ಲೇಖಕ: admin

ಸಿದ್ದಾಪುರ ಫೆ.19 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 2024-25 ನೇ ಸಾಲಿನ ಬಜೆಟ್ ನಲ್ಲಿ ಎಲ್ಲಾ ವರ್ಗದ ಜನರನ್ನು ಗೌರವದಿಂದ ಕಾಣುವ ಮೂಲಕ ಅಭಿವೃದ್ಧಿಪರ ಚಿಂತನೆಯನ್ನು ಹರಿಸಿದೆ ಎಂದು ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ.ಮುಸ್ತಫ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಜನಪರ ಬಜೆಟ್ ಮಂಡನೆ ಮಾಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರೀತಿಯಲ್ಲಿಯೇ ನುಡಿದಂತೆ ನಡೆದುಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿನಂದನೆಗೆ ಅರ್ಹವಾಗಿದೆ ಎಂದು ತಿಳಿಸಿದ್ದಾರೆ.

Read More

ಮಡಿಕೇರಿ, ಫೆ.19 NEWS DESK : ಕೊಡಗು ಜಿಲ್ಲೆಯ ಗ್ರಾಮ ಪಟ್ಟಣ ವ್ಯಾಪ್ತಿಗಳಲ್ಲಿ ಕಾವೇರಿ ನದಿ ಗಡಿ ಗುರುತು ಜಂಟಿ ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ ಮತ್ತು ನದಿ ತಟಗಳ ಅಭಿವೃದ್ಧಿ ಮಾಡಲು ಯೋಜನೆ ರೂಪಿಸುವಂತೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜೀವನದಿ ಕಾವೇರಿಗೆ ಜಿಲ್ಲೆಯ ಗ್ರಾಮ ಪಟ್ಟಣಗಳಿಂದ ನಿರಂತರವಾಗಿ ಕಲುಷಿತ ತ್ಯಾಜ್ಯ ನೇರವಾಗಿ ಸೇರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅವೈಜ್ಞಾನಿಕ ಪ್ರವಾಸೋದ್ಯಮ ಮೂಲಕ ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ನೇರವಾಗಿ ನದಿ ಒಡಲು ಸೇರುತಿದೆ. ಈ ಮೂಲಕ ನದಿ ನೀರಿನ ಗುಣಮಟ್ಟ ಸಂಪೂರ್ಣ ಕುಸಿತ ಕಾಣುತ್ತಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದು, ಮಡಿಕೇರಿ ತಾಲೂಕು, ವಿರಾಜಪೇಟೆ ತಾಲೂಕು ಮತ್ತು ಕುಶಾಲನಗರ ತಾಲೂಕು ವ್ಯಾಪ್ತಿಯ 22 ಗ್ರಾಮ ಪಂಚಾಯಿತಿ ಮತ್ತು ಒಂದು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಕಾವೇರಿಗಾಗಿ ಕ್ರಿಯಾ ಯೋಜನೆ ರೂಪಿಸುವಂತೆ ಮನವಿ ಸಲ್ಲಿಸಲಾಯಿತು. ಕಾವೇರಿ ನದಿ ಸಂರಕ್ಷಣೆಗಾಗಿ ಸರಕಾರದ ಮೂಲಕ ಅನುದಾನ ಕಲ್ಪಿಸುವುದು, ಹಂತ ಹಂತವಾಗಿ…

Read More

ಸೋಮವಾರಪೇಟೆ ಫೆ.19 : ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಪಟ್ಟಣ ಸಮೀಪದ ದೊಡ್ಡಮಳ್ತೆ ಗ್ರಾಮದಲ್ಲಿರುವ ಶ್ರೀ ಹೊನ್ನಮ್ಮ ಕೆರೆ ದಡದಲ್ಲಿ ರಥಸಪ್ತಮಿ ಅಂಗವಾಗಿ 108 ಸೂರ್ಯ ನಮಸ್ಕಾರ ನಡೆಯಿತು. ಸಂಸ್ಥೆಯ ಶಿಕ್ಷಕಿ ರಾಗಿಣಿ ಅವರ ನೇತೃತ್ವದಲ್ಲಿ ಸಾರ್ವಜನಿಕರು ಸೂರ್ಯನಿಗೆ 108 ಸೂರ್ಯ ನಮಸ್ಕಾರ ಮಾಡಿದರು. ನಂತರ ಶ್ರೀ ಕ್ಷೇತ್ರ ಹೊನ್ನಮ್ಮನ ದೇವಾಲಯದಲ್ಲಿ ಲಲಿತ ಸಹಸ್ರನಾಮ ನಡೆಯಿತು. ಈ ಸಂದರ್ಭ ಮಾತನಾಡಿದ ರಾಗಿಣಿ ಅವರು, ಯೋಗ ಮತ್ತು ಧ್ಯಾನದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಪ್ರತಿಯೋರ್ವರು ನಿರಂತರವಾಗಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್‍ನ ಮೃತ್ಯುಂಜಯ, ಜಿ.ಪಂ. ಮಾಜಿ ಸದಸ್ಯ ಬಿ.ಜೆ. ದೀಪಕ್, ಡಾ. ಸುಪರ್ಣ ಕೃಷ್ಣಾನಂದ್, ಪ್ರಮುಖರಾದ ಕೊಮಾರಪ್ಪ, ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಳ್ಳಿ ನವೀನ್ ಸೇರಿದಂತೆ ಇತರರು ಇದ್ದರು.

Read More

ಹಾವೇರಿ, ಫೆ.18 NEWS DESK : ವೈದ್ಯಕೀಯ ಕಾಲೇಜುಗಳು ಪ್ರಾರಂಭ ಆಗಿರುವುದರಿಂದ, ತನಿಖೆಯು ಮುಂದುವರಿಯಲಿದ್ದರೂ, ಕೆಲಸ ಮಾಡಿರುವ ಗುತ್ತಿಗೆದಾರರ ಬಾಕಿ ಬಿಲ್ ಗಳನ್ನು ಷರತ್ತುಬದ್ಧವಾಗಿ ತನಿಖೆ ವರದಿಯನ್ನು ನಿರೀಕ್ಷಿಸಿ ಪಾವತಿಸಲು ಸಚಿವಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕಾಲೇಜುಗಳ ಕಾಮಗಾರಿ ನಿಲ್ಲಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ರಾಜ್ಯದ 4 ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ ಆಗಿರಬಹುದಾದ ಅಕ್ರಮದ ತನಿಖೆಗೆ ಸಂಬಂಧಿಸಿದ  ಪ್ರಶ್ನೆಗೆ ಉತ್ತರಿಸಿದರು. *ಭ್ರಷ್ಟಾಚಾರ ನಿಗ್ರಹಕ್ಕೆ ಕ್ರಮ:* ಈಗಿನ ಸರ್ಕಾರದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಉದ್ದೇಶ ಸರ್ಕಾರಕ್ಕಿದೆ. ಆದ್ದರಿಂದ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ ಶಿಕ್ಷಿಸುವ ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದರು. *ಅಕ್ಕಿ ಕೊರತೆ ಇಲ್ಲ* ಹಿಂದುಳಿದ ವರ್ಗಗಳ ವಸತಿ ನಿಲಯಗಳಿಗೆ ಅಕ್ಕಿ ಕೊರತೆ ಕಾಡುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅಕ್ಕಿ   ಹಾಸ್ಟೆಲ್ ಗಳಿಗಾಗಲಿ, ಫಲಾನುಭವಿಗಳಿಗಾಗಲಿ ನೀಡುವ  ಅಕ್ಕಿಸರಬರಾಜಿಗೆ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.…

Read More

ಮಡಿಕೇರಿ ಫೆ. 18 NEWS DESK : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಚೈನ್ ಗೇಟ್ ಬಳಿ ಅಳವಡಿಸಿರುವ ಮಾಹಿತಿ ಫಲಕವನ್ನು ರೋಟರಿ ಜಿಲ್ಲಾ ಗವನ೯ರ್ ಹೆಚ್.ಆರ್.ಕೇಶವ್ ಅನಾವರಣಗೊಳಿಸಿದರು. ಮೊಬೈಲ್ ಗಮನಿಸುತ್ತಾ ಸಂಚರಿಸಬೇಡಿ, ಅಪಾಯಕ್ಕೆ ಆಸ್ಪದ ಮಾಡಬೇಡಿ , ಮಂಜು ಮುಸುಕಿದ ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರವಿರಲಿ, ಮುಂದಿನ ವಾಹನವನ್ನು ಹಿಂದೆ ಹಾಕುವ ಸಂದಭ೯ ಹುಷಾರಾಗಿರಿ ಎಂಬ ಎಚ್ಚರಿಕೆಯ ಸಂದೇಶವುಳ್ಳ ಫಲಕವು ಉತ್ತಮ ಜಾಗ್ರತಿ ಸಂದೇಶವಾಗಿದೆ ಎಂದು ಕೇಶವ್ ಶ್ಲಾಘಿಸಿದರು. ಈ ಸಂದಭ೯  ನಗರಸಭೆಯ ಅಧ್ಯಕ್ಷೆ ಅನಿತಾ ಪೂವಯ್ಯ,  ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ, ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್ . ಎಸ್.ಸಂಪತ್ ಕುಮಾರ್ , ಪ್ರಮುಖರಾದ ಬಿ.ಜಿ. ಅನಂತಶಯನ, ಅನಿಲ್ ಎಚ್.ಟಿ. ಬಿ.ಕೆ.ರವೀಂದ್ರರೈ, ಪ್ರಸಾದ್ ಗೌಡ ಸೇರಿದಂತೆ ಮಿಸ್ಟಿ ಹಿಲ್ಸ್ ನಿದೇ೯ಶಕರು ಹಾಜರಿದ್ದರು,

Read More

ಮಡಿಕೇರಿ ಫೆ.18 : ಪಾದಾಚಾರಿಗೆ ವಾಹನ ಡಿಕ್ಕಿಪಡಿಸಿ ಸಾವಿಗೆ ಕಾರಣನಾಗಿರುವುದಲ್ಲದೆ, ವಾಹನ ನಿಲ್ಲಿಸದೆ ಪರಾರಿಯಾಗಿರುವ ಆರೋಪದಡಿ ವಾಹನದ ಮಾಲೀಕನನ್ನು ಕುಶಾಲನಗರ ಸಂಚಾರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರಸಂತೆ ಸಮೀಪದ ಹುಲಸೆ ಗ್ರಾಮದ ಶಿರಂಗಾಲ ನಿವಾಸಿ ರಜಾಕ್ ಎಂ.ಎಂ(35) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಪಾದಚಾರಿಗೆ ಡಿಕ್ಕಿಪಡಿಸಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಬ್ಬಾಲೆ ಗ್ರಾಮದ ರಾಜ್ಯ ಹೆದ್ದಾರಿ 91ರ ರಸ್ತೆಯಲ್ಲಿ ಫೆ.6ರಂದು ಬೆಳಗ್ಗೆ 6.30 ರ ಸಮಯದಲ್ಲಿ ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಕುಶಾಲನಗರ ನಗರ ಠಾಣೆ, ಸಂಚಾರಿ ಠಾಣಾ ಪೊಲೀಸರು ಹಾಗೂ ಸೀನ್ ಆಫ್ ಕ್ರೈಂ ತಂಡದ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ವ್ಯಕ್ತಿ ವಾಹನ ಅಪಘಾತದಲ್ಲಿ ಮೃತಪಟ್ಟಿರುವುದು ಖಚಿತವಾಗಿತ್ತು. ಆತ ಮೂಲತಃ ಮೂಲ್ಕಿ ಮೂಲದ ಫೆಲಿಕ್ಸ್ ಡಿಸೋಜಾ ಎಂದು ಗುರುತು ಪತ್ತೆ ಮಾಡಿ ಬಳಿಕ ಮೃತದೇಹವನ್ನು ಆತನ ವಾರಸುದಾರರಿಗೆ ಹಸ್ತಾಂತರಿಸಲಾಗಿತ್ತು. ಈ ‘ಹಿಟ್ ಆ್ಯಂಡ್ ರನ್’ ಪ್ರಕರಣದ ಕುರಿತು ಕುಶಾಲನಗರ ಸಂಚಾರಿ ಪೊಲೀಸ್…

Read More

ಮಡಿಕೇರಿ ಫೆ.18 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ಹೋಬಳಿಯ ಮೂರ್ನಾಡು ಘಟಕದÀ ಅಧ್ಯಕ್ಷರನ್ನಾಗಿ ಸಾಹಿತಿ ಈರಮಂಡ ಹರಿಣಿ ವಿಜಯ್ ಹಾಗೂ ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಹೋಬಳಿಯ ಅಧ್ಯಕ್ಷರನ್ನಾಗಿ ಸಾಹಿತಿ ಉಳುವಂಗಡ ಕಾವೇರಿ ಉದಯ ಅವರನ್ನು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್ ಅವರು ನೇಮಕ ಮಾಡಿದ್ದಾರೆ ಎಂದು ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.18 NEWS DESK : ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮೋಕ್ಷಿತ್ ರಾಜ್ ಹೊನ್ನುಗುಡಿ ಹಾಗೂ ದರ್ಶನ್ ಜೋಯಪ್ಪ ಅವರುಗಳನ್ನು ನೇಮಕ ಮಾಡಿರುವುದಾಗಿ ಮಂಡಲದ ಅಧ್ಯಕ್ಷ ಗೌತಮ್ ಗೌಡ ತಿಳಿಸಿದ್ದಾರೆ. ವಕ್ತಾರರಾಗಿ ಕಂಠಿ ಕಾರ್ಯಪ್ಪ, ಕೋಶಾಧ್ಯಕ್ಷರಾಗಿ ಉಮಾಶಂಕರ್, ಉಪಾಧ್ಯಕ್ಷರುಗಳಾಗಿ ಎಂ.ಡಿ.ಕೃಷ್ಣಪ್ಪ, ಎನ್.ಆರ್.ಅಜೀಶ್ ಕುಮಾರ್, ಭುವನೇಂದ್ರ ಜಿ.ಆರ್, ಅರುಣ ಕುಮಾರಿ ಎಚ್.ಪಿ, ಯೋಗೇಶ್ ಎಂ.ಎಸ್, ಪದ್ಮಾವತಿ ಹೆಚ್.ಜಿ, ಕಾರ್ಯದರ್ಶಿಗಳಾಗಿ ಲಿಖಿತ್ ಎಂ.ಡಿ, ಇಂದಿರಾ ಮೊಣ್ಣಪ್ಪ, ನಿತ್ಯಾನಂದ, ಸಂಜು ಹರಗ, ವೇದಾವತಿ, ಸುಜಾತ ಬಿ.ಜೆ ಹಾಗೂ ಕಾರ್ಯಾಲಯ ಕಾರ್ಯದರ್ಶಿಯಾಗಿ ಪ್ರಜಾ ಪೂಣಚ್ಚ ಆಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷರ ಅನುಮೋದನೆ ಮೇರೆಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸೋಮವಾರಪೇಟೆ ಮಂಡಲದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದು ಎಂದು ಗೌತಮ್ ಗೌಡ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.18 NEWS DESK : ಇತ್ತೀಚೆಗೆ ಕುಶಾಲನಗರದ ಶೋರೂಮ್ ಒಂದರಲ್ಲಿ ಹಲ್ಲೆಗೊಳಗಾಗಿ ಮೃತಪಟ್ಟ ಮಡಿಕೇರಿ ನಗರದ ಗಣಪತಿ ಬೀದಿ ನಿವಾಸಿ ಶದೀದ್ ಅವರ ಮನೆಗೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಮಡಿಕೇರಿ ಮುಸ್ಲಿಂ ಜಮಾಅತ್ ಗಳ ಒಕ್ಕೂಟದ ಪದಾಧಿಕಾರಿಗಳು ಶಾಸಕರಿಗೆ ಮನವಿ ಸಲ್ಲಿಸಿ ರೂ.10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು, ಸರ್ಕಾರಿ ನಿವೇಶನ ಮಂಜೂರು ಮಾಡಬೇಕು ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳು ಶದೀದ್ ಗೆ ಪ್ರಾಥಮಿಕ ಚಿಕಿತ್ಸೆ ನೀಡದೆ ನಿರ್ಲಕ್ಷö್ಯ ವಹಿಸಿದ ಆರೋಪ ಎದುರಿಸುತ್ತಿರುವ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವ ಬೇಡಿಕೆಗಳ ಮನವಿ ಪತ್ರವನ್ನು ಶಾಸಕರಿಗೆ ಸಲ್ಲಿಸಿದರು. ಮುಸ್ಲಿಂ ಜಮಾಅತ್ ಗಳ ಒಕ್ಕೂಟದ ಅಧ್ಯಕ್ಷ ನಜೀರ್, ಉಪಾಧ್ಯಕ್ಷ ಫಯಾಜ್, ಪ್ರಧಾನ ಕಾರ್ಯದರ್ಶಿ ಅಮೀನ್ ಮೊಹಿಸಿನ್, ಖಜಾಂಚಿ ಇಸ್ಮಾಯಿಲ್, ಸದಸ್ಯ ಮೊಹಮ್ಮದ್ ಆಲಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.17 NEWS DESK : ಸಂಪಾಜೆ ಮತ್ತು ಮಾದಾಪುರದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಲಮುರಿ ನಿವಾಸಿ ಸುದೀಪ್.ಟಿ.ಎಸ್ (23), ಎಂ.ಬಾಡಗ ನಿವಾಸಿ ನಿಶಾಂತ್ ಎಂ.ಎಂ (27) ಹಾಗೂ ನಾಪೋಕ್ಲು ಹಳೇ ತಾಲ್ಲೂಕು ನಿವಾಸಿ ಇಬ್ರಾಹಿಂ (29) ಬಂಧಿತ ಆರೋಪಿಗಳಾಗಿದ್ದಾರೆ. ಇದೇ ಫೆ.8 ರಂದು ಸಂಪಾಜೆ ಗ್ರಾಮದ ನಿವಾಸಿ ವಿಜಯ್ ಕುಮಾರ್.ಕೆ.ಕೆ ಎಂಬುವವರ ಮನೆಯಲ್ಲಿ ಯಾರು ಇಲ್ಲದಿರುವ ಸಂದರ್ಭ ಬಾಗಿಲ ಬೀಗವನ್ನು ಮುರಿದು ಒಳ ನುಗ್ಗಿದ ಚೋರರು ಅಂದಾಜು 47 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ರೂ.20 ಸಾವಿರ ನಗದನ್ನು ಕಳವು ಮಾಡಿರುವ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ಬಳಿಯಿಂದ ಈ ಪ್ರಕರಣಕ್ಕೆ ಸಂಬAಧಿಸಿದAತೆ 30 ಗ್ರಾಂ 630 ಮಿಲಿ ಚಿನ್ನಾಭರಣ ಮತ್ತು ರೂ.4,860 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಫೆ.9 ರಂದು ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪುರ ಗ್ರಾಮದ ನಿವಾಸಿ ಜೀವನ್.ಡಿ…

Read More