ಸಿದ್ದಾಪುರ ಮಾ.1 NEWS DESK : ಕಾರ್ಮಿಕ ವಿರೋಧಿ ನೀತಿ, ಬೆಲೆ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿದ್ದಾಪುರದಲ್ಲಿ ಸಿಐಟಿಯು ಸಂಘಟನೆ ಪ್ರತಿಭಟನೆ ನಡೆಸಿತು. ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಪ್ರತಿಭಟನೆ ನಡೆಸುವುದರೊಂದಿಗೆ ಪ್ರಧಾನಿಗೆ ಪತ್ರ ಬರೆದು ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, 2024 ರ ಲೋಕಸಭಾ ಚುನಾವಣೆಗಳು ಮತ್ತೆ ಪ್ರಾರಂಭವಾಗುತ್ತಿದೆ. ಎನ್.ಡಿ.ಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ 2 ಕೋಟಿ ಉದ್ಯೋಗದ ಸೃಷ್ಟಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಡಾ.ಸ್ವಾಮಿನಾಥನ್ ರವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸುವುದಾಗಿ ಹೇಳಿ ವರ್ಷಗಳೇ ಕಳೆದಿದೆ ಆದರೆ ‘ಸಬ್‌ಕಾ ಸಾಥ್’ ಎಂದು ಜನಸಾಮಾನ್ಯರು ಕೊಂಡುಕೊಳ್ಳುವ ಸಾಮಾರ್ಥ್ಯವನ್ನು ಕುಗ್ಗಿಸಿ, ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ…
ಲೇಖಕ: admin
ಮೈಸೂರು ಫೆ.29 NEWS DESK : ಕೊಡಗು ಜಿಲ್ಲೆಯ ಜನರ ಬಹು ನಿರೀಕ್ಷಿತ ರೈಲ್ವೇ ಯೋಜನೆಯ ಫೈನಲ್ ಲೊಕೇಷನ್ ಸರ್ವೆ ಕಾರ್ಯವು ಮುಕ್ತಾಯಗೊಂಡಿದ್ದು ಅದನ್ನು ದೆಹಲಿಯ ರೈಲ್ವೇ ಮಂಡಳಿಗೆ ಸಲ್ಲಿಸಬೇಕಾಗಿದೆ. ಕಳೆದ ಒಂದು ದಶಕದಿಂದಲೂ ಕುಂಟುತ್ತಾ ಸಾಗಿದ್ದ ಈ ಯೋಜನೆಗೆ ಮೊದಲಿಗೆ 1682 ಕೋಟಿ ರೂಪಾಯಿಗಳ ಅಂದಾಜು ವೆಚ್ಚ ನಿಗದಿ ಪಡಿಸಲಾಗಿತ್ತು. ನಂತರ ಯೋಜನಾ ವೆಚ್ಚ 1839 ಕೋಟಿ ರೂಪಾಯಿಗಳಿಗೆ ಏರಿಕೆ ದಾಖಲಿಸಿತು. ಇದೀಗ ಕೇಂದ್ರ ಸರ್ಕಾರದ ನೂತನ ಮಾನದಂಡಕ್ಕೆ ಅನುಗುಣವಾಗಿ 89 ಕಿಲೋಮೀಟರ್ ಉದ್ದದ ಈ ಯೋಜನೆಯ ವೆಚ್ಚ 3168.77 ಕೋಟಿ ರೂಪಾಯಿಗಳಿಗೆ ಏರಿಕೆ ಆಗಿದೆ ಎಂದು ಮೈಸೂರು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಎರಡು ವರ್ಷಗಳ ಹಿಂದೆಯೇ ಫೈನಲ್ ಲೊಕೇಷನ್ ಸರ್ವೆ ನಡೆಸಲಾಗಿದ್ದರೂ ಅದನ್ನು ತಾಂತ್ರಿಕ ಕಾರಣಗಳಿಂದ ಹಿಂತಿರುಗಿಸಲಾಗಿತ್ತು. ಈ ನಡುವೆ ಕೇಂದ್ರ ಸರ್ಕಾರವು ನೂತನ ರೈಲ್ವೇ ಹಳಿ ನಿರ್ಮಾಣ ಮಾಡಬೇಕಾದರೆ ಗರಿಷ್ಠ ಘಂಟೆಗೆ 165 ಕಿಮೀ ವೇಗದಲ್ಲಿ ರೈಲು ಚಾಲನೆಗೆ ಅವಕಾಶವಿರುವಂತೆ ಯೋಜನೆ ರೂಪಿಸುವಂತೆ ನಿಯಮಾವಳಿ…
ಮಡಿಕೇರಿ ಫೆ.29 NEWS DESK : ಪ್ರವಾಸಿಗರಿಗೆ ದ್ವಿಚಕ್ರ ವಾಹನಗಳನ್ನು ಬಾಡಿಗೆಗೆ ನೀಡುವ ಕ್ರಮವನ್ನು ವಿರೋಧಿಸಿ ಮಡಿಕೇರಿ ಪ್ರವಾಸಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರು ಚಾಲಕರು ರೆಂಟಲ್ ಬೈಕ್ ಕೇಂದ್ರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸಂಘದ ಉಪಾಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಸ್ಥಳೀಯರು ಕೆಲವರು ಹಾಗೂ ಖಾಸಗಿ ಸಂಸ್ಥೆಗಳು ಕೊಡಗು ಜಿಲ್ಲೆಯ ವಿವಿಧೆಡೆ ಕಚೇರಿ ತೆರೆದು ದ್ವಿಚಕ್ರ ವಾಹನವನ್ನು ಪ್ರವಾಸಿಗರಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ವಾಹನ ಮಾಲೀಕರು ಹಾಗೂ ಚಾಲಕರು ಆರ್ಥಿಕವಾಗಿ ತೊಂದರೆಯನ್ನು ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರಾಕೃತಿಕ ವಿಕೋಪ, ಕೋವಿಡ್ ಮತ್ತು ಬೆಲೆ ಏರಿಕೆ ಪರಿಣಾಮ ಬಾಡಿಗೆ ಇಲ್ಲದೆ ಟ್ಯಾಕ್ಸಿ ವಾಹನಗಳ ಮಾಲೀಕರು ಹಾಗೂ ಚಾಲಕರು ವಾಹನ ವಿಮೆ, ತೆರಿಗೆ, ಎಫ್.ಸಿ, ತಿಂಗಳ ಸಾಲದ ಕಂತು ಕಟ್ಟಲಾಗದೆ ತೊಂದರೆ ಅನುಭವಿಸುತ್ತಿದ್ದರು. ಇದೀಗ ಸ್ವಲ್ಪ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲೇ ಸ್ವಯಂಚಾಲಿತ ಬೈಕ್‍ಗಳನ್ನು…
ಮಡಿಕೇರಿ ಫೆ.29 NEWS DESK : ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ, ರೋಟರಿ ಮಿಸ್ಟಿಹಿಲ್ಸ್, ಭಾರತೀಯ ರೆಡ್‍ಕ್ರಾಸ್ ಸೊಸೈಟಿ ಹಾಗೂ ಜಿಲ್ಲಾ ವಿಶೇಷಚೇತನರ ಸಂಘ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ 22 ವಿಶೇಷ ಚೇತನರಿಗೆ ವೀಲ್‍ಚೇರ್‍ನ್ನು ವಿತರಿಸಲಾಯಿತು. ನಗರದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೂ.25,410 ವೆಚ್ಚದ 10 ವೀಲ್‍ಚೇರ್‍ಗಳು ಮತ್ತು 17 ಸಾವಿರ ರೂ. ವೆಚ್ಚದ 19 ವೀಲ್‍ಚೇರ್‍ಗಳನ್ನು ಕೊಡಗು ಮತ್ತು ಹುಣಸೂರು ವಿಭಾಗಕ್ಕೆ ಸೇರಿದ 29 ವಿಶೇಷಚೇತನರಿಗೆ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಕೆ.ಜೆ.ವಿಮಲ, ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿದಾಗ ವಿಶೇಷಚೇತನರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ 6,400 ವಿಶೇಷಚೇತನರಿಗೆ ಗುರುತಿನ ಚೀಟಿ ವಿತರಿಸಲಾಗಿದ್ದು, ಸರ್ಕಾರದಿಂದ ವಿಶೇಷಚೇತನರಿಗೆ ಅಗತ್ಯ…
ಮಡಿಕೇರಿ ಮಾ.2 NEWS DESK : ಜಿಲ್ಲೆಯಲ್ಲಿ ಮಾ.3 ರಿಂದ 6 ರವರೆಗೆ ‘ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ 2023-24’ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆ ಮಾ.3 ರಂದು ಬೆಳಗ್ಗೆ 8 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ(ಜಿಲ್ಲಾಸ್ಪತ್ರೆ) ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಫೆ.29 NEWS DESK : ಮದೆನಾಡು ಬಿಜಿಎಸ್ ವಿದ್ಯಾಸಂಸ್ಥೆಯ 2ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮೈಸೂರು ಹಾಗೂ ಕೊಡಗು ಆದಿಚುಂಚನಗಿರಿ ಮಠದ ಮುಖ್ಯಸ್ಥರಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಪ್ರತಿಯೊಂದು ಮಗುವಿನ ಜ್ಞಾನಾರ್ಜನೆಗೆ ಶಾಲೆಗಳು ಅವಶ್ಯವಾಗಿದ್ದು, ಶಾಲೆಯನ್ನು ಉಳಿಸಿ ಬೆಳಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯಾಗಿ ವಿನಾಯಕ್ ನರ್ವಾಡೆ ಮಾತನಾಡಿ ಪೋಷಕರು ಮಕ್ಕಳಲ್ಲಿ ಉತ್ತಮ ಹವ್ಯಾಸವನ್ನು ಕಲಿಸುವ ಮೂಲಕ ಮಾನಸಿಕ ಸದೃಢತೆಯನ್ನು ಬೆಳೆಸಬೇಕು ಎಂದರು. ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ ಹೆಚ್.ಎನ್.ಸುಧಾಕರ್, ಸಿದ್ದಾಪುರ ಬಿಜಿಎಸ್ ವಿದ್ಯಾ ಸಂಸ್ಥೆಯ ಮೇಲ್ವಿಚಾರಕ ಮಂಜುನಾಥ್, ಮಲೆನಾಡು ಬಿಜಿಎಸ್ ವಿದ್ಯಾ ಸಂಸ್ಥೆಯ ಮೇಲ್ವಿಚಾರಕ ಹೆಚ್.ಜೆ.ಸಚಿನ್ ಗೌಡ, ಮೇಜರ್ ಡಾ ಕುಶ್ವಂತ್ ಕೋಳಿಬೈಲು , ಕೊಡಗು ಗೌಡ ವಿದ್ಯಾ ಸಂಘ ಅಧ್ಯಕ್ಷ ಅಂಬೇಕಲ್ ನವೀನ್, ವಿದ್ಯಾ ಸಂಸ್ಥೆ ಅಧ್ಯಕ್ಷ ಹುದೇರಿ ರಾಜೇಂದ್ರ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಮದೆ ಗ್ರಾ.ಪಂ ಅಧ್ಯಕ್ಷೆ ವಿಮಲಾಕ್ಷಿ, ಪ್ರಮುಖರಾದ ಮುದ್ದೆಯನ…
ಮಡಿಕೇರಿ ಫೆ.29 NEWS DESK : ಪೊನ್ನಂಪೇಟೆಯಲ್ಲಿರುವ ವೃದ್ಧಾಶ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ ಅಗತ್ಯ ಸಹಾಯ ನೀಡುವ ಭರವಸೆ ನೀಡಿದರು.
ಮಡಿಕೇರಿ ಫೆ.29 NEWS DESK : ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಪುಷ್ಪ ನಾಗೇಶ್ ಹಾಗೂ ಶಿಲ್ಪಾ ಅಪ್ಪಣ್ಣ ಆಯ್ಕೆಯಾಗಿದ್ದಾರೆ. ಪಕ್ಷಕ್ಕಾಗಿ ಇವರಿಬ್ಬರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿರುವುದಾಗಿ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ. ಮಹಿಳಾ ಮೋರ್ಚಾವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆಯನ್ನು ಚುರುಕುಗೊಳಿಸುವುದಾಗಿ ಅವರು ಹೇಳಿದ್ದಾರೆ.
ಕಡಂಗ ಫೆ.29 NEWS DESK : ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಕರಡ ಸಾರ್ವಜನಿಕ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಬಿ.ಎಂ.ಅಂಜನಾ ಪ್ರಥಮ ಸ್ಥಾನ ಪೆಡೆದರು. ವಿಜ್ಞಾನ ವಿಭಾಗದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಾಡಿದ ವಿಜ್ಞಾನದ ಮಾದರಿಗಳನ್ನು ಪ್ರದರ್ಶನಕ್ಕೆ ಇಡಲಾಯಿತು. ಗ್ರಾಮ ಸದಸ್ಯರು, ಅಧಿಕಾರಿಗಳು, ನಿವೃತ್ತ ಶಿಕ್ಷಕರು, ಗ್ರಂಥಾಲಯದ ಮೇಲ್ವಿಚಾರಕರು ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಫೆ.29 NEWS DESK : ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಚೌಡೇನಹಳ್ಳಿಯ ಕುಮಾರ್ ಎಂ.ಎಸ್ ಆಯ್ಕೆಯಾಗಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಎಂ.ಟಿ.ಸುರೇಶ್ ಕಂಠಿ ಅವರು ಕುಮಾರ್ ಅವರನ್ನು ನೇಮಕ ಮಾಡಿ ಸಾಮಾಜಿಕ ಕಳಕಳಿಯೊಂದಿಗೆ ಸಂಘಟನೆಯನ್ನು ಬಲಗೊಳಿಸುವಂತೆ ಆದೇಶಿಸಿದ್ದಾರೆ.






