ಲೇಖಕ: admin

ನವದೆಹಲಿ: ಭಾರತದ ರಾಜಧಾನಿಯಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ ಕೇವಲ ತಂತ್ರಜ್ಞಾನದ ಪ್ರದರ್ಶನವಲ್ಲ, ಬದಲಿಗೆ ಇದು ಆಲೋಚನೆ, ಆವಿಷ್ಕಾರ ಮತ್ತು ಉದ್ದೇಶಗಳ ಪ್ರಬಲ ಸಂಗಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಮಂಗಳವಾರ ‘ಎಕ್ಸ್’ (X) ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಜಾಗತಿಕ ಒಳಿತಿಗಾಗಿ ಎಐ ಭವಿಷ್ಯವನ್ನು ರೂಪಿಸುವಲ್ಲಿ ಭಾರತೀಯ ಪ್ರತಿಭೆಗಳ ಸಾಮರ್ಥ್ಯವನ್ನು ಶ್ಲಾಘಿಸಿದ್ದಾರೆ. ಮಾನವ ಕೇಂದ್ರಿತ ಪ್ರಗತಿಗೆ ಒತ್ತು: ಸೋಮವಾರ ಎಕ್ಸ್‌ಪೋ ಉದ್ಘಾಟಿಸಿದ ನಂತರ ಪ್ರಧಾನಿಯವರು ವಿವಿಧ ಸ್ಟಾಲ್‌ಗಳಿಗೆ ಭೇಟಿ ನೀಡಿ, ಪ್ರದರ್ಶಕರೊಂದಿಗೆ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸರ್ವಜನ ಹಿತಾಯ, ಸರ್ವಜನ ಸುಖಾಯ” ಎಂಬ ತತ್ವದಂತೆ ಎಲ್ಲರ ಕಲ್ಯಾಣಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತವಾಗಿ ಮತ್ತು ಸಮಗ್ರವಾಗಿ ಬಳಸಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಎಕ್ಸ್‌ಪೋದ ಪ್ರಮುಖ ಮುಖ್ಯಾಂಶಗಳು: ಬೃಹತ್ ವೇದಿಕೆ: ನವದೆಹಲಿಯ ಭಾರತ್ ಮಂಟಪದ 10 ಕ್ರೀಡಾಂಗಣಗಳಲ್ಲಿ, ಸುಮಾರು 70,000 ಚದರ ಮೀಟರ್‌ಗಿಂತಲೂ ಹೆಚ್ಚು ವಿಸ್ತೀರ್ಣದಲ್ಲಿ ಈ ಬೃಹತ್…

Read More

ಮಡಿಕೇರಿ NEWS DESK ಫೆ.16 : ಮಡಿಕೇರಿಯ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಸಂಭ್ರಮ ಅದ್ದೂರಿಯಾಗಿ ನಡೆಯಿತು. ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿರುವ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಸ್ಥಾಪಿಸಲಾಗಿರುವ 52 ಅಡಿ ಎತ್ತರದ ಶಿವನ ವಿಗ್ರಹದ ಸುತ್ತ ಇರುವ ಪಂಚಲಿಂಗಗಳು ಮತ್ತು 109 ಲಿಂಗಗಳಿಗೆ ವಿಶೇಷ ಅಭಿಷೇಕ, ಅಲಂಕಾರ ಮತ್ತು ಪೂಜೆ ನೆರವೇರಿತು. ಪಂಚಲಿಂಗಕ್ಕೆ ಪವಿತ್ರ ಗಂಗಾಜಲ ಅಭಿಷೇಕ ಮತ್ತು ಶಿವನ ಮೂರ್ತಿಗೆ ಭಕ್ತರು ಪುಷ್ಪಾರ್ಚನೆ ಮಾಡಿದರು. ಬೆಳಿಗ್ಗೆ ದೇವಾಲಯದ ಮುಖ್ಯ ದ್ವಾರದಿಂದ ದೇವಾಲಯದವರೆಗೆ ಸ್ತಬ್ಧಚಿತ್ರ, ಪೂರ್ಣ ಕುಂಭ ಕಳಸ, ಚಂಡೆವಾದ್ಯ, ವೀರಗಾಸೆ, ಡೊಳ್ಳು ಕುಣಿತದೊಂದಿಗೆ ಭಕ್ತಾದಿಗಳ ಮೆರವಣಿಗೆ ಸಂಭ್ರಮದಿAದ ನಡೆಯಿತು. ಧರ್ಮದರ್ಶಿ ಗೋವಿಂದಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಪ್ರಧಾನ ಅರ್ಚಕರಾದ ಶ್ರೀನಿವಾಸ ಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ,…

Read More

ಕುಶಾಲನಗರ, NEWS DESK ಫೆ.16 : ಗಾಂಧೀಜಿ ಎಂದ ಕ್ಷಣ ನೆನಪಾಗುವುದು ಸ್ವತಂತ್ರ ಹೋರಾಟಗಾರ. ಗಾಂಧೀಜಿ ಚಿಂತಕರು, ಪತ್ರಕರ್ತರು, ಶಾಂತಿಧೂತ ಮತ್ತು ಜಗತ್ತಿಗೆ ಅಹಿಂಸಾ ಮಾರ್ಗ ರೂಪಿಸಿಕೊಟ್ಟ ಮಹಾನ್ ಚೇತನ. ಸ್ವತಂತ್ರ, ಸತ್ಯಾಗ್ರಹ, ಸ್ವರಾಜ್ಯ, ಸತ್ಯ, ನೈತಿಕತೆ, ಶಾಂತಿ, ಅಹಿಂಸೆ ಅವರ ತತ್ವಗಳು. ಸಮಾಜದಲ್ಲಿ ಹಿಂಸಾಚಾರಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅತ್ಯಂತ ಸಮಂಜಸ ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಗಂಗಾಧರ ಎಂ. ಆರ್. ಅಭಿಪ್ರಾಯಪಟ್ಟರು. ಕೊಡಗು ವಿಶ್ವವಿದ್ಯಾಲಯ, ಕೊಡಗು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಗಾಂಧೀಜಿಯವರ ಆತ್ಮಕಥೆ ನೂರರ ಸಂಭ್ರಮ ಹಾಗೂ ಭೂದಾನ ಚಳವಳಿಯ 75ನೇ ವಾರ್ಷಿಕೋತ್ಸವದ ಪ್ರಯುಕ್ತ ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ಪುಸ್ತಕ ದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಇಂದು ಜಗತ್ತು ಒಂದು ಜಾಗತಿಕ ಹಳ್ಳಿಯಾಗಿದೆ. ಇಂತಹ ಸಂದರ್ಭದಲ್ಲಿ…

Read More

ಮಡಿಕೇರಿ, NEWS DESK ಫೆ.16 : ಮಡಿಕೇರಿಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಪರಿಣಾಮ ಆತಂಕ ಸೃಷ್ಟಿಯಾದ ಘಟನೆ ಇಂದು ನಡೆಯಿತು. ಇ-ಮೇಲ್ ಗಮನಿಸಿದ ನ್ಯಾಯಾಲಯದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು  ನ್ಯಾಯಾಲಯದಿಂದ ಹೊರಬಂದರು. ಕೊಡಗು ಜಿಲ್ಲಾ ಪೊಲೀಸರು, ಬಾಂಬ್ ನಿಗ್ರಹದಳ ಮತ್ತು ಶ್ವಾನದಳ ನ್ಯಾಯಾಲಯದ ಕಟ್ಟಡಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಬಾಂಬ್ ಬೆದರಿಕೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯದಲ್ಲಿ ತಪಾಸಣೆ ನಡೆಸಲಾಗಿದೆ. ಆದರೆ ಯಾವುದೇ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

Read More

ಮಡಿಕೇರಿ, NEWS DESK ಫೆ.16 : ಕೊಡಗು ಜಿಲ್ಲೆಯಾದ್ಯಂತ  ಶಿವರಾತ್ರಿ ಉತ್ಸವವನ್ನು ವಿವಿಧ ದೇಗುಲಗಳಲ್ಲಿ ವಿವಿಧ ಪೂಜಾ ಕಾರ್ಯ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಶಿವರಾತ್ರಿಯ ಪ್ರಯುಕ್ತ ಭಾನುವಾರ ಬೆಳಗ್ಗಿನಿಂದಲೆ ಆಯಾ ಗ್ರಾಮ ದೇವಾಲಯಗಳಲ್ಲಿ, ತಲಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆಗಳು ಜರುಗಿದವು. ಭಕ್ತರು ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದುದು ಎಲ್ಲೆಡೆಯೂ ಕಂಡು ಬರುತಿತ್ತು. ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮುಂಜಾನೆಯಿAದಲೇ ವಿಶೇಷ ಸೇವೆ, ರುದ್ರಹೋಮ  ಶ್ರದ್ಧಾಭಕಿಯಿಂದ ಜರುಗಿತು.ಮುಂಜಾನೆಯಿಂದಲೇ  ವಿವಿಧ ಪೂಜಾ ವಿಧಿವಿಧಾನಗಳು ಜರುಗಿದವು. ಮಧ್ಯಾಹ್ನ  ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.   ಕಾವೇರಿ ಕ್ಷೇತ್ರ-  ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರದಾಯದAತೆ  ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೂರಾರು ಭಕ್ತಾದಿಗಳ ಸಮ್ಮೂಕದಲ್ಲಿ ನಡೆಸಲಾಯಿತು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ  ಶತರುದ್ರಾಭಿಷೇಕ,  ರುದ್ರಹೋಮ, ಮಧ್ಯಾಹ್ನ ಮಹಾಮಂಗಳಾರತಿ, ದೇವರ ಉತ್ಸವ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಸಂಜೆ  ಭಜನೆ ಮತ್ತು…

Read More

ಮಡಿಕೇರಿ NEWS DESK ಫೆ.16 : ಕೊಡಗು ಜಿಲ್ಲೆಯ 18 ಕೇಂದ್ರಗಳಲ್ಲಿ ಫೆ.28ರಿಂದ ಮಾ.17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ರೀತಿ ಗೊಂದಲ ಉಂಟಾಗದೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ…

Read More

ಮಡಿಕೇರಿ, NEWS DESK ಫೆ.16:-ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‍ಗಳು/ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1 ರ ಕಾಡುಗೊಲ್ಲ ಜನಾಂಗದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1 ರ ಕಾಡುಗೊಲ್ಲ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ…

Read More

ಮಡಿಕೇರಿ, NEWS DESK ಫೆ.16:-ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು-ಮಡಿಕೇರಿ, ಔಟ್‍ಲಾವುಡ್ ಇಂಡಿಯಾ ಫೌಂಡೇಶನ್ ಮತ್ತು ವಕೀಲರ ಸಂಘ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 18 ರಿಂದ 21 ರವರೆಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ. ಫೆಬ್ರವರಿ 18 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧಿಶರಾದ ಹೊಸಮನಿ ಪುಂಡಲಿಕ ಅವರು ಉದ್ಘಾಟಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್ ಅಧ್ಯಕ್ಷತೆ ವಹಿಸಲಿದ್ದು, 1 ನೇ ಅಪರ ಜಿಲ್ಲಾ ಮತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಕೆ.ಬಸವರಾಜ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಸಿ.ವೀರಭದ್ರಯ್ಯ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಡಿ.ಎಸ್.ವಿನುತ ಪಾಲ್ಗೊಳ್ಳಲಿದ್ದಾರೆ. ತರಬೇತುದಾರರಾದ ಮೀಮಾನ್ಸ ಸಿಂಗ್, ಶಮಾ ಡಿ., ನಿಹಾರಿಕಾ ನಾಯ್ಡು…

Read More

ಕುಶಾಲನಗರ, NEWS DESK ಫೆ.16 : ಕುಶಾಲನಗರ ತಾಲ್ಲೂಕಿನ ತೊರೆನೂರು ವಿರಕ್ತ ಮಠದ ಹಿರಿಯ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ 13 ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭ ಈ ತಿಂಗಳ 19ರಂದು ನಡೆಯಲಿದ್ದು, ಸುತ್ತೂರು ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಆಗಮಿಸಲಿದ್ದಾರೆ ಎಂದು ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ತಿಳಿಸಿದ್ದಾರೆ. ಕುಶಾಲನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ತೊರೆನೂರು ವಿರಕ್ತ ಮಠ ಶ್ರೀ ಮರುಳ ಸಿದ್ದೇಶ್ವರ ಸ್ವಾಮೀಜಿಯವರ ತಪೋಕ್ಷೇತ್ರವಾಗಿದ್ದು, ಶ್ರೀ ಮಠಕ್ಕೆ ಪುರಾತನ ಐತಿಹ್ಯ ವಿದೆ. ವಿರಕ್ತಮಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗಳು ಹಾಗೂ ನಿಕಟ ಪೂರ್ವ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಯವರ 13ನೇ ವರ್ಷದ ಸಂಸ್ಮರಣೋತ್ಸವ 19 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ. ಸುತ್ತೂರು ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮವನ್ನು ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಉದ್ಘಾಟಿಸಲಿದ್ದು ಮಡಿಕೇರಿ ಶಾಸಕ…

Read More

ಮಡಿಕೇರಿ NEWS DESK ಫೆ. 16 – ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ನಿಮಿ೯ಸಲಾದ  ಫಾಮಾ೯ ಭವನವು ಫೆಬ್ರವರಿ 19 ರಂದು ಗುರುವಾರ ಬೆಳಗ್ಗೆ 9.30  ಗಂಟೆಗೆ ಚೈನ್ ಗೇಟ್ ಬಳಿ ಉದ್ಘಾಟನೆಯಾಗಲಿದೆ. ಕನಾ೯ಟಕ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಆರ್. ರಘುನಾಥ ರೆಡ್ಡಿ ಅವರು ಫಾಮಾ೯ಭವನವನ್ನು ಉದ್ಘಾಟಿಸಲಿದ್ದು,  ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಅಂಬೆಕಲ್ ಜೀವನ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಆಯೋಜಿತ ಸಮಾರಂಭದಲ್ಲಿ  ಮೈಸೂರು  ಪ್ರಾದೇಶಿಕ ಔಷಧ ನಿಯಂತ್ರಕರ ಕಛೇರಿಯ  ಉಫ ಆಯುಕ್ತ  ಬಿ.ಪಿ. ಅರುಣ್,  ಕೊಡಗು ಜಿಲ್ಲಾ ಸಹಾಯಕ ಔಷಧ ನಿಯಂತ್ರಕರಾದ   ಅಜಯ್ ರಾಜ್ ಷಾ, ಕನಾ೯ಟಕ ಔಷದಿ ವ್ಯಾಪಾರಿಗಳ ಸಂಘದ ಖಜಾಂಜಿ ಬಿ. ಉಮೇಶ್,   ಸಂಘದ ರಾಜ್ಯ ಕಾನೂನು ಸಲಹೆಗಾರ ಕೆ.ಹರೀಶ್,, ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ್, ಉಪಾಧ್ಯಕ್ಷರುಗಳಾದ ಅಂಬೆಕಲ್ ವಿನೋದ್,  ಮೇವಿ೯ನ್ ಫನಾ೯ಂಡೀಸ್, ಜಂಟಿ ಕಾಯ೯ದಶಿ೯ ಕೆ.ವಸಂತ್ ಕುಮಾರ್, ಖಜಾಂಚಿ ಪ್ರಸಾದ್ ಗೌಡ ವೇದಿಕೆಯಲ್ಲಿರುತ್ತಾರೆ. ಫಾಮಾ೯ ಭವನದ…

Read More