ಲೇಖಕ: admin

ಚೆಯ್ಯಂಡಾಣೆ  ಜ.20 : NEWS DESK : ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ಗ್ರಾಮಕ್ಕೆ ಗ್ರಾಮಸ್ಥರ ಮನವಿ ಮೇರೆಗೆ ಶಾಸಕ ಮಂತರ್ ಗೌಡ ಅವರ ಮುತುವರ್ಜಿಯಿಂದ ನೂತನ ಬಸ್ ಸೇವೆಯನ್ನು ಪ್ರಾರಂಭಿಸಲಾಯಿತು. ಪಾಲೇಮಾಡು ಗ್ರಾಮದಲ್ಲಿ ನೂರಾರು ಬಡ ಕುಟುಂಬಗಳು ವಾಸಿಸುತ್ತಿದ್ದು, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಪಟ್ಟಣ ಸೇರಿದಂತೆ ಇನ್ನಿತರ ಕಡೆಗಳಿಗೆ ತೆರಳಲು ಖಾಸಗಿ ವಾಹನಗಳನ್ನು ಅವಲಂಬಿಸುವ ಪರಿಸ್ಥಿತಿ ಇದೆ. ಇದರಿಂದ ಸಮಸ್ಯೆ ಅನುಭವಿಸುತ್ತಿದ್ದ ಗ್ರಾಮಸ್ಥರು ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಪಾಲೆಮಾಡು ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಮಂತರ್ ಗೌಡ ಅವರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಮುತುವರ್ಜಿಹಿಸಿ ಪಾಲೆಮಾಡು ಗ್ರಾಮಕ್ಕೆ ಮೊದಲ ಬಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿದ್ದು, ಶಾಸಕರ ಜನಸ್ಪಂದನೆಗೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಗ್ರಾಮಕ್ಕೆ ಬಸ್ ಬರುತ್ತಿದ್ದಂತೆ ಬಸ್ಸಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. ಪಾಲೆಮಾಡು ಗ್ರಾಮದಿಂದ ಮೂರ್ನಾಡು ಮಾರ್ಗವಾಗಿ ಮಡಿಕೇರಿಗೆ ಪ್ರತಿ ದಿನ ಬೆಳಗ್ಗೆ 7.45 ಹಾಗೂ ಸಂಜೆ…

Read More

ಮಡಿಕೇರಿ ಜ.20 : ಮುದ್ದ ಕಳಲ ಯುವಕ ಸಂಘದ ವತಿಯಿಂದ ನಗರದ ಕೋಟೆ ಮಹಿಳಾ ಸಮಾಜದಲ್ಲಿ ಮೊಗೇರ ಸಮುದಾಯ ಬಾಂಧವರ ವಿಶೇಷ ಸಭೆ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಜ್ಯೋತಿ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಯಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಶೀಘ್ರ ನಿವೇಶನ ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಸ್ವತಂತ್ರ ಪೂರ್ವದಿಂದಲೇ ಸ್ವಂತ ಮನೆ ಇಲ್ಲದೆ ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಯಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳು ವಿವಿಧ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಜಿಲ್ಲಾಡಳಿತದ ಗಮನ ಸೆಳೆಯಲಾಗುತ್ತಿದೆ. ನಿವೇಶನದ ಬೇಡಿಕೆ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಹಾಗೂ ಚುನಾಯಿತ ಪ್ರತಿನಿಧಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜ್ಯೋತಿ ಕುಮಾರ್ ಆರೋಪಿಸಿದರು. ನಮ್ಮ ಸಮಸ್ಯೆಗೆ ನಾವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವ ಪ್ರಯತ್ನ ನಡೆಯಬೇಕಾಗಿದೆ ಎಂದ ಅವರು, ಖಾಸಗಿ…

Read More

ಮಡಿಕೇರಿ ಜ.20 : NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಝ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ಐದು ಗ್ಯಾರಂಟಿಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ ಜನರ ವಿಶ್ವಾಸವನ್ನು ಗಳಿಸುವಂತಾಗಬೇಕೆಂದು ಕರೆ ನೀಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಲು ವಲಯ ಮತ್ತು ನಗರ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಶ್ರಮ ವಹಿಸಬೇಕು ಎಂದರು. ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್,…

Read More

ಮಡಿಕೇರಿ ಜ.20 : NEWS DESK : ಲೋಕೋಪಯೋಗಿ ಇಲಾಖೆಯಿಂದ  ಬಿಟ್ಟಂಗಾಲ ಕೂಟಿಯಾಲ ರಸ್ತೆಯಲ್ಲಿ 2.5 ಕಿ ಮೀ ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ನಾಗರಿಕರು  ಹಾಜರಿದ್ದರು.

Read More

ಮಡಿಕೇರಿ ಜ.20 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಮೂರ್ನಾಡಿನ ಕರಸೇವಕರನ್ನು ವಿಶ್ವ ಹಿಂದೂ ಪರಿಷತ್ ನ ಮೂರ್ನಾಡು ಘಟಕ ಸನ್ಮಾನಿಸಿ ಗೌರವಿಸಿತು. 1992ರಲ್ಲಿ ರಾಮ ಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡ ಕರಸೇವಕರಾದ ಬೈಲೋಳಿ ಸುಬ್ಬಯ್ಯ, ವೀರೇಶ್, ಸೋಮ ಚೆಲುವ ಹಾಗೂ ಬಿ.ಕೆ.ಪೂವಪ್ಪ ಅವರ ಪರವಾಗಿ ಪತ್ನಿ ಕಲಾವತಿ ಅವರನ್ನು ಸನ್ಮಾನಿಸಿ ಕರಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ನಾಲ್ವರು ಕರಸೇವಕರ ಮನೆಗಳಿಗೇ ತೆರಳಿ ಗೌರವಿಸಿದ ವಿಹೆಚ್‍ಪಿ ಪ್ರಮುಖರು ಅಯೋಧ್ಯೆಯ ಮಂತ್ರಾಕ್ಷತೆ ನೀಡಿದರು. ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಹಿಂದೂ ಕಾರ್ಯಕರ್ತರ ಪರಿಶ್ರಮದಿಂದ ಇದು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ವಿಶ್ವ ಹಿಂದೂ ಪರಿಷತ್ ನ ಮೂರ್ನಾಡು ಘಟಕದ ಅಧ್ಯಕ್ಷ ಬಿ.ವಿ.ಮೋಹನ್, ಕಾರ್ಯದರ್ಶಿ ದಿನೇಶ್ ಮೂರ್ನಾಡು, ಬಜರಂಗದಳದ ಪ್ರಮುಖ ಎಂ.ಕೆ.ಪ್ರವೀಣ್, ಮಾತೃಶಕ್ತಿಯ ಜಿಲ್ಲಾ ಪ್ರಮುಖರಾದ ಪೂರ್ಣಿಮಾ ಸುರೇಶ್, ಜಾನಕಿ ಚಂಗಪ್ಪ ಹಾಗೂ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ಜ.20 : NEWS DESK : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ದಿನವಾದ ಜ.22 ರಂದು ಕೊಡಗು ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಮತ್ತು ಮನೆ ಮನೆಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಘಟಕ ಕರೆ ನೀಡಿದೆ. ಜಿಲ್ಲೆಯ ಎಲ್ಲಾ ದೇವಾಲಯಗಳನ್ನು ಶುಚಿ ಮಾಡಿ, ಅಲಂಕಾರಗೊಳಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು. ಶ್ರೀರಾಮ ನಾಮಸ್ಮರಣೆ ಮತ್ತು ಭಜನೆಯೊಂದಿಗೆ ಬಾಲರಾಮನ ಪ್ರತಿಷ್ಠಾಪನೆಯ ದಿನವನ್ನು ಅರ್ಥಪೂರ್ಣಗೊಳಿಸಬೇಕು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸೂಚನೆಯಂತೆ ಈಗಾಗಲೇ ಜಿಲ್ಲೆಯ ಪ್ರತಿ ಮನೆಗೂ ಆಯೋಧ್ಯೆಯ ಮಂತ್ರಾಕ್ಷತೆಯನ್ನು ತಲುಪಿಸಲಾಗಿದೆ. ಸೋಮವಾರ ಸೂರ್ಯಾಸ್ತವಾದ ನಂತರ ಎಲ್ಲಾ ಮನೆಯಲ್ಲಿ ದೀಪ ಬೆಳಗಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿ ದೀಪೋತ್ಸವ ಆಚರಿಸಬೇಕು ಎಂದು ವಿಹೆಚ್‍ಪಿ ಮನವಿ ಮಾಡಿದೆ.

Read More

ನಾಪೋಕ್ಲು ಜ.20 : ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ನಾಪೋಕ್ಲುವಿನ ಸಂತೆ ಮೈದಾನದಲ್ಲಿ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿ ನೀಡಲಾಯಿತು. ನಾಪೋಕ್ಲು ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿಗಳಲ್ಲಿ ಯಾತ್ರೆ ನಡೆದಿದ್ದು, ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋಧಯ ಯೋಜನೆ, ಪ್ರಧಾನಮಂತ್ರಿ ಅವಾಸ್ ಯೋಜನೆ ಗ್ರಾಮೀಣ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ , ಕಿಸಾನ್ ಕ್ರೆಡಿಟ್ ಕಾರ್ಡ್ , ಪೋಷನ್ ಅಭಿಯಾನ್, ಜಲಜೀವನ್ ಮಿಷನ್, ಸ್ವಾಮಿತ್ವ ಯೋಜನೆ, ಜೀವನ್ ಜ್ಯೋತಿ ವಿಮಾ ಯೋಜನೆ, ಸುರಕ್ಷಾ ವಿಮಾ ಯೋಜನೆ ಅಟಲ್ ಪಿಂಚಣಿ ಯೋಜನೆ ಪ್ರಧಾನಮಂತ್ರಿ ಪ್ರಣಾಮ ಯೋಜನೆ ಮತ್ತು ಜ್ಞಾನ ಗೊಬ್ಬರಗಳ ಬಗ್ಗೆ ವಿವಿಧ ಇಲಾಖೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ…

Read More

ಮಡಿಕೇರಿ ಜ.20 :  NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶತಮಾನೋತ್ಸವ ಸಂಭ್ರಮ ಹಿನ್ನೆಲೆ ಎರಡು ದಿನಗಳ ಕಾಲ ನಗರ ಗಾಂಧಿ ಮೈದಾನದಲ್ಲಿ ಆಯೋಜಿತ ವಾಹನ ಮತ್ತು ಕೃಷಿ ಯಂತ್ರೋಪಕರಣಗಳ ಸಾಲ ಮೇಳಕ್ಕೆ ಚಾಲನೆ ದೊರಕಿತು. ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ ಅವರು ಬೆಳಗ್ಗೆ ಮೇಳಕ್ಕೆ ಚಾಲನೆಯನ್ನು ನೀಡಿದರು. ದ್ವಿಚಕ್ತ ಮತ್ತು ಚತುಷ್ಚಕ್ರವಾಹನ ಮಾರಾಟದ ಹಲ ಕಂಪೆನಿಗಳು ತಮ್ಮ ವಾಹನಗಳನ್ನು ಮೇಳದಲ್ಲಿ ಪ್ರದರ್ಶನಕ್ಕಿರಿಸಿದ್ದರೆ, ಕೃಷಿ ಯಂತ್ರೋಪಕರಣಗಳ ಮಾರಾಟದ ಹಲ ಮಳಿಗೆಗಳು ಗಮನ ಸೆಳೆಯುತ್ತಿವೆ. ಜಿಲ್ಲಾ ವ್ಯಾಪ್ತಿಯ ಬೆಳೆಗಾರರು, ಸಾರ್ವಜನಿಕರು ಮೇಳಕ್ಕೆ ಭೇಟಿ ನೀಡುತ್ತಿರುವುದು ಕಂಡು ಬಂದಿತು. ಈ ಎರಡು ದಿನಗಳ ಮಾರಾಟ ಮೇಳದಲ್ಲಿ ವಿಶೇಷವಾಗಿ ಜಿಲ್ಲೆಯ ಕೃಷಿಕರ ಅನುಕೂಲಕ್ಕಾಗಿ ಕೃಷಿ ಯಂತ್ರೋಪಕರಣಗಳನ್ನು ಮತ್ತು ವಾಹನಗಳನ್ನು ಬ್ಯಾಂಕ್ ನೀಡುವ ಸಾಲದ ಮೂಲಕ ಖರೀದಿಸಿದಲ್ಲಿ, ಸಾಲದ ಒಟ್ಟು ಮೊತ್ತದ ಶೇ.7 ರಷ್ಟು ರಿಯಾಯಿತಿಯನ್ನು ಕೆಡಿಸಿಸಿ…

Read More

ಸೋಮವಾರಪೇಟೆ ಜ.20 : NEWS DESK :  ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಜ.26ರಂದು ಪದವಿಪೂರ್ವ ಕಾಲೇಜು ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ಸೋಮವಾರಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಎಸ್.ಎನ್.ನರಗುಂದ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಪ್ರತಿ ಪೂರ್ವಭಾವಿ ಸಭೆಯಲ್ಲೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ತಹಶೀಲ್ದಾರ್ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದರು. ಧ್ವಜಾರೋಹಣ, ಮೈದಾನ ಸ್ವಚ್ಪತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ತಯಾರಿ, ಬೆಳಗ್ಗಿನ ಉಪಾಹಾರ, ಕವಾಯಿತು, ಕುಡಿಯುವ ನೀರು ಮತ್ತಿತರ ವ್ಯವಸ್ಥೆಯ ಕುರಿತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದರು. ಸಾಂಸ್ಕೃತಿಕ  ಕಾರ್ಯಕ್ರಮದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಯವರು ನಿರ್ವಹಿಸುವಂತೆ ಸೂಚಿಸಿದರು. ಮೈದಾನ ಸ್ವಚ್ಪತೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯವರು ಒಂದು ದಿನ ಮೊದಲೇ ಗಮನ ಹರಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಈರ್ವರು ನಿವೃತ್ತ ಯೋಧರನ್ನು ಸನ್ಮಾನಿಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ…

Read More

ವಿರಾಜಪೇಟೆ ಜ.20 : NEWS DESK : ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರಲ್ಲಿ ಕನ್ನಡ ನೆಲ ಜಲ ಮತ್ತು ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಮಾಡುತ್ತಾ ಕನ್ನಡಿಗರಲ್ಲಿ ಜಾಗೃತವಾಗಿರುವ ಕನ್ನಡ ಅಭಿಮಾನವನ್ನು ಬಡಿದೆಬ್ಬಿಸುತ್ತಿದೆ ಎಂದು ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಅಧ್ಯಕ್ಷ ಮುಕ್ಕಾಟೀರ ಐ.ಸುನೀಲ್ ನಾಣಯ್ಯ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಹಾಗೂ ದೇವಣಗೇರಿ ಬಿ.ಸಿ.ಪ್ರೌಢಶಾಲೆ ವತಿಯಿಂದ ಶಾಲಾ ಸಭಾಂಗಣದಲ್ಲಿ ನಡೆದ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಮತ್ತು ಮುಲ್ಲೇಂಗಡ ಮಧೋಶ್ ಪೂವಯ್ಯ ಅವರು ಸ್ಥಾಪಿಸಿದ “ದಿ. ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಸ್ಮರಣಾರ್ಥ ದತ್ತಿನಿಧಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಸಾಹಿತ್ಯವನ್ನು ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ದೇವಣಗೇರಿ ಬಿ.ಸಿ. ಪ್ರೌಢ ಶಾಲೆ ಮುಖ್ಯೋದ್ಯಾಯರಾದ ಹೆಚ್.ಡಿ. ಲೋಕೇಶ್ ಕನ್ನಡದ ಹಿರಿಯ ಕವಿ, ಸಾಹಿತಿಗಳ ಸಾಹಿತ್ಯದ ಬಗ್ಗೆ ಉಲ್ಲೇಖಿಸಿ ಮಾತನಾಡಿ,…

Read More