ಲೇಖಕ: admin

ಮಡಿಕೇರಿ ಫೆ.22 NEWS DESK : ಅರಣ್ಯ ಹಕ್ಕು ಕಾಯ್ದೆ 2012 ರ ತಿದ್ದುಪಡಿ ಕಾಯ್ದೆ ಪ್ರಕಾರ ಒಂದೊಂದು ಕುಟುಂಬಕ್ಕೆ ತಲಾ 5 ಎಕರೆ ಕೃಷಿ ಭೂಮಿಯನ್ನು ಮಂಜೂರು ಮಾಡುವಂತೆ  ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ  ಕೊಡಗು ಜಿಲ್ಲಾ ಜೇನು ಕುರುಬರ ಸಂಘ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಂಘದ ಪ್ರಮುಖರು, ಜೇನು ಕುರುಬರ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಸ್ವತಂತ್ರ ಪೂರ್ವದಿಂದಲೂ ನಮ್ಮ ಸಮುದಾಯವು ತುಳಿತಕ್ಕೆ ಒಳಗಾಗಿದೆ. ಪ್ರಮುಖವಾಗಿ ನಮ್ಮ ಸಮುದಾಯಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣ, ಹುಣಸೂರು ತಾಲ್ಲೂಕಿನಲ್ಲಿ ಜೇನುಕುರುಬರ ಕಚೇರಿಯನ್ನು ಮರುಸ್ಥಾಪಿಸಿ P.V.T.G ಅನುದಾನವನ್ನು ಜಿ.ಕೆ ಕಚೇರಿಯ ಮೂಲಕವೇ ನಮ್ಮ ಸಮುದಾಯಕ್ಕೆ ತಲುಪಿಸುವುದು. ಅರಣ್ಯ ಹಕ್ಕು ಕಾಯ್ದೆ 2012 ರ ತಿದ್ದುಪಡಿ ಕಾಯ್ದೆ ಪ್ರಕಾರ ಒಂದೊಂದು ಕುಟುಂಬಕ್ಕೆ ತಲಾ 5 ಎಕರೆ…

Read More

ಮಡಿಕೇರಿ ಫೆ.22 NEWS DESK : ಗೋಣಿಕೊಪ್ಪ ಕೊಡವ ಸಮಾಜದ ಸಮುದಾಯ ಭವನಕ್ಕೆ ಅನುದಾನ ನೀಡುವಂತೆ ಗೋಣಿಕೊಪ್ಪ ಕೊಡವ ಸಾಂಸ್ಕೃತಿಕ ಕೇಂದ್ರದ ಆಡಳಿತ ಮಂಡಳಿಯ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ  ಗೋಣಿಕೊಪ್ಪ ಕೊಡವ ಸಾಂಸ್ಕೃತಿಕ ಕೇಂದ್ರದ ಆಡಳಿತ ಮಂಡಳಿಯ ಪ್ರಮುಖರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಕೊಡಗಿನ ಪ್ರತಿಷ್ಠಿತ ಪಟ್ಟಣವಾದ ಗೋಣಿಕೊಪ್ಪಲ್ಲಿನಲ್ಲಿ ಕೊಡವ ಕಲೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕೊಡವ ಸಮಾಜ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇಲ್ಲಿ ಕೊಡವ ಜನಾಂಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ. ಇಷ್ಟರವರೆಗೆ ಈ ಸಮುದಾಯ ಭವನದ ಕಾಮಗಾರಿಗಳಿಗೆ ಸುಮಾರು 1 ಕೋಟಿ 50 ಲಕ್ಷ ರೂ. ಗಳನ್ನು ವೆಚ್ಚ ಮಾಡಲಾಗಿದೆ. ಅಂದಾಜು 8.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಹಣಕಾಸಿನ ತೊಂದರೆಯಿಂದ ಕಾಮಗಾರಿಯು ಸದ್ಯಕ್ಕೆ ನಿಂತುಹೋಗಿದೆ ಎಂದು…

Read More

ಮಡಿಕೇರಿ ಫೆ.22 NEWS DESK : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ…

Read More

ಮಡಿಕೇರಿ ಫೆ.22 NEWS DESK :  ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆ.24 ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸುವಂತೆ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.22 NEWS DESK :  2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಒಬಿಸಿ) ಶೇ.25 ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು https://sevasindhuservices.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಮಾರ್ಚ್, 15 ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು,…

Read More

ಮಡಿಕೇರಿ ಫೆ.22 NEWS DESK : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿರುವ “ಸಂವಿಧಾನ ಜಾಗೃತಿ ಜಾಥಾ” ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ Online ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಯ ಸರಣಿಯ ಮೂರನೇ ಹಂತದ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ. ಈ ಸಂವಿಧಾನ ಜಾಗೃತಿ ಜಾಥ ಕುರಿತಾದ ಮೂರನೇ ಹಂತದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಫಾರ್ಮ್‍ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಲಾಗಿರುವ ಬಹುಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸುವ ಮೂಲಕ ಕೊಡಗು ಜಿಲ್ಲಾ ಆಡಳಿತ ವತಿಯಿಂದ ಆಯೋಜಿಸಲಾಗಿರುವ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು, ವಿಶೇಷವಾಗಿ ಶಾಲಾ ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳು, ಭಾಗಿಯಾಗಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಕೋರಿದ್ದಾರೆ. Link : https://docs.google.com/forms/d/e/1FAIpQLScvYfxL3dz6FBu54FaDKZIXE_aN_m_bqKaDFibqCSyKSBI8XQ/viewform?usp=sf_link 

Read More

ಮಡಿಕೇರಿ ಫೆ.22 NEWS DESK : ಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕಳೆದ 27 ದಿನಗಳಿಂದ ಹಮ್ಮಿಕೊಂಡಿರುವ ಜಾಗೃತಿ ಜಾಥಾ ಅಭಿಯಾನದ ‘ಸ್ತಬ್ಧಚಿತ್ರ’ ಒಳಗೊಂಡ ವಾಹನವನ್ನು ನಗರದ ರಾಜಾಸೀಟಿನಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ನಗರದ ರಾಜಾಸೀಟು ಉದ್ಯಾನವನ ಬಳಿಯಿಂದ ಹೊರಟ ಸಂವಿಧಾನ ಜಾಗೃತಿ ಅಭಿಯಾನದ ಸ್ತಬ್ಧಚಿತ್ರ ಒಳಗೊಂಡಂತೆ ಮೆರವಣಿಗೆಯಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಆಟೋ ಚಾಲಕರು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆಯ ವಿದ್ಯಾರ್ಥಿಗಳು, ಸ್ತ್ರೀಶಕ್ತಿ ಗುಂಪುಗಳು ಇತರರು ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ವಿಜಯ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ, ದಲಿತ ಸಂಘರ್ಷ ಸಮಿತಿಯ ಸಂಘಟಕರಾದ ಎಚ್.ಎಲ್.ದಿವಾಕರ, ನಿರ್ವಾಣಪ್ಪ, ಹೊನ್ನಪ್ಪ ವಿವಿಧ ಇಲಾಖೆ ಅಧಿಕಾರಿಗಳು ಇತರರು…

Read More

ಮಡಿಕೇರಿ ಫೆ.21 : ಕೃಷಿಗಾಗಿ ಅಳವಡಿಸಿರುವ ರೈತರ 10 ಹೆಚ್.ಪಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಚೆಸ್ಕಾಂ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ರೈತರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರೈತ ಮುಖಂಡ ಹೇರೂರು ಚಂದ್ರಶೇಖರ್ ಮಾತನಾಡಿ ಈ ಹಿಂದೆ ಮೂರು-ನಾಲ್ಕು ಬಾರಿ ಕೊಡಗಿನ ರೈತರು ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ವಿವರವಾದ ಮನವಿಯನ್ನು ಸಲ್ಲಿಸಿದ್ದರು. ಇತರ ಬೆಳೆಗಳಿಗೆ ನೀಡುತ್ತಿರುವಂತೆಯೇ 10 ಹೆಚ್‌ಪಿ ಒಳಗಿನ ವಿದ್ಯುತ್ ಮೋಟಾರುಗಳಿಗೆ ಸಂಬAಧಿಸಿದAತೆ ಕೊಡಗಿನ ರೈತರಿಗೂ ವಿನಾಯಿತಿ ವಿಸ್ತರಿಸಿಕೊಬೇಕೆಂದು ಹಲವು ಬಾರಿ ಕೋರಿಕೊಳ್ಳಲಾಗಿತ್ತು. ಸರ್ಕಾರಿ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿಗಳು ಕೂಡ ಭರವಸೆ ನೀಡಿದ್ದರು. ಆದರೆ ಕೊಡಗಿನ ರೈತರ ಪರವಾದ ಯಾವುದೇ ಕ್ರಮವಾಗಿಲ್ಲ. ಬಾಕಿ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಆ ಹಣವನ್ನು ಬ್ಯಾಂಕ್ ಖಾತೆ ಮೂಲಕ ಹಿಂತಿರುಗಿಸುವ ಇಲಾಖೆಯ ಪ್ರಸ್ತಾಪ…

Read More

ಮಡಿಕೇರಿ ಫೆ.22 NEWS DESK :  ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಮಾಹಿತಿ ನೀಡಿದರು. ಮಾದರಿ ನೀತಿ ಸಂಹಿತೆ ಜಾರಿ ಸಂಬಂಧಿಸಿದ ಅಧಿಕಾರಿಗಳು ಚುನಾವಣಾ ಆಯೋಗ ನಿಗದಿಪಡಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಮಾದರಿ ನೀತಿ ಸಂಹಿತೆ ಜಾರಿ ಅವಧಿಯಿಂದ ಫಲಿತಾಂಶ ಪ್ರಕಟಿಸುವವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದ್ದು, ಅದರಂತೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ, ಈ ಬಗ್ಗೆ ವರದಿ ನೀಡಬೇಕು. ಸಾಕ್ಷ್ಯಗಳನ್ನು ಸಂಗ್ರಹಿಸಬೇಕು ಎಂದರು. ಮಾದರಿ ನೀತಿ ಸಂಹಿತೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಬೇಕು ಎಂದರು. ಸ್ವೀಪ್ ನೋಡಲ್ ಅಧಿಕಾರಿಗಳು ಸ್ವೀಪ್ ಯೋಜನೆಯನ್ನು ಸಿದ್ದಪಡಿಸಬೇಕು. ಮತದಾರರ ಜಾಗೃತಿ ಸಂಬಂಧಿಸಿದಂತೆ ಸೃಜನಾತ್ಮಕ ಚಟುವಟಿಕೆ ಹಮ್ಮಿಕೊಳ್ಳಬೇಕು. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ…

Read More

ಮಡಿಕೇರಿ ಫೆ.21 NEWS DESK :  ಇಡೀ ವಿಶ್ವದಲ್ಲಿ ಭಾರತವು ಶ್ರೇಷ್ಠ ಸಂವಿಧಾನವನ್ನು ಹೊಂದಿದ್ದು, ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬರೂ ಸಮಾನರು ಎಂಬುದನ್ನು ಪ್ರತಿಪಾದಿಸಲಾಗಿದೆ. ಅದರಂತೆ ಪ್ರತಿಯೊಬ್ಬರೂ ನಡೆದುಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಸಂವಿಧಾನ ಜಾಗೃತಿ ಜಾಥ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಹಾಗೂ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತದ ಪ್ರಜೆಗಳಾದ ಪ್ರತಿಯೊಬ್ಬರೂ ಸಮನಾಗಿ ಬದುಕುವ ಹಕ್ಕು ಹೊಂದಿದ್ದಾರೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಪ್ರತಿ ಕ್ಷೇತ್ರದಲ್ಲೂ ಸಹ ಸಮಾನ ಅವಕಾಶವನ್ನು ಹೊಂದಿದ್ದಾರೆ ಎಂದು ಹೇಳಿದರು. ಸಂವಿಧಾನದಡಿ ಪ್ರತಿಯೊಬ್ಬರೂ ಸಮಾನರಾಗಿದ್ದು, ಬಡವ-ಬಲ್ಲಿದ, ಮೇಲು-ಕೀಲು ಎಂಬುದಿಲ್ಲ. ರಾಷ್ಟ್ರದಲ್ಲಿ ಯಾರೂ ಸಹ ಅಸಮಾನತೆ ಹೊಂದಿರಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದು ಕೆ.ರಾಮರಾಜನ್ ಅವರು ನುಡಿದರು. ಭಾರತ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಹಾಗೆಯೇ ರಾಜ್ಯ ನಿರ್ದೇಶಕ ತತ್ವಗಳನ್ನು ಸಹ ಒಳಗೊಂಡಿದೆ. ಆ…

Read More