ನಾಪೋಕ್ಲು ಫೆ.1 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಸಂವಿಧಾನ ಜಾಗೃತಿ ಜಾಥಾ ಹೊದ್ದೂರಿನಲ್ಲಿ ನಡೆಯಿತು. ಗ್ರಾಮದ ಯುವಕರ ಮುಂದಾಳತ್ವದ ಬೈಕ್ ಜಾಥಾ ಹಾಗೂ ಸಂಜೀವಿನಿ ಒಕ್ಕೂಟದದಿಂದ ಕಳಶದೊಂದಿಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಜಾಥಾಗೆ ಭವ್ಯ ಸ್ವಾಗತ ನೀಡಿದರು. ಗ್ರಾ.ಪಂ ಆವರಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶೈಲ ದೇಸಾಯಿ, ಗ್ರಾ.ಪಂ ಅಧ್ಯಕ್ಷ ಹಂಸ, ತಾಲ್ಲೂಕು ನೋಡಲ್ ಅಧಿಕಾರಿ ಹರ್ಷವರ್ಧನ್ ” ಸಂವಿಧಾನ” ಮಹತ್ವ ಕುರಿತು ಮಾತನಾಡಿದರು. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಅನುರಾಧ, ಸದಸ್ಯರಾದ ಮೊಣ್ಣಪ್ಪ, ಹಮೀದ್, ಕುಸುಮಾವತಿ, ಪಾರ್ವತಿ, ಟೈನಿ, ಕೆ.ಆರ್.ಅನಿತಾ, ಚೌರೀರ ಅನಿತಾ, ಲಕ್ಷ್ಮಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎ.ಎ.ಅಬ್ದುಲ್ಲ, ಸಂಜೀವಿನಿ ಒಕ್ಕೂಟದ ಸದಸ್ಯರು, ಶಾಲಾ ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತರು, ಗ್ರಾಮಸ್ಥರು ವಿಧ್ಯಾರ್ಥಿಗಳು ಭಾಗವಹಿಸಿದರು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ…
ಲೇಖಕ: admin
ಕೂಡಿಗೆ ಫೆ.1 : ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ .ಭಾಗ್ಯಮ್ಮ ಮಾತನಾಡಿ, ಈ ಸರ್ಕಾರಿ ಶಾಲೆಯ ಪ್ರಗತಿಗೆ ಪೋಷಕರು ಮತ್ತು ಸಮುದಾಯ ಹಾಗೂ ಹಳೇ ವಿದ್ಯಾರ್ಥಿಗಳು ಜತೆಗೂಡಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಅಭಿವೃದ್ಧಿಗೆ ಪ್ರೋತ್ಸಾಹ ಮತ್ತು ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು. ಈ ಶಾಲೆಯ ಮುಖ್ಯ ಶಿಕ್ಷಕರು ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಶಾಲಾ ಸ್ವಚ್ಛತೆ ಹಾಗೂ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು. ಸರ್ಕಾರಿ ಶಾಲೆಯಲ್ಲಿ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗೆ ಮಕ್ಕಳ ಸಂಖ್ಯೆಯನ್ನು ಹೆಚ್ಚು ದಾಖಲಿಸುವಂತಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಉತ್ತಮ ಶೈಕ್ಷಣಿಕ ವಾತಾವರಣ ಇದರಿಂದ ಮಕ್ಕಳ ಕಲಿಕೆಗೆ ಹೆಚ್ಚಿನ ಉತ್ಸುಕತೆ ಇರುವುದು ಹೆಮ್ಮೆಯ ಸಂಗತಿ. ಗ್ರಾಮದ ಎಲ್ಲರೂ ಒಗ್ಗೂಡಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಇತರೆ ಶಾಲೆಗಳಿಗೆ…
ಸಿದ್ದಾಪುರ ಫೆ.1 NEWS DESK : ಗುಹ್ಯ ಗ್ರಾಮದ ನಂದ ಎಂಬವರ ಕಾಫಿತೋಟದ ಕಣದಲ್ಲಿ ಜೋಡಿ ನಾಗರಹಾವುಗಳು ಕಾಣಿಸಿಕೊಂಡ ಘಟನೆ ನಡೆದಿದೆ. ವಿಷಯವರಿತ ಉರಗ ರಕ್ಷಕ ಸುರೇಶ್ ಪೂಜಾರಿ ಸ್ಥಳಕ್ಕೆ ತೆರಳಿ ಭಾರೀ ಗಾತ್ರದ ನಾಗರಹಾವುಗಳನ್ನು ಸುರಕ್ಷಿತವಾಗಿ ಸೆರೆಹಿಡಿದು, ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು.
ನಾಪೋಕ್ಲು ಫೆ.1 NEWS DESK : ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕುಂದಚೇರಿ ಭಾಗಮಂಡಲ ಅಯ್ಯಂಗೇರಿ ಗ್ರಾಮ ಪಂಚಾಯತ್ ಗಳ ಸಹಯೋಗದಲ್ಲಿ ಚೆಟ್ಟಿಮಾನಿಯಲ್ಲಿ ಯಶಸ್ವಿಯಾಗಿ ನಡೆದ ’”ಗ್ರಾಮ ಸಿರಿ” ಕಾರ್ಯಕ್ರಮದ ಅಂಗವಾಗಿ ಚೆಟ್ಟಿಮಾನಿಯ ಶಾದಿ ಮಹಲ್ ನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಗ್ರಾಮ ಸಿರಿ ಆಚರಣಾ ಸಮಿತಿ ಅಧ್ಯಕ್ಷ ಪಾಣತಲೆ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೋಳಿ ಬೈಲು ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಚೇರಿ ಗ್ರಾ.ಪಂ ಅಧ್ಯಕ್ಷ ಪೊಡನೊಳನ ಬಿ.ದಿನೇಶ್ ಗ್ರಾಮ ಸಿರಿಯ ಲೆಕ್ಕಪತ್ರ ಮಂಡನೆ ಮಾಡಿದರು. ಕುಯ್ಯಮುಡಿ ಮನೋಜ್ ಮಾತನಾಡಿ, ಕಾರ್ಯಕ್ರಮದಿಂದ ಉಳಿಕೆಯಾದ ಹಣವನ್ನು ಚೆಟ್ಟಿಮಾನಿ ಶಾಲಾ ಮೈದಾನದ ಅಭಿವೃದ್ಧಿಗೆ ಬಳಸಲಾಗುವುದು ಎಂದರು. ಸಭೆ ಸರ್ವಾನುಮತದಿಂದ ಅನುಮೋದಿಸಿತು. ನಂತರ ಗ್ರಾಮಸಿರಿ ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಹೋಬಳಿ…
ಚೆಟ್ಟಳ್ಳಿ ಫೆ.1 NEWS DESK : ಪದ್ಮಶ್ರೀ ವಿಜೇತ ರೋಹನ್ ಬೋಪಣ್ಣ ಅವರ ಹೆಸರನ್ನು ಮಡಿಕೇರಿ ನಗರದ ಮುಖ್ಯ ರಸ್ತೆಗೆ ಇಡುವಂತೆ ಅಖಿಲ ಕೊಡವ ಸಮಾಜ ಒತ್ತಾಯಿಸಿದೆ. ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರಿಗೆ ಮನವಿ ಸಲ್ಲಿಸಿದ ಸಮಾಜದ ಪ್ರಮುಖರು, ವಿಶ್ವದ ಡಬಲ್ಸ್ ಮೆನ್ ಟೆನ್ನಿಸ್ ಕ್ರೀಡೆಯಲ್ಲಿ ದಾಖಲೆಮೆರೆದ ಗೌರವಾರ್ಥ ಪದ್ಮಶ್ರೀ ವಿಜೇತ ರೋಹನ್ ಬೋಪ್ಪಣ್ಣ ಅವರ ಹೆಸರನ್ನು ಮಡಿಕೇರಿ ನಗರದ ಮುಖ್ಯ ರಸ್ತೆಗೆ ಇಡುವಂತೆ ಮನವಿ ಮಾಡಿದರು. ಈ ಸಂದರ್ಭ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಕಾರ್ಯದರ್ಶಿ ಕೀತಿಯಂಡ ವಿಜಯ್ ಕುಮಾರ್, ಜಂಟಿ ಕಾರ್ಯದರ್ಶಿ ಮೂವೇರ ರೇಖಾ ಪ್ರಕಾಶ್ ಹಾಗೂ ನಂದೇಟಿರ ರಾಜ ಮಾದಪ್ಪ ಹಾಜರಿದ್ದರು. ಪೋಷಕರಿಗೆ ಗೌರವ :: ಮಾದಾಪುರ ಸಮೀಪ ಗರಗ0ದೂರಿನ ಪದ್ಮಶ್ರೀ ಮಚ್ಚಂಡ ರೋಹನ್ ಬೋಪಣ್ಣ ಅವರ ಮನೆಗೆ ಸಮಾಜದ ಪ್ರಮುಖರು ತೆರಳಿ, ರೋಹನ್ ಬೋಪಣ್ಣ ಅವರ ಪೋಷಕರಾದ ಮಚ್ಚಂಡ ಪ್ರಭಾ ಬೋಪಣ್ಣ ಹಾಗೂ ಮಲ್ಲಿಕಾ ದಂಪತಿಗೆ ಅಖಿಲ ಕೊಡವ ಸಮಾಜದ ವತಿಯಿಂದ…
ಕುಶಾಲನಗರ ಫೆ.1 NEWS DESK : ಧರ್ಮದ ತಳಹದಿಯಿಂದ ಮಾತ್ರ ಮನುಷ್ಯನಿಗೆ ಆಂತರಿಕವಾದ ಸುಖ, ಶಾಂತಿ ಹಾಗೂ ಮಾನಸಿಕವಾದ ನೆಮ್ಮದಿ ದೊರಕಲು ಸಾಧ್ಯ ಎಂದು ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ “ನಿಜ ಶರಣ ಅಂಬಿಗರ ಚೌಡಯ್ಯ ಸ್ಮರಣೆ ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನ ಈ ಮಾನವ ಜಗತ್ತು ಕಂಡ ಸುವರ್ಣ ಶತಮಾನ. ಅಂದು ವಚನಕಾರರು ಮಾಡಿದ ಚಳುವಳಿ ಸಾರ್ವಕಾಲಿಕವಾದುದು. ವಚನಕಾರರು ನಡೆದಂತೆ ನುಡಿದರು. ನುಡಿದಂತೆ ನಡೆದರು. ಸಮಾಜದಲ್ಲಿದ್ದಂತಹ ಮೌಢ್ಯಗಳು ಹಾಗೂ ಕಂದಾಚಾರಗಳ ವಿರುದ್ಧ ಅಂಬಿಗರ ಚೌಡಯ್ಯ ಕಟುವಾದ ಶಬ್ಧಗಳ ಮೂಲಕ ವಚನಗಳನ್ನು ಬರೆದು ಬಹು ದೊಡ್ಡ ಚಳುವಳಿಯನ್ನು ಮಾಡಿದ್ದರ ಬಗ್ಗೆ ಶ್ರೀಗಳು ವಿವರಿಸಿದರು. ಬಸವಣ್ಣ, ಅಲ್ಲಮ ಪ್ರಭುಗಳು, ಅಕ್ಕಮಹಾದೇವಿ, ಡೋಹರ ಕಕ್ಕಯ್ಯ, ಮಡಿವಾಳ ಮಾಚಯ್ಯ ಮೊದಲಾದ ಶರಣರು ಹಾಕಿ ಕೊಟ್ಟ ಧರ್ಮದ ತಳಹದಿಯನ್ನು ಕಡೆಗಣಿಸಿದ್ದರಿಂದಲೇ ಸಮಾಜದಲ್ಲಿ ಎಲ್ಲೆಡೆ…
ಬೆಂಗಳೂರು ಫೆ.1 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ, 2021 ರಿಂದ 2024ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರದಾನ ಮಾಡಿ ಗೌರವಿಸಿದರು. 2020-21 ರಿಂದ 2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ, ಪಂಪ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಪಂಡಿತ್ ಪಂಚಾಕ್ಷರಿ ಗವಾಯಿ ಪ್ರಶಸ್ತಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಶ್ರೀ ನಿಜಗುಣ ಪುರಂದರ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ಶಾಂತಲಾನಾಟ್ಯ ರಾಣಿ ಪ್ರಶಸ್ತಿ, ಸಂತ ಶಿಶುನಾಳ ಷರೀಫ ಪ್ರಶಸ್ತಿ, ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಬಿ.ವಿ.ಕಾರಂತ ಪ್ರಶಸ್ತಿ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ, ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದಶ್ರೀ ಪ್ರಶಸ್ತಿ ಪುರಸ್ಕೃತರಾದ ಒಟ್ಟು 75 ಮಂದಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ನೀಡಿ ಗೌರವಿಸಿದರು.
ಕಡಂಗ ಫೆ.1 NEWS DESK : ಕೊಕ್ಕಂಡ ಬಾಣೆ ದರ್ಗಾ ಶರೀಫ್ ನಲ್ಲಿ ಮಹಾತ್ಮರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಉರೂಸ್ ಸಮಾರಂಭವು ಫೆ.2 ರಂದು ಆರಂಭಗೊಳ್ಳಲಿದೆ ಎಂದು ಮುಹ್ಯಯದ್ದೀನ್ ಜುಮ ಮಸೀದಿಯ ಅಧ್ಯಕ್ಷ ಅಬ್ದುಲ ತಿಳಿಸಿದ್ದಾರೆ ಐದು ದಿನಗಳ ಕಾಲ ನಡೆಯುವ ಉರೂಸ್ ಸಮಾರಂಭವು ಜುಮಾ ನಮಾಜಿನ ಬಳಿಕ ಖತೀಬ್ ಉಸ್ತಾದರಾದ ರಫೀಕ್ ಲತಿಫಿ ಪ್ರಾರ್ಥನೆ ಮೂಲಕ ಪ್ರಾರಂಭಗೊಳ್ಳಲಿದ್ದು, ರಾತ್ರಿ 8 ಗಂಟೆಗೆ ಕೇರಳದ ಪ್ರಸಿದ್ಧ ಸೈಹಿದ್ ಕುಂಬೊಳ್ ಅಲಿ ದುವಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಸೋಮವಾರ ಮತ್ತು ಮಂಗಳವಾರ ಸಾಯಂಕಾಲ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಉಪಾಧ್ಯಕ್ಷ ಸಿ.ಎ.ಸಲಾಂ , ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಹಾಗೂ ಸಹ ಕಾರ್ಯದರ್ಶಿ ಪಿ.ಎಚ್.ಶಮೀರ್ ಉಪಸ್ಥಿತರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಫೆ.1 : ಪ್ರಸಕ್ತ (2023-24) ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಪಟ್ಟಣ/ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು www.kvic.org.in (pmegp online application) ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಇವರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: 08272-228746 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ನಾಪೋಕ್ಲು ಫೆ.1 : ಚಿತ್ರದುರ್ಗದ ನವೋದಯ ಪ್ರತಿಷ್ಠಾನದ ವತಿಯಿಂದ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಗಣಿತ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಕೊಟ್ಟೂರು ಚೇರಂಬಾಣೆಯ ಮಚ್ಚಂಡ ಆರ್.ಚಕ್ಷ ಹಾಗೂ ಪಿ.ಎ.ಮಹಾಶೂಫ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕುಟ್ಟನ ವಿ.ರಿಷಿತ ಹಾಗೂ ಕೂರನ ಕೆ.ಇಂಚರ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲೆಯ ವ್ಯವಸ್ಥಾಪಕ ನಾಟೊಳಂಡ ವಿಜು, ಪ್ರಾಂಶುಪಾಲ ಕುದುಪಜೆ ಕವನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ದುಗ್ಗಳ ಸದಾನಂದ.






