ಮಡಿಕೇರಿ ಮಾ.16 NEWS DESK: ಮಡಿಕೇರಿ ನಗರದ ಮಹದೇವಪೇಟೆ ನಿವಾಸಿ ವಿ.ಸಿ.ನಾರಾಯಣ ಶೆಟ್ಟಿ ಅವರ ಪತ್ನಿ ವಿ.ಎನ್.ಭಾಗ್ಯಲಕ್ಷ್ಮಿ(79) ಇಂದು ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಲೇಖಕ: admin
ಮಡಿಕೇರಿ ಮಾ.16 NEWS DESK : ಭಾರತ ಚುನಾವಣಾ ಆಯೋಗವು ಮಾ.16ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು, ಮಾ.16ರಿಂದಲೇ ಕೊಡಗು ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಾ.28ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಏ.4 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ, ಏ.8ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದ್ದು, ಏ.26ರಂದು ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.NEWS DESK 2024 ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪ್ರತಿಯೊಬ್ಬ ಮತದಾರರು ಸಹ ಅವರ ಹಕ್ಕನ್ನು ಚಲಾಯಿಸಲು ಅಡತಡೆಗಳಾಗದಂತೆ ಎಲ್ಲರೂ ಸಹಕಾರ ನೀಡಬೇಕು. ಜಿಲ್ಲಾಡಳಿತದಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಭಾರತ ಚುನಾವಣಾ ಆಯೋಗದ ಎಲ್ಲಾ ನಿಯಮಗಳಂತೆ ಕಟ್ಟುನಿಟ್ಟಾಗಿ ಪಾಲಿಸಿ ಚುನಾವಣೆಯನ್ನು ನಡೆಸಲು ಜಿಲ್ಲೆಯ ಎಲ್ಲಾ ಮತದಾರರು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು…
ಮಡಿಕೇರಿ ಮಾ.16 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 10 ತಿಂಗಳುಗಳಲ್ಲಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದ್ದು, ಸುಮಾರು 140 ಕೋಟಿ ರೂ.ಗಳನ್ನು ವಿನಿಯೋಗಿಸಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸುವ ಮೂಲಕ ಶಾಸಕ ಡಾ.ಮಂತರ್ ಗೌಡ ಅವರು ಜನಸ್ನೇಹಿಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಪರ ಆಡಳಿತದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಶಾಸಕರು ಗ್ಯಾರಂಟಿ ಯೋಜನೆಗಳಿಂದ ಅನುದಾನ ಕೊರತೆಯಾಗಿದೆ, ಅಭಿವೃದ್ಧಿ ಕಾರ್ಯಗಳು ಕುಂಟಿತಗೊAಡಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ ಅಭಿವೃದ್ಧಿ ಕಾರ್ಯಗಳಿಗೆ ಗ್ಯಾರಂಟಿ ಯೋಜನೆಗಳು ಅಡ್ಡಿಯಾಗಿಲ್ಲ, ಈ ಕುರಿತು ಚರ್ಚೆಗೆ ನಾವು ಸಿದ್ದರಿದ್ದೇವೆ ಎಂದು ಸವಾಲು…
ಸುಂಟಿಕೊಪ್ಪ,ಮಾ.16 NEWS DESK : ವಿವಿಧ ಇಲಾಖೆಗಳ ಅನುದಾನದಡಿಯಲ್ಲಿ ಮಂಜೂರಾಗಿರುವ ಒಟ್ಟಾರೆ ರೂ.7ಕೋಟಿ ಮೊತ್ತದ ಕಾಮಗಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ಸುಂಟಿಕೊಪ್ಪ ನಾಡಕಚೇರಿ ಮುಂಭಾಗದಲ್ಲಿ ನೂತನವಾಗಿ ರೂ 5 ಕೋಟಿ ವೆಚ್ಚದಲ್ಲಿ 3 ಹಂತಗಳಲ್ಲಿ ಅನುಷ್ಠಾನಗೊಳ್ಳಲಿರುವ ಜಲಜೀವನ್ ಮಿಷನ್ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು ವಿಶೇಷವಾಗಿ ಸುಂಟಿಕೊಪ್ಪಕ್ಕೆ ಹರದೂರು ಸಮೀಪದ ಹಾರ್‍ಬೈಲ್ ಹೊಳೆಯಿಂದ ಕುಡಿಯುವ ನೀರನ್ನು ಸರಬರಾಜು ಮಾಡುವ ಯೋಜನೆ ಒಳಗೊಂಡಿದೆ. ಯೋಜನೆ ಶಾಶ್ವತವಾಗಿ ಮತ್ತು ಯಶಸ್ವಿಯಾಗಬೇಕಾದರೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಪೈಪ್ ಲೈನ್ ಅಳವಡಿಕೆ ಸೇರಿದಂತೆ ಕೆಲವು ತಾಂತ್ರಿಕ ಅಡಚಣೆಗಳನ್ನು ಯಶಸ್ವಿಯಾಗಿ ನಿಭಾಯಿಸಬೇಕೆಂದು ಹೇಳಿದ ಶಾಸಕರು ಕುಡಿಯುವ ನೀರಿನ ಯೋಜನೆಯಲ್ಲಿ ಕಳಪೆ ಕಾಮಗಾರಿ ನುಸುಳದಂತೆ ಎಚ್ಚರವಹಿಸಿಬೇಕೆಂದು ಕರೆ ನೀಡಿದರು. ನಮ್ಮ ಸರಕಾರ ಎಲ್ಲಾ ಹಂತಗಳಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಮುಂದಾಗಿದ್ದು, 50-54 ಲೆಕ್ಕ ಶಿರ್ಷೀಕೆಯಡಿಯಲ್ಲಿ ರಸ್ತೆಗಳ ಅಭಿವೃದ್ಧಿ ಕೇಂದ್ರಿಯ ವಿಪತ್ತು…
ಮಡಿಕೇರಿ ಮಾ.16 NEWS DESK : ಕಾವೇರಿ ಜಲ ಉದ್ಭವಿಸುವ ಕೊಡಗು ಜಿಲ್ಲೆ ಕಾವೇರಿ ನದಿ ನೀರು ಬಳಸಬಾರದು ಎಂದು ಜಿಲ್ಲಾಡಳಿತ ಇತ್ತೀಚೆಗೆ ಹೊರಡಿಸಿರುವ ಸುತ್ತೋಲೆ ಬಹುಸಂಖ್ಯಾತ ಆಡಳಿತಶಾಹಿಗಳು ಕೊಡವರ ಹಕ್ಕುಗಳನ್ನು ಕಸಿದುಕೊಳ್ಳುವ ಯತ್ನವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 1956 ರಲ್ಲಿ ಕೂರ್ಗ್ ರಾಜ್ಯ ಕರ್ನಾಟಕದೊಂದಿಗೆ ವಿಲೀನವಾದ ನಂತರ ಹಲವು ಕರಾಳ ಕಾಯ್ದೆ ಮೂಲಕ ನಿರಂತರವಾಗಿ ವಂಚನೆ ಮಾಡಿ ಕೊಡವರನ್ನು ಶೋಷಿಸಲಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಕಾವೇರಿ ನದಿಯ ನೀರನ್ನು ಬಳಸಬಾರದೆಂದು ಜಿಲ್ಲಾಡಳಿತ ಇತ್ತೀಚೆಗೆ ಹೊರಡಿಸಿರುವ ಆದೇಶ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಕಾರ ಕೊಡಗನ್ನು ಕರ್ನಾಟಕಕ್ಕೆ ಕಪ್ಪ ಒಪ್ಪಿಸುವ ಸಾಮಂತನೆಂದು, ಮೈಸೂರಿಗರು ಕೊಡಗನ್ನು ಯುದ್ಧದಲ್ಲಿ ಗೆದ್ದ ಆಕ್ರಮಿತ ವಸಹಾತು ಎಂದು, ಇಲ್ಲಿನ ಸರ್ವ ಉತ್ಪಾದನೆಯ ಹಕ್ಕುದಾರಿಕೆ ಕೊಡವರದಲ್ಲವೆಂದು, ಕೊಡವರು ಕೇವಲ ಅವರ ಅಧೀನ ಪ್ರಜೆಗಳೆಂಬ ಭಾವನೆ ಇದ್ದಂತಿದೆ. ಇದು ದೌರ್ಜನ್ಯಕಾರಿ, ಜನವಿರೋಧಿ, ಆಕ್ರಮಣಕಾರಿ, ಪ್ರಜಾತಂತ್ರ ವಿರೋಧಿ ನಿಲುವಾಗಿದೆ ಎಂದು ಆರೋಪಿಸಿದ್ದಾರೆ.…
ಮಡಿಕೇರಿ ಮಾ.16 NEWS DESK : ಮಡಿಕೇರಿ ನಗರಸಭೆಗೆ ನಾಮ ನಿರ್ದೇಶಿತ ಸದಸ್ಯರಾಗಿ ಕಾಂಗ್ರೆಸ್ ನ ಸದಾ ಮುದ್ದಪ್ಪ, ಬಿ.ಎನ್.ಮುದ್ದುರಾಜ್, ಮೊಹಮ್ಮದ್ ಯಾಕುಬ್, ಜಿ.ಸಿ.ಜಗದೀಶ್ ಹಾಗೂ ಜುಲೇಕಾಬಿ ಆಯ್ಕೆಯಾಗಿದ್ದಾರೆ. ಇವರುಗಳನ್ನು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ನಾಮ ನಿರ್ದೇಶಿತ ಸದಸ್ಯರುಗಳನ್ನಾಗಿ ಆಯ್ಕೆ ಮಾಡಿದ ಕಾರಣಕ್ಕಾಗಿ ನೂತನ ಸದಸ್ಯರುಗಳು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಉಪಸ್ಥಿತರಿದ್ದರು.
ಗೋಣಿಕೊಪ್ಪ ಮಾ.16 NEWS DESK : ಚೇನಿವಾಡ-ಬೇಗೂರು ಗ್ರಾಮದ 850 ವರ್ಷಗಳ ಪುರಾತನ ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ ಮಾ.19 ರಿಂದ 25 ರವರೆಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಲ್ಲಂಡ ಪ್ರಕಾಶ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಮಾ.19 ರಿಂದ 25 ರವರೆಗೆ ಏಳು ದಿನಗಳ ಕಾಲ ದೇವಾಲಯದ ನವೀಕರಣ ನೂತನ ಬಿಂಬಗಳ ಪುನರ್ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ತಂತ್ರಿಗಳಾದ ಬ್ರಹ್ಮಶ್ರೀ ಗೋಪಾಲಕೃಷ್ಣ ಆಡಿಗ ಪೆರ್ಲ ನೇತೃತ್ವದಲ್ಲಿ ಶಿಲ್ಪಿ ಜಗನಿವಾಸ್ ರಾವ್ ಪುತ್ತೂರು ಸಮ್ಮುಖದಲ್ಲಿ ಪ್ರಧಾನ ಅರ್ಚಕ ನಾಗೇಶ್ ಸಹಕಾರದೊಂದಿಗೆ ಪೂಜಾ ವಿಧಿ ವಿಧಾನಗಳು ಮತ್ತು ವಿಗ್ರಹ ಪ್ರಪ್ರತಿಷ್ಠಾಪನೆಗಳು ನೆರವೇರಲಿದೆ ಎಂದು ತಿಳಿಸಿದರು. ಮಾ.19 ರಂದು ಸಂಜೆ 4 ಗಂಟೆಗೆ ತಂತ್ರಿಗಳನ್ನು ಹಾಗೂ ಶಿಲ್ಪಿಗಳನ್ನು ಪೂರ್ಣ ಕುಂಭ ಸ್ವಾಗತದಿಂದ ಬರಮಾಡಿಕೊಳ್ಳಲಾಗುವುದು. ಮಾ.20 ರಂದು ಬೆಳಗ್ಗೆ 6.30ಕ್ಕೆ ಗಣಪತಿ ಹವನ, ಸಪ್ತಶುದ್ದಿ, ಪ್ರಸಾದ ಶುದ್ದಿ, ರಾಕ್ಷೋಘ್ನ ಹವನ, ವಾಸ್ತು ಹವನ, ಬಲಿ, ದಿಶಾಬಲಿ, ಮಹಾಪೂಜೆಗಳು…
ಗೋಣಿಕೊಪ್ಪ ಮಾ.16 : ಉಚಿತ ಮಾನಸಿಕ ಆರೋಗ್ಯ ದುಷ್ಟಟ ಅವಲಂಬನೆ ಮತ್ತು ಮರುವಿನ ಕಾಯಿಲೆ ಬಗ್ಗೆ ತಿಳುವಳಿಕಾ ಮಾಪನ ತಪಾಸಣ ಬೃಹತ್ ಶಿಬಿರ ಪೊನ್ನಂಪೇಟೆ ರಾಮಕೃಷ್ಣ ಆಶ್ರಮದಲ್ಲಿ ನಡೆಯಿತು. ಮೈಸೂರಿನ ಶ್ರೀ ರಾಮಕೃಷ್ಣ ಸೇವಾಶ್ರಮ ಆಸ್ಪತ್ರೆ ಮತ್ತು ವಿವೇಕ ಆಸ್ಪತ್ರೆ, ಪೊನ್ನಂಪೇಟೆ ರಾಮಕೃಷ್ಣ ಸೇವಾ ಆಶ್ರಮ ಆಸ್ಪತ್ರೆ ಮತ್ತು ರಾಮಕೃಷ್ಣ ಶಾರದಾಶ್ರಮ ಸಹಯೋಗದೊಂದಿಗೆ ಶಿಬಿರವನ್ನು ಆಯೋಜಿಸಲಾಯಿತು. ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಪರಹಿತನಂದಾ ಜೀ ಶಿಬಿರಕ್ಕೆ ಚಾಲನೆ ನೀಡಿದರು. ಮುಂದಿನ ತಿಂಗಳ ನಾಲ್ಕನೇ ಶನಿವಾರದಂದು ಶಿಬಿರವನ್ನು ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು. ಸುಮಾರು 30ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿ ತಪಾಸಣೆಗೆ ಒಳಪಟ್ಟರು. ರಾಮಕೃಷ್ಣ ಸೇವಾಶ್ರಮದ ವೈದ್ಯಕೀಯ ಮುಖ್ಯಸ್ಥ ಡಾ.ಕಾರ್ಯಪ್ಪ, ವಿವೇಕ ಆಸ್ಪತ್ರೆಯ ಮನೋವೈದ್ಯ ಡಾ. ಸುರೇಶ್ ಭಾರ್ಗವ್ ಮನೋ ತಜ್ಞರದ ಅರವಿಂದ್ ಕುಮಾರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ಮಡಿಕೇರಿ ಮಾ.16 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಪೂಮಾಲೆ ವಾರಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಆಯ್ಕೆಯಾಗಿದ್ದಾರೆ.
ಮಡಿಕೇರಿ ಮಾ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸುಳ್ಯದ ಸದಾಶಿವ ಮಾವಜಿ ಆಯ್ಕೆಯಾಗಿದ್ದಾರೆ.






