ಮಡಿಕೇರಿ ಮಾ.30 NEWS DESK : ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ 24ನೇ ವರ್ಷದ ಕೊಡವ ಕೌಟುಂಬಿಕ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಸ್ಟಿಕ್ ಹಿಡಿದು ಆಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು. ಮೂಲತಃ ರಾಜಸ್ಥಾನ ರಾಜ್ಯದವರಾದ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಅವರು, ಕುಂಡ್ಯೋಳಂಡ ಹಾಕಿ ಪಂದ್ಯಾಟದ ಪ್ರದರ್ಶನ ಪಂದ್ಯದಲ್ಲಿ ‘ಕೂರ್ಗ್ ಇಲವೆನ್’ ತಂಡವನ್ನು ಪ್ರತಿನಿಧಿಸಿ ‘ಫಾರ್ವಡ್’ ಆಟಗಾರರಾಗಿ ತಮ್ಮ ಕ್ರೀಡಾ ಸ್ಪೂರ್ತಿ ಪ್ರದರ್ಶಿಸಿದರು. ಕುಂಡ್ಯೋಳಂಡ ಹಾಕಿ ಪಂದ್ಯಾವಳಿಯ ಪ್ರದರ್ಶನ ಪಂದ್ಯದಲ್ಲಿ ಮೊದಲಾರ್ಧದವರೆಗೂ ಮೈದಾನದಲ್ಲಿ ಉಳಿದಿದ್ದ ಜಿಲ್ಲಾಧಿಕಾರಿ ವೆಂಕಟರಾಜ ಅವರು 3 ಬಾರಿ ಗೋಲ್ ಬಾರಿಸುವ ಪ್ರಯತ್ನವನ್ನೂ ನಡೆಸುವ ಮೂಲಕ ಕ್ರೀಡಾ ಸಾಮರ್ಥ್ಯ ತೋರಿದರು. ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಟಿಕ್ ಹಿಡಿದು ಮೈದಾನಕ್ಕೆ ಇಳಿದದ್ದು, ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಕಳೆದ 24 ವರ್ಷಗಳಿಂದ ಕೊಡಗಿನ ವಿವಿಧ ಕಡೆಗಳಲ್ಲಿ ಕೊಡವ ಕುಟುಂಬಗಳ ನಡುವೆ ಕೌಟುಂಬಿಕ ಹಾಕಿ ಪಂದ್ಯಾವಳಿಗಳು ನಡೆಯುತ್ತಿದೆ. ಪ್ರತಿ ವರ್ಷವೂ ಒಂದೊಂದು ಕುಟುಂಬಗಳು ಪಂದ್ಯಾವಳಿಗಳನ್ನೂ ಆಯೋಜಿಸುತ್ತವೆ. ಆದರೆ…
ಲೇಖಕ: admin
ಮಡಿಕೇರಿ ಮಾ.30 NEWS DESK : ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5 ನೇ ಸುತ್ತಿನಲ್ಲಿ ಏ.1 ರಿಂದ 30 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ತಿಳಿಸಿದ್ದಾರೆ. ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ ಎಂದರು. ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ ಎಂದು ಮಾಹಿತಿ ನೀಡಿದರು. ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ.…
ಮಡಿಕೇರಿ ಮಾ.30 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಆ ನಿಟ್ಟಿನಲ್ಲಿ ಈಗಾಗಲೇ ರಂಗೋಲಿ ಸ್ಪರ್ಧೆ ಆರಂಭವಾಗಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಪೂರ್ಣಗೊಂಡಿದೆ. ಹಲವು ಯುವಜನರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿದ್ದಾರೆ. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗಿದೆ. ಸೋಮವಾರಪೇಟೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ರಂಗೋಲಿ ಸ್ಪರ್ಧೆ ನಡೆದಿದೆ. ಇದೇ ಏ.26 ರಂದು ನಡೆಯುವ ಮತದಾನದಂದು 18 ವರ್ಷ ಪೂರ್ಣಗೊಂಡವರೆಲ್ಲರೂ ಮತಹಕ್ಕು ಚಲಾಯಿಸಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಮನೆಯಿಂದ ಮತಗಟ್ಟೆಗೆ ಬನ್ನಿ, ತಮ್ಮ ಹಕ್ಕು ಚಲಾಯಿಸಿ, ತಪ್ಪದೇ ಮತದಾನ ಮಾಡಿ ಎಂಬ ಘೋಷ ವಾಕ್ಯಗಳು ರಂಗೋಲಿ ಸ್ಪರ್ಧೆಯಲ್ಲಿ ಕಂಡುಬಂದವು. ಮಾ.31 ರಂದು ಕಾರು ರ್ಯಾಲಿ: ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟರಿಯನ್ ಕೆ.ವಿಶ್ವನಾಥ…
ಮಡಿಕೇರಿ ಮಾ.30 NEWS DESK : ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮ ದಿನಾಚರಣೆಯು ಮಾ.31 ರಂದು ಬೆಳಗ್ಗೆ 10.30 ಗಂಟೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮಾ.30 NEWS DESK : ಪ್ರತಿ ಚುನಾವಣೆ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ನಕ್ಸಲರು ಕಾಣಿಸಿಕೊಳ್ಳುತ್ತಿದ್ದು, ಇದು ರಾಷ್ಟ್ರೀಯ ಆಂತರಿಕ ಭದ್ರತೆ ಮತ್ತು ಸಾರ್ವಭೌಮತೆಗೆ ಬೆದರಿಕೆಯಾಗಿದೆ. ನಕ್ಸಲರ ಉಪಟಳವನ್ನು ಚಿಗುರಿನಲ್ಲೇ ಚಿವುಟಿ ಹಾಕಬೇಕು ಮತ್ತು ನಕ್ಸಲ್ ಸಮಸ್ಯೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಕೊಡಗು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆಯ ಬೆಳವಣಿಗೆಯ ಕುರಿತು ವಿವರಿಸಿದ್ದಾರೆ. ನಕ್ಸಲಿಸಂ ಮನಸ್ಸು ಮೂಲತಃ 1800 ರಲ್ಲಿ ದೇವಟ್‌ಪರಂಬ ಕೊಡವ ನರಮೇಧದ ಫಲಾನುಭವಿಗಳಿಂದ ಮೊಳಕೆಯೊಡೆಯಿತು. ಇದನ್ನು 1834 ರಿಂದ 1837 ರ ನಡುವೆ ಸ್ಥಳೀಯ ಕೊಡವ ಯೋಧರು ಪರಿಣಾಮಕಾರಿಯಾಗಿ ನಿಗ್ರಹಿಸಿದರು. ಆ ಮೂಲಕ ಕೊಡವರ ತಾಯ್ನಾಡನ್ನು ರಕ್ಷಿಸಿದರು ಮತ್ತು ನಮ್ಮ ಸ್ವ-ನಿರ್ಣಯದ ಹಕ್ಕುಗಳನ್ನು ಬಲವಾಗಿ ನಿರ್ಧರಿಸಿದರು. ಆದರೆ 1956 ರಲ್ಲಿ ಕೂರ್ಗ್ ರಾಜ್ಯವನ್ನು ವಿಶಾಲ ಮೈಸೂರಿನೊಂದಿಗೆ ವಿಲೀನಗೊಳಿಸಿದ ನಂತರ ರಾಜ್ಯ ಮರುಸಂಘಟನೆ ಕಾಯಿದೆ ಜಾರಿಗೆ ಬಂದಾಗ ಮತ್ತೆ ನಕ್ಸಲ್…
ಸೋಮವಾರಪೇಟೆ ಮಾ.30 NEWS DESK : ಲೋಕಸಭಾ ಚನಾವಣೆಯ ಹಿನ್ನಲೆಯಲ್ಲಿ ಸೋಮವಾರಪೇಟೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು. ಪಟ್ಟಣದ ಖಾಸಗಿ, ಕೆ.ಎಸ್.ಆರ್.ಸಿ.ಮತ್ತು ಪಟ್ಟಣ ಪಂಚಾಯಿತಿ ಆವರಣದಲ್ಲಿ ರಂಗೋಲಿ ಸ್ಪರ್ಧೆ ನಡೆಸುವ ಮೂಲಕ ಜಾಗೃತಿ ಮೂಡಿಸಲಾಯಿತು. ಇಲ್ಲಿನ ಪಟ್ಟಣ ಪಂಚಾಯ್ತಿ ವತಿಯಿಂದ ಭಾರತ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕದಲ್ಲಿ ನಡೆಯಲಿರುವ ಲೋಕಸಭಾ ಉಪಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಹಾಗೂ ಮತಗಟ್ಟೆಗೆ ಬಂದು ಮತ ಚಲಾಯಿಸಲು ಆಸಕ್ತಿ ಮೂಡಿಸುವ ಸಲುವಾಗಿ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ ನಡೆಸಲಾಯಿತು. ಸ್ಪರ್ದೆಯಲ್ಲಿ ಸಾಕಷ್ಟು ಮಹಿಳೆಯರು ಆಸಕ್ತಿಯಿಂದ ಭಾಗವಹಿಸಿ ಚುನಾವಣೆ ಸಂಬಂದಿಸಿದ ರಂಗೋಲಿ ಹಾಗೂ ಘೋಷವಾಕ್ಯಗಳನ್ನು ಬರೆದರು. ಈ ಸಂದರ್ಭ ಪ.ಪಂ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್ ನವೀನ್ ಕುಮಾರ್, ಮುಖ್ಯಧಿಕಾರಿ ಲೋಕ್ಯ ನಾಯಕ್, ಆರೋಗ್ಯ ನಿರೀಕ್ಷಕ ಜಾಸಿಂಖಾನ್, ಸಿಬ್ಬಂದಿಗಳಾದ ರೂಪ, ವನಿತಾ, ಹೊನಲಾ ದೇವಿ, ಆದಿಲ್ಪಾಶಾ ಹಾಗೂ ಮುಂತಾದವರು ಹಾಜರಿದ್ದರು.
ಕುಶಾಲನಗರ ಮಾ.30 : ಕುಶಾಲನಗರ ಟೈಕೂನ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಉಚಿತ ಹಾಕಿ ತರಬೇತಿ ಶಿಬಿರ ಏ.7 ರಿಂದ ಆರಂಭಗೊಳ್ಳಲಿದೆ ಎಂದು ಕ್ಲಬ್ ಕಾರ್ಯದರ್ಶಿ ಬಿ.ಟಿ.ಪೂರ್ಣೇಶ್ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಹತ್ತು ವರ್ಷಗಳಿಂದ ಶಿಬಿರ ನಡೆಯುತ್ತಿದ್ದು, ಈ ಮೂಲಕ ತರಬೇತು ಪಡೆದ ವಿದ್ಯಾರ್ಥಿಗಳು ಕ್ರೀಡಾ ಶಾಲೆಗಳಿಗೆ ನೇಮಕಗೊಳ್ಳುತ್ತಿದ್ದಾರೆ. ಶಿಬಿರದಲ್ಲಿ ಹಾಕಿ, ಅಥ್ಲೆಟಿಕ್ಸ್ ಮತ್ತು ಈಜು ಬಗ್ಗೆ ತರಬೇತಿ ನೀಡಲಾಗುತ್ತದೆ. ನುರಿತ ತರಬೇತುದಾರರ ಮೂಲಕ ಹದಿನೈದು ದಿನಗಳ ಕಾಲ ಶಿಬಿರ ನಡೆಯಲಿದೆ ಎಂದು ತಿಳಿಸಿದ್ದಾರೆ. ಎಂಟು ವರ್ಷದಿಂದ ಮೇಲ್ಪಟ್ಟವರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಶಿಬಿರ ನಡೆಯಲಿದೆ. ಬೆಳಗ್ಗೆ 6:30 ರಿಂದ 8 ಗಂಟೆ ತನಕ ಹಾಕಿ ನಂತರ ಅಥ್ಲೆಟಿಕ್ಸ್ ತರಬೇತಿ ನೀಡಲಾಗುವುದು. ಈಜು ತರಬೇತಿಗೆ ಮಾತ್ರ ಖಾಸಗಿ ಈಜುಕೊಳ ಸೌಲಭ್ಯ ಹೊಂದಬೇಕಾದ ಕಾರಣ ಶಿಬಿರಾರ್ಥಿಗಳಿಗೆ ಕನಿಷ್ಠ ಶುಲ್ಕ ವಿಧಿಸಲಾಗುತ್ತದೆ ಎಂದರು. ಕ್ರೀಡೆ ಮೂಲಕ ಮಕ್ಕಳ ದೈಹಿಕ…
ಮಡಿಕೇರಿ ಮಾ.30 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪ್ರಸಕ್ತ ಸಾಲಿನ ಮೇ 1 ರಿಂದ 15 ರವರೆಗೆ ನಗರದ ಜಿಲ್ಲಾ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ ಲೆದರ್ ಬಾಲ್ ಪಂದ್ಯಾವಳಿ ನಡೆಯಲಿದೆಯೆಂದು ಫೌಂಡೇಶನ್‍ನ ಮುಖ್ಯ ಸಂಚಾಲಕ ಪೊರ್ಕೊಂಡ ಸುನಿಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಪಂದ್ಯಾವಳಿ ಟಿ-20 ಮಾದರಿಯಲ್ಲಿ ನಡೆಯಲಿದ್ದು, ಹತ್ತು ಫ್ರಾಂಚೈಸಿ ತಂಡಗಳು ಪಾಲ್ಗೊಳ್ಳಲಿವೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಈಗಾಗಲೆ ಸುಮಾರು 200 ಕ್ರಿಕಟ್ ಪಟುಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಆಟಗಾರರ ಬಿಡ್ಡಿಂಗ್ ಏ.7ರಂದು ಗೋಣಿಕೊಪ್ಪಲಿನ ಅಶುರಾ ಕೂರ್ಗ್ ಸಭಾಂಗಣದಲ್ಲಿ ನಡೆಯಲಿದೆ ಎಂದರು. ಪಂದ್ಯಾವಳಿ ವಿಜೇತ ತಂಡಕ್ಕೆ 1.50 ಲಕ್ಷ ರೂ. ನಗದು ಮತ್ತು ಟ್ರೋಫಿ, ದ್ವಿತೀಯ 75 ಸಾವಿರ ರೂ. ನಗದು ಮತ್ತು ಟ್ರೋಫಿ, ತೃತೀಯ 25 ಸಾವಿರ ರೂ. ಮತ್ತು ಟ್ರೋಫಿ ಹಾಗೂ ನಾಲ್ಕನೇ ಸ್ಥಾನ ಪಡೆಯುವ ತಂಡಕ್ಕೆ ಟ್ರೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ. ಇದರೊಂದಿಗೆ…
ಮಡಿಕೇರಿ ಮಾ.30 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಇಂದು ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ಅವರು ಮೈಸೂರಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ:ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಡಿಕೇರಿ ಮಾ.30 NEWS DESK : ಲೋಕಸಭಾ ಚುನಾವಣೆಯ ಹಿನ್ನೆಲೆ ಮತದಾನ ನಡೆಯುವ ದಿನ ಸರಕಾರಿ ರಜೆಯನ್ನು ಘೋಷಿಸಲಾಗಿದೆ. ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಶುಕ್ರವಾರ ಮತ್ತು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮಂಗಳವಾರ ಚುನಾವಣೆ ನಡೆಯಲಿದೆ.






