ಲೇಖಕ: admin

ಮಡಿಕೇರಿ ಫೆ.25 NEWS DESK : ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯ ಬಳಿ ‘ಮಡಿಕಟ್ಟೆ’ ನಿರ್ಮಿಸುವ ಸಂಬಂಧ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ನಗರಸಭಾ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ತಿಳಿಸಿದ್ದಾರೆ. ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳರ ಅಭಿವೃದ್ಧಿ ಸಂಘ ಇವರ ಸಹಕಾರದಲ್ಲಿ ಭಾನುವಾರ ನಡೆದ ಮಡಿವಾಳರ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಡಿವಾಳ ಸಮಾಜದವರು ಕಾಯಕವೇ ಕೈಲಾಸ ಎಂಬಂತೆ ಕಾಯಕ ವೃತ್ತಿ ಮೂಲಕ ಸಮಾಜದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ ಎಂದು ತಿಳಿಸಿದರು. ಮಡಿವಾಳ ಸಮಾಜದವರು ಮಡಿವಾಳರ ಸಂದೇಶಗಳನ್ನು ತಿಳಿದುಕೊಂಡು, ಅವರ ಆದರ್ಶ, ತತ್ವಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು. ಮಹಿಳೆಯರು, ವೃತ್ತಿನಿರತ ಶ್ರಮಜೀವಿಗಳು, ಬಡವರು ಅಭಿವೃದ್ಧಿ ಹೊಂದಬೇಕು. ಎಲ್ಲರಿಗೂ ಸಮಬಾಳು-ಸಮಪಾಲು ಎಂಬ ಶರಣರ ಸಂದೇಶವನ್ನು ಸಮಾಜದಲ್ಲಿ ಹೇಳಿದವರಲ್ಲಿ ಮಡಿವಾಳ ಮಾಚಿದೇವ ಅವರು ಒಬ್ಬರು ಎಂದು…

Read More

ಮಡಿಕೇರಿ ಫೆ.25 NEWS DESK : ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಕೆಲವು ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು, ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ಪೊನ್ನಂಪೇಟೆ ಅರಣ್ಯ ಕಾಲೇಜಿಗೆ ಭೇಟಿ ನೀಡಿದ ಅವರು ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸಿದರು. ಬಳಿಕ ಮಾತನಾಡಿದ ಎ.ಎಸ್.ಪೊನ್ನಣ್ಣ, ಆಡಳಿತ ಮತ್ತು ಬದಲಾವಣೆ ಸಮಿತಿ ಅಧ್ಯಕ್ಷರಾಗಿದ್ದ ವಿಜಯ್ ಭಾಸ್ಕರ್ ಅವರು ಅರಣ್ಯ ಇಲಾಖೆ ನೇಮಕಾತಿಗೆ ಸಂಬAಧಿಸಿದAತೆ ಕೆಲವು ತಿದ್ದುಪಡಿಗಳನ್ನು ಸೂಚಿಸಿ ವರದಿ ನೀಡಿದ್ದಾರೆ. ಈ ವರದಿಯನ್ನು ಸರಕಾರ ಅಂಗೀಕರಿಸದAತೆ ಅರಣ್ಯ ಕಾಲೇಜು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದರಿಂದ ಅವರ ಸೇವಾ ಸೌಲಭ್ಯ ಹಾಗೂ ಅವಕಾಶಗಳಿಂದ ವಂಚಿತರಾಗುತ್ತಾರೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯ ಶಾಸ್ತ್ರವನ್ನು ಅಧ್ಯಯನ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದಾರೆ ಎಂದು…

Read More

ಮಡಿಕೇರಿ ಫೆ.24 NEWS DESK : ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿತ್ತು. ಈ ಸಮಸ್ಯೆಯನ್ನು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಿದರು. ಸರ್ವೆ ನಂ 74 ರಲ್ಲಿ ಭಾಗಮಂಡಲ ಗ್ರಾಮ ಪಂಚಾಯತಿ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿದ್ದು ಪಕ್ಕದ ಸರ್ವೆ ನಂ ಜಾಗ ದೇವರಕಾಡು ಅರಣ್ಯಕ್ಕೆ ಸೇರಿದ್ದಾಗಿರುತ್ತದೆ. ಸದರಿ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನೀರಿನ ಪಂಪ್, ಮೋಟಾರ್ ಹಾಗೂ ಪೈಪ್’ಗಳನ್ನು ವಶಪಡಿಸಿಕೊಂಡಿತ್ತು. ಜೊತೆಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೆ ರಸ್ತೆ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ರಸ್ತೆ ಮಾಡಿದ್ದಾರೆ ಎಂದು ಕೇಸ್ ದಾಖಲಿಸಿದ್ದರು. ಇಂದು ಭಾಗಮಂಡಲದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲು  ಎ.ಎಸ್.ಪೊನ್ನಣ್ಣ ಅವರು ಆಗಮಿಸಿದಾಗ ಭಾಗಮಂಡಲ  ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು…

Read More

ಮಡಿಕೇರಿ ಫೆ.24 NEWS DESK : ಶ್ರೀ ರಾಮ ತನ್ನ ಜೀವನದುದ್ದಕ್ಕೂ ಪ್ರತಿಪಾದಿಸುತ್ತಾ ಅನುಸರಿಸುತ್ತಿದ್ದ ಆದಶ೯ ಮತ್ತು ಪ್ರೀತಿಯ ಅಂಶಗಳೇ ಅವನನ್ನು ಭಾರತ ಮಾತ್ರವಲ್ಲ, ವಿಶ್ವದಾದ್ಯಂತ ಅನೇಕ ದೇಶಗಳು ಆರಾಧಿಸಲು ಕಾರಣವಾಗಿದೆ. ಶ್ರೀರಾಮನನ್ನು ಮನಸ್ಸಿಗೆ ಹಚ್ಚಿಕೊಂಡಲ್ಲಿ ಆತನಲ್ಲಿದ್ದ ಮಾನವ ಗುಣದ ಅನೇಕ ಋಣಾತ್ಮಕತೆಗಳ ಬಗ್ಗೆ ಪ್ರಶ್ನೆ ಮೂಡಬಹುದು. ಆದರೆ ಶ್ರೀರಾಮನನ್ನು ಹೃದಯದಲ್ಲಿ ಇರಿಸಿಕೊಂಡಾಗ ಮಾತ್ರ ಆತನ ಉತ್ತಮ ಗುಣಗಳನ್ನು ಜೀವನದಲ್ಲಿ ಅನುಸರಿಸಲು ಸಾಧ್ಯವಾಗುತ್ತದೆ ಎಂದು ಖ್ಯಾತ ಸಾಹಿತಿ ಡಾ.ಗಜಾನನ ಶಮ೯ ಪ್ರತಿಪಾದಿಸಿದ್ದಾರೆ. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಪತ್ರಕತ೯ ಅನಿಲ್ ಹೆಚ್.ಟಿ. ಬರೆದ ‘ಅಯೋಧ್ಯೆ ಶ್ರೀರಾಮನ ಮಂದಿರ, ಇದು ಪ್ರೀತಿಯ ಮಂದಿರ, ರಾಷ್ಟ್ರಮಂದಿರ’ ಪುಸ್ತಕವನ್ನು ಬಿಡುಗಡೆ ಮಾಡಿ ಗಜಾನನ ಶರ್ಮ ಮಾತನಾಡಿದರು. ಎಂತಹ ಕಷ್ಟವನ್ನಾದರೂ ನಗುಮೊಗದಿಂದಲೇ ಸ್ವೀಕರಿಸಬೇಕು ಎಂಬ ಗುಣವನ್ನು ಕಲಿಸಿಕೊಟ್ಟವನು ರಘುರಾಮ. ಜಗದೇಕ ಸುಂದರಿಯಾಗಿ ಬಂದ ಶೂರ್ಪನಖಿ ಹಾಗೂ ಲಂಕೆಯ ಸಿಂಹಾಸನದ ಸೆಳೆತಗಳಿಗೆ ಕೂಡ ಶ್ರೀರಾಮ ಒಳಗಾಗಲಿಲ್ಲ. ಅಶ್ವಮೇಧ ಯಾಗ ಮಾಡುವಾಗ ಎಲ್ಲರೂ ಮತ್ತೊಂದು ಮದುವೆಯಾಗು…

Read More

ಮಡಿಕೇರಿ ಫೆ.24 NEWS DESK :  ಕಮಿಷನ್ ದಂಧೆ ನಡೆಸುತ್ತಿದ್ದ ಬಿಜೆಪಿ ಸರ್ಕಾರವನ್ನು ಜನ ಮನೆಗೆ ಕಳುಹಿಸಿದ್ದಾರೆ. ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಪಾರದರ್ಶಕ ಆಡಳಿತ ನೀಡುತ್ತಿದ್ದು, ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಿದ ಕಾರಣಕ್ಕಾಗಿ ನಮ್ಮ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಮಂದಿ ಪ್ರತಿಭಟನೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿರುಗೇಟು ನೀಡಿದ್ದಾರೆ. ಸುಮಾರು ರೂ.15 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ನಿರ್ಮಾಣಗೊಂಡಿರುವ ಗೋಣಿಕೊಪ್ಪಲು- ಅರುವತ್ತೊಕ್ಕಲು ಸಂಪರ್ಕ ಸೇತುವೆಯನ್ನು ಉದ್ಘಾಟಿಸಿದ ನಂತರ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿದರು. ಹುದಿಕೇರಿ ಸಹಕಾರ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ನನ್ನ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿರುವುದು ನನ್ನ ಗಮನಕ್ಕೆ ಬಂದಿದೆ. ಅವ್ಯವಹಾರದ ಬಗ್ಗೆ ಪ್ರಶ್ನಿಸುವುದು ತಪ್ಪೇ ಎಂದು ಪ್ರಶ್ನಿಸಿದ ಪೊನ್ನಣ್ಣ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದರೆ ಪ್ರತಿಭಟನೆ ನಡೆಸುತ್ತಾರೆ, ಪಾರದರ್ಶಕ ತನಿಖೆಯಿಂದ ಸತ್ಯಾಂಶ ಹೊರಬೀಳಲಿದೆ ಎಂದರು. ಬಿಜೆಪಿ ಪರ ಮತ ಚಲಾಯಿಸಿದ್ದವರು ಇಂದು ಕಾಂಗ್ರೆಸ್ ಸರ್ಕಾರದ ಪಾರದರ್ಶಕ…

Read More

ಮಡಿಕೇರಿ ಫೆ.24 NEWS DESK :  ನಗರದ ತನಲ್ ಆಶ್ರಮಕ್ಕೆ ರೋಟರಿ ಮಡಿಕೇರಿ ವುಡ್ಸ್ ನಿಂದ ಗಾಲಿ ಕುರ್ಚಿಯನ್ನು ಕೊಡುಗೆಯಾಗಿ ನೀಡಲಾಯಿತು. ತನಾಲ್ ಆಶ್ರಮದಲ್ಲಿ ನಡೆದ ಸರಳ ಸಮಾರಂಭದಲ್ಲಿ ರೋಟರಿ ಮಡಿಕೇರಿ ವುಡ್ಸ್‍ನ ಪ್ರಮುಖರು ಗಾಲಿ ಕುರ್ಚಿಯನ್ನು ಹಸ್ತಾಂತರಿಸಿದರು. ಈ ಸಂದರ್ಭ ವುಡ್ಸ್ ಅಧ್ಯಕ್ಷ ರೊ.ವಸಂತ್ ಕುಮಾರ್ ಮಾತನಾಡಿ, ರೋಟರಿಯ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾವಿಸಿದರು. ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರಿನ ಯೋಜನೆ, ಪರಿಸರ ಸಂರಕ್ಷಣೆ ಮುಂತಾದ ಹಲವಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದು, ಮಾನವ ಸೇವೆಯೇ ಮಾಧವ ಸೇವೆ ಎಂಬಂತೆ ಆಶ್ರಮದಲ್ಲಿ ಮಾನವೀಯತೆ ಜೊತೆಗೆ ನೊಂದವರಿಗೆ ಆಸರೆಯಾಗಿ ನಿರಂತರ ಸೇವೆಯನ್ನು ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಸಲಹೆಗಾರ ರೊ. ಅನಂತ ಶಯನ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ನೊಂದವರಿಗೆ ಬೆಳಕಾಗಿ ಸೇವೆ ನೀಡುತ್ತಿರುವ ತನಾಲ್ ಆಶ್ರಮದ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ರೋಟರಿ ಉಪ ರಾಜ್ಯಪಾಲ ರೊ.ದೇವಣಿರ ತಿಲಕ್ ಮಾತನಾಡಿ, “ನೊಂದವರ ಬಾಳಿಗೆ ಆಸರೆಯಾಗುವದರ ಮೂಲಕ, ಅವರ ಜೀವನದಲ್ಲಿ ಭರವಸೆಯನ್ನು ಮೂಡಿಸುವ…

Read More

ಮಡಿಕೇರಿ ಫೆ.24 NEWS DESK : ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಕೋಕೇರಿ-ಕೊಳಕೇರಿ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ತಕ್ಷಣ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿರುವ ಗ್ರಾಮಸ್ಥರು, ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಕೇರಿ ಗ್ರಾಮಸ್ಥ ಗಿರೀಶ್ ಪೂಣಚ್ಚ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಡೆದಾಡುವುದೇ ಕಷ್ಟವಾಗಿದೆ, ವಾಹನಗಳ ಸಂಚಾರ ಅಸಾಧ್ಯವಾಗಿದೆ. ಆಡಳಿತ ವ್ಯವಸ್ಥೆಯ ಗಮನಕ್ಕೆ ತಂದಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಆದ್ದರಿಂದ ಮಾ.11 ರಂದು ಕೊಳಕೇರಿ-ಕಕ್ಕಬ್ಬೆವರೆಗೆ `ರಸ್ತೆ ತಡೆ’ ಪ್ರತಿಭಟನೆ ನಡೆಸಲಾಗುವುದು ಎಂದರು. ನಾಪೋಕ್ಲು  ಸಂಪರ್ಕ ರಸ್ತೆಯಾಗಿರುವ ಕೋಕೇರಿ-ಕೊಳಕೇರಿ ರಸ್ತೆಯು ಸುಮಾರು 5 ಕಿ.ಮೀ ಸಂಪೂರ್ಣ ಹದಗೆಟ್ಟಿದ್ದು, ಕಳೆದ 20 ವರ್ಷಗಳಿಂದ ಅಭಿವೃದ್ಧಿಯನ್ನೇ ಕಂಡಿಲ್ಲ. ಈ ರಸ್ತೆ ಕೋಕೇರಿ, ಕೊಳಕೇರಿ, ಬಾವಲಿ, ಕಿರುಂದಾಡು, ನರಿಯಂದಡ ಗ್ರಾಮ ಮತ್ತು ವಿರಾಜಪೇಟೆ ಸಂಪರ್ಕ ರಸ್ತೆಯಾಗಿದೆ. ಪ್ರತಿನಿತ್ಯ ಶಾಲಾ ವಾಹನಗಳು ಹಾಗೂ ಖಾಸಗಿ ವಾಹನಗಳು ಸಂಚರಿಸುತ್ತಿದ್ದು, ಪಾದಾಚಾರಿಗಳು ಕೂಡ ನಡೆದಾಡಲು ಸಾಧ್ಯವಾಗದ…

Read More

ಗೋಣಿಕೊಪ್ಪ ಫೆ.24 NEWS DESK : ಪೊನ್ನಂಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ 8ನೇ ವಾರ್ಷಿಕ ಮಹಾಸಭೆಯು ಶಾಲೆಯ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮೂಕಳೇರ ಕುಶಾಲಪ್ಪ, ಶಾಲೆಯ ಭಾವನಾತ್ಮಕ ಸಂಬಂಧದ ಬೇಸಿಗೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಚಿಂತನೆಯನ್ನು ಹಳೆಯ ವಿದ್ಯಾರ್ಥಿಗಳ ಸಂಘ ಹೊಂದಿದೆ ಎಂದರು. ಶತಮಾನೋತ್ಸವದ ಹಿನ್ನೆಲೆ ಶಾಲೆಗೆ ಪೂರಕವಾದ ತೆರೆದ ಸಭಾಂಗಣವನ್ನು ನಿರ್ವಹಿಸಿಕೊಡಲಾಗಿದೆ. ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು. ಹಳೆಯ ವಿದ್ಯಾರ್ಥಿಗಳ ಸಂಘ ಸುಮಾರು 300ಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದ್ದು, ಸಂಪೂರ್ಣವಾಗಿ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ ಎಂದು ಮೂಕಳೇರ ಕುಶಾಲಪ್ಪ ಹೇಳಿದರು. ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಸದಸ್ಯತ್ವವನ್ನು ಪಡೆಯುವ ಮೂಲಕ ಶಾಲಾ ಅಭಿವೃದ್ಧಿಗೆ, ಶಿಕ್ಷಣದ ವ್ಯವಸ್ಥೆಗೆ ಮಹತ್ವದ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭ ಕೋಳೆರ ಗೋಕುಲ್ ಸ್ಥಾಪಿಸಿದ ದತ್ತಿ ನಿಧಿಯನ್ನು ಹೆಚ್.ಕೆ.ಪ್ರಭು ಹಾಗೂ ಮಂಜುಳಾ ದಂಪತಿಗಳ ಪುತ್ರಿ…

Read More

ಮಡಿಕೇರಿ ಫೆ.24 NEWS DESK : ಒಂದು ತಿಂಗಳ ಕಾಲ ನಡೆದ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಅನುಷ್ಠಾನಕ್ಕಾಗಿ ಕೊಡಗು ಜಿಲ್ಲೆಗೆ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ಇಂದು ನಡೆದ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೊಡಗು  ಜಿ.ಪಂ.ಸಿಇಒ ವರ್ಣಿತ್ ನೇಗಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್ ಪ್ರಶಸ್ತಿ ಪತ್ರ ಸ್ವೀಕರಿಸಿದರು.

Read More

ಹುಣುಸೂರು ಫೆ.24 NEWS DESK : ಇತ್ತೀಚೆಗೆ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಹುಣಸೂರು ತಾಲ್ಲೂಕಿನ ರತ್ನಪುರಿ ಬಳಿಯ ದಾಸನಪುರದ ನಿವಾಸಿ ವಿದ್ಯಾರ್ಥಿ ಮುತ್ತುರಾಜ್ ಅವರ ಮನೆಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದರು. ಮುತ್ತುರಾಜ್ ಅವರ ತಂದೆ  ರವಿಕುಮಾರ್ ಹಾಗೂ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಸಾಂತ್ವನ ಹೇಳಿದರು. ಸೂಕ್ತ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು. ಕಾಲೇಜು ವಿದ್ಯಾರ್ಥಿ ಮುತ್ತುರಾಜ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿತ್ತು. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.

Read More