ಮಡಿಕೇರಿ ಫೆ.17 NEWS DESK : ನಗರಸಭೆಯ 2024-25 ನೇ ಸಾಲಿನ ಆಯವ್ಯಯ ತಯಾರಿಸುವ ಸಲುವಾಗಿ ಆದಾಯ ಮತ್ತು ಖರ್ಚುಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ಪಡೆಯಲು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಫೆ.28 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಎನ್‍ಜಿಒಗಳು ಮತ್ತು ಮಾಜಿ ಚುನಾಯಿತ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಹಾಗೂ ಆಸಕ್ತಿಯುಳ್ಳ ಸಾರ್ವಜನಿಕರು ಹಾಜರಾಗಿ ತಮ್ಮ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಎಂದು ನಗರಸಭೆ ಪೌರಾಯುಕ್ತರಾದ ವಿಜಯ್ ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಫೆ.17 NEWS DESK : ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಅದಕ್ಕಾಗಿಯೇ ರೂಪಿಸಿರುವ ಕಾನೂನನ್ನು ಪ್ರತಿಯೊಬ್ಬ ಮಹಿಳೆಯೂ ಬಳಸಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ತಿಳಿಸಿದರು. ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಇವರ ಸಹಯೋಗದೊಂದಿಗೆ ನಡೆದ “2023-24 ಸಾಲಿನ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ಹಾಗೂ ನಿಯಮ 2006 ಅನುಷ್ಠಾನದಲ್ಲಿ ಭಾಗಿದಾರ ಇಲಾಖೆಗಳ ಪಾತ್ರ ಕುರಿತು 2 ದಿನಗಳ ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನನದಿಂದ ಹಿಡಿದು ಮರಣದವರೆಗೂ ಸುಮಾರು 600 ಕಾನೂನನ್ನು ರಚಿಸಲಾಗಿದ್ದು, ಪ್ರತಿಯೊಬ್ಬರಲ್ಲೂ ಕಾನೂನಿನ ಬಗ್ಗೆ ಅರಿವು ಮೂಡಿಸಬೇಕು. ಯಾವುದೇ ಜಾತಿ, ಧರ್ಮದ ಬೇಧವಿಲ್ಲದೆ ಇಂತಹ ಕಾನೂನು ಅರಿವು ಕಾರ್ಯಕ್ರಮಗಳನ್ನು ಮಹಿಳೆ ಹಾಗೂ ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದು ಕೆ.ಬಿ.ಪ್ರಸಾದ್ ತಿಳಿಸಿದರು. ಸಂಪನ್ಮೂಲ…
ಕುಶಾಲನಗರ,ಫೆ.17 NEWS DESK : ಹಕ್ಕುಪತ್ರಕ್ಕಾಗಿ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ಅಕ್ರಮಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು, ಆದಷ್ಟು ಬೇಗನೇ ಹಕ್ಕುಗಳನ್ನು ನೀಡಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಕುಶಾಲನಗರ ತಾಲ್ಲೂಕು ತಹಶೀಲ್ದಾರರಿಗೆ ಮನವಿ ಪತ್ರ ನೀಡಿದರು. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ನೂರಾರು ಜನರು ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆಲವರು ಅರ್ಜಿ ಸಲ್ಲಿಸಿ ಹಲವು ವರ್ಷಗಳು ಕಳೆದಿದೆ. ಸರ್ಕಾರಿ ಸೌಲಭ್ಯ ಹಾಗೂ ಇನ್ನಿತರ ಅನುಕೂಲಗಳನ್ನು ಪಡೆಯಲು ಸಾರ್ವಜನಿಕರಿಗೆ ಹಕ್ಕುಪತ್ರ ಅತ್ಯಗತ್ಯವಾಗಿದೆ. ದಿನೇ ದಿನೇ ಸಾರ್ವಜನಿಕರು ಹಕ್ಕುಪತ್ರಕ್ಕಾಗಿ ಕಚೇರಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಆದಷ್ಟು ಬೇಗನೇ ಸಾರ್ವಜನಿಕರಿಗೆ ಹಕ್ಕುಪತ್ರವನ್ನು ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಅಲ್ಲದೇ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ 5000 ಸಾವಿರ ಹಕ್ಕುಪತ್ರಗಳನ್ನು ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆ ಸಂದರ್ಭದಲ್ಲಿ ಕೆಲವರ ಹಕ್ಕುಪತ್ರದಲ್ಲಿ ಅಳತೆಯ ವ್ಯತ್ಯಾಸ ಕಂಡುಬಂದಿದೆ. ಅವುಗಳನ್ನು ಕೂಡಾ ಸರಿಪಡಿಸಿಕೊಡಬೇಕು ಎಂದು ಕೆ.ಬಿ.ಶಂಶುದ್ಧೀನ್ ಮನವಿ ಮಾಡಿದ್ದಾರೆ. ಆದಷ್ಟು ಬೇಗನೇ ಸಾರ್ವಜನಿಕರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ತಹಶಿಲ್ದಾರ್…
ಮಡಿಕೇರಿ ಫೆ.17 NEWS DESK : `ಕರ್ನಾಟಕ ಸಾಂಸ್ಕೃತಿಕ ನಾಯಕ’ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಗರದ ಗಾಂಧಿ ಭವನದಲ್ಲಿ ಅನಾವರಣ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸ0ಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರ ಅನಾವರಣಗೊಳಿಸಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಗೌತಮ ಬುದ್ಧ ನಂತರ ಬಸವೇಶ್ವರರು ರಾಷ್ಟ್ರದಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದರು ಎಂದರು. 12ನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳುವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ ವಚನಗಳ ಮೂಲಕ ಜಾಗೃತಿ ಮೂಡಿಸಿದ ಬಸವೇಶ್ವರರನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿರುವುದು ವಿಶೇಷವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಗೌತಮ ಬುದ್ಧ, ಬಸವಣ್ಣ ನಂತರ ಮಹಾತ್ಮ ಗಾಂಧೀಜಿ ಅವರು ಸಮಾಜದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಜಾಗೃತಿ ಮೂಡಿಸಿದರು. ಬಸವೇಶ್ವರರು ವಚನಗಳ ಮೂಲಕ ನಾಡಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರ…
ಮಡಿಕೇರಿ ಫೆ.17 NEWS DESK : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಹಮ್ಮಿಕೊಂಡಿರುವ “ಕರ್ನಾಟಕಕ್ಕಾಗಿ ನಾವು” ಜನಜಾಗೃತಿ ಬೈಕ್ ಜಾಥಾವು ಫೆ.21 ರಂದು ಕೊಡಗಿಗೆ ಆಗಮಿಸಲಿದ್ದು, ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಪ್ರಜ್ಞಾವಂತ ನಾಗರಿಕರು ಸಕ್ರಿಯವಾಗಿ ಭಾಗವಹಿಸಿ, ಬೆಂಬಲಿಸುವಂತೆ ಪಕ್ಷದ ರೈತ ಘಟಕದ ರಾಜ್ಯ ಕಾರ್ಯದರ್ಶಿ ಕೆ.ಆರ್.ಪ್ರಭುಸ್ವಾಮಿ ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ, ದುರಾಡಳಿತ ಮೂಲಕ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಫೆ.19 ರಿಂದ ಮಾ.2ರ ವರೆಗೆ ರಾಜ್ಯವ್ಯಾಪಿ ಬೈಕ್ ಜಾಥಾ ನಡೆಯಲಿದ್ದು, ಫೆ.21 ರಂದು ಜಿಲ್ಲೆಯ ಕುಶಾಲನಗರ, ಮಡಿಕೇರಿಪಟ್ಟಣದ ಮೂಲಕ ಜಾಥಾ ಸಾಗಲಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಕೇಂದ್ರವಾದ ಮಡಿಕೇರಿ ನಗರದಲ್ಲಿ ಅಪರಾಹ್ನ 3 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದೆಂದು ತಿಳಿಸಿದರು. ಕೆಆರ್‍ಎಸ್ ಪಕ್ಷದ ರಾಜ್ಯ ಘಟಕದ…
ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪದಲ್ಲಿ ನಡೆಸಲು ಜಿಲ್ಲಾ ಸಮಿತಿಯು ತನ್ನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಿದೆ. ಮಡಿಕೇರಿಯ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಾರ್ಚ್ ಎರಡನೇ ವಾರದಲ್ಲಿ ಈ ಸಮ್ಮೇಳನವು ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಕೇಂದ್ರ ಸಮಿತಿ ನೀಡುವ ಸತ್ಯವತಿ ವಿಜಯ ರಾಘವ ಚಾರಿಟೇಬಲ್ ಟ್ರಸ್ಟ್ ದತ್ತಿ ಪ್ರಶಸ್ತಿಗೆ ಭಾಜನರಾಗಿರುವ ಕೊಡಗು ಜಿಲ್ಲೆಯ ಬರಹಗಾರ್ತಿ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿಯ ನಿರ್ದೇಶಕರಾದ ಹಂಚೆಟೀರ ಫ್ಯಾನ್ಸಿ ಮುತ್ತಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಹಂಚಿಟೀರ ಫ್ಯಾನ್ಸಿ ಮುತ್ತಣ್ಣ ಕೊಡಗು ಜಿಲ್ಲೆಯ ಇತಿಹಾಸ ಮತ್ತು ಮಹಿಳೆಯ ಸಮಸ್ಯೆ ಬಗ್ಗೆ ವಿಶೇಷ ಅಧ್ಯಯನ…
ಮಡಿಕೇರಿ ಫೆ.17 NEWS DESK : ಬಾಳೆಲೆ ಗ್ರಾ.ಪಂ ವತಿಯಿಂದ ಸಂವಿಧಾನ ಜಾಗೃತಿ ಜಾಥಾವನ್ನು ಸ್ವಾಗತಿಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಡಾ.ಬಿ.ಆರ್.ಆಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಬಾಳೆಲೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಂವಿಧಾನ ಜಾಗೃತಿ ಜಾಥದ ರಥವು ಸಾಗಿಬಂತು, ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕ ಮಾದಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಜಾಗೃತಿ ಜಾಥಾ ಪ್ರತಿ ಗ್ರಾಮ ಪಂಚಾಯಿತಿಗೂ ತೆರಳುವ ಮೂಲಕ ಜನರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮತ್ತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗುತ್ತಿದೆ ಎಂದರು. ಸರ್ಕಾರದ ವಿವಿಧ ಯೋಜನೆಗಳ ಬಗ್ಗೆಯೂ ಜನರಿಗೆ ಮಾಹಿತಿಗಳು ಲಭ್ಯವಾಗುತ್ತಿದೆ .ಈ ಜಾಥಕ್ಕೆ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಹಾಗೂ ಗ್ರಾಮ ಪಂಚಾಯಿತಿ…
ಮಡಿಕೇರಿ ಫೆ.17 NEWS DESK : ಕೊಡಗು ಆಮ್ ಆದ್ಮಿ ಪಾರ್ಟಿಯ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜಿಲ್ಲೆಯಾದ್ಯಂತ ಯಶಸ್ವಿಯಾಗಿದೆ ಎಂದು ಆಪ್ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಗ್ರಾಮೀಣ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಲ್ಲಿ ಸಮಾಲೋಚನೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ, ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ಕರಡಿಗೊಡು, ಆಸ್ಥಾನ, ಮಾಲ್ದಾರೆ, ಚೆನ್ನಂಗಿ, ಪಾಲಿಬೆಟ್ಟ, ಅಮ್ಮತ್ತಿ, ಚಂಬೆಬೆಳ್ಳೂರು, ಕೆದಮುಳ್ಳೂರು, ಆರ್ಜಿ, ಬೋಟೋಳಿ ಮತ್ತು ತೋರಾ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆಯಲಾಯಿತು. ಚಂಬೆಬೆಳ್ಳೂರು ಗ್ರಾಮದ ಮಗ್ಗುಲ ಮತ್ತು ಪೂದಕೋಟೆ ಶಾಲೆಗಳು ಮುಚ್ಚುವ ಹಂತದಲ್ಲಿದೆ. ಬಿಟ್ಟಂಗಾಲದ ಅಂಬಟ್ಟಿ ಹಾಗೂ ಅರಮೇರಿಯಲ್ಲಿ ಇರುವ ಸರ್ಕಾರಿ ಶಾಲೆಗಳು ಈಗಾಗಲೇ ಮುಚ್ಚಿವೆ. ಸಿದ್ದಾಪುರ ಪಟ್ಟಣ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಬಹಳ ದಿನಗಳಿಂದ ಕಸದ ರಾಶಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ದುರ್ವಾಸನೆ ಬೀರುತ್ತಿದೆ. ಸಿದ್ದಾಪುರದ ಕಸ ಮತ್ತು ತ್ಯಾಜ್ಯ ನೆಲ್ಲಿಹುದಿಕೇರಿ ಭಾಗದಲ್ಲಿ ಕಾವೇರಿ ನದಿ…
ವಿರಾಜಪೇಟೆ ಫೆ.17 NEWS DESK : ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಸುವರ್ಣ ಸಂಭ್ರಮ ಕನ್ನಡಿಗ ಮತ್ತು ಸುವರ್ಣ ಶ್ರೀ ಕನ್ನಡ ಪ್ರಶಸ್ತಿ ಹಾಗೂ ನೃತ್ಯೋತ್ಸವದಲ್ಲಿ ಸಂತ ಅನ್ನಮ್ಮ ಶಾಲೆಯ 1ನೇ ತರಗತಿಯ ವಿದ್ಯಾರ್ಥಿನಿ ಸಂಚಿತ ಆಚಾರ್ಯ ವಿವಿಧ ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಗಮನ ಸೆಳೆದರು. ಈ ಸಂದರ್ಭ ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿ ಗಣ್ಯರು ಪುಟ್ಟ ಬಾಲೆಯ ನೃತ್ಯಕ್ಕೆ ಮನಸೋತು ಸಂಚಿತಾ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ವಿರಾಜಪೇಟೆಯ ಪ್ರೇಮಾಂಜಲಿ ಆಚಾರ್ಯ ಮತ್ತು ಚಂದ್ರು ಆಚಾರ್ಯ ಅವರ ಪುತ್ರಿಯಾಗಿರುವ ಸಂಚಿತ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿನಿ.
ಬೆಂಗಳೂರು, ಫೆ.17 NEWS DESK : ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಭಾರತ ಸಂವಿಧಾನ ಹಾಗೂ ಉರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬOಧಿಸಿದಂತೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತದ ಸಂವಿಧಾನ ಜಾರಿಗೆ ಬಂದು 75 ನೇ ವರ್ಷಕ್ಕೆ ಕಾಲಿಟ್ಟಿದೆ. 75 ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಭಾಷಣಕಾರರು, ಖ್ಯಾತ ಚಿಂತಕರಾದ ಪ್ರೊ: ಅಸುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖದೇವ್ ಥೋರಟ್,…






