ಲೇಖಕ: admin

ಸಿದ್ದಾಪುರ ಫೆ.17 : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಪಾಲಿಬೆಟ್ಥ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್ ಸಮಾರೋಪ ಸಮಾರಂಭದ ಸರ್ವಧರ್ಮ ಸಮ್ಮೇಳನ ದರ್ಗಾ ಆವರಣದಲ್ಲಿ ನಡೆಯಿತು. ಕನ್ನಡ ಮಠದ ಮಠಾಧಿಕಾರಿ ಚನ್ನಬಸವ ದೇಶಿಕೇಂದ್ರ ಸ್ವಾಮಿಜಿ ಮಾತನಾಡಿ, ಸರ್ವಧರ್ಮದ ಸಮನ್ವಯ ಕೇಂದ್ರಗಳಿಂದ ಶಾಂತಿ ಸಹ ಬಾಳ್ವೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದ್ದು, ಇಂತಹ ಸರ್ವಧರ್ಮ ಸಮ್ಮೇಳನಗಳ ಮೂಲಕ ಭಾವೈಕ್ಯತೆಯೊಂದಿಗೆ ಒಗ್ಗೂಡಿ ಆಚರಣೆಗಳು ಮಾಡಿದ್ದಲ್ಲಿ ಸಹೋದರತ್ವ ನಿರ್ಮಾಣವಾಗಲು ಸಾಧ್ಯವಾಗಲಿದೆ ಎಂದರು. ನಾವು ನಡೆಯುವ ದಾರಿಗಳು ಬೇರೆ ಇರಬಹುದು ಆದರೆ ತಲುಪುವ ಗುರಿ ಮಾತ್ರ ಭಗವಂತನ ಸನ್ನಿಧಿಗೆ. ಶರಣರ ಹಿತವಚನಗಳನ್ನ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಹೇಳಿದ ಅವರು ಪ್ರತಿಯೊಬ್ಬರು ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದರು. ಪಾಲಿಬೆಟ್ಟ ಸಿ.ಎಸ್.ಐ ಚರ್ಚ್ ನ ರೇ ಫಾ. ಶಶಿಕುಮಾರ್ ಮಾತನಾಡಿ, ದೇವರು ಮಾನವನ ರೂಪದಲ್ಲಿ ಬದುಕಲು ಅವಕಾಶ ಕಲ್ಪಿಸಿದೆ ನಾವೆಲ್ಲರೂ ಶಾಂತಿ ಸಹ ಬಾಳ್ವೆಯಾ ಸಹೋದರತ್ವದೊಂದಿಗೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದ್ದು, ಎಲ್ಲಾ ಧರ್ಮಗಳ ಬೋಧನೆಯನ್ನು…

Read More

ಮಡಿಕೇರಿ ಫೆ.17 NEWS DESK : ಮಡಿಕೇರಿ ನಗರದ ಕೃಷ್ಣ ವೈನ್ಸ್ ಮಾಲೀಕರಾದ ಕೆ.ರಮೇಶ ಅವರ ಪುತ್ರ ಕೆ.ಆರ್.ತೇಜಸ್ (37) ಶುಕ್ರವಾರ ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಫೆ.17 ರಂದು  ಮಡಿಕೇರಿಯಲ್ಲಿ ನಡೆಯಲಿದೆ. ಮೃತರು ತಂದೆ, ತಾಯಿ, ಸಹೋದರ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ ಎಂ.ಧನಂಜಯ್ ಸಂತಾಪ ಸೂಚಿಸಿದ್ದಾರೆ.

Read More

ಸೋಮವಾರಪೇಟೆ ಫೆ.16 NEWS DESK: ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೂವರೆ ಎಕರೆಯಷ್ಟು ಕಾಫಿ ತೋಟ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರಪೇಟೆಯ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷಿಕ ಬಿ.ಬಿ.ಕರುಂಬಯ್ಯ ಎಂಬವರು ಕೃಷಿ ಮಾಡಿದ 8 ವರ್ಷದ ಅರೇಬಿಕಾ ಕಾಫಿ ಗಿಡ, ಒಂದು ಸಾವಿರ ಕಾಳುಮೆಣಸು ಬಳ್ಳಿಗಳು, 500 ರಷ್ಟು ಕಿತ್ತಳೆ ಮರಗಳು, 150 ಬಾಳೆಗಿಡಗಳು ಸಂಪೂರ್ಣ ಸುಟ್ಟುಹೋಗಿದ್ದು, 15 ಲಕ್ಷ ರೂ.ನಷ್ಟು ಹಾನಿಯಾಗಿದೆ. ಕೂಡಲೇ ಪರಿಹಾರ ನೀಡಬೇಕೆಂದು ತಹಸೀಲ್ದಾರ್ ಮತ್ತು ಸೆಸ್ಕ್ ಇಲಾಖೆಗೆ ತೋಟದ ಮಾಲೀಕ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಸೆಸ್ಕ್ ನ ಇ.ಇ. ಅಮಿತ್, ಎಇಇ ಮಂಜುನಾಥ್, ರವಿ, ಜೆಇ ಕುಮಾರ್ ಅವರುಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರತಿವರ್ಷ ಟ್ರಾನ್ಸ್ಫಾರಂ ನಲ್ಲಿ ತಂತಿಗಳು ಸ್ಪರ್ಶಗೊಂಡು ಬೆಂಕಿ ಹತ್ತಿಕೊಂಡು ಅಲ್ಪಸ್ವಲ್ಪ ಹಾನಿಯಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಸರಿಪಡಿಸುವಂತೆ ಸೆಸ್ಕ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮಕೈಗೊಂಡಿರುವುದಿಲ್ಲ. ಅವರ ನಿರ್ಲಕ್ಷ್ಯದಿಂದ ದೊಡ್ಡಮಟ್ಟದ ಹಾನಿಯಾಗಿದೆ ಎಂದು ಕೃಷಿಕ ಕರುಂಬಯ್ಯ…

Read More

ಮಡಿಕೇರಿ ಫೆ.16 NEWS DESK : ಇತ್ತೀಚೆಗೆ ಸುಂಟಿಕೊಪ್ಪದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಚಿಕ್ಕಮಂಡೂರು ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಫ್ (43) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ ರೂ.15 ಸಾವಿರ ನಗದು, ವಾಚ್ ಮತ್ತು ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಫೆ.28 ರಂದು ಸುಂಟಿಕೊಪ್ಪದ ನಿವಾಸಿ ಕೆ.ಎಂ.ಹಸೈನಾರ್ ಅವರ ಟಿನೇಜ್ ಕಲೆಕ್ಷನ್ಸ್ ಬಟ್ಟೆ ಅಂಗಡಿಯ ಬೀಗವನ್ನು ಮುರಿದು ಕ್ಯಾಶ್ ಟೇಬಲ್‌ನಲ್ಲಿದ್ದ ರೂ.1ಲಕ್ಷ ನಗದು, ವಾಚ್ ಮತ್ತು ಬಟ್ಟೆಗಳನ್ನು ಕಳ್ಳತನ ಮಾಡಲಾಗಿತ್ತು. ಅಲ್ಲದೆ ಸುರೇಶ್.ಹೆಚ್.ಕೆ ಅವರ ಎ.ಆರ್ ಕನ್ಸಲ್ಟಿಂಗ್ ಅಂಗಡಿಯ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನೂ ಕದ್ದೊಯ್ಯಲಾಗಿತ್ತು. ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಚೋರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದರು. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್.ಕೆ, ಸುಂಟಿಕೊಪ್ಪ ಠಾಣೆಯ ಪಿಎಸ್‌ಐಗಳಾದ ಶ್ರೀಧರ್.ಎಂ.ಸಿ, ನಾಗರಾಜು ಹಾಗೂ ಸಿಬ್ಬಂದಿಗಳು…

Read More

ಮಡಿಕೇರಿ ಫೆ.16 NEWS DESK : ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪದಡಿ ಅರಣ್ಯ ಇಲಾಖೆಯ ಚಾಲಕನೊಬ್ಬನನ್ನು ಕುಟ್ಟ ಪೊಲೀಸರು ಬಂಧಿಸಿದ್ದಾರೆ. ಕೆ.ಬಾಡಗ ಗ್ರಾಮದ ನಾಣಚ್ಚಿ ನಿವಾಸಿ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ. ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಬಾಡಗ ಗ್ರಾಮದ ತೋಟದ ಲೈನುಮನೆಯಲ್ಲಿ ವಾಸವಿರುವ ಪಂಜರಿ ಎರವರ ದಂಪತಿಯ 17 ವರ್ಷದ ಪುತ್ರಿ ಇದೇ ಫೆ.12 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಫೆ.2 ರಂದು ಶ್ರೀಕಾಂತ್ ಯುವತಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಪರಿಣಾಮ ಆಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಆರೋಪದಡಿ ಕುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಕುಟ್ಟ ಪೊಲೀಸ್ ಠಾಣೆಯ ಪಿಎಸ್‌ಐ ಇರ್ಶಾದ್.ಸಿ ಹಾಗೂ ಸಿಬ್ಬಂದಿಗಳ…

Read More

ಮಡಿಕೇರಿ ಫೆ.16 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಸಿದ್ದಾಪುರದ ಇಂಜಿಲಗೆರೆ ಗ್ರಾಮದ ವಿನೋದ್ ಪೂಜಾರಿ ಹಾಗೂ ಶನಿವಾರಸಂತೆಯ ಎಸ್.ಎನ್.ರಘು ಅವರನ್ನು ಆಯ್ಕೆ ಮಾಡಿರುವುದಾಗಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಅನುಮೋದನೆಯ ಮೇರೆಗೆ ಪಕ್ಷ ಸಂಘಟನೆಯ ದೃಷ್ಟಿಯಿಂದ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಬಿಜೆಪಿ ಪರವಾಗಿದ್ದು, ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದೆಂದು ಅಪ್ರು ರವೀಂದ್ರ ಹೇಳಿದ್ದಾರೆ.

Read More

ಮಡಿಕೇರಿ ಫೆ.16 NEWS DESK :  ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿಗಳ ಸಂಯುಕ್ತಶ್ರಯದಲ್ಲಿ ನಗರದ ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಸಿಐಟಿಯು ಸಹಕಾರ್ಯದರ್ಶಿ ಕೆ.ಎಸ್.ರಮೇಶ್ ಮಾತನಾಡಿ, ಎನ್‍ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ವರ್ಷಗಳಾಗಿದ್ದು, ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ 2 ಕೋಟಿ ಉದ್ಯೋಗದ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ, ಡಾ.ಸ್ವಾಮಿನಾಥನ್ ಅವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸುವುದಾಗಿ ತಿಳಿಸಿತ್ತು. ಆದರೆ ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ ಮತ್ತು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡಲಾಗಿದೆ ಎಂದು ಆರೋಪಿಸಿದರು.…

Read More

ಮಡಿಕೇರಿ ಫೆ.16 NEWS DESK : ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾಡಳಿತವು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೇ ಏರ್ಪಡಿಸಿದೆ. `ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ’ ನಮ್ಮ ಸಂವಿಧಾನ ನಮ್ಮ ಹೆಮ್ಮೆ (ಭಾರತ ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಹಿನ್ನಲೆಯಲ್ಲಿ); ಸ್ಪರ್ಧೇಯು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತವಾಗಿ ನಡೆಯಲಿದೆ. ಪ್ರಬಂಧ ಸ್ಪರ್ಧೇಗೆ ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ಸ್ಪುಟವಾದ ಕೈ ಬರಹಗಳಲ್ಲಿ `ಎ4′ ಅಳತೆಯ ಕಾಗದಗಳಲ್ಲಿ 1,500 ಪದಗಳಿಗೆ ಮೀರದಂತೆ ಬರೆದು ಕಳುಹಿಸಬೇಕು. ಚಿತ್ರಕಲಾ ಸ್ಪರ್ಧೇಗೆ ಸಂಬಂಧಿಸಿದಂತೆ ನೀಡಿರುವ ವಿಷಯಗಳ ಬಗ್ಗೆ `ಎ3′ ಅಳತೆಯ ಡ್ರಾಯಿಂಗ್ ಶಿಟ್‍ನಲ್ಲಿ ಚಿತ್ರ ರಚನೆ ಮಾಡಿ ಸಲ್ಲಿಸಬೇಕು. ಪ್ರಬಂಧ ಸ್ಪರ್ಧೆಯ ಪ್ರಬಂಧಗಳನ್ನು ಹಾಗೂ ಚಿತ್ರಕಲಾ ಸ್ಪರ್ಧೇಯ ಚಿತ್ರಗಳನ್ನು ಫೆ.25 ರಂದು ಸಂಜೆ 4.30 ರ ಒಳಗೆ `ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ…

Read More

ಬೆಂಗಳೂರು ಫೆ.16 NEWS DESK : ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ ಕ್ರಾಂತಿಕಾರಿ ಆಯವ್ಯಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ. ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಡೆ ತಾಂಡವವಾಡಬೇಕು, ನಿಷ್ಪಕ್ಷಪಾತ ಮತ್ತು ನ್ಯಾಯಯತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನ ಚಾಚೂ ತಪ್ಪದೆ ಅನುಷ್ಠಾನಗೊಳಿಸಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಿದ್ದೇವೆ. ಬಸವಣ್ಣವರ ಆಶಯದಂತೆ ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಬಜೆಟ್ ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು, ಇಡೀ ದೇಶದಲ್ಲೆ ನಮ್ಮ ಸರಕಾರ ಮಾದರಿಯಾಗಿ ಹೊರಹೊಮ್ಮಿದೆ. ನಮ್ಮದು ಮುಂದಿನ 10…

Read More

ಮಡಿಕೇರಿ ಫೆ.16 NEWS DESK :  ಕಾಯಕ ಶರಣರು, ಸವಿತಾ ಮಹರ್ಷಿಯವರು ಹಾಗೂ ಸಂತ ಸೇವಾಲಾಲ್ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ  ನಡೆದ ಕಾಯಕ ಶರಣರ, ಶ್ರೀ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತಾಡಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಶರಣರು ಹಾಗೂ ಪವಾಡ ಪುರುಷರು ಶ್ರಮಿಸಿದ್ದು, ಈ ಮಹನೀಯರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ನಗರಸಭೆ ಅಧ್ಯಕ್ಷರು ನುಡಿದರು. ಸವಿತಾ ಸಮಾಜವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಿದ್ದಾರೆ. ರಾಷ್ಟ್ರಕೂಟ, ವಿಜಯನಗರ ಚಾಲುಕ್ಯರ ಶಾಸನದಲ್ಲಿ ಸವಿತಾ ಸಮಾಜದವರ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳ ಮೇಲೆ ಸವಿತಾ ಸಮಾಜದ ಸಾದನಗಳಾದ ಕತ್ತಿ, ಕನ್ನಡಿ ಮತ್ತು ಕತ್ತರಿಗಳನ್ನು ಕೆತ್ತಲಾಗಿದೆ ಎಂದು ಅನಿತಾ…

Read More