ಮಡಿಕೇರಿ ಫೆ.27 NEWS DESK : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ತಾವು ಕೂಡ ಆಕಾಂಕ್ಷಿಯಾಗಿರುವುದಾಗಿ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸ್ಪರ್ಧೆಗೆ ಅವಕಾಶ ನೀಡುವಂತೆ ಈಗಾಗಲೇ ಬಿಜೆಪಿ ವರಿಷ್ಠರ ಗಮನ ಸೆಳೆದಿದ್ದೇನೆ, ಆದರೆ ಪಕ್ಷದ ತೀರ್ಮಾನವೇ ಅಂತಿಮವಾಗಿದೆ. ಪಕ್ಷ ಯಾವುದೇ ಅಭ್ಯರ್ಥಿಗೆ ಸ್ಪರ್ಧೆಗೆ ಅವಕಾಶ ನೀಡಿದರೂ ಅಂತಹ ಅಭ್ಯರ್ಥಿಯ ಪರವಾಗಿ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುವುದಾಗಿ ಸ್ಪಷ್ಟಪಡಿಸಿದರು. ಜೆಡಿಎಸ್ ಅಭ್ಯರ್ಥಿಯನ್ನು ಬಿಜೆಪಿ ಚಿಹ್ನೆಯಡಿ ಕಣಕ್ಕಿಳಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಭಾಸ್ಕರ್ ರಾವ್, ಚರ್ಚೆಗಳು ಮಾತ್ರವೇ ನಡೆಯುತ್ತಿದೆ ಎಂದರು. ಸಂಸದ ಪ್ರತಾಪ್ ಸಿಂಹ ಅವರು 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಎಲ್ಲಾ ಪಕ್ಷಗಳಲ್ಲೂ ಎರಡು ಮೂರು ಮಂದಿ ಆಕಾಂಕ್ಷಿಗಳು ಇರುತ್ತಾರೆ. ಅದರಂತೆ ತಾವು ಕೂಡ ಅವಕಾಶ ಬಯಸಿದ್ದೇನೆ. ಅಭ್ಯರ್ಥಿಗಳ ಅಂತಿಮ ತೀರ್ಮಾನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಮಿತಿ ಮಾಡಲಿದೆ ಎಂದು ಹೇಳಿದರು. ಕಳೆದ 33 ವರ್ಷಗಳಿಂದ ತಾವು ವಿವಿಧ…
ಲೇಖಕ: admin
ಮಡಿಕೇರಿ ಫೆ.27 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವಿವಿಧ ಮಂಡಲಗಳಿಗೆ ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ತಿಳಿಸಿದ್ದಾರೆ. ಮಡಿಕೇರಿ ನಗರ ಅಧ್ಯಕ್ಷರಾಗಿ ಪಿ.ಜಿ.ಗಜೇಂದ್ರ (ಕುಶ) ಭಗವತಿ ನಗರ, ಮಡಿಕೇರಿ ಗ್ರಾಮಾಂತರ ಅಧ್ಯಕ್ಷರಾಗಿ ಬಿ.ಎಂ.ಪ್ರದೀಪ್ ನಾಪೋಕ್ಲು, ವಿರಾಜಪೇಟೆ ಅಧ್ಯಕ್ಷರಾಗಿ ಪೊಟ್ಟಂಡ ನವೀನ್ ಉತ್ತಯ್ಯ ಹಾಲುಗುಂದ ಹಾಗೂ ಸೋಮವಾರಪೇಟೆ ಅಧ್ಯಕ್ಷರಾಗಿ ಪಿ.ಆರ್.ಸುನಿಲ್ ಕುಮಾರ್ ಸುಂಟಿಕೊಪ್ಪ ಅವರನ್ನು ನೇಮಕ ಮಾಡಲಾಗಿದೆ. ಪಕ್ಷ ಸಂಘಟನೆಯ ದೃಷ್ಟಿಯಿಂದ ನಾಲ್ವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಪ್ರು ರವೀಂದ್ರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಫೆ.27 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಯುವ ಮೋರ್ಚಾದ ವಿವಿಧ ಮಂಡಲಗಳಿಗೆ ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ತಿಳಿಸಿದ್ದಾರೆ. ಮಡಿಕೇರಿ ನಗರ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಪಾಂಡಿರ ಪೂಣಚ್ಚ, ಮಡಿಕೇರಿ ಗ್ರಾಮಾಂತರ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಚೇತನ್ ಬಂಗೇರ, ಸೋಮವಾರಪೇಟೆ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಮೋಹಿತ್ ತಿಮ್ಮಯ್ಯ ಹಾಗೂ ವಿರಾಜಪೇಟೆ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ನಿತಿನ್ ಮೊಣ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ಯುವ ಮೋರ್ಚಾದ ಮುಂದಿನ ಸಂಘಟನಾತ್ಮಕ ಚಟುವಟಿಕೆಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ಈ ನಾಲ್ವರು ಪಕ್ಷಕ್ಕಾಗಿ ನೀಡಿದ ಕೊಡುಗೆ ಮತ್ತು ಸೇವೆಯನ್ನು ಪರಿಗಣಿಸಿ ಅಧ್ಯಕ್ಷರುಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮಹೇಶ್ ತಿಮ್ಮಯ್ಯ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಫೆ.27 NEWS DESK : ತೆಕ್ಕಿಲ್ ಪ್ರವಾಸಿ ಒಕ್ಕೂಟದ ವತಿಯಿಂದ ದುಬೈ ನಲ್ಲಿ ನಡೆದ “ಬಂದು ಸೇರಿ ಸಂತೋಷಪಡುವ” ತೆಕ್ಕಿಲ್ ಒಕ್ಕೂಟದ ಸಂಗಮ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ದುಬೈ ಇತ್ತಿಹಾದ್ ಗ್ರೌಂಡಿನಲ್ಲಿ ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಯು ಎ ಇ ವಾಸ್ತವ್ಯವಿರುವ ಮತ್ತು ಭಾರತದಿಂದ ಬಂದು ನೆಲೆಸಿರುವ ತೆಕ್ಕಿಲ್ ಒಕ್ಕೂಟದ ಸದಸ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರವನ್ನು ಭಾರತದ ಮತ್ತು ಯು ಎ ಇ ರಾಷ್ಟ್ರ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಗೈದ ಟಿ.ಎಂ.ಶಾಹಿದ್ ತೆಕ್ಕಿಲ್ ಅವರನ್ನು ಒಕ್ಕೂಟದ ಅಧ್ಯಕ್ಷ ಅಜೀಜ್ ಕೊವ್ವಲ್ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಿದರು. ನಂತರ ವಿವಿಧ ದೇಶದಲ್ಲಿ ವಾಸ್ತವ್ಯವಿರುವವರ ಸದಸ್ಯರ ಆಚಾರ ವಿಚಾರ ವಿನಿಮಯ, ವಿವಿಧ ರೀತಿಯ ತಿಂಡಿ ತಿನಿಸುಗಳ ರುಚಿ ಸವಿಯುವ , ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಸಭಾ ಕಾರ್ಯಕ್ರಮ, ಸಾಧಕರಿಗೆ ಪ್ರಶಸ್ತಿ ಪ್ರಧಾನ, ಕ್ರೀಡಾಕೂಟಗಳು ನಡೆದವು. ಭಾರತದಿಂದ ಬಂದ ಮತ್ತು ಯು ಎ ಇ ಯಲ್ಲಿ ವಾಸ್ತವ್ಯವಿರುವ ತೆಕ್ಕಿಲ್ ಒಕ್ಕೂಟದ ಸದಸ್ಯರ…
ಮಡಿಕೇರಿ ಫೆ.27 NEWS DESK : ಮೈಸೂರು- ಕೊಡಗು ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಈ ಕೆಲಸವನ್ನು ಕಳೆದ ನಾಲ್ಕು ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಯಾಕೆ ಮಾಡಲಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್ ಪ್ರಶ್ನಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಭೂಮಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಉಚಿತವಾಗಿ ಹಸ್ತಾಂತರಿಸಬೇಕಾಗಿತ್ತು. ಆ ಮೂಲಕ ತಾವು ಕೊಡಗು ಕ್ಷೇತ್ರಕ್ಕೂ ಸಂಸದರು ಎನ್ನುವುದನ್ನು ಸಾಬೀತು ಪಡಿಸಬೇಕಾಗಿತ್ತು ಎಂದು ತಿಳಿಸಿದ್ದಾರೆ. ಸುಮಾರು 9 ವರ್ಷಗಳ ಹಿಂದೆಯೇ ಕೊಡಗು ಜಿಲ್ಲೆಗೆ ರೈಲು ಮಾರ್ಗ ತರುವುದಾಗಿ ಭರವಸೆ ನೀಡಿದ್ದ ಸಂಸದರು ಇಲ್ಲಿಯವರೆಗೆ ಈ ಬಗ್ಗೆ ಇಚ್ಛಾಶಕ್ತಿಯನ್ನು ಪ್ರದರ್ಶಿಸಿಲ್ಲ. ಇದೀಗ ಲೋಕಸಭಾ ಚುನಾವಣಾ ಹಂತದಲ್ಲಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಕಡೆ ಬೊಟ್ಟು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.…
ಬೆಂಗಳೂರು, ಫೆ.27 NEWS DESK : ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದ ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗಬೇಕು :: ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ…
ಮಡಿಕೇರಿ ಫೆ.27 NEWS DESK : ರಾಜಕೀಯ ಹತ್ಯೆಗಳು ಮತ್ತು ಅಮಾನವೀಯ ಮರಣದಂಡನೆಗಳಿಂದ ಮೃತಪಟ್ಟ ಹಿರಿಯ ಕೊಡವ ಬುಡಕಟ್ಟು ಜನರಿಗೆ ಅಂತರ ರಾಷ್ಟ್ರೀಯ ಮಾತೃಭಾಷಾ ದಿನದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೌರವ ಅರ್ಪಿಸಿತು. ಮಡಿಕೇರಿ ಕೋಟೆ ಆವರಣ ಮತ್ತು ದೇವಟ್ ಪರಂಬು ಕೊಡವ ನರಮೇಧ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‍ಸಿ ಪ್ರಮುಖರು, ಕೊಡವ ಪರಂಪರೆ ಮತ್ತು ಕೊಡವರ ಸ್ಥಿತಿ ಸ್ಥಾಪಕತ್ವವನ್ನು ಗೌರವಿಸಿದರು. ಈ ಸಂದರ್ಭ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಮನುಷ್ಯ ಯಾವುದೇ ಕಷ್ಟ ಅಥವಾ ಸು:ಖದಲ್ಲಿದ್ದಾಗ ತನ್ನ ಮಾತೃಭಾಷೆಯ ಮೂಲಕವೇ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ಹತ್ಯಾಕಾಂಡಕ್ಕೆ ಗುರಿಯಾದ ಹಿರಿಯ ಕೊಡವ ಜೀವಗಳು ಕೊಡವ ಮಾತೃಭಾಷೆಯ ಮೂಲಕವೇ ತಮ್ಮ ನೋವು ಮತ್ತು ರೋಧನವನ್ನು ಹೊರ ಹಾಕಿ ಪ್ರಾಣ ಬಿಟ್ಟಿದ್ದಾರೆ. ಈ ಜೀವಗಳಿಗೆ ಅಂತರ ರಾಷ್ಟ್ರೀಯ ಮಾತೃಭಾಷಾ ದಿನದಂದು ಗೌರವ ಅರ್ಪಿಸುವುದು ಪ್ರತಿಯೊಬ್ಬ ಕೊಡವರ ಕರ್ತವ್ಯವಾಗಿರುವುದರಿಂದ ಸಿಎನ್‍ಸಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ಪ್ರಮುಖರಾದ ಬೊಪ್ಪಂಡ…
ಮಡಿಕೇರಿ ಫೆ.27 NEWS DESK : ಮೂರ್ನಾಡುವಿನ ಟೀಂ ಹೈ-ಲೋನಾ ವತಿಯಿಂದ ನಡೆದ ಮೂರ್ನಾಡು ಚಾಂಪಿಯನ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2 ನಲ್ಲಿ ಶುಶಾಂತ್ ಫ್ರೆಂಡ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಎಫ್ರೋನ್ ತಂಡ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮೂರ್ನಾಡುವಿನ ಶ್ರೀಲಾಲು ಮುದ್ದಯ್ಯ ಮೈದಾನದಲ್ಲಿ ಟೀಂ ಹೈ-ಲೋನಾ ಸಂಘಟನೆಯ ನಾಯಕರಾದ ಪಿ.ಎಸ್.ಇಸ್ಮಾಯಿಲ್ ಹಾಗೂ ರಂಜಿತ್ ಕುಮಾರ್ ನೇತೃತ್ವದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಗ್ರಾಮದ ಹನ್ನೆರಡು ಯುವ ಕ್ರಿಕೆಟ್ ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೂರ್ನಾಡು ಶ್ರೀಅನ್ನಪೂರ್ಣೇಶ್ವರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ.ಮಹಾಬಲೇಶ್ವರ್ ಭಟ್, ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಆದ್ದರಿಂದ ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಅಗತ್ಯವಿದೆ ಎಂದರು. ಯುವಕ, ಯುವತಿಯರು ದುಶ್ಚಟಗಳಿಗೆ ಬಲಿಯಾಗಿ, ಕಾಲಹರಣ ಮಾಡುವುದನ್ನು ಬಿಟ್ಟು ಬಿಡುವಿನ ಸಮಯದಲ್ಲಿ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು…
ಚೆಯ್ಯಂಡಾಣೆ, ಫೆ.27 NEWS DESK : ಈ ನೆಲದಲ್ಲಿ ಹುಟ್ಟಿದ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆ ಸಾಮರಸ್ಯದಿಂದ ಬದುಕಬೇಕು ಎಂದು ಮಡಿಕೇರಿ ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್ ಹೇಳಿದರು. ಕುಂಜಿಲ ಪೈನರಿ ದರ್ಗಾದಲ್ಲಿ ನಡೆದ ವಾರ್ಷಿಕ ಉರೂಸ್ ಸೌಹಾರ್ದ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಪವಾಡ ಪುರುಷರು ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಸ್ಥಳ ಜಾತಿ, ಧರ್ಮ, ಭೇದವಿಲ್ಲದೆ ಎಲ್ಲರೂ ಕೂಡ ನೆಮ್ಮದಿ ಮನಶಾಂತಿ ಪಡೆದುಕೊಳ್ಳುವ ಸ್ಥಳವಾಗಿದೆ. ನಮ್ಮ ಪೂರ್ವಜರು, ಇತಿಹಾಸ ಪುರುಷರು ಕೂಡ ಇದೇ ಸಂದೇಶವನ್ನು ನೀಡಿದ್ದಾರೆ. ಅಲ್ಲದೇ ಮಸೀದಿ ನಿರ್ಮಾಣಕ್ಕೆ ಅಂಜಪ್ಪರವಂಡ ಕುಟುಂಬಸ್ಥರು ದೇಣಿಗೆ ನೀಡುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದ್ದಾರೆ ಎಂದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬೊಳಿಯಾಡಿರ ಸಂತು ಸುಬ್ರಮಣಿ ಮಾತನಾಡಿ, ಕಳೆದ 20 ವರ್ಷಗಳಿಂದ ಜಾತಿ, ಮತ, ಭೇದವಿಲ್ಲದೆ ಎಲ್ಲರಲ್ಲೂ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದೇವೆ. ಇಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮವು ವೈಶಿಷ್ಟ್ಯತೆಯನ್ನು ಹೊಂದಿದ್ದು, ಎಲ್ಲರೂ ಪರಸ್ಪರ ಪಕ್ಷ ಭೇದ, ಜಾತಿ, ಧರ್ಮ ಮರೆತು…
ಮಡಿಕೇರಿ ಫೆ.27 NEWS DESK : ಇದೇ ಮಾ.3 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಸಿದ್ಧತೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವಂತೆ ನಿರ್ದೇಶನ ನೀಡಿದರು. 5 ವರ್ಷದೊಳಗಿನ ಮಕ್ಕಳು ಯಾರೂ ಬಿಟ್ಟು ಹೋಗದಂತೆ ಗಮನಹರಿಸಬೇಕು. ಅಂಗನವಾಡಿ, ಶಾಲೆಗಳು, ಪ್ರವಾಸಿ ಸ್ಥಳಗಳು, ಗಡಿ ಪ್ರದೇಶಗಳು ಇತರೆ ಎಲ್ಲೆಡೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವಂತೆ ನಿರ್ದೇಶನ ನೀಡಿದರು. ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದು, 4,334 ನಗರ ಪ್ರದೇಶದ ಮಕ್ಕಳು ಹಾಗೂ 32,261 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ…






