ಮಡಿಕೇರಿ ಮಾ.25 NEWS DESK : ಮಾನಸಿಕ ಆರೋಗ್ಯ, ನೀರಿನ ಮಹತ್ವ, ಹಸಿರು ಸಂರಕ್ಷಣೆ ಸಂಬಂಧಿತ ರೋಟರಿ ಸಂಸ್ಥೆಗಳ ವತಿಯಿಂದ ನಗರದಲ್ಲಿ ಜಾದೂ ಮೂಲಕ ಜಾಗೃತಿ ಮೂಡಿಸುವ ವಿಭಿನ್ನ ಕಾಯ೯ಕ್ರಮ ನಡೆಯಿತು. ನಗರದ ರೋಟರಿ ಸಭಾಂಗಣದಲ್ಲಿ ಮಂಗಳೂರು ರೋಟರಿ ಕ್ಲಬ್ ಗಳು, ಮಡಿಕೇರಿಯ ಮೂರು ರೋಟರಿ ಕ್ಲಬ್ ಗಳ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯ, ನೀರನ್ನು ಉಳಿಸಿ ಮತ್ತು ಹಸಿರು ಸಂರಕ್ಷಣೆ ಸಂಬಂಧಿತ ರೋಟರಿ ಸಂಸ್ಥೆಯಿಂದ ವಾಹನ ಜಾಥಾ ನಡೆಯಿತು. ಈ ಕಾಯ೯ಕ್ರಮದಲ್ಲಿ ಕುದ್ರೋಳಿ ಗಣೇಶ್ ಮ್ಯಾಜಿಕ್ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದರು. ನಮ್ಮ ಸಮಾಜದಲ್ಲಿ ಪರಿಸರವೇ ಜಾದೂವಿನಂತಿದೆ. ಇಂಥ ಪರಿಸರವನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸುವುದು ಎಲ್ಲರ ಆದ್ಯ ಕತ೯ವ್ಯವಾಗಬೇಕಾಗಿದೆ ಎಂದು ಕುದ್ರೋಳಿ ಗಣೇಶ್ ಕರೆ ನೀಡಿದರು. ರೋಟರಿ ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷ ಕಿರಣ್ ಪ್ರಸಾದ್ ರೈ ಮಾತನಾಡಿ, ಮಂಗಳೂರಿನಿಂದ ಪ್ರಾರಂಭವಾಗಿರುವ ಈ ವಾಹನ ಜಾಥಾವು 52 ರೋಟರಿ ಸಂಸ್ಥೆಗಳಿಗೆ ತೆರಳಿ ಮಾನಸಿಕ ಆರೋಗ್ಯ, ನೀರನ್ನು ಉಳಿಸುವುದು ಮತ್ತು ಹಸಿರು ಸಂರಕ್ಷಣೆಯ ಮಹತ್ವವನ್ನು…
ಲೇಖಕ: admin
ವಿರಾಜಪೇಟೆ ಮಾ.25 NEWS DESK : ಬಾಡಗ ಪುದುಕೇರಿ ಮಹಾದೇವರ ದೇವಾಲಯದ ಜಾತ್ರಾ ಮಹೋತ್ಸವ ಅಂಗವಾಗಿ ದೇವಾಲಯದಲ್ಲಿ ಬಿಟ್ಟಂಗಾಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸಂಘದ ಸದಸ್ಯರುಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ದೇವಾಲಯದ ಆವರಣವನ್ನು ಶುಚಿಗೊಳಿಸಿ, ಸುತ್ತಮುತ್ತ ಬೆಳೆದಿದ್ದ ಕಾಡು ಗಿಡಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶುಚಿಗೊಳಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಹಾಗೂ ಸದಸ್ಯರುಗಳಾದ ರೇಖಾ ಗಣೇಶ್, ಗೀತಾ, ರಂಜನ್ ಮೋಹನ್, ಅರುಣ್, ಕಿರಣ್, ಸ್ವಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಮಡಿಕೇರಿ ಮಾ.25 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕೊಡಗಿನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದರು. ಈಚೂರು ಕುಂದ ಗ್ರಾಮದ ಶ್ರೀ ತಲೆಬಲೇಶ್ವರ ಬನ ದೇವಾಲಯಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಪೊನ್ನಂಪೇಟೆಯ ಶ್ರೀ ಮಹಾವಿಷ್ಣು ದೇವಾಲಯದ ಪುನರ್ ಪ್ರತಿಷ್ಠಾಪನೆ, ನಲ್ಲಗೋಟಿ ಭಾಗದ ಕೋಟೆಬೆಟ್ಟ ಎಸ್ಟೇಟ್ (ಕುಂದ) ಪಾಲಿಬೆಟ್ಟ ರಸ್ತೆಯ ಶ್ರೀ ಸುಬ್ರಮಣ್ಯ ಸ್ವಾಮಿಯ ವಾರ್ಷಿಕ ಮಹೋತ್ಸವ, ಅರವತ್ತೋಕ್ಲು ಕಡ್ಲಿಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ವಿರಾಜಪೇಟೆ ಮಾ.25 NEWS DESK : ವಿರಾಜಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಬಾಳುಗೋಡು ಏಕಲವ್ಯ ವಸತಿ ಶಾಲೆಯ ಪ್ರಾಂಶುಪಾಲ ಡಾ.ದಿಲನ್ ಮುತ್ತಣ್ಣ ಅವರನ್ನು ನೇಮಕ ಮಾಡಲಾಗಿದೆ. ತಾಲೂಕಿನಾದ್ಯಂತ ಶರಣ ಸಾಹಿತ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸಬೇಕು ಹಾಗೂ ಬಸವಾದಿ ಶರಣರ ಜೀವನ ಮೌಲ್ಯಗಳನ್ನು ಜನಮಾನಸದಲ್ಲಿ ಪರಿಚಯಿಸುವ ಮೂಲಕ ಅರಿವು ಮೂಡಿಸಬೇಕಿದೆ ಎಂದು ಶಸಾಪ ಕೊಡಗು ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮಾ.25 NEWS DESK : ಕರ್ನಾಟಕ ಪರಂಪರೆ ರ‍್ಯಾಲಿ ಪರಿಕಲ್ಪನೆಯೊಂದಿಗೆ ಜಿಲ್ಲೆಗೆ ಆಗಮಿಸಿರುವ ನೌಕಾದಳದ ಅಧಿಕಾರಿಗಳ ತಂಡ ನಗರದ ಬಾಲಭವನ ಹಾಗೂ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿತು. ನೌಕಾದಳದ ಅಧಿಕಾರಿ ರಿಯರ್ ಅಡ್ಮಿರಲ್ ರಾಮಕೃಷ್ಣನ್ ನೇತೃತ್ವದಲ್ಲಿ ಬಾಲಭವನಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳಿಗೆ ಅಗ್ನಿಪಥ್ ಯೋಜನೆಯ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಲವು ಮಾಹಿತಿಗಳನ್ನು ನೀಡಿದರು. ಮಕ್ಕಳೊಂದಿಗೆ ಸಂವಾದ ನಡೆಸಿದ ತಂಡದ ಪ್ರಮುಖರು ಮಕ್ಕಳಿಗೆ ಅಗತ್ಯ ವಸ್ತುಗಳ ಜೊತೆ ಸಹಿ ವಿತರಿಸಿದರು. ನಂತರ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿ ಆಶ್ರಯಪಡೆದಿರುವವರನ್ನು ಭೇಟಿಯಾಗಿ ವಿವಿಧ ಅಗತ್ಯತೆಯ ವಸ್ತುಗಳನ್ನು ಕೊಡುಗೆಯಾಗಿ ನೀಡಿದರು. ಪ್ರಮುಖರೊಂದಿಗೆ ಸಮಾಲೋಚನೆ :: ನಿವೃತ್ತ ಸೇನಾಧಿಕಾರಿಗಳು ಹಾಗೂ ಇತರ ಪ್ರಮುಖರೊಂದಿಗೆ ನೌಕಾದಳ ತಂಡ ನಗರದ ಕ್ಯಾಪಿಟಲ್ ವಿಲೇಜ್‍ನಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು. ಅಲ್ಲದೇ ಅಧಿಕಾರಿಗಳಿಗೆ ಕೊಡಗಿನ ಕೊಡವ ಸಂಸ್ಕೃತಿಯಾದ ಉಮ್ಮತ್ತಾಟ್, ಕತ್ತಿಯಾಟ್, ಬೊಳಕಾಟ್ ನಂತಹ ಜನಪದ ಕಲೆಗಳನ್ನು ಪ್ರದರ್ಶಿಸಿ ವಿಶೇಷತೆ ಕುರಿತು ವಿವರಿಸಲಾಯಿತು ಎಂದು 30 ಮುಂದಿ ಅಧಿಕಾರಿಗಳ…
ಮಡಿಕೇರಿ ಮಾ.25 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಪೊಲೀಸರ ಸಭೆ ಕೊಡಗು- ಕೇರಳ ಗಡಿಯ ಕರಿಕೆ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಮಡಿಕೇರಿ ಹಾಗೂ ಸುಳ್ಯ ತಾಲ್ಲೂಕಿನ ಪೊಲೀಸ್ ಅಧಿಕಾರಿಗಳು ಸುದೀರ್ಘ ಕಾಲ ಚರ್ಚಿಸಿ ಚುನಾವಣಾ ಕರ್ತವ್ಯದ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಗಡಿ ಪ್ರದೇಶಗಳಲ್ಲಿ ತಪಾಷಣೆ, ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದು, ಅಂತರ್ ಜಿಲ್ಲಾ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹ, ಚೆಕ್ ಪೋಸ್ಟ್ ಗಳಲ್ಲಿ ತನಿಖೆಯ ವಿಧಾನ, ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳಿಂದ ಕರ್ತವ್ಯಕ್ಕೆ ಸಂಬಂಧಿಸಿದಂತೆ ಪರಸ್ಪರ ಸಹಕಾರ ಪಡೆದುಕೊಳ್ಳುವುದು ಸೇರಿದಂತೆ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಿದರು. ಮಡಿಕೇರಿ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಳ್ಯ, ರಾಜಪುರಂ, ಭಾಗಮಂಡಲ, ನಾಪೋಕ್ಲು, ಮಡಿಕೇರಿ ಪೋಲಿಸ್ ಠಾಣೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಮಡಿಕೇರಿ ಮಾ.25 NEWS DESK : ಕುಂದಾ ಬೆಟ್ಟದ ತಪ್ಪಲಿನಲ್ಲಿ ಗುಮ್ಮಟೀರ ಕುಟುಂಬಸ್ಥರ ಜಾಗದಲ್ಲಿ ಪುರಾತನ ಕಾಲದಲ್ಲಿ ಪಾಂಡವರು ನಿರ್ಮಿಸಿದರು ಎನ್ನಲಾದ ತಲೆಬಲ್ಯ ಈಶ್ವರ ದೇವಾಲಯದ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಕಲ್ಯಾಟಜ್ಜಪ್ಪ ಮಾರ್ಗದರ್ಶನದಂತೆ ಮೂರು ದಿನಗಳ ಕಾಲ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪ್ರಾರ್ಥನೆ ನೆರವೇರಿಸಿದರು.
ಮಡಿಕೇರಿ ಮಾ.25 NEWS DESK : ವಾಂಡರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ ಸ್ವಾಮಿ ಸ್ಮರಣಾರ್ಥ ಏ.1 ರಿಂದ ಮೇ 2ರ ವರೆಗೆ ಮಡಿಕೇರಿಯಲ್ಲಿ ಉಚಿತ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಕ್ಲಬ್‍ನ ಸಂಯೋಜಕ ಬೊಪ್ಪಂಡ ಶ್ಯಾಂ ಪೂಣಚ್ಚ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 30ನೇ ವರ್ಷದ ಉಚಿತ ಬೇಸಿಗೆ ಶಿಬಿರ ನಡೆಯಲಿದ್ದು, 6 ರಿಂದ 16 ವರ್ಷದ ಒಳಗಿನ ಬಾಲಕ-ಬಾಲಕಿಯರು ಪಾಲ್ಗೊಳ್ಳಬಹುದಾಗಿದೆ ಎಂದರು. ಶಿಬಿರದಲ್ಲಿ ಹಾಕಿ, ಯೋಗ, ಪ್ರಾಣಾಯಾಮ ಹಾಗೂ ಅಥ್ಲೆಟಿಕ್ಸ್ ಸೇರಿದಂತೆ ನುರಿತು ತರಬೇತುದಾರರಿಂದ ಬೆಳಿಗ್ಗೆ 6.30 ಗಂಟೆಯಿಂದ ಬೆಳಿಗ್ಗೆ 8.30 ಗಂಟೆಯವರೆಗೆ ತರಬೇತಿ ನಡೆಯಲಿದೆ. ಆಸಕ್ತರು ನೋಂದಣಿಗಾಗಿ 9448895950, 9448873999 ನ್ನು ಸಂಪರ್ಕಿಸುವಂತೆ ತಿಳಿಸಿದರು. ಶಿಬಿರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳಿಗೆ ಉಚಿತವಾಗಿ, ಬ್ರೆಡ್, ಬಾಳೆಹಣ್ಣು, ಮೊಟ್ಟೆ, ಹಾಲು ನೀಡಲಾಗುತ್ತದೆ. ಅಲ್ಲದೆ ಶಿಬಿರದ ಕೊನೆಯ ದಿನ ಶಿಬಿರಾರ್ಥಿಗಳಿಗೆ ಚಾರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ…
ಮಡಿಕೇರಿ ಮಾ.25 NEWS DESK : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಯುವ ಬರಹಗಾರರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು, ಯುವ ಬರಹಗಾರರಿಗೆ ಪ್ರೋತ್ಸಾಹ ನೀಡಲು ಕೊಡವ ಮಕ್ಕಡ ಕೂಟ ಸದಾ ಸಿದ್ಧವಿದೆ ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟದ 88ನೇ ಪುಸ್ತಕ ಹಾಗೂ ಲೇಖಕಿ ಯಶೋಧ ಪೇರಿಯಂಡ ಅವರ ಪ್ರಥಮ ಪುಸ್ತಕ “ಚುಪ್ಪಿ ಕತೆರ ಜೊಪ್ಪೆ” ಯ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಭಾಷೆಯಲ್ಲಿ ರಚನೆಗೊಂಡ ಒಟ್ಟು 87 ಪುಸ್ತಕಗಳನ್ನು ಕೂಟದ ಮೂಲಕ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೊಸ ಬರಹಗಾರರೊಂದಿಗೆ ಯುವ ಬರಹಗಾರರನ್ನೂ ಪರಿಚಯಿಸುತ್ತಾ ಬರಲಾಗಿದೆ. ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಯುವ ಬರಹಗಾರರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕಾಗಿದೆ, ಆ ಮೂಲಕ ಸಾಹಿತ್ಯ ಕೃಷಿ ಆಗಬೇಕಾಗಿದೆ. ಇದೇ ಕಾರಣಕ್ಕೆ ಕೂಟ ಯುವ ಬರಹಗಾರರಿಗೆ ಹೆಚ್ಚು ಉತ್ತೇಜನ ನೀಡುತ್ತಿದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದರು. ಸಾಮಾಜಿಕ…
ಮಡಿಕೇರಿ ಮಾ.25 NEWS DESK : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾ.27 ರಂದು ಮಡಿಕೇರಿಗೆ ಭೇಟಿ ನೀಡಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಜಿಲ್ಲಾ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ತಿಳಿಸಿದ್ದಾರೆ. ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ವಿಜಯೇಂದ್ರ ಅವರನ್ನು ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಕುಶಾಲನಗರದ ಕೊಪ್ಪ ಗೇಟ್ ಬಳಿ ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.






