲೀಗ್ ಮಾದರಿಯ ವಾಲಿಬಾಲ್ ಪಂದ್ಯವಳಿ ನಡೆಯಲಿದೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ  ಪಂದ್ಯವಳಿ ನಡೆಯಲಿದ್ದು,ವಿಜೇತ ತಂಡಕ್ಕೆ 60 ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 40 ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ, ತೃತೀಯ ಬಹುಮಾನವಾಗಿ ಹತ್ತು ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ, ನಾಲ್ಕನೇಯ ಬಹುಮಾನವಾಗಿ ಆಕರ್ಷಕ ಟ್ರೊಫಿ ಸಿಗಲಿದ್ದು ಹಾಗೆಯೆ ವೈಯಕ್ತಿಕ, ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ನೀಡಲಾಗುವುದು. ಒಟ್ಟು 9 ತಂಡಗಳನ್ನು ಒಳಗೊಂಡ, ಟೀಮ್ ಭಗವತಿ, ಟೀಮ್ ಧರ್ಮ, ಡಿ ಎಸ್ ಆರ್ ಎಂ, ತುಷಾರ್ ಫ್ರೆಂಡ್ಸ್, ಮನ್ವಿತ್ ಫ್ರೆಂಡ್ಸ್, ಟೀಮ್ 14, ಟೀಮ್ ಡಿ. ಸಿ, ಟೀಮ್ ಫಾರ್ಮರ್ಸ್, ಹಿಲ್ ವ್ಯೂ ಬಾಯ್ಸ್ ತಂಡದ ನಡುವೆ ಲೀಗ್ ಮಾದರಿಯ ಪಂದ್ಯಗಳು ನಡೆಯಲಿವೆ ಎಂದು ಆಯೋಜಕರಗಿರುವ, ರವಿ, ನಂದೀಶ್, ರಾಜೇಶ್, ರಮೇಶ್ ಪ್ರಕಟಣೆಯಲ್ಲಿ…

Read More

ಸೋಮವಾರಪೇಟೆ ಮಾ.2 NEWS DESK : ಚಿಕ್ಕಮಗಳೂರು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಚಿಕ್ಕಮಗಳೂರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ಹಿರಿಯರ ರಾಜ್ಯಮಟ್ಟದ ಮ್ಯಾರಥಾನ್‍ನಲ್ಲಿ ಶಾಂತಳ್ಳಿಯ ಗಿರಿಜಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 50 ರಿಂದ 60 ವರ್ಷ ವಯೋಮಾನದ ರಾಜ್ಯಮಟ್ಟದ ಮ್ಯಾರಥಾನ್‍ನಲ್ಲಿ ಭಾಗವಹಿಸಿದ್ದ ಗಿರಿಜಾ ಅವರು ದ್ವಿತೀಯ ಸ್ಥಾನಗಳಿಸುವ ಮೂಲಕ ನಗದು ಬಹುಮಾನದೊಂದಿಗೆ ಪಾರಿತೋಷಕಕ್ಕೆ ಭಾಜನರಾಗಿದ್ದಾರೆ. ಅಸೋಸಿಯೇಷನ್‍ನ ಅಧ್ಯಕ್ಷ ಉದಯ್ ಪೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಎಚ್.ಸಿ. ಮಂಜುಳಾ, ಜಿಲ್ಲಾ ಆಯುಕ್ತೆ ಮೀನಾ ನಾಗರಾಜ್, ಉಪಸ್ಥಿತರಿದ್ದು ಬಹುಮಾನ ವಿತರಿಸಿದರು.

Read More

ಸೋಮವಾರಪೇಟೆ ಮಾ.2 NEWS DESK : ಶಾಂತಳ್ಳಿ ಹೋಬಳಿಯ ತಲ್ತರೆಶೆಟ್ಟಳ್ಳಿ-ಅಭಿಮಠ ಗ್ರಾಮದ ಚೌಡೇಶ್ವರಿ ಯೂತ್ ಕ್ಲಬ್ ವತಿಯಿಂದ ಸರ್ಕಾರಿ ಶಾಲಾ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸೋಮವಾರಪೇಟೆಯ ಭಾಗ್ಯ ಫ್ರೆಂಡ್ಸ್ ತಂಡ ಪ್ರಥಮ ಸ್ಥಾನವನ್ನು ಗೆದ್ದುಕೊಂಡಿದೆ. ವಿರಾಜಪೇಟೆಯ ಮಹಿಳಾ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಪುರುಷರ ಕಬಡ್ಡಿ ಪ್ರಶಸ್ತಿಯನ್ನು ಬೆಂಗಳೂರಿನ ಕವನ್ ಫ್ರೆಂಡ್ಸ್ ತಂಡ ಪ್ರಥಮ, ನಾರ್ತ್‍ಕೂರ್ಗ್ ತಂಡ ದ್ವಿತೀಯ, ಯಡೂರು ಶ್ರಿರಾಮ ಯುವಕ ಸಂಘ ತೃತೀಯ ಸ್ಥಾನ ಗಳಿಸಿತು. ಪುರುಷರ ವಾಲಿಬಾಲ್‍ನಲ್ಲಿ ಲೋಕೇಶ್ ಫ್ರೆಂಡ್ಸ್ ದೊಡ್ಡಮಳ್ತೆ ಪ್ರಥಮ, ಸಿದ್ದಲಿಂಗಪುರ ಗೆಳೆಯರ ತಂಡ ದ್ವಿತೀಯ ಸ್ಥಾನ ಪಡೆಯಿತು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತ, ಉಪಾಧ್ಯಕ್ಷ ಚಂಗಪ್ಪ, ಚೌಡೇಶ್ವರಿ ಯೂತ್ ಕ್ಲಬ್ ಅಧ್ಯಕ್ಷ ರವಿ, ಪ್ರಮುಖರಾದ ಮುತ್ತಣ್ಣ ಸೇರಿದಂತೆ ಇತರರು ಇದ್ದರು.

Read More

ಮಡಿಕೇರಿ ಮಾ.1 NEWS DESK : ಭಾರತೀಯ ಜನತಾ ಪಾರ್ಟಿಯ ಎಸ್‌ಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಸೋಮವಾರಪೇಟೆಯ ಪಿ.ಕೆ.ಚಂದ್ರು ಹಾಗೂ ವಿರಾಜಪೇಟೆಯ ಚೇತನ್ ಶಿವಪ್ಪ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ಆಯ್ಕೆ ಮಾಡಲಾಗಿದೆ ಎಂದು ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ತಿಳಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ಅರೆಕಾಡಿನ ಚೆನ್ನಿಗಯ್ಯ ಹೆಚ್.ಡಿ, ವಿರಾಜಪೇಟೆ ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ಅಮ್ಮತ್ತಿಯ ಅಭಿಜಿತ್ ಹೆಚ್.ಎ, ಸೋಮವಾರಪೇಟೆ ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ಜಗನ್ನಾಥ್ ಜಿ. ಚೌಡ್ಲು ಹಾಗೂ ಮಡಿಕೇರಿ ನಗರ ಮಂಡಲ ಅಧ್ಯಕ್ಷರನ್ನಾಗಿ ಮುಕುಂದ ಹೆಚ್.ಜಿ ಅವರುಗಳನ್ನು ನೇಮಕ ಮಾಡಿರುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಮಾ.1 NEWS DESK : ಮಡಿಕೇರಿ ನಗರಸಭೆಗೆ ಕಾಂಗ್ರೆಸ್ ಪ್ರಮುಖರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ಡಾ.ಮಂತರ್‍ಗೌಡ ಅವರ ಶಿಫಾರಸ್ಸಿನ ಮೇರೆಗೆ ನಗರಾಭಿವೃದ್ಧಿ ಇಲಾಖೆ ಮಡಿಕೇರಿ ನಗರದ ಸದಾ ಮುದ್ದಪ್ಪ, ಬಿ.ಎನ್.ಮುದ್ದುರಾಜ್, ಮೊಹಮ್ಮದ್ ಯಾಕೂಬ್, ಬಿ.ಸಿ.ಜಗದೀಶ್ ಹಾಗೂ ಜುಲೈಕಾಬಿ ಅವರನ್ನು ನೇಮಕ ಮಾಡಿದೆ.

Read More

ಮಡಿಕೇರಿ ಮಾ.1 NEWS DESK :  ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುವುದು ಅಪರಾಧ. ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಕೂಡದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿಯ ಸಹಯೋಗದೊಂದಿಗೆ 2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ “ಬೇಟಿ ಬಚವೊ-ಬೇಟಿ ಪಡಾವೊ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ “ಸಮಗ್ರ ಲೈಂಗಿಕ ಶಿಕ್ಷಣದ ವಿಶೇಷ ಕಾರ್ಯಗಾರ” ಹಾಗೂ “ಮಹಿಳಾ ಸಾಧಕಿಯರ ಪ್ರೇರಾಣಾ ತುಣುಕು” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗರ್ಭದಲ್ಲಿರುವ ಮಗುವಿಗೆ ಬದುಕುವ ಹಕ್ಕಿದೆ. ಮಕ್ಕಳ ರಕ್ಷಣೆ, ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ಗರ್ಭದಲ್ಲಿರುವ ಮಗುವಿಗೆ ಸಾಮಾಜಿಕ ಧೋರಣೆ, ಮಕ್ಕಳಿಗೆ…

Read More

ಮಡಿಕೇರಿ ಮಾ.1 NEWS DESK :  ಪಲ್ಸ್ ಪೊಲಿಯೊ ಕಾರ್ಯಕ್ರಮ ಸಂಬಂದಿಸಿದಂತೆ ಕೊಡಗು ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳ ಒಟ್ಟು 36,595 ಗುರುತಿಸಿದ್ದು, ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 32,261 ಮಕ್ಕಳು ಹಾಗು ನಗರ ಪ್ರದೇಶದಲ್ಲಿ 4,334 ಮಕ್ಕಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ಒಟ್ಟು ಜನಸಂಖ್ಯೆಯಲ್ಲಿ 890 ವಲಸೆ ಪ್ರದೇಶಗಳನ್ನು ಗುರುತಿಸಿದ್ದು, ಒಟ್ಟು ವಲಸಿಗರ ಜನಸಂಖ್ಯೆ 24,021 ಇದ್ದು, ಇವರಲ್ಲಿ 0-5 ವರ್ಷದೊಳಗಿನ ಒಟ್ಟು 3143 ಮಕ್ಕಳನ್ನು ಗುರುತಿಸಲಾಗಿದೆ. ಸ್ಥಿರ ವಾಸಿತ ವಲಸಿಗರ 350 ಪ್ರದೇಶಗಳನ್ನು ಗುರುತಿಸಲಾಗಿದ್ದು, ಒಟ್ಟು ಜನಸಂಖ್ಯೆ 2,66,770 ಇದ್ದು, ಇವರಲ್ಲಿ 0-5 ವರ್ಷದೊಳಗಿನ 14,460 ಮಕ್ಕಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 464 ಬೂತ್‍ಗಳನ್ನು ತೆರೆಯಲಾಗುತ್ತಿದ್ದು, ಜನಸಂದಣಿ ಇರುವ ಪ್ರದೇಶ ಮತ್ತು ಬಸ್ ನಿಲ್ದಾಣಗಳು ಹಾಗೂ ಪ್ರವಾಸಿ ಕೇಂದ್ರಗಳನ್ನು ಗುರಿಯಾಗಿಸಿ 31 ಟ್ರಾನ್ಸಿಟ್ ಬೂತ್‍ಗಳನ್ನು ತೆರೆಯಲಾಗುವುದು. ಮಡಿಕೇರಿ ತಾಲ್ಲೂಕಿನಲ್ಲಿ 01 ಸಂಚಾರಿ ತಂಡದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಲಸಿಕಾ ಬೂತ್‍ಗಳಲ್ಲಿ…

Read More

ಮಡಿಕೇರಿ ಮಾ.1 : ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಮಂಡಲಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರುಗಳಾಗಿ ಬಿ.ಎಸ್.ಪ್ರಶಾಂತ್, ತಾತಪಂಡ ಉತ್ತಪ್ಪ (ನಂದ), ರಜೀ, ಬಿ.ಪಿ.ಡಿಶು, ಪಿ.ಕಲಾವತಿ, ಜಿ.ಆರ್.ಸುದರ್ಶನ್(ಗಣೇಶ್), ಕಾರ್ಯದರ್ಶಿಗಳಾಗಿ ಪ್ರೇಮ ರಾಘವಯ್ಯ, ಸಿ.ಕೆ.ಪ್ರಭಾಕರ್, ಬಿ.ಎಂ.ಹರೀಶ್, ಲಕ್ಷ್ಮಿ ಕುಟ್ಟಪ್ಪ, ಕೀರ್ತಿ ರಾಜು, ವೈಭವಿ ಸಂದೀಪ್ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ ತಿಳಿಸಿದ್ದಾರೆ. ಖಜಾಂಚಿಯಾಗಿ ಜಯಂತ್ ಪೂಜಾರಿ, ಕಾರ್ಯಾಲಯ ಕಾರ್ಯದರ್ಶಿಯಾಗಿ ಟಿ.ಆರ್.ಜೀವನ್, ಯುವ ಮೋರ್ಚಾದ ಅಧ್ಯಕ್ಷರಾಗಿ ಪಾಂಡೀರ ಪೂಣಚ್ಚ, ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ಸೌಮ್ಯ ಸುನೀಲ್, ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಗಜೇಂದ್ರ (ಕುಶ), ಎಸ್.ಸಿ.ಮೋರ್ಚಾದ ಅಧ್ಯಕ್ಷರಾಗಿ ಹೆಚ್.ಜಿ.ಮುಕುಂದ, ರೈತ ಮೋರ್ಚಾದ ಅಧ್ಯಕ್ಷರಾಗಿ ಎಂ.ನಯನ್ ಕುಮಾರ್ ಹಾಗೂ ಎಸ್.ಟಿ.ಮೋರ್ಚಾದ ಅಧ್ಯಕ್ಷರಾಗಿ ಕೆ.ಎ.ಕುಡಿಯರ ಸೋಮಯ್ಯ ನೇಮಕಗೊಂಡಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಮಾ.1 NEWS DESK :  ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿತಲೆ ಸೇರಿದಂತೆ ಇತರೆ ಕಡತಗಳನ್ನು ವಿಲೇವಾರಿ ಮಾಡಲು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಭೂ ಮಾಲೀಕರ ಮತ್ತು ಮರ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅರವಿಂದ್ ಕುಟ್ಟಪ್ಪ, ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ವೆ ಕಾರ್ಯ, ಕಂದಾಯ ನಿಗಧಿ, ಮರಕಡಿತಲೆಗೆ ಆದೇಶ ಸೇರಿದಂತೆ ಇತರೆ ಕೆಲಸ ಕಾರ್ಯದಲ್ಲಿ ವಿಳಂಬ ಧೋರಣೆ ಕಂಡು ಬರುತ್ತಿದೆ. ಈ ಬಗ್ಗೆ ನಮ್ಮ ಸಂಘಕ್ಕೆ ಅನೇಕ ದೂರುಗಳು ಬಂದಿವೆ, ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿಗೂ ಅವಕಾಶ ಇಲ್ಲದಾಗಿದೆ. ಇದೆಲ್ಲವೂ ಭೂ ಮಾಲೀಕರು ಹಾಗೂ ಮರ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು. ಕಡತಗಳನ್ನು ಶೀಘ್ರ ಪರಿಶೀಲನೆ ಮಾಡಬೇಕು ಮತ್ತು ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು. ಸಂಘದ ಉಪಾಧ್ಯಕ್ಷ ಕೆ.ಎ.ಆದಂ…

Read More