ಮಡಿಕೇರಿ ಮಾ.22 NEWS DESK *ತಲಕಾವೇರಿ ಮತ್ತು ಭಾಗಮಂಡಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಯದುವೀರ್*
ಲೇಖಕ: admin
ನವದೆಹಲಿ ಮಾ.21 NEWS DESK : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ. ಅರವಿಂದ್ ಕೇಜ್ರಿವಾಲ್ ಮನೆ ಎದುರು ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಮಡಿಕೇರಿ ಮಾ.21 NEWS DESK : ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಪ್ರಚೋದನಾಕಾರಿ ಪದಗಳನ್ನು ಬಳಸಿ ಯಾವುದೇ ಜಾತಿ/ಪಕ್ಷ/ವ್ಯಕ್ತಿಗಳ ವಿರುದ್ಧ ಸುಳ್ಳ ಸುದ್ದಿಗಳನ್ನು ಹರಿಬಿಡದಂತೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸಂದೇಶ/ಭಾವಚಿತ್ರ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಸಂಪೂರ್ಣ ನಿಗಾವಹಿಸಿದ್ದು, ಸುಳ್ಳು ಸುದ್ದಿಯ ಪೋಸ್ಟ್‌ಗಳನ್ನು ಹರಿಬಿಟ್ಟ ವ್ಯಕ್ತಿಗಳ ವಿರುದ್ಧ RP Act & IPC ಅಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮಡಿಕೇರಿ ಮಾ.21 NEWS DESK : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ಬರೆದು ಒಂದು ವಿಡಿಯೋವನ್ನು ಹರಿಬಿಟ್ಟು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಮಾಡಿರುವ ಆರೋಪದಡಿ ಓರ್ವ ವ್ಯಕ್ತಿಯನ್ನು ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಯಾಗಿರುವ ಪ್ರಸ್ತುತ ಉತ್ತರಪ್ರದೇಶ ರಾಜ್ಯದ ಮುಜಾಫರ್ ನಗರ ಜಿಲ್ಲೆ ಖತೋಲಿಯಲ್ಲಿರುವ ಸುಧಾಕರ್ ರಾವ್ (55) ಬಂಧಿತ ಆರೋಪಿ. ಇದೇ ಮಾ.19 ರಂದು ಸುಳ್ಳು ಸಂದೇಶ ಹರಿಬಿಟ್ಟ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಡಿಕೇರಿ ಮಾ.21 NEWS DESK : ಅಂತರ ರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನಾಚರಣೆ ಅಂಗವಾಗಿ ಕೊಡವ ನ್ಯಾಷನಲ್ ಸಂಘಟನೆ ಕೊಡವ ಲ್ಯಾಂಡ್ ಗಾಗಿ ಹಕ್ಕೊತ್ತಾಯ ಮಂಡಿಸಿತು. ಮೂರ್ನಾಡು ಬಲ್‌ಂಬೇರಿ ರಸ್ತೆಯಲ್ಲಿರುವ ಕಾಫಿ ಕ್ಯಾಸ್ಟಲ್ ಕೂರ್ಗ್ ನಲ್ಲಿ ವಿಚಾರ ಮಂಡಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಲೋಕಸಭಾ ಚುನಾವಣೆಯಲ್ಲಿ ಕೊಡವ ವಿರೋಧಿಗಳಿಗೆ ಮತ ಹಾಕದಂತೆ ಕರೆ ನೀಡಿದರು. ಕೊಡವ ಲ್ಯಾಂಡ್ ಸೇರಿದಂತೆ 9 ಸಾಂವಿಧಾನಿಕ ಬೇಡಿಕೆಗಳು ಮತ್ತು ಕೊಡವ ಜನಾಂಗದ ಗೌರವಾನ್ವಿತ ಗುರಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವ ಅಭ್ಯರ್ಥಿಯನ್ನು ಬೆಂಬಲಿಸುವಂತೆ ತಿಳಿಸಿದರು. ಆದಿಮ ಸಂಜಾತ ಕೊಡವ ಬುಡಕಟ್ಟು ಜನಾಂಗದ ವಿರುದ್ಧದ ಎಲ್ಲಾ ರೀತಿಯ ತಾರತಮ್ಯವನ್ನು ತೊಡೆದು ಹಾಕಬೇಕು. ಕೊಡವ ನೀತಿ, ಸ್ವಾಭಿಮಾನ ಮತ್ತು ಹಕ್ಕುಗಳನ್ನು ನುಂಗಲು ಹವಣಿಸುವ ಹಾಗೂ ಕೊಡವ ಜನಾಂಗೀಯ ಗುರುತು ಮತ್ತು ಅಸ್ತಿತ್ವವನ್ನು ಅಮಾನ್ಯಗೊಳಿಸುವ ಮೂಲಕ ಕೊಡವ ಅಸ್ತಿತ್ವ ಮರೆಮಾಚಿ ಆಶ್ರಯ ಪಡೆಯಲು ನಡೆಸುವ ಪ್ರಚೋದನೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಕೊಡವ ನಾಗರೀಕತೆಯ ವಿಕಸನವು ದೀರ್ಘಕಾಲಿಕ ಜೀವನದ ರೇಖೆಯಾದ ಕಾವೇರಿ…
ಮಡಿಕೇರಿ ಮಾ.21 NEWS DESK : ಕೊಡಗು- ಮೈಸೂರು ಜಿಲ್ಲೆಗಳ ಗಡಿಭಾಗ ಕುಶಾಲನಗರ ಚುನಾವಣಾ ವಾಹನ ತಪಾಸಣಾ ಕೇಂದ್ರದಲ್ಲಿ ಗುರುವಾರ ಸಮರ್ಪಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ.2,92,657 ನ್ನು ವಶಪಡಿಸಿಕೊಳ್ಳಲಾಗಿದೆ. ಗಡಿ ಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಒಂದರಲ್ಲಿ ಹಣ ಪತ್ತೆಯಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚುನಾವಣಾ ಅಧಿಕಾರಿ ಪೂವಯ್ಯ ನೇತೃತ್ವದ ತಂಡ ಹಣವನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ತಪಾಸಣಾ ಕೇಂದ್ರದ ತಂಡದ ಸದಸ್ಯರಾದ ಮಹಾದೇವ್, ಅಭಿಷೇಕ್, ಪೊಲೀಸ್ ಅಧಿಕಾರಿ ಸುಬ್ರಮಣಿ ಸಿಬ್ಬಂದಿಗಳಾದ ಸಮಂತ, ಜಯಪ್ರಕಾಶ್ ಹಾಗೂ ಸತೀಶ್ ಕಾರ್ಯಚರಣೆ ನಡೆಸಿದರು.
ಮಡಿಕೇರಿ ಮಾ.21 : ಲೋಕಸಭಾ ಚುನಾವಣೆ ಸಂಬಂಧ ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿದಾರರು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಮತ್ತು ವಿನಾಯಿತಿ ಪತ್ರದಡಿ ಶಸ್ತ್ರಾಸ್ತ್ರ ಹೊಂದಿರುವವರ ಪೈಕಿ ಕ್ರಿಮಿನಲ್ ಹಿನ್ನೆಲೆಯುಳ್ಳ, ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ, ಈ ಹಿಂದಿನ ಚುನಾವಣಾ ಸಂದರ್ಭಗಳಲ್ಲಿ ಶಸ್ತ್ರಾಸ್ತ್ರಗಳನ್ನು ದುರ್ಬಳಕೆ ಮಾಡಿದ ಹಿನ್ನೆಲೆಯುಳ್ಳ ವ್ಯಕ್ತಿಗಳು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅಥವಾ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವ್ಯಾಪಾರಿಗಳಲ್ಲಿ ಕೂಡಲೇ ಠೇವಣಿ ಇರಿಸಬೇಕೆಂದು ತಿಳಿಸಿದ್ದಾರೆ. ಚುನಾವಣಾ ಫಲಿತಾಂಶ ಘೋಷಣೆಯಾಗುವವರೆಗೆ ಯಾವುದೇ ವ್ಯಕ್ತಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು, ಹಿಡಿದುಕೊಂಡು ಓಡಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ 2024 ರ ಜೂ.6 ರ ಒಂದು ವಾರದ ಒಳಗೆ ಠೇವಣಿ ಇರಿಸಿದ್ದ ಶಸ್ತ್ರಾಸ್ತ್ರಗಳನ್ನು ಹಿಂತಿರುಗಿಸಲಾಗುವುದು ಎಂದು…
ಮಡಿಕೇರಿ ಮಾ.21 NEWS DESK : ಇದೇ ಮಾರ್ಚ್, 25 ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶನದಂತೆ ಎಸ್‌ಒಪಿ ಮಾರ್ಗಸೂಚಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದ್ದು, ಪರೀಕ್ಷೆಯ ಪಾವಿತ್ರö್ಯತೆ ಕಾಪಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು. ಪರೀಕ್ಷೆ ಕೇಂದ್ರಗಳಲ್ಲಿ…
ನಾಪೋಕ್ಲು ಮಾ.21 NEWS DESK : ನೆಲಜಿ ಶ್ರೀ ಇಗ್ಗುತಪ್ಪ ದೇವರ ವಾರ್ಷಿಕ ಕಲಾಡ್ಚ ಹಬ್ಬವು ಇದೇ ದಿನಾಂಕ 23.3.2024 ಶನಿವಾರದಂದು ನಡೆಯಲಿದೆ. ಹಬ್ಬದಪ್ರಯುಕ್ತ ದೇವಸ್ಥಾನದಲ್ಲಿ ಭಕ್ತರ ತುಲಾಭಾರ ಸೇವೆ, ಮಹಾ ಪೂಜೆ, ಎತ್ತು ಪೋರಾಟ, ದೇವರ ನೃತ್ಯ ಬಲಿ ಮತ್ತು ಅನ್ನ ಸಂತರ್ಪಣೆ ನಡೆಯುತ್ತದೆ. ಆದುದರಿಂದ ಊರ ಹಾಗೂ ಪರ ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ ಪ್ರಸಾದ ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ತಕ್ಕ ಮುಖ್ಯಸ್ಥರು ಹಾಗೂ ಆಡಳಿತ ಮಂಡಳಿಯ ಸದಸ್ಯರುಗಳು ಕೋರಿಕೊಂಡಿದ್ದಾರೆ . ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಮಾ.21 NEWS DESK : ವೆಸ್ಟ್ ಕೊಳಕೇರಿ ಭಗವತಿ ದೇವರ ವಾರ್ಷಿಕ ಉತ್ಸವವು ಮಾ.22 ರಿಂದ 26ರ ವರೆಗೆ ನಡೆಯಲಿದೆ. ಮಾ.22 ರಂದು ಅಂದಿ ಬೊಳಕ್., ಮಾ.23ರಂದು ಪಟ್ಟಣಿ , ಎತ್ತು ಪೋರಾಟ , ಮಾ.24ರಂದು ಆಟ್ ಪಾಟ್, ತೆಂಗಿನಕಾಯಿಗೆ ಗುಂಡು ಹೊಡೆಯುವುದು ,ದೇವರ ಅವಬೃತ ಸ್ನಾನ , ಮಾ25 ರಂದು ಕಳಸ, ಮಾ.26ರಂದು ಬೇಟೆಗಾರ ದೇವರ ಉತ್ಸವ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ತಕ್ಕಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ.






