ನಾಪೋಕ್ಲು ಮಾ.29 NEWS DESK : ನವಕೊಡಗಿಗೆ ಭದ್ರ ಬುನಾದಿಯೊಂದಿಗೆ ಕೊಡಗಿನಲ್ಲಿ ವೀರಶೈವ ಧರ್ಮ ಪಸರಿಸಲು ಹಾಲೇರಿ ರಾಜರ ಕೊಡುಗೆ ಅಪಾರ ಎಂದು ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿ.ವಿ.ಶಿವಪ್ಪ ತಿಳಿಸಿದರು. ಸುವರ್ಣ ಕರ್ನಾಟಕ ೫೦ ರ ಸಂಭ್ರಮ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ( ನಾಪೋಕ್ಲು) ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ದಿ. ಶಾಂತಮಲ್ಲ ಸ್ವಾಮಿಗಳ ದತ್ತಿ ಮತ್ತು ದಿ. ಎಂ.ಜಿ.ಪದ್ಮನಾಭ ಕಾಮತ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಕೊಡಗಿನ ವೀರಶೈವ ಅರಸರು” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ನೂತನ ಕೊಡಗಿಗೆ ವೀರಶೈವ ದೊರೆಗಳಾದ ಹಾಲೇರಿ ದೊರೆಗಳ ಕೊಡುಗೆ ಅಪಾರ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ, ಸಂಸ್ಕೃತಿ ಕಾರ್ಯಗಳಿಗೆ ದುಡಿದ ಉದ್ಯಮಿಗಳ ಕುರಿತಾದ…
ಲೇಖಕ: admin
ಮಡಿಕೇರಿ ಮಾ.28 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಆರಂಭಗೊಂಡಿದೆ. ಮಾ.28 ರಿಂದ 30 ರವರೆಗೆ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಮಾ.28 ರಂದು ರಾತ್ರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಿಂದ ಭಂಡಾರ ಹೊರಟಿತು. 9 ಗಂಟೆಗೆ ಮೇಲೇರಿಗೆ ಅಗ್ನಿ ಸ್ಪರ್ಷವಾಯಿತು. ಕುಲ್ಚಾಟ ಹೊರಡುವ ಧಾರ್ಮಿಕ ವಿಧಾನವೂ ನಡೆಯಿತು. ಮಾ.29 ರಂದು ಬೆಳಿಗ್ಗೆ 6 ಗಂಟೆಗೆ ಅಗ್ನಿ ಪ್ರವೇಶ, 7 ಗಂಟೆಗೆ ಪ್ರಸಾದ ವಿತರಣೆ, 8 ಗಂಟೆಗೆ ಮಾರಿಕಳ ಪ್ರವೇಶ ಹಾಗೂ ಮಾರಿಕಳದಿಂದ ಬಂದ ನಂತರ ಹರಕೆಯ ಸುರಿಗೆಗಳನ್ನು ಒಪ್ಪಿಸುವುದು. ನಂತರ ಪ್ರಸಾದ ವಿತರಣೆ ಮುಂದುವರೆಯಲಿದೆ. ಮಾ.30 ರಂದು ಮಧ್ಯಾಹ್ನ 1 ಗಂಟೆಗೆ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಮಾ.28 ರಂದು ರಾತ್ರಿ 9.30 ಗಂಟೆಗೆ ಇದೇ ಮೊದಲ ಬಾರಿಗೆ…
ಕುಶಾಲನಗರ ಮಾ.28 NEWS DESK : ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದುಬಾರೆ ಸಾಕಾನೆಗಳ ಮಾವುತರು ಮತ್ತು ಕಾವಾಡಿಗ ಸಿಬ್ಬಂದಿಗಳು ಗುರುವಾರ ಶಿಬಿರದಲ್ಲಿ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ತಮ್ಮನ್ನು ಖಾಯಂ ಗೊಳಿಸುವಂತೆ ಆಗ್ರಹಿಸಿದ್ದಾರೆ. ಶಿಬಿರದಲ್ಲಿ ಕನಿಷ್ಠ ಸೇವೆ ಸಲ್ಲಿಸಿದ ವ್ಯಕ್ತಿಗೆ ಅನುಭವ ಇಲ್ಲದಿದ್ದರೂ ಶಿಬಿರದ ಜಮೇದಾರ ಹುದ್ದೆಗೆ ನಿಯೋಜನೆ ಮಾಡಿರುವ ಬಗ್ಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಮೂರು ದಿನಗಳೊಳಗೆ ಸಮಸ್ಯೆ ಇತ್ಯರ್ಥ ಗೊಳ್ಳದಿದ್ದಲ್ಲಿ ದುಬಾರೆ ಸಾಕಾನೆ ಶಿಬಿರದ ಸಿಬ್ಬಂದಿಗಳು ಆನೆಗಳ ಸಹಿತ ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ದುಬಾರೆ ಶಿಬಿರದಲ್ಲಿ 23 ಆನೆಗಳು ಇದ್ದು ಅವುಗಳ ಮೇಲ್ವಿಚಾರಣೆಗೆ 27 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದರೂ ಇನ್ನೂ ಖಾಯಂಗೊಳಿಸಿಲ್ಲ. ದಸರಾ ಸಂದರ್ಭ ನೀಡಿದ ಭರವಸೆ ಇನ್ನೂ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಹತೆಯ ಸಬೂಬು ಹೇಳಿಕೊಂಡು ಅಧಿಕಾರಿಗಳು ಅನುಭವವಿಲ್ಲದ ಜನರಿಗೆ ಆನೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ನೇರವಾಗಿ ಆಯ್ಕೆ ಮಾಡುವುದು ಸರಿಯಲ್ಲ…
ಕುಶಾಲನಗರ ಮಾ.28 NEWS DESK : ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ಕುಶಾಲನಗರ ಪುರಸಭೆ ನಾಮ ನಿರ್ದೇಶಿತ ಸದಸ್ಯರಾದ ಬಿ.ಎ.ಅಬ್ದುಲ್ ಖಾದರ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಖಾದರ್ ಅವರ ಆರೋಗ್ಯ ವಿಚಾರಿಸಿ ನಂತರ ಪುರಸಭೆಗೆ ನೂತನವಾಗಿ ಸದಸ್ಯರಾಗಿ ಆಯ್ಕೆಗೊಂಡಿರುವ ಖಾದರ್ ಅವರನ್ನು ಶಾಲು ಹೊಂದಿಸಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಉಪಾಧ್ಯಕ್ಷರಾದ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯರಾದ ಮಂಜುನಾಥ ಗುಂಡುರಾವ್, ಹಾಜು ಇದ್ದರು.
ಕುಶಾಲನಗರ ಮಾ.28 NEWS DESK : ಕಾವೇರಿ ಕಾಲಿಂಗ್ ಸಂಸ್ಥೆಯ ಆಶ್ರಯದಲ್ಲಿ ಶಿವಮೊಗ್ಗದ ಯುವಕನೊಬ್ಬ ತಲಕಾವೇರಿಯಿಂದ ಪೂಂಪ್ ಹಾರ್ ತನಕ ಪಾದಯಾತ್ರೆ ಹಮ್ಮಿಕೊಂಡಿದ್ದು ಕುಶಾಲನಗರದಲ್ಲಿ ಕಾವೇರಿ ನದಿ ಸ್ವಚ್ಛತಾ ಅಭಿಯಾನ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ನದಿ ಜಲಮೂಲಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿವಮೊಗ್ಗ ಮೂಲದ ಯುವಕ ಶ್ರೇಯಸ್ ಕಳೆದ ಎರಡು ದಿನಗಳ ಹಿಂದೆ ಶ್ರೀ ಕ್ಷೇತ್ರ ತಲಕಾವೇರಿಯಿಂದ ಪಾದಯಾತ್ರೆ ಪ್ರಾರಂಭಿಸಿದ್ದು, ಎರಡು ತಿಂಗಳುಗಳ ಕಾಲ ಯಾತ್ರೆ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರಾದ ಎಂ ಎನ್ ಚಂದ್ರಮೋಹನ್, ಡಿ ಆರ್ ಸೋಮಶೇಖರ್ ಪ್ರದೀಪ್ ಕುಮಾರ್, ಸ್ಥಳೀಯ ಪತ್ರಕರ್ತರಾದ ವಿನೋದ್ ಜಯಪ್ರಕಾಶ್ ,ಶಂಶುದ್ದೀನ್ ಅವರುಗಳು ಗಣಪತಿ ದೇವಾಲಯದ ಬಳಿ ಬರಮಾಡಿಕೊಂಡರು.
ಮಡಿಕೇರಿ ಮಾ.28 NEWS DESK : ಕೊಡಗು ವಿಶ್ವವಿದ್ಯಾನಿಲಯದಲ್ಲಿ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್ ತಿಳಿಸಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರ ನಡೆದ ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯದಲ್ಲಿ ಹಲವು ಇತಿಮಿತಿಗಳ ನಡುವೆ ಧನಾತ್ಮಕ ಚಿಂತನೆ ಒಳಗೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಯುವಜನರಿಗೆ ಉದ್ಯೋಗ ಸೃಷ್ಟಿಯತ್ತ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಅಶೋಕ್ ಸಂಗಪ್ಪ ಆಲೂರ್ ಹೇಳಿದರು. ಕೊಡಗು ವಿಶ್ವವಿದ್ಯಾನಿಲಯದಲ್ಲಿ ಬಿಸಿಎ, ಎಂಸಿಎ, ಎಂಬಿಎ, ಪದವಿ, ಸ್ನಾತಕೋತ್ತರ ಪದವಿ ಆರಂಭಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ರವಿಮಾತನಾಡಿ ಕೊಡಗು ವಿಶ್ವವಿದ್ಯಾನಿಲಯವು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಆ ನಿಟ್ಟಿನಲ್ಲಿ ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಏಳು ವಿಶ್ವವಿದ್ಯಾನಿಲಯಗಳು ಸ್ಥಾಪನೆಯಾಗಿದ್ದು,…
ಮಡಿಕೇರಿ ಮಾ.28 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ 2024ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಧ್ಯಕ್ಷರಾಗಿ ಜಾನ್ಸನ್ ಪಿಂಟೋ ಆಯ್ಕೆಯಾಗಿದ್ದಾರೆ. ಗೌರವಧ್ಯಕ್ಷರಾಗಿ ಜೋಕಿಂ ವಾಸ್, ಕಾರ್ಯಾಧ್ಯಕ್ಷರಾಗಿ ವಿ.ಎ.ಲಾರೆನ್ಸ್, ಉಪಾಧ್ಯಕ್ಷರುಗಳಾಗಿ ವಿನ್ಸಿ ಡಿಸೋಜ, ಎ.ಜೆ.ಯೇಸುದಾಸ್, ಮೈಕಲ್, ಜೋಕಿಂ ರಾಡ್ರಿಗಸ್ ನೇಮಕಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಬೆನ್ನಿ ಅಗಸ್ಟಿನ್, ಮಹಿಳಾ ಉಪಾಧ್ಯಕ್ಷರಾಗಿ ಫಿಲೋಮಿನಾ, ಖಜಾಂಚಿಯಾಗಿ ಜೇಮ್ಸ್ ಕೆದಕಲ್, ಸಂಘಟನಾ ಕಾರ್ಯದರ್ಶಿಯಾಗಿ ಜೂಡಿವಾಸ್, ಸಹ ಕಾರ್ಯದರ್ಶಿಗಳಾಗಿ ಪ್ರವೀಣ್ ಡಿಸೋಜ, ವಿನ್ಸಿ ಪಿಂಟೊ, ರಾಬಿನ್ ಪೌಲ್, ಮ್ಯಾಥ್ಯು ಆನ್ಸಿ ನೇಮಕಗೊಂಡಿದ್ದಾರೆ. ಜಿಲ್ಲಾ ಸಂಚಾಲಕರುಗಳಾಗಿ ಜಾನ್ಸ್‍ನ್, ಅಂತೋಣಿ ಡಿಸೋಜ, ರೊಸ್ ಮೇರಿ ರಾಡ್ರಿಗಸ್, ಕ್ರೀಡಾ ಕಾರ್ಯದರ್ಶಿಯಾಗಿ ಅಂತೋಣಿ ಪ್ರಭುರಾಜ್, ಗೌರವ ಸಲಹೆಗಾರರಾಗಿ ಎಸ್.ಎಂ ಡಿಸಿಲ್ವಾ, ಜೋಸೆಫ್ ಸ್ಯಾಂ, ಅಗಸ್ಟಿನ್ ಜಯರಾಜ್, ಸಾರ್ವಜನಿಕ ಸಂಪರ್ಕಧಿಕಾರಿಯಾಗಿ ಮಾರ್ವಿನ್‍ಲೋಬೊ, ಮಾಧ್ಯಮಾ ಎಂ.ಬಿ.ವಿನ್ಸಂಟ್ ವಿನೋದ್, ಯೂತ್ ವಿಂಗ್ ಅಧ್ಯಕ್ಷರಾಗಿ ಪ್ರಶಾಂತ್ ಲೋಬೊ, ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಸಾರ್ಜೆಂಟ್ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪದ ಸಂತ ಅಂತೋಣಿ ಚರ್ಚ್‍ನಲ್ಲಿ ಸಮುದಾಯದ ಮುಖಂಡರ…
ಮಡಿಕೇರಿ ಮಾ.28 NEWS DESK : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸುಂಟಿಕೊಪ್ಪದ ಎಂ.ಎ.ಉಸ್ಮಾನ್ ಅವರು ಆಯ್ಕೆಯಾಗಿದ್ದಾರೆ. ಎಐಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಅವರ ಅನುಮೋದನೆ ಮೇರೆಗೆ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಅವರು ಎಂ.ಎ.ಉಸ್ಮಾನ್ ಅವರನ್ನು ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ.
ಮಡಿಕೇರಿ ಮಾ.28 NEWS DESK : ಕೂಜಿಮಲೆಯಲ್ಲಿ ಮಾ.27 ರಂದು ಕಾಣಿಸಿಕೊಂಡ ಅಪರಿಚಿತ ಮಹಿಳೆ ರಾಜಸ್ಥಾನದವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಈ ಹಂತದಲ್ಲೆ, ಕೂಜಿಮಲೆಯಲ್ಲಿ ಮಾ.27 ರಂದು ಅಪರಿಚಿತ ಮಹಿಳೆಯೊಬ್ಬರು ಕಾಣಿಸಿಕೊಂಡಿದ್ದರು. ಸ್ಥಳೀಯರು ಶಂಕಿತ ನಕ್ಸಲರು ಮತ್ತೆ ಬಂದಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ನಕ್ಸಲ್ ನಿಗ್ರಹ ದಳ, ಕೊಡಗು ಜಿಲ್ಲಾ ಸಶಸ್ತ್ರ ಪಡೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಜಿಮಲೆ ಎಸ್ಟೇಟ್‌ಗೆ ಭೇಟಿ ನೀಡಿ ಬುಧವಾರ ರಾತ್ರಿ ಪರಿಶೀಲನೆ ನಡೆಸಿದರು. ತಾನು ಕೂಡ ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿರುವ ಎಸ್‌ಪಿ ರಾಮರಾಜನ್ ಪತ್ತೆಯಾದ ಅಪರಿಚಿತ ಮಹಿಳೆ ಹಿಂದಿ ಭಾಷೆ ಬಳಸುತ್ತಿದ್ದು, ರಾಜಸ್ಥಾನದವಳೆಂದು ಹೇಳಿಕೊಂಡಿದ್ದಾರೆ. ಅಸ್ವಸ್ಥ ವ್ಯಕ್ತಿಯಂತೆ ಕಂಡು ಬರುತ್ತಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ವಶದಲ್ಲಿರುವ ಈಕೆಯನ್ನು ಆಸ್ಪತ್ರೆಗೆ ದಾಖಲಿಸಿ ನಂತರ ಆಶ್ರಮಕ್ಕೆ ಕಳುಹಿಸಲಾಗುವುದು…
ಮಡಿಕೇರಿ ಮಾ.28 NEWS DESK : ವಿಧಾನಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪರ ಕೆಲಸ ಮಾಡಿರುವುದು ನಿಜ, ಆದರೆ, ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ, ಇಂದಿಗೂ ಜೆಡಿಎಸ್ ಕಾರ್ಯಕರ್ತನಾಗಿದ್ದು, ನನ್ನ ಧೋರಣೆ ತಟಸ್ಥವಾಗಿದೆ ಎಂದು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಅಭಿವೃದ್ಧಿ ಕಾರ್ಯಗಳು ಸಾಗದ ಕಾರಣ ಅಂದು ಕಾಂಗ್ರೆಸ್‍ನೊಂದಿಗೆ ಕೈಜೋಡಿಸುವ ಪರಿಸ್ಥಿತಿ ನಿರ್ಮಾಣವಾಯಿತು. ಇದರ ಭಾಗವಾಗಿ ಅಂದು ಡಿ.ಕೆ.ಶಿವಕುಮಾರ್ ಅವರು ಕಚೇರಿಗೆ ಕರೆಸಿ, ಶಾಲು ಹೊದಿಸಿ, ನೀವು ಏಕಾಏಕಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೀರಿ ಎಂದು ಹೇಳಿದರು. ನಾವು ಏನೂ ಉತ್ತರ ನೀಡಲಾಗಲಿಲ್ಲ. ನಂತರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪರ ಕೆಲಸ ಮಾಡಿದ್ದೇವೆ. ಇದರಿಂದ ಜೆಡಿಎಸ್‍ನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದೇನೆ. ಆದರೆ, ಇಂದಿಗೂ ನಾನು ಜೆಡಿಎಸ್ ನ ಕಾರ್ಯಕರ್ತನಾಗಿ ಮುಂದುವರೆದಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿಲ್ಲ ಎಂದರು. ಇತ್ತೀಚೆಗೆ ನಾನು ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳಿಕೊಳ್ಳುತ್ತಿದ್ದಾರೆ.…






