ಲೇಖಕ: admin

ನಾಪೋಕ್ಲು ಫೆ.21 NEWS DESK : ಹೊದ್ದೂರು ಗ್ರಾಮದ ಶ್ರೀ ಶಾಸ್ತಾ ಈಶ್ವರ ದೇವಾಲಯದ ಮೂರನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಕೋಲವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಗಣಪತಿ ಹೋಮ, ಅಭಿಷೇಕ ಪೂಜೆ, ದೇವರ ನೃತ್ಯ ಬಲಿ, ಬೇಟೆ ಅಯ್ಯಪ್ಪ ಸನ್ನಿಧಿ ಅಭಿಷೇಕ ಪೂಜೆ, ವಿಷ್ಣುಮೂರ್ತಿ ದೈವ ನೆಲೆ ಅಭಿಷೇಕ ಪೂಜೆ ಜರುಗಿದವು. ಮಧ್ಯಾಹ್ನ ದೇವರ ನೃತ್ಯ ಬಲಿ ಪೂಜೆ ಹಾಗೂ ವಾರ್ಷಿಕ ಮಹಾಪೂಜೆ ನೆರವೇರಿತು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಎರಡು ದಿನಗಳ ಕಾಲ ಉತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ದೇವಾಲಯ ಸಮಿತಿ ವತಿಯಿಂದ ಅನ್ನಸಂತರ್ಪಣೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ , ಪದಾಧಿಕಾರಿಗಳು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಫೆ.21 NEWS DESK : ಪೊನ್ನಂಪೇಟೆ ಸಮೀಪದ ಹುದೂರು ಶ್ರೀ ಅಯ್ಯಪ್ಪ, ಭಧ್ರಕಾಳಿ ಮತ್ತು ಭಗವತಿ ದೇವಾಲಯದ ಆವರಣದಲ್ಲಿ  ಫೆ.23 ರಂದು ಮಹಾ ಚಂಡಿಕಾ ಹೋಮ ನಡೆಯಲಿದೆ ಎಂದು ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಅಧ್ಯಕ್ಷರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಫೆ.23 ರಂದು ಬೆಳ್ಳಗ್ಗೆ 7 ಗಂಟೆಯಿಂದ ಉಡುಪಿಯ ಪ್ರಸಿದ್ಧ ತಂತ್ರಿಗಳಾದ ಶ್ರೀ ವಿಖ್ಯಾತ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಮಹಾ ಚಂಡಿಕಾ ಹೋಮ ನಡೆಯಲ್ಲಿದ್ದು, ಬೆಳಿಗ್ಗೆ 7.30 ಗಂಟೆಗೆ ಗಣಹೋಮ,  8.30 ಗಂಟೆಯಿಂದ ಚಂಡಿಕಾ ಹೋಮ ನಡೆಯಲಿದೆ. ಮಧ್ಯಾಹ್ನ 12-30 ಗಂಟೆಗೆ ಪೂರ್ಣಾಹುತಿ, ಮಧ್ಯಾಹ್ನ 1  ಗಂಟೆಗೆ ತೀರ್ಥ ಪ್ರಸಾದ ವಿನಿಯೋಗ ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

Read More

ಶ್ರೀಮಂಗಲ ಫೆ.21 NEWS DESK : ಕೊಡಗು ಜಿಲ್ಲೆಯಲ್ಲಿ ಬೆಳೆಗಾರರು ಮತ್ತು ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯವಿದ್ದು, ಈ ಸಾಮರಸ್ಯಗಳನ್ನು ಕೆಡಿಸಲು ಕೆಲವು ಮಧ್ಯ ವರ್ತಿಗಳಿಂದ ಕಾರ್ಮಿಕರನ್ನು ಪ್ರಚೋದಿಸಿ ಬೆಳೆಗಾರರನ್ನು ಬೆದರಿಸಿ ಬೆಳೆಗಾರರ ಮೇಲೆ ಪ್ರಕರಣ ದಾಖಲಿಸುತ್ತಿವೆ ಎಂದು ಕೊಡಗು ಬೆಳೆಗಾರ ಒಕ್ಕೂಟ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಶ್ರೀಮಂಗಲ ಗ್ರಾ.ಪಂ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಒಕ್ಕೂಟದ ಪ್ರಮುಖರು ಕೊಡಗು ಜಿಲ್ಲೆಯ ತೋಟಗಳಲ್ಲಿ ಹೊರ ರಾಜ್ಯದ, ಹೊರ ಜಿಲ್ಲೆಯ ಹಾಗೂ ಸ್ಥಳೀಯ ಕಾರ್ಮಿಕರು ಕೆಲಸದ ನಿಮಿತ್ತ ಜಿಲ್ಲೆಯಲ್ಲಿದ್ದು,  ತೋಟದ ಕೆಲಸ ಮಾಡುತ್ತಿದ್ದಾರೆ. ಕೈಗಾರಿಕೆ, ಹೋಟೆಲ್ ಉದ್ಯಮ, ಕಟ್ಟಡ ಕೆಲಸ, ಪ್ರವಾಸೋದ್ಯಮ ಆಟೋಮೊಬೈಲ್, ರಸ್ತೆ ಕಾಮಗಾರಿಗಳಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವಂತೆ ಕಾಫಿ ಪ್ಲಾಂಟೇಶನ್ ನಲ್ಲಿಯೂ ಕೆಲಸ ಮಾಡುತ್ತಿದ್ದಾರೆ, ಕಾಫಿ ಬೆಳೆಗಾರರನ್ನು ಟಾರ್ಗೆಟ್ ಮಾಡಿ ಕಾರ್ಮಿಕರನ್ನು ಪ್ರಚೋದಿಸಿ ಬೆಳೆಗಾರರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಜೀತ ವಿಮುಕ್ತ ಮತ್ತು ಜಾತಿ ನಿಂದನೆ ಕಾಯಿದೆ ಹಿಂದಿನಿಂದಲೂ ವ್ಯಾಪಕವಾಗಿ ದುರುಪಯೋಗವಾಗುತ್ತಿದ್ದು, ಈ ಕಾನೂನುಗಳನ್ನು ದುರ್ಬಳಕೆ ಪಡಿಸಿಕೊಳ್ಳದಂತೆ ಪೊಲೀಸ್ ಇಲಾಖೆ ವಿಶೇಷ…

Read More

ಮಡಿಕೇರಿ ಫೆ.21 NEWS DESK :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಮತ್ತು ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭವು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಫೆ.22 ರಂದು ಬೆಳಗ್ಗೆ 11 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಸ್ಕೌಟ್-ಗೈಡ್ ಭವನದಲ್ಲಿ ನಡೆಯಲಿದೆ. ಅದೇ ದಿನ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಮಕ್ಕಳ ಜಾಗೃತಿ ಜಾಥ ಹೊರಡಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ನ ಜಿಲ್ಲಾ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ ತಿಳಿಸಿದ್ದಾರೆ.

Read More

ಸಿದ್ದಾಪುರ ಫೆ.21 NEWS DESK :  ಕೊಡಗಿನ ಬಡವರ ಬೆಳಕು ಸಂಸ್ಥೆಯ ಸ್ಥಾಪಕರಾಗಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕುಶಾಲನಗರದ ಎಂ.ಎಚ್. ಮೊಹಮ್ಮದ್ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಕುಶಾಲನಗರದಲ್ಲಿ ನಡೆದ ಅಭಿನಂದನ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ, ಎಂ.ಹೆಚ್.ಮೊಹಮ್ಮದ್, 2019ರಲ್ಲಿ ಆರಂಭಗೊಂಡ ಸಂಸ್ಥೆ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭ ನೊಂದವರಿಗೆ ಸಹಾಯ ಹಸ್ತ ನೀಡಲಾಗಿದೆ. ಬಡ ಜನತೆಗೆ ಮನೆ ಕಟ್ಟಿಸಿ ಕೊಡುವುದು ಮತ್ತು ಆರ್ಥಿಕ ನೆರವು ನೀಡುವುದು, ಶಿಕ್ಷಣ ಹಾಗೂ ವೈದ್ಯಕೀಯ ಚಿಕಿತ್ಸೆಗೆ ನೆರವು ಸೇರಿದಂತೆ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸದಸ್ಯರುಗಳ ಸಹಕಾರದೊಂದಿಗೆ ಮುನ್ನಡೆಯುತ್ತಿದೆ. ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಬಡ ಕುಟುಂಬಕ್ಕೆ 12 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ ಎಂದರು. ಮಾಲ್ದಾರೆಯಲ್ಲಿ ರೂ.5 ಲಕ್ಷದಲ್ಲಿ ಮನೆ ನಿರ್ಮಿಸಿ ನೀಡಲಾಗಿದೆ ಮತ್ತು ಕೊಂಡಗೇರಿ ಗ್ರಾಮದಲ್ಲಿ ಮನೆಯೊಂದು ನಿರ್ಮಾಣ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದರು. ಧರ್ಮ ಭೇದವಿಲ್ಲದೆ ಬಡ ಹೆಣ್ಣು ಮಕ್ಕಳ ವಿವಾಹ ಕಾರ್ಯಕ್ಕೆ…

Read More

ಬೆಂಗಳೂರು ಫೆ.20 NEWS DESK : ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರ ಅದ್ಯಕ್ಷತೆಯಲ್ಲಿ ಮಂಗಳವಾರ ವಿಕಾಸಸೌಧದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಆಡಳಿತ ಮಂಡಳಿಯ ಸಭೆ ನಡೆಸಲಾಯಿತು.  ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮೊಹಮ್ಮದ್ ಮೋಸಿನ್, ಕಾರ್ಯದರ್ಶಿ(ಹಣಕಾಸು) ಆರ್.ವಿಶಾಲ್, ಸಂಸ್ಥೆಯ ನಿದೇರ್ಶಕ ಡಾ. ವಿಶಾಲ್ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.20 NEWS DESK : ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಮಲ್ಟಿಪರ್ಪಸ್ ವರ್ಕರ್ ಹುದ್ದೆಗಳ ನೇಮಕಾತಿ ಸಂಬಂಧ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆಯುಷ್ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಯ್ಕೆಪಟ್ಟಿ ಕುರಿತಂತೆ ಆಕ್ಷೇಪಣೆಗಳು ಇದ್ದಲ್ಲಿ ಫೆ.26 ರ ಸಂಜೆ 4 ಗಂಟೆಯೊಳಗೆ ಜಿಲ್ಲಾ ಆಯುಷ್ ಅಧಿಕಾರಿ, ಆಯುಷ್ ಇಲಾಖೆ, ಮಹದೇವಪೇಟೆ, ಮಡಿಕೇರಿ ಕೊಡಗು ಜಿಲ್ಲೆ ಇವರಿಗೆ ಮನವಿ ಮೂಲಕ ಸಲ್ಲಿಸಬಹುದಾಗಿದೆ. ಈ ಅವಧಿಯ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ  ತಿಳಿಸಿದ್ದಾರೆ.

Read More

ಕುಶಾಲನಗರ, ಫೆ 20 NEWS DESK :  ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹೆಬ್ಬಾಲೆ ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಯೋಗದೊಂದಿಗೆ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರೋಪ ಸಮಾರಂಭದಲ್ಲಿ ಶಿಕ್ಷಕ ಸೇವೆಯಿಂದ ನಿವೃತ್ತಗೊಂಡ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದನಾ ಪತ್ರ ನೀಡಿ ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ , ನಿವೃತ್ತ ಶಿಕ್ಷಕರು ಸೇವೆಯಿಂದಷ್ಟೇ ನಿವೃತ್ತಿಗೊಂಡಿದ್ದರೂ ಅವರು ನಿವೃತ್ತಿ ನಂತರವೂ ಪ್ರವೃತ್ತಿಯಲ್ಲಿ ಶಿಕ್ಷಕರಾಗಿಯೇ ಇದ್ದು, ತಮ್ಮನ್ನು ಶಿಕ್ಷಣ ಕ್ಷೇತ್ರ ಹಾಗೂ ಸಮಾಜದ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ತಮ್ಮ ಆರೋಗ್ಯ ರಕ್ಷಣೆ ಕಡೆ ಹೆಚ್ಚಿನ ಗಮನಹರಿಸಬೇಕು ಎಂದರು. ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಂಡ ಸಹ ಶಿಕ್ಷಕ ಹೆಚ್.ಈ. ರಮೇಶ್ ಹಾಗೂ ಶಿರಂಗಾಲ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ವಿಜಯ್…

Read More

ಮಡಿಕೇರಿ ಫೆ.20 NEWS DESK :  ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಅನವಶ್ಯಕವಾಗಿ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಡಿಕೇರಿ ವಕೀಲರ ಸಂಘ ಇಂದು ನ್ಯಾಯಾಲಯ ಕಲಾಪ ಬಹಿಷ್ಕರಿಸಿತು. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ 32 ವಕೀಲರ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿರುವುದು ಖಂಡನೀಯವೆಂದು ಸಂಘದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ವಕೀಲರ ಸಂಘಟನೆಗಳಿಂದ ನಡೆಯವ ವಿಧಾನಸೌಧ ಚಲೋ ಸಂದರ್ಭ ಮಡಿಕೇರಿ ವಕೀಲರ ಸಂಘದಿಂದ ಕೂಡ ಸದಸ್ಯರು ತೆರಳಿದ್ದಾರೆ ಎಂದು ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ನಾಗರಾಜ್ ಮಾಹಿತಿ ನೀಡಿದರು. ವಕೀಲರ ವಿರುದ್ಧದ ಮೊಕದ್ದಮೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ಸಂಘದ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ಫೆ.20 NEWS DESK :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ…

Read More