ಲೇಖಕ: admin

ಮಡಿಕೇರಿ ಫೆ.28 NEWS DESK : ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಮತ್ತಷ್ಟು ಯಶಸ್ವಿಯಾಗಿ ಕಾರ್ಯನಿರ್ವಹಿಸುವಂತೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ತಾಂತ್ರಿಕ ವಿಭಾಗದ ಜಂಟಿ ನಿರ್ದೇಶಕ ವೇಣುಗೋಪಾಲ್ ತಿಳಿಸಿದ್ದಾರೆ. ನಗರದ ಜಿ.ಪಂ.ಕಚೇರಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯು ರಾಷ್ಟ್ರದಾದ್ಯಂತ ಅನುಷ್ಠಾನಗೊಳ್ಳುತ್ತಿರುವ ಮಹತ್ತರ ಯೋಜನೆಯಾಗಿದೆ. ತಾಂತ್ರಿಕವಾಗಿಯೂ ಹಲವಾರು ಬದಲಾವಣೆಗಳನ್ನು ಯೋಜನೆಯಲ್ಲಿ ತರಲಾಗಿದೆ. ಸೂಕ್ತ ಫಲಾನುಭವಿಗೆ ಯೋಜನೆಯ ಲಾಭ ತಲುಪಬೇಕು. ಯೋಜನೆಯ ಅನುಷ್ಠಾನ ಸಂದರ್ಭದಲ್ಲಿ ಹಲವು ತಾಂತ್ರಿಕ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಜಿ.ಎಸ್.ಟಿ. ಹಾಗೂ ರಾಜಧನ ಪಾವತಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ಅವರು ತಾಂತ್ರಿಕ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಮೋದಿತ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಮತ್ತಷ್ಟು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಸಾಮಾಗ್ರಿ ವೆಚ್ಚ ಪಾವತಿ ಮಾಡುವಾಗ ಎಲ್ಲಾ ಕಾಮಗಾರಿಗಳ ಎಫ್.ಟಿ.ಒ ಗಳನ್ನು ಸೂಕ್ತವಾಗಿ ಪರಿಶೀಲಿಸಬೇಕು ಎಂದು ಅವರು ತಿಳಿಸಿದರು. ಕಾಮಗಾರಿಗಳ ಸ್ಥಳ ಪರಿಶೀಲನೆ: ಸಭೆಯ ಬಳಿಕ ಜಂಟಿ ನಿರ್ದೇಶಕರು…

Read More

ಮಡಿಕೇರಿ ಫೆ.28 NEWS DESK :  ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಇದ್ದು, ಇದನ್ನು ಶೇ.50 ರಷ್ಟು ಹೆಚ್ಚಿಸಬೇಕು ಎಂದು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ‘ಮೈಸೂರು ವಿಭಾಗದ ಆಯ್ದ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ’ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ರಾಜಕೀಯ, ಆರ್ಥಿಕ, ಶೈಕ್ಷಣಿಕ, ಕ್ರೀಡೆ, ಸಿನಿಮಾ, ವಿಜ್ಞಾನ ಮತ್ತು ತಂತ್ರಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಇದ್ದು, ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಸಮಾಜದಲ್ಲಿ ಸ್ತ್ರೀ ಮತ್ತು ಪುರುಷರು ಸಮಾನವಾಗಿದ್ದಾಗ ಮಾತ್ರ ಉತ್ತಮ ಸಮಾಜ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕು. ಮಹಿಳೆಯರು…

Read More

ಮಡಿಕೇರಿ ಫೆ.28 NEWS DESK : ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ, ಇಡೀ ದೇಶದಲ್ಲಿ ಒಂದೇ ಬ್ರ್ಯಾಂಡಿನಡಿಯಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಉಪಕ್ರಮವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದ್ದು, ಅದರ ಅಂಗವಾಗಿ ಕೆಜಿಗೆ 29 ರೂ.ಗೆ ದೊರೆಯುವ ʼಭಾರತ್‌ ಅಕ್ಕಿʼ ವಿತರಣೆ ಕಾರ್ಯಕ್ರಮಕ್ಕೆ  ಸಂಸದ ಪ್ರತಾಪ್ ಸಿಂಹ ಪಿರಿಯಾಪಟ್ಟಣದಲ್ಲಿ ಚಾಲನೆ ನೀಡಿದರು.

Read More

ಶ್ರೀಮಂಗಲ ಫೆ.28 NEWS DESK : ಸಾಹಿತ್ಯ ರಚನೆಯಿಂದ ಆ ಜನಾಂಗದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳ ಬೆಳವಣಿಗೆ ಸಾಧ್ಯವಾಗುವುದರೊಂದಿಗೆ ಲೇಖಕರ ಜ್ಞಾನವೂ ವೃದ್ಧಿಯಾಗುತ್ತದೆ ಎಂದು ದಾನಿಗಳಾದ ಬಾದುಮಂಡ ಚಿಮ್ಮಉತ್ತಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ  ರೋಟರಿ ವಿದ್ಯಾಸಂಸ್ಥೆಯಲ್ಲಿ ನಡೆದ “ಕೊಡವ ತಕ್ಕ್ ಎಳ್ತ್‌ಕಾರಡ ಕೂಟ”ದ  ಜನಪ್ರಿಯ ಕೊಡವ ಸಾಹಿತ್ಯ ಮಾಲೆ’ ಯೋಜನೆಯ ನೂತನ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು ಮಾತೃಭಾಷೆಯ ಬೆಳವಣಿಗೆಗೆ ಆ ಭಾಷೆಯಲ್ಲಿ ಸಾಹಿತ್ಯ ಪ್ರಕಟಿಸುವುದು, ಪ್ರಕಟಿತ ಸಾಹಿತ್ಯವನ್ನು ಓದುವುದರೊಂದಿಗೆ ಮಾತೃಭಾಷೆಯಲ್ಲೇ ಮಾತನಾಡುವುದು ಅತೀ ಮುಖ್ಯ. ಕೊಡವ ಜನಾಂಗವು ತನ್ನ ಶ್ರೀಮಂತ ಸಂಸ್ಕೃತಿಯಿಂದ ಪ್ರಪಂಚದಲ್ಲೇ ಖ್ಯಾತಿಯೊಂದಿಗೆ ವಿಶೇಷ ಸ್ಥಾನಮಾನವನ್ನು ಪಡೆದುಕೊಂಡಿದೆ. ಬ್ರಿಟೀಷರು ಪ್ರಪಂಚದ 68 ರಾಷ್ಟ್ರಗಳನ್ನು ಆಳಿದ್ದರೂ ಕೊಡವ ಜನಾಂಗದವರೊಂದಿಗೆ ಮಾತ್ರ ಸಹಭೋಜನ ಮಾಡಿದ್ದಾರೆ. ಇದಕ್ಕೆ ಕಾರಣ ಕೊಡವ ಜನಾಂಗದವರಿಗೆ ರಕ್ತಗತವಾಗಿ ಬಂದಿರುವ ಧೈರ್ಯ, ಶೌರ್ಯ, ನಿಯತ್ತು, ನೀತಿ-ನಿಯಮಗಳ ಪಾಲನೆ, ವಿಶೇಷ ಸಂಸ್ಕೃತಿ ಹಾಗೂ ನಂಬಿಕೆಗೆ ಅರ್ಹರಾಗಿರುವ ಜನಾಂಗ ಎಂಬುದು ಗಮನಾರ್ಹ ಸಂಗತಿ. ಇದೆಲ್ಲವನ್ನೂ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಈ…

Read More

ಮಡಿಕೇರಿ ಫೆ.28 NEWS DESK : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಫೆಬ್ರವರಿ, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ 66/11 ಕೆವಿ ಸುಂಟಿಕೊಪ್ಪ, ಹಾಗೂ 66/11 ಕೆವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸುಂಟಿಕೊಪ್ಪ, ಗದ್ದೆಹಳ್ಳ, ನಾರ್ಗಾಣ, ನಾಕೂರು, ಅಂದಗೋವೆ, ಕಲ್ಲೂರು, ಮಳ್ಳೂರು, ಹೇರೂರು, ಹೊಸಕೋಟೆ, ಕೊಡಗರಹಳ್ಳಿ, ಕಂಬಿಬಾಣೆ, ಕೆದಕಲ್, ಹಾಲೇರಿ, ಮಾದಾಪುರ ಕಾಂಡನಕೊಲ್ಲಿ, ಹಟ್ಟಿಹೊಳೆ, ಜಂಬೂರು, ಗರ್ವಾಲೆ, ಚೆಟ್ಟಳ್ಳಿ, ವಾಲ್ನೂರು ತ್ಯಾಗತೂರು, ಮತ್ತಿಕಾಡು, ಮಡಿಕೇರಿ ಪಟ್ಟಣ, ಬೋಯಿಕೇರಿ ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ  ಕೋರಿದ್ದಾರೆ.

Read More

ಮಡಿಕೇರಿ ಫೆ.28 NEWS DESK : ವಲಯ ಅರಣ್ಯಾಧಿಕಾರಿ ಸೇರಿದಂತೆ ಉಳಿದ ಬೇಡಿಕೆಗಳಿಗೆ ತಜ್ಞರ ಸಮಿತಿಯನ್ನು ರಚಿಸಿ ಬೇರೆ ಬೇರೆ ರಾಜ್ಯಗಳಿಂದ ವರದಿಗಳನ್ನು ತರಿಸಿ. ತಜ್ಞರ ಸಮಿತಿ ವರದಿ ತಯಾರಿಸಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು. ಸರ್ಕಾರ ನಿಮ್ಮ ಪರವಾಗಿದೆ. ನಿಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಕರ್ನಾಟಕ ಅರಣ್ಯ ವಿದ್ಯಾರ್ಥಿಗಳು ಮತ್ತು ಪದವೀದರರ ಅಸೋಸಿಯೇಷನ್ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ನಿಮ್ಮ ಬೇಡಿಕೆಗಳ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿರುವುದಾಗಿ ತಿಳಿಸಿದರು. ಪ್ರಕೃತಿ ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ, ವನ್ಯ ಜೀವಿ ಸಂರಕ್ಷಣೆ. ಎಲ್ಲಾ ಕಡೆ ಮಾಲಿನ್ಯ ಇದೆ. ನೀರಿನಲ್ಲಿ ಮಾಲಿನ್ಯ, ಗಾಳಿಯಲ್ಲೂ ಮಾಲಿನ್ಯ, ಹೀಗಾಗಿ ಜಾಗತಿಕ ತಾಪಮಾನ ಹೆಚ್ಚಾಗಿ ಅನೇಕ ರೋಗ…

Read More

ವಿರಾಜಪೇಟೆ ಫೆ.28 NEWS DESK :  ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ನ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮತ್ತು ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ವಿರಾಜಪೇಟೆ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಗಡಿಯಾರ ಕಂಬದ ಬಳಿ ಜಮಾಯಿಸಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ದೇಶದ್ರೋಹಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ.ಜಿ ಬೋಪಯ್ಯ, ಪ್ರಜಾಪ್ರಭುತ್ವದ ದೇಗುಲ ಎಂದು ಬಿಂಬಿಸುವ ರಾಜ್ಯದ ವಿಧಾನ ಸೌಧದಲ್ಲಿ ಕಾಂಗ್ರೆಸ್‍ನ ನಾಸಿರ್ ಹುಸೇನ್ ಅವರ ಬೆಂಬಲಿಗನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶಕ್ಕೆ ಅಪಮಾನ ಮಾಡಿದ್ದು, ಇದು ದೇಶ ದ್ರೋಹದ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಬಿಜೆಪಿ ವಿರಾಜಪೇಟೆ…

Read More

ಕಡಂಗ ಫೆ.28 NEWS DESK : ಕಡಂಗ ವಿಜಯ ಪ್ರಾಥಮಿಕ ಶಾಲೆಯಲ್ಲಿ ಸರ್ ಸಿ.ವಿ.ರಾಮನ್ ಅವರ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ 6ನೇ ಹಾಗೂ 7ನೇ ತರಗತಿ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿ ಪ್ರದರ್ಶನ ನಡೆಯಿತು. ಶಾಲೆಯ ಅಧ್ಯಕ್ಷರಾದ ಬಲ್ಯಂಡ ಪಿ.ಬಿದ್ದಪ್ಪ, ನಿರ್ದೇಶಕರಾದ ಬಲ್ಲಚಂಡ ಮಾದಯ್ಯ ಹಾಗೂ ಸದಸ್ಯರು ವೀಕ್ಷಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿದರು. ಈ ಸಂದರ್ಭ ಪ್ರೌಢಶಾಲಾ ಮುಖ್ಯೋಪಾಧ್ಯಯ ಸೋಮಶೇಖರ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರಾದ ಬೋಜಮ್ಮ, ವಿಜ್ಞಾನ ಶಿಕ್ಷಕಿ ಕೆ.ಸಿ.ದಿವ್ಯ, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Read More

ಪೋರಬಂದರ್ ಫೆ.28 NEWS DESK : ಭಾರತೀಯ ನೌಕಾಪಡೆ ಎನ್‌ಸಿಬಿಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ದೋಣಿಯಲ್ಲಿ ಸಾಗಾಟವಾಗುತ್ತಿದ್ದ ಸುಮಾರು 3,300 ಕೆ.ಜಿ ಮಾದಕ ವಸ್ತುವನ್ನು ವಶಕ್ಕೆ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ವಶಪಡಿಸಿಕೊಂಡ ಅತಿ ಹೆಚ್ಚಿನ ಪ್ರಮಾಣದ ಮಾದಕವಸ್ತು ಇದಾಗಿದೆ ಎಂದು ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ ಕರಾವಳಿಯಲ್ಲಿ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇರಾನ್ ದೋಣಿಯಲ್ಲಿದ್ದ ಐವರು ವಿದೇಶಿಗರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಬುಧವಾರ ತಿಳಿಸಿದೆ. ನೌಕಾಪಡೆ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಜಂಟಿಯಾಗಿ ಇಂಟರ್‌ನ್ಯಾಷನಲ್ ಮ್ಯಾರಿಟೈಮ್ ಬೌಂಡರಿ ಲೈನ್ ಉದ್ದಕ್ಕೂ ಅರಬ್ಬಿ ಸಮುದ್ರದಲ್ಲಿ ಕಾರ್ಯಾಚರಣೆಯನ್ನು ಕೈಗೊಂಡಿವೆ. ವಶಪಡಿಸಿಕೊAಡ ಮಾದಕವಸ್ತುವಿನಲ್ಲಿ ಚರಸ್, ಮೆಥಾಂಫೆಟಮೈನ್ ಮತ್ತು ಮಾರ್ಫಿನ್ ಇದೆ ಎಂದು ಶಂಕಿಸಲಾಗಿದೆ. ಬಂಧಿತ ಐವರನ್ನು ಇರಾನ್ ಅಥವಾ ಪಾಕಿಸ್ತಾನಿ ಪ್ರಜೆಗಳೆಂದು ಶಂಕಿಸಲಾಗಿದೆ.

Read More

ಮಡಿಕೇರಿ ಫೆ.28 NEWS DESK :  ಈಗಾಗಲೇ ಬಾಂಗ್ಲಾ ದೇಶದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಲ್ರ್ಡ್ ಪ್ರೀಮಿಯರ್ ಕಂಡು ಹೆಸರು ಮಾಡಿರುವ ಕೂರ್ಗ್ ಕಾಫಿ ವುಡ್ ಮೂವಿಸ್‍ನ ಬ್ಯಾನರ್ ಅಡಿಯಲ್ಲಿ ತಯಾರಾದ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ಬೇರ್” (The Root) ಕೊಡವ ಸಿನಿಮಾ ಇದೀಗ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಇದೇ ಫೆ.29 ರಿಂದ ಮಾರ್ಚ್ 7ರವರೆಗೆ ಬೆಂಗಳೂರಿನ ಒರಿಯಾನ್ ಮಾಲ್‍ನಲ್ಲಿ ನಡೆಯುವ ಚಲನಚಿತ್ರೋತ್ಸವದ Unsung Incredible India ವಿಭಾಗದಲ್ಲಿ ಪ್ರದರ್ಶನಗೊಳ್ಳಲಿದೆ. ಇದು ಕೊಡವ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆಯಾಗಿದೆ ಎಂದು ಚಿತ್ರತಂಡ ಹರ್ಷವ್ಯಕ್ತಪಡಿಸಿದೆ. ಇದಕ್ಕೂ ಮೊದಲು ನಡೆದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ “ಬೇರ್” ಕೊಡವ ಸಿನಿಮಾ ಮೂಡಿ ಬಂದಿದೆ. ವಿದೇಶದಲ್ಲಿ ಪ್ರದರ್ಶನ ಕಂಡ ಮೊದಲ ಕೊಡವ ಸಿನಿಮಾ ಹೆಗ್ಗಳಿಗೆ ಪ್ರಕಾಶ್ ಕಾರ್ಯಪ್ಪ ಅವರಿಗೆ…

Read More