ಮಡಿಕೇರಿ ಜ.18 ತಾಲ್ಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯು ಜ.22 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಾ.ಪಂ.ಇಒ ಶೇಖರ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜ.18 : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಈರಳೆ ಘಟಕದಲ್ಲಿ ಪ್ರತಿಷ್ಠಾಪಿಸಿರುವ ಪಂಚಮುಖಿ ವಾಯುಪುತ್ರ ಮೂರ್ತಿಗೆ ಒಂದು ವರ್ಷ ತುಂಬಿದ ಹಿನ್ನೆಲೆ ಮಕರ ಸಂಕ್ರಾತಿಯಂದು ವಾರ್ಷಿಕ ವಿಶೇಷ ಪೂಜೆ ನಡೆಯಿತು. ಈರಳೆ ಶಾಖೆಯಲ್ಲಿರುವ ಪಂಚಮುಖಿ ವಾಯುಪುತ್ರ ಮೂರ್ತಿಗೆ ವಿಶೇಷ ಅಲಂಕಾದೊಂದಿಗೆ ಪೂಜೆಸಲ್ಲಿಸಿ ಮಕ್ಕಳು ಹಾಗೂ ಸಾರ್ವಜನಿಕರಿಂದ ಆರತಿ ಬೆಳಗಲಾಯಿತು. ಇದೇ ಸಂದರ್ಭ ಚೆಟ್ಟಳ್ಳಿ ಸಹಕಾರ ಸಂಘದ ಶ್ರೀನರೇಂದ್ರ ಮೋದಿ ಭವನದಲ್ಲಿರುವ ವಿಘ್ನೇಶ್ವರ, ವೀರಾಂಜನೇಯ, ಮಹಾವಿಷ್ಣುವಿಗೆ, ಮುಖ್ಯಕಚೇರಿಯಲ್ಲಿರುವ ಪಶುಪತಿ ನಾಥ ಹಾಗೂ ಕಾವೇರಿಮಾತೆಗೆ ಪೂಜೆ ಸಲ್ಲಿಸಲಾಯಿತು. ಮಹಾಮಂಗಳಾರತಿಯ ನಂತರ ಪ್ರಸಾದವಿ ನಿಯೋಗ ನೆರವೇರಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ, ವಾಯುಪುತ್ರ ಮೂರ್ತಿಯ ಪ್ರತಿಷ್ಠಾಪನೆಯ ಸಂದರ್ಭ ಊರಿನ ಮಕ್ಕಳಿಂದ ಕ್ಷೀರಾಭಿಶೇಖ ನೆರವೇರಲಾಗಿತ್ತು. ಇದೀಗ ಅದೇ ಮಕ್ಕಳಿಂದ ಪಂಚಮುಖಿ ವಾಯುಪುತ್ರನಿಗೆ ಆರತಿ ಬೆಳಗಿಸಿರುವುದು ವಿಶೇಷ ಎಂದರು.
ಮಡಿಕೇರಿ ಜ.18 : ವಿರಾಜಪೇಟೆ ತಾಲ್ಲೂಕಿನ ತಿತಿಮತಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ “ಕೂಸಿನ ಮನೆಗೆ” ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆಯು ಸಹಕಾರಿಯಾಗಲಿದೆ. ಕೂಸಿನ ಮನೆಯಲ್ಲಿ 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳನ್ನು ನುರಿತ ಆರೈಕೆದಾರರ ಮೂಲಕ ಪೋಷಿಸಲಾಗುತ್ತದೆ. ಇದರ ಸದುಪಯೋಗವನ್ನು ತಿತಿಮತಿ ಗ್ರಾ.ಪಂ.ವ್ಯಾಪ್ತಿಯ ಗ್ರಾಮಸ್ಥರು ಪಡೆದುಕೊಳ್ಳಲು ತಿಳಿಸಿದರು. ಚಿಕ್ಕ ವಯಸ್ಸಿನ ಮಕ್ಕಳ ಮಾನಸಿಕ ಹಾಗೂ ಶಾರೀರಿಕ ಬೆಳೆವಣಿಗೆಯು ಪ್ರಮುಖ ಘಟ್ಟವಾಗಿದ್ದು, ಕೂಸಿನ ಮನೆಯಲ್ಲಿ ಈ ಎಲ್ಲಾ ರೀತಿಯ ಬೆಳವಣಿಗೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಆರೈಕೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು. ತಿತಿಮತಿ ಗ್ರಾ.ಪಂ.ಅಧ್ಯಕ್ಷರಾದ ಪೊನ್ನು, ಉಪಾಧ್ಯಕ್ಷರಾದ ಶ್ಯಾಮಲ, ತಾ.ಪಂ.ಇ.ಒ.ಕೆ.ಸಿ ಅಪ್ಪಣ್ಣ, ಮನರೇಗಾ ಸಹಾಯಕ ನಿರ್ದೇಶಕರಾದ ಎಮ್.ಡಿ.ಶ್ರೀನಿವಾಸ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಾದ ಗುರುಶ್ರೀ ,ಗ್ರಾ.ಪಂ ಸರ್ವ ಸದಸ್ಯರು , ಗ್ರಾ.ಪಂ.ಸಿಬ್ಬಂದಿ ವರ್ಗದವರು, ಕೂಸಿನ ಮನೆಯ ಆರೈಕೆದಾರರು ಹಾಗೂ ತಾಲ್ಲೂಕು ಐ.ಇ.ಸಿ.ಸಂಯೋಜಕ…
ಮಡಿಕೇರಿ ಜ.18 : ನಾಡಿನ ಕಲೆ, ಸಂಸ್ಕೃತಿ, ಭಾಷೆ, ಜಾನಪದವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಂತಾಗಬೇಕು. ಇದರಿಂದ ಉತ್ತಮ ಸಂಸ್ಕೃತಿ ಮತ್ತು ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮುಖ್ಯಮಂತಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕುಂದಚೇರಿ, ಭಾಗಮಂಡಲ ಮತ್ತು ಅಯ್ಯಂಗೇರಿ ಗ್ರಾಮ ಪಂಚಾಯಿತಿ ವತಿಯಿಂದ ಸುವರ್ಣ ಕರ್ನಾಟಕ 50 ರ ಸಂಭ್ರಮ ಪ್ರಯುಕ್ತ ಚೆಟ್ಟಿಮಾನಿ ಗ್ರಾಮಸಿರಿ ಆಚರಣಾ ಸಮಿತಿ ಸಹಯೋಗದೊಂದಿಗೆ ಚೆಟ್ಟಿಮಾನಿ ಶಾಲಾ ಮೈದಾನದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸಭಾಮಂಟಪದ ಮೇಜರ್ ಮಂಗೇರಿರ ವಿನೋದ್ ಮುತ್ತಣ್ಣ ಅವರ ಮುಖ್ಯ ವೇದಿಕೆಯಲ್ಲಿ ನಡೆದ `ಗ್ರಾಮಸಿರಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಳೆಯದನ್ನು ಮರೆಯಬಾರದು, ಪೂರ್ವಜರ ಜೀವನಶೈಲಿ, ಅವರ ಪರಿಶ್ರಮವನ್ನು ಸದಾ ಸ್ಮರಿಸಿ, ಉತ್ತಮ ಜೀವನ ಕಟ್ಟಿಕೊಳ್ಳಲು ಮುಂದಾಗಬೇಕು. ಗ್ರಾಮೀಣರ ಬದುಕು, ಜೀವನ…
ಮಡಿಕೇರಿ ಜ.15 : ಅಯೋಧ್ಯೆಯಲ್ಲಿ ಶ್ರೀ ರಾಮನ ಬಾಲ ಮೂರ್ತಿಯ ಪ್ರತಿಷ್ಠಾಪನಾ ಸಂದರ್ಭ ಮಡಿಕೇರಿಯ ಮಲ್ಲಿಕಾರ್ಜುನ ನಗರದಲ್ಲಿರುವ ಕೊಡಗಿನ ಏಕೈಕ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಎಂದಿನಂತೆ ನಿತ್ಯ ಪೂಜೆ ನಡೆಯಲಿದೆ. ಪೂರ್ವಾಹ್ನ 11.30 ಕ್ಕೆ ಶ್ರೀ ವಿಷ್ಣು ಸಹಸ್ರ ನಾಮಾರ್ಚನೆ ಏರ್ಪಟ್ಟಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆಯಲಿದ್ದು ಬಳಿಕ ಪ್ರಸಾದ ವಿತರಿಸಲಾಗುವುದು. ಅಲ್ಲದೆ ದೇವಾಲಯ ಆವರಣದಲ್ಲಿ ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮ ಪ್ರತಿಷ್ಠಾಪನಾ ಕಾರ್ಯದ ದೃಶ್ಯಗಳನ್ನು ಪರದೆಯಲ್ಲಿ ಪ್ರಸಾರ ಮಾಡಲಾಗುವುದು. ಸಂಜೆ 6.30 ರ ಬಳಿಕ ಮುಹಿಳೆಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಪ್ರಸಾದ ವಿನಿಯೋಗವಿದೆ.
ಮಡಿಕೇರಿ ಜ.18 : ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಣ ಮಾಡುವ ಯತ್ನ ನಡೆದಿದೆ ಎಂದು ಆರೋಪಿಸಿರುವ ಸಾಮಾಜಿಕ ಪರಿವರ್ತನ ಚಳುವಳಿಯ ಜಿಲ್ಲಾ ಸಂಚಾಲಕ ಮೋಹನ್ ಮೌರ್ಯ, ‘ದೌರ್ಜನ್ಯ’ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜ.22 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜ.17 ರಂದು ಸಂಜೆ ಮನೆಗೆ ತೆರಳುತ್ತಿದ್ದ ಪರಿಶಿಷ್ಟ ವಿದ್ಯಾರ್ಥಿನಿಯೊಬ್ಬಳನ್ನು ನಾಲ್ವರು ಯುವಕರು ಅಪಹರಣ ಮಾಡಲು ಪ್ರಯತ್ನಿಸಿದ್ದಾರೆ. ಈ ಸಂದರ್ಭ ಸಾರ್ವಜನಿಕರ ಸಹಕಾರದಿಂದ ವಿದ್ಯಾರ್ಥಿನಿ ಸಂಕಷ್ಟದಿಂದ ಪಾರಾಗಿದ್ದಾಳೆ. ಬಳಿಕ ವಿದ್ಯಾರ್ಥಿನಿಯ ಪೋಷಕರು ನಿಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿದೆ, ಆದರೆ ಪೊಲೀಸರು ದೌರ್ಜನ್ಯ ಕಾಯ್ದೆಯನ್ನು ಇದರಲ್ಲಿ ಸೇರಿಸಿಲ್ಲವೆಂದು ಆರೋಪಿಸಿದರು. ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಯನ್ನು ಬಂಧಿಸಬೇಕು ಮತ್ತು ಒಟ್ಟು ಪ್ರಕರಣವನ್ನು ದೌರ್ಜನ್ಯ ಕಾಯ್ದೆಯಡಿ ದಾಖಲಿಸಿಕೊಳ್ಳಬೇಕು. ತಪ್ಪಿದಲ್ಲಿ ಸೋಮವಾರದಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ…
ವಿರಾಜಪೇಟೆ ಜ.18 : ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪ್ರಪ್ರಥಮ ಮಹಿಳಾ ಚಂಡೆ ಬಳಗ “ರುದ್ರಂ” ಲೋಕಾರ್ಪಣೆಗೊಂಡಿತ್ತು. ದೇವಸ್ಥಾನದಲ್ಲಿ ಅಯ್ಯಪ್ಪ ಮಹೋತ್ಸವದಂದು ನಡೆದ ಕಾರ್ಯಕ್ರಮದಲ್ಲಿ ಚಂಡೆ ಪ್ರದರ್ಶನದೊಂದಿಗೆ ಲೋಕಾರ್ಪಣೆ ಮಾಡಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಚಂಡೆ ಗುರು ಪ್ರವೀಣ್ ನಾಯಕ್ , ಗ್ರಾಮೀಣ ಭಾಗಗಳಲ್ಲಿ ಇರುವ ಸೂಪ್ತ ಪ್ರತಿಭೆಯನ್ನು ಹೊರತರಬೇಕಾಗಿದೆ. ಇಂದು ಲೋಕಾರ್ಪಣೆಗೊಂಡ ಚಂಡೆ ಬಳಗವು ನಿರಂತರವಾಗಿ ಸೇವೆಯನ್ನು ಸಲ್ಲಿಸುವ ರೀತಿ ಆಗಲಿ ಎಂದು ಅಭಿಪ್ರಾಯಪಟ್ಟರು. ಯುವ ಜನರು ಕಲೆಗಳ ಉಳಿವಿಗಾಗಿ ಚಂಡೆ ಬಾರಿಸುವುದನ್ನು ಕಲಿತು ಬೆಳೆಸುವುದು ಅನಿವಾರ್ಯವಾಗಿದೆ ಎಂದರು. ಪುತ್ತೂರಿನ ಸಂಘಟನೆಗಳ ಸದಸ್ಯರಾದ ಸುನಿಲ್ ಬೋರ್ಕರ್ ಮಾತಾನಾಡಿ, ಹಿಂದೂ ಸಮಾಜದಲ್ಲಿ ಒಗ್ಗಟ್ಟು ಮೂಡಿದಾಗ ಮಾತ್ರ ಧರ್ಮದ ಬೆಳವಣಿಗೆ ಸಾಧ್ಯ. ನಮ್ಮ ಧರ್ಮ, ನಮ್ಮ ಸಂಸ್ಕೃತಿ, ಇತಿಹಾಸದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಬೇಕು ಎಂದ ಅವರು ದೇವಾಲಯದಲ್ಲಿ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೆ ಬರಬೇಕೆಂದರು. ಈ ಸಂದರ್ಭದಲ್ಲಿ ಚಂಡೆ ಗುರುಗಳಾದ ಪ್ರವೀಣ್ ನಾಯಕ್ ರನ್ನು…
ವಿರಾಜಪೇಟೆ ಜ.18 : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಅರ್ಚಕರು ಶ್ರೀ ಅಯ್ಯಪ್ಪ ಸ್ವಾಮಿಗೆ ಪುಷ್ಪರ್ಚನೆ, ಭಸ್ಮಾರ್ಚನೆ, ತುಪ್ಪಾಭಿಷೇಕ, ಹಾಲಿನ ಅಭಿಷೇಕ ವನ್ನು ನೆರವೇರಿಸಿದರು. ಅಲ್ಲದೇ ಮಂಟಪದಲ್ಲಿ ಶ್ರೀ ಅಯ್ಯಪ್ಪ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ನಂತರ ದೇವತಾ ಪ್ರಾರ್ಥನೆ ಹಾಗೂ ಶ್ರೀ ಮಹಾಗಣಪತಿ ಹೋಮ, ಗಣಪತಿ, ಶ್ರೀ ನಾಗ, ವನದುರ್ಗೆ ದೇವರುಗಳಿಗೆ ವಿಶೇಷ ಪ್ರಾರ್ಥನೆ ಹಾಗೂ ಪೂಜೆಯನ್ನು ಸಲ್ಲಿಸಲಾಯಿತು. ಮಧ್ಯಾಹ್ನ ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಂತರ ಬೇಟೋಳಿ ಮಹಿಳಾ ಮಂಡಳಿ ಹಾಗೂ ಅಯ್ಯಪ್ಪ ವೃತಾಧಾರಿಗಳಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು, ಹೆಗ್ಗಳ, ಬೂದಿಮಾಳ, ಪೆರಂಬಾಡಿ, ಆರ್ಜಿ, ವಿರಾಜಪೇಟೆ,…
ವಿರಾಜಪೇಟೆ ಜ.18 : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಅರ್ಚಕರು ಶ್ರೀ ಅಯ್ಯಪ್ಪ ಸ್ವಾಮಿಗೆ ಪುಷ್ಪರ್ಚನೆ, ಭಸ್ಮಾರ್ಚನೆ, ತುಪ್ಪಾಭಿಷೇಕ, ಹಾಲಿನ ಅಭಿಷೇಕ ವನ್ನು ನೆರವೇರಿಸಿದರು. ಅಲ್ಲದೇ ಮಂಟಪದಲ್ಲಿ ಶ್ರೀ ಅಯ್ಯಪ್ಪ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ನಂತರ ದೇವತಾ ಪ್ರಾರ್ಥನೆ ಹಾಗೂ ಶ್ರೀ ಮಹಾಗಣಪತಿ ಹೋಮ, ಗಣಪತಿ, ಶ್ರೀ ನಾಗ, ವನದುರ್ಗೆ ದೇವರುಗಳಿಗೆ ವಿಶೇಷ ಪ್ರಾರ್ಥನೆ ಹಾಗೂ ಪೂಜೆಯನ್ನು ಸಲ್ಲಿಸಲಾಯಿತು. ಮಧ್ಯಾಹ್ನ ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಂತರ ಬೇಟೋಳಿ ಮಹಿಳಾ ಮಂಡಳಿ ಹಾಗೂ ಅಯ್ಯಪ್ಪ ವೃತಾಧಾರಿಗಳಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು, ಹೆಗ್ಗಳ, ಬೂದಿಮಾಳ, ಪೆರಂಬಾಡಿ, ಆರ್ಜಿ, ವಿರಾಜಪೇಟೆ,…
ಮಡಿಕೇರಿ ಜ.18 : ರೂಂ ಬುಕ್ ಮಾಡುವ ನೆಪದಲ್ಲಿ ಮಡಿಕೇರಿ ನಗರದ ಹೊಟೇಲ್ ವೊಂದರ ಮಾಲೀಕರಿಗೆ ಸೈಬರ್ ವಂಚಕರು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಹಿಂದಿಯಲ್ಲಿ ಮಾತನಾಡುವ ವ್ಯಕ್ತಿಯೊಬ್ಬ ರೂಂ ಬೇಕೆಂದು ಆನ್ ಲೈನ್ ಮೂಲಕ ಹೊಟೇಲ್ ಗೆ ಕೋರಿಕೆ ಕಳುಹಿಸಿದ್ದಾನೆ. ರೂಂ ಬುಕ್ ಮಾಡಿಕೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕೆಂದು ತಿಳಿಸಿದ ಹೊಟೇಲ್ ನ ವ್ಯವಸ್ಥಾಪಕರು ಮಾಲೀಕರ ಹಣ ವರ್ಗಾವಣೆಯ ಮೊಬೈಲ್ ಸಂಖ್ಯೆಯನ್ನು ಆತನಿಗೆ ನೀಡಿದ್ದಾರೆ. ರೂಂ ಬೇಡಿಕೆಯನ್ನಿಟ್ಟಿದ್ದ ವ್ಯಕ್ತಿ ತನ್ನ ಮೊಬೈಲ್ ಮೂಲಕ ರೂ.20 ಸಾವಿರ ಪಾವತಿ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ನ್ನು ಹೊಟೇಲ್ ಮಾಲೀಕರಿಗೆ ಕಳುಹಿಸುತ್ತಾನೆ. ನಂತರ ತಕ್ಷಣ ಕರೆ ಮಾಡಿ ಮುಂಗಡ ಹಣ ರೂ.2 ಸಾವಿರಕ್ಕೆ ಬದಲಾಗಿ 20 ಸಾವಿರ ರೂ. ಪಾವತಿ ಮಾಡಿರುವೆ, ರೂ.18 ಸಾವಿರವನ್ನು ನನಗೆ ಮರಳಿಸಿ ಎಂದು ಮಾಲೀಕರಲ್ಲಿ ಮನವಿ ಮಾಡುತ್ತಾನೆ. ರೂ.20 ಸಾವಿರ ಬಂದಿರುವ ಬಗ್ಗೆ ಸ್ಕ್ರೀನ್ ಶಾಟ್ ಮೂಲಕ ಮನವರಿಕೆ ಮಾಡಿಕೊಂಡ ಮಾಲೀಕರು ಕರೆ ಮಾಡಿದಾತನಿಗೆ ರೂ.18…






