ಬೆಂಗಳೂರು ಜ.16 : ವೈಚಾರಿಕ-ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ. ಕಲ್ಲು ಒಡೆಯೋರು ನೀವು,…
ಲೇಖಕ: admin
ಮಡಿಕೇರಿ ಜ.16 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ತನ್ನ 2024 ನೇ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ಅಧಿಕಾರಿಯಾದ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ . ಮುಕ್ತ ವಿಶ್ವವಿದ್ಯಾಲಯವು ನಿಮ್ಮ ಮನೆಯೇ ನಿರಂತರ ಪಾಠಶಾಲೆ ಎಂಬ ಧ್ಯೆಯವಾಕ್ಯದೊಂದಿಗೆ ಯು ,ಜಿ .ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ . ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ . ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಎಲ್ಲ ಡಿಗ್ರಿ ಪ್ರವೇಶಾತಿಗೆ ಪಿ.ಯು.ಸಿ. ಮಾರ್ಕ್ಸ್ ಕಾರ್ಡ್ ,ಡಿಪ್ಲೋಮ ಕೋರ್ಸಗಳಿಗೆ ಹತ್ತನೆಯ ತರಗತಿಯ ಅಂಕ ಪಟ್ಟಿ ಹಾಗೂ ಸ್ನಾತಕೋತ್ತರ ಪಿ .ಜಿ . ಕೋರ್ಸ್ ಗಳಿಗೆ ಡಿಗ್ರಿ ಸರ್ಟಿಫಿಕೇಟ್ ಕಡ್ಡಾಯವಾಗಿರುತ್ತದೆ. ಜೊತೆಯಲ್ಲಿ (ಟಿ .ಸಿ )ವರ್ಗಾವಣೆ ಪ್ರಮಾಣ ಪತ್ರ , ಆದರ್ ಕಾರ್ಡ್ ,…
ಕಡಂಗ ಜ.16 : ಎಸ್‍ವೈಎಸ್ 30ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಯುಕ್ತ ಎಸ್‍ವೈಎಸ್ ಕಡಂಗ ಯೂನಿಟ್ ವತಿಯಿಂದ ಎಸ್‍ಬಿಎಸ್ ವಿದ್ಯಾರ್ಥಿಗಳ ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು. ಜಾಥಾಕ್ಕೆ ಬದ್ರಿಯಾ ಸುನ್ನಿ ಮಸೀದಿಯ ಅಧ್ಯಕ್ಷ ಕೆ.ಇ.ಉಸ್ಮಾನ್ ಚಾಲನೆ ನೀಡಿದರು. ಜಾಥಾವು ಕೊಕ್ಕಂಡಬಾಣೆ ದರ್ಗಾಷರೀಫ್ ನಿಂದ ಕಡಂಗದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬದ್ರಿಯಾ ಮಸೀದಿಯಲ್ಲಿ ಸಮಾಪ್ತಿ ಗೊಂಡಿತು. ಈ ಸಂದರ್ಭ ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್ ಮಾತನಾಡಿ, 30ನೇ ಮಹಾ ಸಮ್ಮೇಳದ ಪ್ರಚಾರಾರ್ಥ ಕಡಂಗ ಯೂನಿಟ್ ವತಿಯಿಂದ ಎಸ್ ಬಿ ಎಸ್ ವಿದ್ಯಾರ್ಥಿಗಳ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಜಾಥಾ ಯಶಸ್ವಿಯಾಗಿದೆ ಎಂದರು. ಸದರ್ ಮುಹಲಿಮ್ ಶಿಯಾಬುದ್ದೀನ್ ಚೌಹರಿ ಮಾತನಾಡಿ ಮಂಗಳೂರಿನಲ್ಲಿ ನಡೆಯಲಿರುವ ಎಸ್‍ವೈಎಸ್ 30ನೇ ಮಹಾ ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಬದ್ರಿಯಾ ಮಸೀದಿಯ ಉಮ್ಮರ್ ಮುಸ್ಲಿಯಾರ್, ಎಸ್ ವೈ ಎಸ್ ಕಡಂಗ ಸರ್ಕಲ್ ಕಾರ್ಯದರ್ಶಿ ಸಿ.ಎ.ರಜಾಕ್, ಯೂನಿಟ್ ಸಹ ಕಾರ್ಯದರ್ಶಿ ಶಂಸುದ್ದಿನ್, ಸರ್ಕಲ್ ಇಶಾಬ ಕಾರ್ಯದರ್ಶಿ ಕಬೀರ್, ರಾಝಿಕ್…
ಮಡಿಕೇರಿ ಜ.15 : ನಿಟ್ಟೂರು ಗ್ರಾ.ಪಂ ವತಿಯಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಗ್ರಾ.ಪಂ ಸಭಾಂಗಣದಲ್ಲಿ ವಿಷೇಶ ಪೂಜೆ ನೆರವೇರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿ ಗ್ರಾ.ಪಂ ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತದೆ ಇದರ ಮೂಲಕ ಬೆಳಕು ಹೆಚ್ಚಾಗುತ್ತಾ ಹೋಗುತ್ತೆ ಹಾಗೆ ನಮ್ಮಲ್ಲಿ ಇರುವಂತಹ ಅಂಧಕಾರ, ಅಹಂಕಾರವನ್ನು ಮರೆತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕಬೇಕೆಂದು ಕರೆ ನೀಡಿದರು. ಗ್ರಾ.ಪಂ ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ, ಪಡಿಞರಂಡ ಕವಿತಾ ಪ್ರಭು, ಕುಂಬಾರಕಟ್ಟೆ ಅಪ್ಪಣ್ಣ, ಅಮ್ಮಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಹಾಜರಿದ್ದರು.
ಕುಶಾಲನಗರ ಜ.15 : ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗ್ರಾ.ಪಂ ನ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದರು. ಕೂಡುಮಂಗಳೂರು ಗ್ರಾ.ಪಂ ನ ಆರು ಪೌರಕಾರ್ಮಿಕರಿಗೆ ಹಾಗೂ ಈ ಹಿಂದೆ ಮರಣ ಹೊಂದಿದ್ದ ಶಂಕರ್ ಹಾಗೂ ರಂಗರವರ ಕುಟುಂಬಕ್ಕೆ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಜನ್ಮ ದಿನಾಚರಣೆ ಎಂಬುದು ಸದಾ ನೆನಪಿನಲ್ಲಿರಬೇಕು. ಈ ದೃಷ್ಟಿಯಿಂದ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ತಮ್ಮ ಪಂಚಾಯಿತಿಯ ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡುವ ಮೂಲಕ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ ಎಂದರು. ಹಿರಿಯ ಪತ್ರಕರ್ತರಾದ ಕೆ.ಕೆ.ನಾಗರಾಜ್ ಶೆಟ್ಟಿ ಮಾತನಾಡಿ, ಜನ್ಮ ದಿನದಂದು ಮೋಜು ಮಸ್ತಿ ಮಾಡಿ ಹಣವನ್ನು ಪೋಲು ಮಾಡುತ್ತಾರೆ. ಆದರೆ ಸ್ನೇಹಿತರು ಹಾಗೂ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡಿ ಜನ್ಮ ದಿನವನ್ನು ಆಚರಣೆ ಮಾಡಿರುವುದು ಸಂತಸದ ವಿಷಯ ಎಂದರು. ಕೊಡಗು ಜಿಲ್ಲಾ…
ಕಡಂಗ ಜ.15 : ಎಸ್‍ವೈಎಸ್ 30ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಯುಕ್ತ ಎಸ್‍ವೈಎಸ್ ಕಡಂಗ ಯೂನಿಟ್ ವತಿಯಿಂದ ಎಸ್‍ಬಿಎಸ್ ವಿದ್ಯಾರ್ಥಿಗಳ ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು. ಜಾಥಾಕ್ಕೆ ಬದ್ರಿಯಾ ಸುನ್ನಿ ಮಸೀದಿಯ ಅಧ್ಯಕ್ಷ ಕೆ.ಇ.ಉಸ್ಮಾನ್ ಚಾಲನೆ ನೀಡಿದರು. ಜಾಥಾವು ಕೊಕ್ಕಂಡಬಾಣೆ ದರ್ಗಾಷರೀಫ್ ನಿಂದ ಕಡಂಗದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬದ್ರಿಯಾ ಮಸೀದಿಯಲ್ಲಿ ಸಮಾಪ್ತಿ ಗೊಂಡಿತು. ಈ ಸಂದರ್ಭ ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್ ಮಾತನಾಡಿ, 30ನೇ ಮಹಾ ಸಮ್ಮೇಳದ ಪ್ರಚಾರಾರ್ಥ ಕಡಂಗ ಯೂನಿಟ್ ವತಿಯಿಂದ ಎಸ್ ಬಿ ಎಸ್ ವಿದ್ಯಾರ್ಥಿಗಳ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಜಾಥಾ ಯಶಸ್ವಿಯಾಗಿದೆ ಎಂದರು. ಸದರ್ ಮುಹಲಿಮ್ ಶಿಯಾಬುದ್ದೀನ್ ಚೌಹರಿ ಮಾತನಾಡಿ ಮಂಗಳೂರಿನಲ್ಲಿ ನಡೆಯಲಿರುವ ಎಸ್‍ವೈಎಸ್ 30ನೇ ಮಹಾ ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಬದ್ರಿಯಾ ಮಸೀದಿಯ ಉಮ್ಮರ್ ಮುಸ್ಲಿಯಾರ್, ಎಸ್ ವೈ ಎಸ್ ಕಡಂಗ ಸರ್ಕಲ್ ಕಾರ್ಯದರ್ಶಿ ಸಿ.ಎ.ರಜಾಕ್, ಯೂನಿಟ್ ಸಹ ಕಾರ್ಯದರ್ಶಿ ಶಂಸುದ್ದಿನ್, ಸರ್ಕಲ್ ಇಶಾಬ ಕಾರ್ಯದರ್ಶಿ ಕಬೀರ್, ರಾಝಿಕ್…
ಮಡಿಕೇರಿ ಜ.15 : ಪ್ರೊ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪನೆಯಾಗಿ 50ನೇ ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಜ.20 ಮತ್ತು 21 ರಂದು ಬಿಜಾಪುರದಲ್ಲಿ “ದಲಿತ ಐಕ್ಯತೆ ಸಂಘ ಸಂಘರ್ಷ-ಆರದ ಶೋಷಿತರ ಹಣತೆ” ಅಧ್ಯಯನ ಶಿಬಿರ ನಡೆಯಲಿದ್ದು, ಇದರಲ್ಲಿ ಕೊಡಗು ಜಿಲ್ಲಾ ಸಮಿತಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸಮಿತಿ ಸದಸ್ಯ ಕೆ.ಪಳನಿ ಪ್ರಕಾಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ಬಿಜಾಪುರದ ಹರ್ಡೆಕರ್ ಮಂಜಪ್ಪ ಸ್ಮಾರಕ ಭವನದಲ್ಲಿ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿದ ಬಿ.ಕೃಷ್ಣಪ್ಪ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಕಾಗದ ಕಾರ್ಖಾನೆಯ 4ನೇ ದರ್ಜೆ ನೌಕರರನ್ನು ಸಂಘಟಿಸಿ 1974-75ರಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಚಳುವಳಿಯನ್ನು ಕಟ್ಟಿದರು. ಇದೀಗ ಸುವರ್ಣ ಸಂಭ್ರಮ ಆಚರಿಸುತ್ತಿರುವ ಸಂಘಟನೆಯ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಎಲ್ಲಾ ಹಂತರ ಪದಾಧಿಕಾರಿಗಳು…
ಮಡಿಕೇರಿ ಜ.15 : ಗ್ರಾಮ ಪಂಚಾಯ್ತಿ ನೌಕರರಿಗೆ ಕನಿಷ್ಟ ವೇತನ ನಿಗಧಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.24 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಸೇರಿದಂತೆ ಶಾಸಕರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ 31 ಸಾವಿರ ರೂ.ಗಳನ್ನು ಕನಿಷ್ಟ ವೇತನವಾಗಿ ನಿಗದಿಪಡಿಸಬೇಕೆನ್ನುವುದು ತಮ್ಮ ಪ್ರಮುಖ ಬೇಡಿಕೆಯಾಗಿದೆ. ಇದರೊಂದಿಗೆ ನಿವೃತ್ತ ಪಂಚಾಯ್ತಿ ನೌಕರರ ಬದುಕಿಗೆ ಆರ್ಥಿಕ ಸ್ಥಿರತೆ ನೀಡಲು 6 ಸಾವಿರ ರೂ. ಪಿಂಚಣಿ ನೀಡಬೇಕು. ಅನಾರೋಗ್ಯಕ್ಕೆ ಒಳಗಾದ ನೌಕರರಿಗೆ ಆಸ್ಪತ್ರೆ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಂಚಾಯ್ತಿಗಳಿಗೆ ನೌಕರರನ್ನು ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. 2023ರ ನ.18 ರಂದು…
ಮಡಿಕೇರಿ ಜ.15 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 34ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಕರ ಸಂಕ್ರಾಂತಿ ಪ್ರಯುಕ್ತ ಜ.14ರ ಮುಂಜಾನೆಯಿಂದಲೇ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು. ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, ಶ್ರೀ ಮುತ್ತಪ್ಪ ಮತ್ತು ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಅಭಿಷೇಕ, ಪುಷ್ಪಾರ್ಚನೆ, ಶ್ರೀ ಕುಟ್ಟಿಚಾತನ್ ದೇವರ ವೆಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ, ಶ್ರೀ ಅಯ್ಯಪ್ಪನ ಅಲಂಕಾರ ಪೂಜೆ, ದೀಪಾರಾಧನೆ ಜರುಗಿತು ಶ್ರೀ ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ ನಂತರ ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜ.15 : ಹುಲಿದಾಳಿಗೆ ಹಸು ಬಲಿಯಾದ ಘಟನೆ ಪೊನ್ನಂಪೇಟೆ ತಾಲ್ಲೂಕು ಬೆಸಗೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕೋಳೆರ ರಘ ಸೋಮಯ್ಯ ಅವರಿಗೆ ಸೇರಿದ ಹಸು ಇದಾಗಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಗ್ರಾಮದಲ್ಲಿ ಆತಂಕ ಮೂಡಿಸಿರುವ ಹುಲಿಯನ್ನು ತಕ್ಷಣ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.






