ಮಡಿಕೇರಿ ಜ.26 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಶಂಕುಸ್ಥಾಪನೆ: ಕೃಷಿ ಇಲಾಖೆಯ 100 ಲಕ್ಷ ರೂ. ವೆಚ್ಚದ ಕಾಮಗಾರಿ, ಹಿಂದುಳಿದ ವರ್ಗಗಳ ಇಲಾಖೆಯ 500 ಲಕ್ಷ ರೂ. ಕಾಮಗಾರಿ, ನಗರ ನೀರು ಮತ್ತು ಒಳಚರಂಡಿ ಮಂಡಳಿ ನಗರಾಭಿವೃದ್ಧಿ ಇಲಾಖೆಯ 16108 ಲಕ್ಷ ರೂ.ನ 5 ಕಾಮಗಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 60 ಲಕ್ಷ ರೂ. ವೆಚ್ಚದ 3 ಕಾಮಗಾರಿ, ಸಮಾಜ ಕಲ್ಯಾಣ ಇಲಾಖೆಯ 375 ಲಕ್ಷ ರೂ. ವೆಚ್ಚದ ಕಾಮಗಾರಿ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ-ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ 1226 ಲಕ್ಷ ರೂ. ಕಾಮಗಾರಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕುಶಾಲನಗರ ತಾ. ಬಸವನಹಳ್ಳಿಯಲ್ಲಿ ಬಸ್ ಡಿಪೋ ಕಾಮಗಾರಿ) ಸಾರಿಗೆ ಇಲಾಖೆಯ 670.58 ಲಕ್ಷ ರೂ. ವೆಚ್ಚದ ಕಾಮಗಾರಿ, ಜಿಲ್ಲಾ ನಗರಾಭಿವೃದ್ಧಿ ಇಲಾಖೆಯ 1589.50 ಲಕ್ಷ ರೂ. ವೆಚ್ಚದ…
ಲೇಖಕ: admin
ಮಡಿಕೇರಿ ಜ.26 NEWS DESK : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಿ, ಪಥಸಂಚಲನವನ್ನು ವೀಕ್ಷಿಸಿ ಗೌರವ ವಂದನೆಯನ್ನು ಸ್ವೀಕರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಈ ಸಂದರ್ಭ ಜಿಲ್ಲಾ ಪೊಲೀಸ್ ಇಲಾಖೆ, ಎನ್‍ಸಿಸಿ, ಗೃಹ ರಕ್ಷಕ ದಳದಿಂದ ನಡೆದ ಪಥಸಂಚಲನ ಗಮನ ಸೆಳೆಯಿತು. ಜಿಲ್ಲಾ ಶಸಸ್ತ್ರ ಮಿಸಲು ಪಡೆ, ಅರಣ್ಯ ಇಲಾಖೆ, ಎನ್‌ಸಿಸಿ ವಿದ್ಯಾರ್ಥಿಗಳು, ಸ್ಕೌಟ್ ಆಂಡ್ ಗೈಡ್ಸ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಜ.25 NEWS DESK : ಕಾಂಗ್ರೆಸ್ ಸರ್ಕಾರ ಪ್ರಸ್ತುತ ಬಿಜೆಪಿಯ ಯಾವುದೇ ಟೀಕೆಗಳಿಗೆ ಅವಕಾಶವಿಲ್ಲದಂತೆ ಪ್ರಣಾಳಿಕೆಯಲ್ಲಿ ಸೂಚಿಸಿದ ಭರವಸೆಗಳನ್ನು ಈಡೇರಿಸುವ ಮೂಲಕ, ಸಮಾಜದ ಎಲ್ಲ ವರ್ಗಗಳಿಗೆ ನೆರವಾಗುವ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ರಾಜ್ಯದಲ್ಲಿ ‘ಶಾಂತಿಯ ತೋಟ’ವನ್ನು ನಿರ್ಮಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ವಿರಾಜಪೇಟೆಯಲ್ಲಿ ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಯ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೊಳಿಸಿರುವ ಐದು ಗ್ಯಾರಂಟಿಗಳಿಂದ, ವಿಪಕ್ಷ ಬಿಜೆಪಿಯ ಟೀಕೆಗಳಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲವೆಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಂದರ್ಭ, ಇಂತಹ ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಿಲ್ಲ, ಜಾರಿ ಮಾಡಿದಲ್ಲಿ ಸರ್ಕಾರ ದಿವಾಳಿಯಾಗುತ್ತದೆ, ರಾಜ್ಯ ಸಾಲದ ಹೊರೆಗೆ ಸಿಲುಕುತ್ತದೆಂದು ಬಿಜೆಪಿ ಟೀಕೆ ಟಿಪ್ಪಣಿ ಮಾಡಿತ್ತು. ಪ್ರಸ್ತುತ 14 ಬಾರಿ ಬಡ್ಜೆಟ್ ಮಂಡಿಸಿರುವ ಅನುಭವ ಹೊಂದಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ಯಾರಂಟಿಗಳ ಜಾರಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು ಜಿಲ್ಲೆಯಲ್ಲಿ 350 ಕೋಟಿ ಅಭಿವೃದ್ಶಿ…
ಸೋಮವಾರಪೇಟೆ ಜ.25 : ಶಾಲೆಗೆ ಕಾಲ್ನಡಿಗೆಯಲ್ಲಿ ಬರಲು ಕಾಡಾನೆಗಳ ಭಯವಿದೆ. ಇನ್ನಾದರೂ ಸರ್ಕಾರಿ ಬಸ್ ಕಲ್ಪಿಸಿಕೊಡಬೇಕೆಂದು ಯಡವಾರೆ ಶಾಲೆಯ ವಿದ್ಯಾರ್ಥಿಗಳು ಬೇಡಿಕೆಯಿಟ್ಟರು. ಐಗೂರು ಗ್ರಾಮ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ನಾವು ಪ್ರತಿಷ್ಠಾನ ವತಿಯಿಂದ ಕಾಜೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಯಡವಾರೆ, ಸಜ್ಜಳ್ಳಿ ಭಾಗದಿಂದ 9 ಕಿ.ಮೀ. ಕಾಲ್ನಡಿಗೆಯಲ್ಲಿ ಬರಬೇಕು. ರಸ್ತೆ ಹೊಂದಿಕೊಂಡಂತೆ ಕಾಜೂರು ಮೀಸಲು ಅರಣ್ಯವಿದೆ. ನಾವು ಪ್ರತಿದಿನ ಕಾಡಾನೆಗಳಿಗೆ ಹೆದರಿಕೊಂಡು ಶಾಲೆಗೆ ಬರಬೇಕು. ಶಾಲೆ ಸಮಯಕ್ಕೆ ಗ್ರಾಮೀಣಸಾರಿಗೆ ಬಸ್ ಕೊಡಿಸಬೇಕು ಎಂದು ವಿದ್ಯಾರ್ಥಿ ರೂಪ, ಸಹನಜ್ಯೋತಿ, ಸಹನ ಮನವಿ ಮಾಡಿಕೊಂಡರು. ಮಳೆಗಾಲದಲ್ಲಿ ನಡೆದುಕೊಂಡು ಶಾಲೆಗೆ ತಲುಪಿದಾಗ ಬಟ್ಟೆ ಒದ್ದೆಯಾಗಿರುತ್ತದೆ. ದಿನವಿಡಿ ಚಳಿಯಿಂದ ನಡುಗುತ್ತ ಪಾಠ ಕೇಳಬೇಕು. ಸರ್ಕಾರ ಬಸ್ ಸೌಲಭ್ಯ ಒದಗಿಸಿಕೊಡಬೇಕು ಎಂದರು. ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಅರಿವಿದೆ. ಶಾಸಕ ಡಾ.ಮಂತರ್‍ಗೌಡ ಅವರಿಗೆ ಮನವಿ ಮಾಡುವುದಾಗಿ ಪಂಚಾಯ್ತಿ ಅಧ್ಯಕ್ಷ ವಿನೋದ್ ಭರವಸೆ ನೀಡಿದರು.…
ಮಡಿಕೇರಿ ಜ.25 NEWS DESK : ಮರ್ಕಝುಲ್ ಹಿದಾಯ ಸಂಸ್ಥೆಯಿಂದ ಕೊಟ್ಟಮುಡಿಯಲ್ಲಿ ನಿರ್ಮಿಸಲಾಗಿರುವ 6 ಕೋಟಿ ರೂ. ವೆಚ್ಚದ ‘ಮರ್ಕಝ್ ಹಿದಾಯ ಹಲೀಮ ಅಲ್‍ಕಿಂದಿ’ ಪ್ರಥಮ ದರ್ಜೆ ಕಾಲೇಜು ಕಟ್ಟಡ ಹಾಗೂ ಹೆಣ್ಣು ಮಕ್ಕಳ ವಸತಿಗೃಹವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಸಚಿವರಾದ ಭೋಸರಾಜು, ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ಕೆ.ವೆಂಕಟೇಶ್, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆಹರೂಜ್ ಖಾನ್, ಆಧ್ಯಾತ್ಮಿಕ ನಾಯಕರು, ಗ್ರಾಂಡ್ ಮುಫ್ತಿಗಳೂ ಆದ ಶೇಕ್ ಅಬೂಬಕರ್ ಅಹಮದ್, ಸಂಸ್ಥೆಯ ಉಪಾಧ್ಯಕ್ಷ ಮೊಹಿದ್ದೀನ್ ಕುಟ್ಟಿ ಹಾಜಿ ಕೊಳಕೇರಿ, ಖಜಾಂಚಿ ಕೆ.ಎ. ಅಬ್ದುಲ್ಲ ಕೊಟ್ಟಮುಡಿ, ಕಾರ್ಯದರ್ಶಿ ಪಿ.ಎ.ಯೂಸುಫ್ ಹಾಜಿ ಕೊಂಡಂಗೇರಿ, ಆಡಳಿತ ಅಧಿಕಾರಿ ಎಂ.ಬಿ. ಹಮೀದ್ ಕಬಡಗೇರಿ ಮೊದಲಾದವರಿದ್ದರು.
ಮಡಿಕೇರಿ ಜ.25 NEWS DESK : ಕಳೆದ ಅವಧಿಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕೊಡಗಿಗೆ ಆಗಮಿಸಿದ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದಿತ್ತು. ಮುಖ್ಯಮಂತ್ರಿಯಾಗಿ ಇಂದು ಜಿಲ್ಲೆಗೆ ಆಗಮಿಸಿದಾಗ ಅವರನ್ನು ವಿರಾಜಪೇಟೆಯಲ್ಲಿ ಹೂವಿನ ಸುರಿಮಳೆಯೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಇದೇ ವಿಚಾರವನ್ನು ಮುಖ್ಯಮಂತ್ರಿಗಳು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಇಂದು ಬಂದಾಗ ಕೊಡಗಿನ ಸಮಸ್ತ ಸಜ್ಜನ ಜನ ಸಮೂಹ ಪ್ರೀತಿಯ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ. ಇದು ಕೊಡಗಿನ ಸಜ್ಜನರ ಗೆಲುವು, ಇದೇ ಪ್ರಜಾಪ್ರಭುತ್ವದ ಸೌಂದರ್ಯ’ ಎಂದು ಮನಬಿಚ್ಚಿ ಹೇಳಿಕೊಂಡಿದ್ದಾರೆ. ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗೆ ಹೆಲಿಕಾಫ್ಟರ್ ಮೂಲಕ ವಿರಾಜಪೇಟೆ ಬಳಿಯ ಅಂಬಟ್ಟಿ ಹೆಲಿ ಪ್ಯಾಡ್‍ಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಅವರು, ತಮ್ಮದೇ ಕಾರಿನಲ್ಲಿ ಸ್ವತಃ ತಾವೇ ಚಾಲನೆ ಮಾಡಿಕೊಂಡು ಕಾರ್ಯಕ್ರಮಕ್ಕೆ…
ಮಡಿಕೇರಿ ಜ.25 : ಅಸ್ಪೃಶ್ಯತೆ ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ‘ಸಮಾನತೆ ಕಡೆಗೆ’ ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರಾಯೋಜನೆ ಮಾಡಿ ಸರ್ಕಾರಿ ಟಿ.ವಿ.ಚಾನಲ್ ಆದ ಚಂದನ ವಾಹಿನಿಯಲ್ಲಿ ಜ.26 ರಂದು ಮಧ್ಯಾಹ್ನ 2.30 ರಿಂದ 4.30 ರವರೆಗೆ ಪ್ರಸಾರ ಮಾಡಲಾಗುವುದು. ಸಾರ್ವಜನಿಕರು ಈ ಚಿತ್ರವನ್ನು ವೀಕ್ಷಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ.
ಮಡಿಕೇರಿ ಜ.25 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಸಮಾರಂಭವು ಜನವರಿ, 28 ರಂದು ಬೆಳಗ್ಗೆ 11 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಬಳಿ ಗೌರವ ಸಮರ್ಪಣೆ ಬಳಿಕ ನಗರದ ಗಾಂಧಿ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ(ನಿ), ಸೈನಿಕರ ಸಂಘದ ಮಾಜಿ ಅಧ್ಯಕ್ಷರಾದ ಜನರಲ್ ಬಿ.ಎ.ಕಾರ್ಯಪ್ಪ(ನಿ), ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್‍ಜಿತ್ ಸಿಂಗ್, ಎನ್‍ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್…
ಮಡಿಕೇರಿ ಜ.25 NEWS DESK : ಗ್ಯಾರಂಟಿಗಳ ಜಾರಿಯಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರಮೋದಿ ಟೀಕಿಸಿದ್ದರು, ಆದರೆ ನಾವು ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ರಾಜ್ಯ ದಿವಾಳಿಯಾಗಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ವಿರಾಜಪೇಟೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬಿಜೆಪಿ, ಪ್ರಧಾನಿ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಘೋಷಿಸಿದಾಗ ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಅವರು ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ನಾವು ಗ್ಯಾರಂಟಿಗಳನ್ನು ಜಾರಿ ಮಾಡಿ ಯಶಸ್ವಿಯಾಗಿದ್ದೇವೆ, ಈಗ ರಾಜ್ಯ ದಿವಾಳಿಯಾಯಿತೇ. ಯುವನಿಧಿ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ರಾಜ್ಯದ ಏಳು ಕೋಟಿ ಜನರಲ್ಲಿ ಅರ್ಧದಷ್ಟು ಇರುವ ಮಹಿಳೆಯರು ಶಕ್ತಿ ಯೋಜನೆ ಮೂಲಕ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಇದನ್ನೆಲ್ಲ ಬಿಜೆಪಿಯವರು ಮಾಡಿದ್ದರೇ ಎಂದು ಪ್ರಶ್ನಿಸಿದರು. ನಾವು ಜನಪರ ಸರ್ಕಾರ ನಡೆಸುತ್ತಾ…
ಮಡಿಕೇರಿ ಜ.25 NEWS DESK : ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಳಿಕ ಶಾಸಕ ಪೊನ್ನಣ್ಣ ಅವರು ಕೊಡಗಿನ ವಿಶೇಷ ತಿನಿಸುಗಳನ್ನು ಮುಖ್ಯಮಂತ್ರಿಗಳಿಗೆ ತಾವೇ ಸ್ವತಃ ಬಡಿಸಿದರು. ಇದಕ್ಕೂ ಮೊದಲು ಹೆಲಿಪ್ಯಾಡ್ ನಿಂದ ಶಾಸಕ ಪೊನ್ನಣ್ಣ ಅವರು ಸ್ವತಃ ಕಾರು ಡ್ರೈವ್ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದರು.






