ಮಡಿಕೇರಿ ಮಾ.20 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದ್ವಿತೀಯ ವರ್ಷದ ಸಮಾಜ ಕಾರ್ಯ ವಿದ್ಯಾರ್ಥಿಗಳಿಂದ ವಿಶ್ವ ಸಮಾಜ ಕಾರ್ಯ ದಿನಾಚಣೆಯನ್ನು ಸ್ತ್ರೀ ಶಕ್ತಿ ಧಾಮ ವೃದ್ಧಾಶ್ರಮದಲ್ಲಿ ಆಚರಿಸಲಾಯಿತು. ಹಿರಿಯರು ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ಅವರೊಡನೆ ಸಮಯ ಕಳೆಯುವ ಮೂಲಕ ಅವರಲ್ಲಿ ಮಾನಸಿಕ ಸ್ಥೈರ್ಯ ತುಂಬಿದರು. ಹಿರಿಯರ ಮನಸ್ಸುಗಳಿಗೆ ಸಂತೋಷವನ್ನು ತುಂಬಿ ಉಲ್ಲಾಸಿತರಾಗಿಸಿದರು ಹಾಗೂ ಕೇಕ್ ಕತ್ತರಿಸುವ ಕೇಕ್ ಕತ್ತರಿಸುವ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಯೋಗ ಶಿಕ್ಷಕರಾದ ರೀನಾ ಹಾಗೂ ವಿದ್ಯಾರ್ಥಿಗಳಾದ ರುನೈಝ್, ಪ್ರಜೀತ್, ಶರತ್, ರವಿ, ತರುಣ್, ತುಳಸಿ, ದಿಕ್ಷೀತ್ ಹಾಜರಿದ್ದರು.
ಲೇಖಕ: admin
ಮಡಿಕೇರಿ ಮಾ.20 NEWS DESK : ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಸುಳ್ಯದ ಗಾಂಧಿ ಪಾರ್ಕ್ ಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ಸ್ಥಳೀಯ ನಗರ ಪಂಚಾಯತ್ ಸದಸ್ಯ ಗಾಂಧಿ ಪಾರ್ಕ್ ರುವಾರಿ ಶರೀಫ್ ಕಂಠಿ, ಚಾಯಿತಿ ಸದಸ್ಯ ಸಿದ್ದೀಕ್ ಕೊಕ್ಕೊ, ರಾಧಕೃಷ್ಣ ಅರಂಬೂರ್, ಇಸ್ಮಾಯಿಲ್ ಕುಂಬ್ಳೆಕಾರ್ಸ್, ಹನೀಫ್ ಬೀಜಕೊಚ್ಚಿ, ಅಬೂಬಕ್ಕರ್ ಮುಕ್ರಿ, ಅಬ್ದುಲ್ಲ ಪ್ಲ್ಯಾಸ್ಟೋ, ದಿವಾಕರ್, ಇಬ್ರಾಹಿಂ ಕಡಬ ಮತ್ತಿತರು ಹಾಜರಿದ್ದರು. ಗಾಂಧಿ ಪಾರ್ಕಿನ ರೂವಾರಿಗಳಾದ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮತ್ತು ಅವರ ತಂಡವನ್ನುಟಿ.ಎಂ.ಶಾಹಿದ್ ತೆಕ್ಕಿಲ್ ಅಭಿನಂದಿಸಿದರು.
ಮಡಿಕೇರಿ ಮಾ.19 NEWS DESK : ಕೊಡಗು- ದಕ್ಷಿಣ ಕನ್ನಡ ಜಿಲ್ಲೆಯ ಕೂಜಿಮಲೆ ಎಸ್ಟೇಟ್ ಅಂಗಡಿಗೆ ಬಂದು ದಿನಸಿ ಪದಾರ್ಥ ತೆಗೆದುಕೊಂಡು ಹೋಗಿರುವ ಶಂಕಿತ ವ್ಯಕ್ತಿಗಳು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಎಸ್.ಪಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಶಸ್ತ್ರ ಸಜ್ಜಿತರಾಗಿ ಮಾ.17ರ ಸಂಜೆ ವೇಳೆ ಕೂಜಿಮಲೆ ರಬ್ಬರ್ ಎಸ್ಟೇಟ್‌ನ ಅಂಗಡಿಗೆ ಆಗಮಿಸಿ 25 ಕೆ.ಜಿ ಅಕ್ಕಿ ಸಹಿತ ಇತರ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಈ ವೇಳೆ ಕನ್ನಡ ಭಾಷೆಯಲ್ಲಿ ತಮ್ಮನ್ನು ನಕ್ಸಲ್ ಹೋರಾಟಗಾರರು ಎಂದೇ ಪರಿಚಯಿಸಿಕೊಂಡಿದ್ದಲ್ಲದೇ, ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ತಿಳಿಸಿದ್ದಾರೆ. ತನಿಖೆ ಸಂದರ್ಭ ಅಂಗಡಿ ಮಾಲೀಕರಿಗೆ ಕೆಲವು ಫೋಟೋಗಳನ್ನು ತೋರಿಸಿದಾಗ ಓರ್ವ ವ್ಯಕ್ತಿ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಹೋಲುತ್ತಿರುವುದಾಗಿ ಹೇಳಿದ್ದಾರೆ. ಇನ್ನುಳಿದ ಮೂವರ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ವಿವರಿಸಿದರು. ಈ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ…
ಮಡಿಕೇರಿ ಮಾ.19 NEWS DESK : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಬರಹ ಮತ್ತು ಅವರಿಗೆ ಅಗೌರವ ತರುವ ರೀತಿಯಲ್ಲಿ ಸುಳ್ಳು ವರದಿಗಳನ್ನು ಸೃಷ್ಟಿಸಿದ ವ್ಯಕ್ತಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಕೊಡಗು ಜಿಲ್ಲಾ ಬಿಜೆಪಿಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ. ಐ.ಜಿ.ಚಿಣ್ಣಪ್ಪ ಎಂಬ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರಧಾನಿ ಮೋದಿ ಅವರ ಬಗ್ಗೆ ಅವಹೇಳನಕಾರಿ ಬರಹವನ್ನು ಮತ್ತು ಅವರಿಗೆ ಅಗೌರವ ತರುವ ರೀತಿಯ ಸುಳ್ಳು ವರದಿಗಳನ್ನು ಪ್ರಕಟಿಸಿ ಪ್ರಧಾನಿಯವರಿಗೆ ಮತ್ತು ಭಾರತೀಯ ಜನತಾ ಪಕ್ಷಕ್ಕೂ ಅವಮಾನ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿ ಬಿಟ್ಟಿರುವ ಐ.ಜಿ.ಚಿಣ್ಣಪ್ಪ ಎಂಬವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಅವರ ನೇತೃತ್ವದ ತಂಡ ಜಿಲ್ಲಾ ಚುನಾವಾಧಿಕಾರಿ ವೆಂಕಟ್ ರಾಜಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.
ಕುಶಾಲನಗರ ಮಾ.19 NEWS DESK : ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದೆ ಬಿಜೆಪಿ ಪಕ್ಷ ಒಕ್ಕಲಿಗ ಸಮುದಾಯವನ್ನು ನಿರ್ಲಕ್ಷಿಸಿದ್ದು, ಇದು ಖಂಡನೀಯ ಎಂದು ಕುಶಾಲನಗರ ಗೌಡ ಸಮಾಜದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಮಾತನಾಡಿದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಆನಂದ ಕರಂದ್ಲಾಜೆ ಹಿಂದಿನ ಲೋಕಸಭೆಯಲ್ಲಿ ಅತ್ಯುತ್ತಮ ಸಂಸದೀಯ ಪಟು ಆಗಿದ್ದ ಪ್ರತಾಪ್ ಸಿಂಹ ಅವರಿಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಇದು ಒಕ್ಕಲಿಗರನ್ನು ತುಳಿಯುವ ಸಂಕೇತವಾಗಿದೆ ಎಂದು ಆರೋಪಿಸಿದರು. ಬಿಜೆಪಿ ಹೈಕಮಾಂಡ್ ತಕ್ಷಣ ಸದಾನಂದ ಗೌಡರಿಗೆ ಟಿಕೆಟ್ ಅಥವಾ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದಿದ್ದಲ್ಲಿ ಕೊಡಗಿನ ಗೌಡ ಸಮಾಜಗಳು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂಬAಧ ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಭೆ ಕರೆದು ಒಕ್ಕಲಿಗರ ಹಿತ ಕಾಯದ ಪಕ್ಷಗಳಿಗೆ ಯಾವುದೇ ಕಾರಣಕ್ಕು ಬೆಂಬಲ ನೀಡದಂತೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಆನಂದ ತಿಳಿಸಿದರು.…
ಮಡಿಕೇರಿ ಮಾ.19 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟವರು, ವಿಕಲಚೇತನರು ಸೇರಿದಂತೆ ಯಾರೂ ಸಹ ಮತದಾನದಿಂದ ವಂಚಿತರಾಗಬಾರದು. ಆ ನಿಟ್ಟಿನಲ್ಲಿ ಅಂಚೆ ಮತಪತ್ರಗಳ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಚೆ ಮತಪತ್ರ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅಂಚೆ ಮತಪತ್ರವನ್ನು ಆನ್‍ಲೈನ್ ಮೂಲಕ ನಮೂನೆ 12 ಡಿ ಅನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 85 ವರ್ಷ ಮೇಲಿನವರಿಗೆ, ವಿಕಲಚೇತನರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾಧ್ಯವಾದಷ್ಟು ಮತಗಟ್ಟೆ ಕೇಂದ್ರಗಳಿಗೆ ಹೋಗಿ ಮತಹಕ್ಕು ಚಲಾಯಿಸುವಂತಾಗಬೇಕು. ಮತಗಟ್ಟೆ ಕೇಂದ್ರಕ್ಕೆ ತೆರಳಿ ಮತದಾನ ಮಾಡಲು ಸಾಧ್ಯವಾಗದಿರುವವರಿಗೆ ಅಂಚೆ ಮತಪತ್ರದ ಮೂಲಕ ಮತಹಕ್ಕು ಚಲಾಯಿಸಬಹುದಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಒಮ್ಮೆ…
ಮಡಿಕೇರಿ ಮಾ.19 NEWS DESK : ಕಥೆಯ ರಚನೆಯ ಪ್ರಾರಂಭ ನಮ್ಮ ಮನೆಯಲ್ಲಿ ತಾಯಿ ಅಥವಾ ಅಜ್ಜಿ ಅವರು ಹೇಳುವ ಕಥೆಗಳಿಂದ ಪ್ರಾರಂಭವಾಗುತ್ತದೆ. ಅವರು ಹೇಳಿದ ಕಥೆಗಳನ್ನು ನೆನಪಿಸಿಕೊಂಡು ಅವುಗಳನ್ನು ಬರಹ ರೂಪಕ್ಕೆ ಇಳಿಸಿದರೆ, ಅವು ಉತ್ತಮವಾದ ಕತೆಗಳಾಗುತ್ತದೆ. ಎಂದು ಪತ್ರಕರ್ತೆ ಉಷಾ ಪ್ರೀತಮ್ ನುಡಿದರು. ಅವರು ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ನಡೆದ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿನಿಧಿ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಥಾ ರಚನಾ ಕೌಶಲ್ಯದ ಕುರಿತು ಮಾತನಾಡಿದರು. ಕಥೆ ಸರಳ ಭಾಷೆಯಲ್ಲಿ ಇರಬೇಕು ಆಗ ಅದು ಎಲ್ಲರ ಮನಸ್ಸನ್ನು ತಲುಪುತ್ತದೆ ಎಂದರು. ಕನ್ನಡದ ಹಲವಾರು ಕಥೆಗಾರರ ಉದಾಹರಣೆಗಳನ್ನು ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ…
ವಿರಾಜಪೇಟೆ ಮಾ.19 NEWS DESK : ವಿರಾಜಪೇಟೆ ಸಮೀಪದ ಮಲೆತಿರಿಕೆ ಬೆಟ್ಟದ ಶ್ರೀ ಮಲೆ ಮಹಾದೇಶ್ವರ ದೇವರ ವಾರ್ಷಿಕ ಉತ್ಸವದ ಅಂಗವಾಗಿ ಮೆರವಣಿಗೆ ನಡೆಯಿತು. ಕುಂದಿರ ಮನೆಯಿಂದ ಭಂಡಾರ ಬಂದು ದೇಗುಲದಲ್ಲಿ ಕೊಡಿಮರದ ನಿಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ದೊರೆಯಿತು. ನಾಗದೇವಾಲಯದಲ್ಲಿ ವಿಶೇಷ ಪೂಜೆ ನಂತರ ಅನ್ನದಾನ ನಡೆಯಿತು. ರಾತ್ರಿ ಇರ್ ಬೊಳಕ್ ಮಾಹಾಪೂಜೆ ನಡೆಯಿತು. ಇಂದು ಮಧ್ಯಾಹ್ನ ನೆರಪು, ಎತ್ತ್ ಪೊರಾಟ್, ತೆಂಗಿನಕಾಯಿ ಗೆ ಗುಂಡು ಹೊಡೆಯುವುದು , ನಂತರ ಶ್ರೀ ದೇವರಿಗೆ ಮಾಹಾ ಪೂಜೆ ಸಲ್ಲಿಸಲಾಯಿತು. ಸಂಜೆ ಶ್ರೀ ಮಲೆ ಮಹಾದೇಶ್ವರ ದೇವರ ಉತ್ಸವ ಮೂರ್ತಿ( ತಡಂಬು) ನಗರ ಪ್ರದಕ್ಷಿಣೆ ನಡೆಯಿತು. ನಗರದ ತೆಲುಗರ ಬೀದಿ, ಜೈನರ ಬೀದಿಯ ಶ್ರೀ ಬಸವೇಶ್ವರ ದೇವಾಲಯ ( ಗೌರಿ ದೇವಸ್ಥಾನ) ದಲ್ಲಿ ವಿಶೇಷ ಪೂಜೆ ಸಲ್ಲಿಕೆಯಾಯಿತು. ಬಸವೇಶ್ವರ ದೇಗುಲದ ಆಡಳಿತ ಮಂಡಳಿಯ ವತಿಯಿಂದ ಲಘು ಉಪಹಾರ ಕಾರ್ಯಕ್ರಮ ನಡೆಯಿತು. ಮುಖ್ಯ ಬೀದಿಗಾಗಿ ಸಂಚರಿಸಿ ಬಳಿಕ ರಾಂ ಲಾಲ್ ( ಸತ್ಯ ನಾರಾಯಣ ಕಾಂಪ್ಲೆಕ್ಸ್)…
ಮಡಿಕೇರಿ ಮಾ.19 NEWS DESK : ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಭಕ್ತ ಜನ ಸಂಘದ ನೂತನ ಅಧ್ಯಕ್ಷರಾಗಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಿಯಪ್ಪ ಆಯ್ಕೆಯಾಗಿದ್ದಾರೆ.
ಮಡಿಕೇರಿ ಮಾ.19 NEWS DESK : ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಶ್ರೀ ಭಗವತಿ ದೇವಾಲಯದ ವಾರ್ಷಿಕ ಉತ್ಸವ ಮಾ.22ರಿಂದ ಮಾ.26ರವರೆಗೆ ನಡೆಯಲಿದೆ. ಉತ್ಸವದ ಅಂಗವಾಗಿ ಮಾ.22ರಂದು ಬೆಳಗ್ಗೆ 10 ಗಂಟೆಯಿಂದ ಗಣಪತಿ ಹೋಮ, ಮಹಾಪೂಜೆ, ಸಂಜೆ 6 ಗಂಟೆಗೆ ಪ್ರಾರ್ಥನೆ, ತಕ್ಕರ ಮನೆಯಿಂದ ಭಂಡಾರ ತೆಗೆದುಕೊಂಡು ಬರುವುದು, ಅಂದಿಬೆಳಕು, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಾ.23ರಂದು ಬೆಳಗ್ಗೆ 6 ಗಂಟೆ ದೇವರು ಬಲಿ ಬರುವುದು, ಮಹಾಪೂಜೆ. ಸಂಜೆ 6 ಗಂಟೆಗೆ ದೇವರು ಬಲಿಬರುವುದು, ಅಂದಿಬೆಳಕು, ಮಹಾಪೂಜೆ, ನಂತರ ಶ್ರೀ ಪರದೇವರ ಕೋಟದಲ್ಲಿ ಕೊಟ್ಟಿಪಾಡುವುದು ಕಾರ್ಯಕ್ರಮಗಳು ಜರುಗಲಿದೆ. ಮಾ.24ರಂದು ಬೆಳಿಗ್ಗೆ 6ಗಂಟೆಗೆ ದೇವರು ಬಲಿ ಬರುವುದು, ಅಯ್ಯಪ್ಪ ದೇವರ ಪೂಜೆ, ಮಹಾಪೂಜೆ, ಸಂಜೆ 6 ಗಂಟೆಗೆ ಬೆಳಕು, ದೇವರು ಬಲಿ ಬರುವುದು, ಅಂದಿಬೆಳಕು, ಪ್ರಸಾದ ವಿತರಣೆ ನಡೆಯಲಿದೆ. ಮಾ.25ರಂದು ಪಟ್ಟಣಿ, ಬೆಳಿಗ್ಗೆ 6 ಗಂಟೆಗೆ ಶ್ರೀ ದೇವರ ನೃತ್ಯ ಬಲಿ, ಶ್ರೀ ಪರದೇವರ ಮುಡಿ ತರುವುದು, ಶ್ರೀ ಅಯ್ಯಪ್ಪ ದೇವರ ಭಂಡಾರ…






