ಮಡಿಕೇರಿ ಜ.5 NEWS DESK : ಸದಾ ಸುದ್ದಿ ಹಿಂದೆ ಬೀಳುತ್ತಿದ್ದ ಪತ್ರಕರ್ತರಿಂದು ಕಾಫಿಕೊಯ್ಲಿನಲ್ಲಿ ತೊಡಗಿಸಿಕೊಂಡು ಸಂಭ್ರಮಿಸಿದರು. ತಾ ಮುಂದು ನಾ ಮುಂದು ಎನ್ನುತ್ತ ಕೆಜಿಗಟ್ಟಲೇ ಕಾಫಿಕುಯ್ದು ಬಹುಮಾನಕ್ಕಾಗಿ ತೀವ್ರ ಪೈಪೋಟಿಯೊಡ್ಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಟ್ಟಂದಿ ಬಳಿಯ ಚೇರಂಡ ಜಗನ್ ಅವರ ತೋಟದಲ್ಲಿ ಪತ್ರಕರ್ತರಿಗಾಗಿ ಕಾಫಿಕೊಯ್ಲು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಳಿಗ್ಗಿನ ವೇಳೆಯಲ್ಲಿ ಕಾರ್ಮಿಕರ ರೀತಿಯಲ್ಲಿಯೇ ತೋಟಕ್ಕೆ ಆಗಮಿಸಿದ ಪತ್ರಕರ್ತರು ಶಿಸ್ತುಬದ್ಧವಾಗಿ ಕೆಲಸ ಆರಂಭಿಸಿದರು. ಅರ್ಧ ಗಂಟೆಗಳ ಸಮಯವನ್ನು ಕಾಫಿಕೊಯ್ಲಿಗಾಗಿ ನೀಡಲಾಯಿತು. ತಲಾ 2 ಪತ್ರಕರ್ತರಿರುವ 8 ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಕೃಷಿ ಸಂಬಂಧಿತ ವರದಿಗಳ ಮೂಲಕ ರೈತರ ಸಮಸ್ಯೆಗಳನ್ನು ಜನರಿಗೆ ಮುಟ್ಟಿಸುತ್ತಿದ್ದ ಪತ್ರಕರ್ತರು ಸ್ವತಃಕಾರ್ಮಿಕರು, ಬೆಳೆಗಾರರ ಅನುಭವಿಸುವ ಸಂಕಷ್ಟಗಳನ್ನು ಕಾಫಿಕೊಯ್ಲು ಮೂಲಕ ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಸ್ಪರ್ಧೆಯನ್ನು ಕಾಫಿಕೊಯ್ಲು ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಇದು ಕಾಫಿ ಕೊಯ್ಲು ಸಮಯ. ಬೆಳೆಗಾರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯ ರೈತರಿಗೆ…
ಲೇಖಕ: admin
ಮಡಿಕೇರಿ ಜ.5 NEWS DESK : ಕಾಂಗ್ರೆಸ್ ಮುಖಂಡರಾದ ಟಿ.ಪಿ.ರಮೇಶ್ ಅವರ ತಾಯಿ ತೆಲುಗು ಬಲಜಿಗರ ಸರೋಜಮ್ಮ (90)ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು (ನ.5) ಹಿಂದು ರುದ್ರಭೂಮಿಯಲ್ಲಿ ನಡೆಯಲಿದೆ.
ಮಡಿಕೇರಿ NEWS DESK ಜ.4 : ಸೋಮವಾರಪೇಟೆಯ ಐಗೂರಿನಲ್ಲಿ ನಡೆಯಲಿರುವ ಸೋಮವಾರಪೇಟೆ ತಾಲ್ಲೂಕು 9 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಅಚ್ಚುಕಟ್ಟಾಗಿ ಎಲ್ಲರೂ ನೆನಪಿಸಿಕೊಳ್ಳುವಂತ ರೀತಿಯಲ್ಲಿ ನಡೆಸಬೇಕು. ಅದಕ್ಕೆ ಬೇಕಾದ ಎಲ್ಲ ತಯಾರಿಯನ್ನು ಮಾಡಿಕೊಳ್ಳಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಮ್ಮೇಳನದ ಗೌರವಾಧ್ಯಕ್ಷರೂ ಆದ ಡಾ. ಮಂತರ್ ಗೌಡ ನುಡಿದರು. ಅವರು ಐಗೂರಿನ ಸಹಕಾರ ಸಂಘದ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಉಪಸಮಿತಿಗಳ ಸಮ್ಮೇಳನದ ತಯಾರಿ ಕುರಿತು ವಿವರಣೆ ಪಡೆದರು. ಹಣಕಾಸು ಸಮಿತಿಯ ಅಧ್ಯಕ್ಷ ಕೆ ಪಿ ರಾಯ್, ಆಹಾರ ಸಮಿತಿಯ ಅಧ್ಯಕ್ಷ ಮಚ್ಚಂಡ ಅಶೋಕ್, ಮೆರವಣಿಗೆ ಸಮಿತಿಯ ಅಧ್ಯಕ್ಷ ಡಿ.ಎಸ್. ಚಂಗಪ್ಪ, ವೇದಿಕೆ ತಯಾರಿ ಸಮಿತಿಯ ಅಧ್ಯಕ್ಷ ಸಿ.ಕೆ. ರೋಹಿತ್, ಅಲಂಕಾರ ಸಮಿತಿಯ ಅಧ್ಯಕ್ಷ ಕೆ.ಪಿ ದಿನೇಶ್, ಸ್ಮರಣ ಸಂಚಿಕೆಯ ಸಂಪಾದಕ ಎಸ್.ಎಂ ಚಂಗಪ್ಪ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಸಮ್ಮೇಳನದ ಹೆಚ್.ಕೆ ಉಮೇಶ್ ತಯಾರಿಗಳ ಕುರಿತು ಮಾಹಿತಿ ನೀಡಿದರು. ಇದು…
ಮಡಿಕೇರಿ NEWS DESK ಜ.4 : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಜಿಲ್ಲಾ ಸಶಸ್ತ್ರ ದಳ, ಶ್ವಾನ ದಳ ಮತ್ತು ಪೊಲೀಸ್ ಕ್ಯಾಂಟೀನ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಕಚೇರಿಗಳನ್ನು ಪರಿಶೀಲಿಸಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು. ಅಗತ್ಯ ಕ್ರಮಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಬೆಂಗಳೂರು NEWS DESK ಜ.4 : ವೈಮಾನಿಕ ಅಭಿವೃದ್ಧಿ ಸಂಸ್ಥೆ (ADA) ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ‘ಏರೋನಾಟಿಕ್ಸ್ 2047’ ಬೆಂಗಳೂರಿನ ಸೆಂಟರ್ ಫಾರ್ ಏರ್ಬೋರ್ನ್ ಸಿಸ್ಟಮ್ಸ್ (CABS) ನಲ್ಲಿ ಪ್ರಾರಂಭವಾಯಿತು. ಈ ವಿಚಾರ ಸಂಕಿರಣವನ್ನು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ ಸಿಂಗ್ ಉದ್ಘಾಟಿಸಿದರು. ತಮ್ಮ ಭಾಷಣದಲ್ಲಿ, ವಾಯುಪಡೆಯ ಮುಖ್ಯಸ್ಥರು, ಲಘು ಯುದ್ಧ ವಿಮಾನ (LCA) ತೇಜಸ್ ಹಾರಾಟದ 25 ವರ್ಷಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ವೈಮಾನಿಕ ಅಭಿವೃದ್ಧಿ ಸಂಸ್ಥೆಯನ್ನು ಅಭಿನಂದಿಸಿದರು. ಮತ್ತು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾರತೀಯ ವಾಯುಪಡೆಯನ್ನು (IAF) ಯಾವುದೇ ಸಂದರ್ಭದಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವಂತೆ ರೂಪಿಸಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ಡಿಆರ್ಡಿಒ ಅಧ್ಯಕ್ಷ ಡಾ. ಸಮೀರ್ ವಿ. ಕಾಮತ್, ವಿಕಸಿತ ಭಾರತ@2047 ರ ದೃಷ್ಟಿಕೋನವನ್ನು ಅರಿತುಕೊಂಡು, ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸ್ಥಳೀಯ ಅತ್ಯಾಧುನಿಕ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮಹತ್ವವನ್ನು ಒತ್ತಿ…
ಮಡಿಕೇರಿ NEWS DESK ಜ.4 : ಸರಕಾರದ ಕಾರ್ಯಕ್ರಮಗಳು ಯಶಸ್ವಿಯಾಗಲು ಮತ್ತು ಜನರಿಗೆ ಸೌಲಭ್ಯಗಳು ತಲುಪಲು ನೌಕರರ ಪಾತ್ರ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರಾಜಪೇಟೆ ಘಟಕದ ಮಹಾಸಭೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಂದು ಸಂಘವು ಅದರ ಸದಸ್ಯರ ಏಳಿಗೆಗಾಗಿ ಶ್ರಮಿಸಬೇಕು. ಇಂದು ಸರಕಾರ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಕೈಗೊಳ್ಳಲು ನೌಕರರ ಪಾತ್ರ ದೊಡ್ಡದಾಗಿದೆ. ಇದನ್ನು ಪ್ರತಿಯೊಬ್ಬರು ಅರಿತುಕೊಂಡು ತಮ್ಮ ಜವಾಬ್ದಾರಿಯನ್ನು ಪರಿಪೂರ್ಣವಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದರು. ಸಾರ್ವಜನಿಕ ಸೇವೆ ಕೇವಲ ಉದ್ಯೋಗವಲ್ಲ, ಅದು ಸಮಾಜ ಸೇವೆ. ಇಂದಿನ ಕಾರ್ಯಕ್ರಮದಲ್ಲಿ ನೌಕರರನ್ನು ಪ್ರೋತ್ಸಾಹಿಸುವ ಜೊತೆಗೆ, ಅವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದ್ದು, ಇದು ಸಾರ್ಥಕತೆ ಮೂಡಿಸುತ್ತದೆ ಎಂದರು. ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ನೌಕರರ…
ಮಡಿಕೇರಿ NEWS DESK ಜ.4 : ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿ ಬೀದಿ ನಾಯಿಗಳ ಸಂರಕ್ಷಣಾ ಕೇಂದ್ರ ನಿರ್ಮಾಣ ಯೋಜನೆ ಅನುಷ್ಠಾನ ಉದ್ದೇಶದಿಂದ ಕೈಗೊಂಡಿದ್ದ ಸಮತಟ್ಟು ಕಾರ್ಯಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ತಡೆಯೊಡ್ಡಿದ್ದಾರೆ. ಹುಲುಸೆಯಲ್ಲಿ ಬೀದಿ ನಾಯಿಗಳ ಸಂರಕ್ಷಣಾ ಕೇಂದ್ರಕ್ಕೆ ಕಂದಾಯ ಇಲಾಖೆಯಿಂದ ಸ್ಥಳ ಗುರುತಿಸಲಾಗಿದೆ. ಗ್ರಾಮಸ್ಥರ ವಿರೋಧದ ನಡುವೆಯೂ ದಿಢೀರನೆ ಬೆಟ್ಟ ಅಗೆದು ಸಮತಟ್ಟು ಮಾಡುವ ಕಾರ್ಯ ಕೈಗೊಳ್ಳಲಾಗಿತ್ತು. ಈ ಸಂದರ್ಭ ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದರು. ಬೆಟ್ಟಅಗೆಯುವ ಕಾಮಗಾರಿ ಪ್ರಾರಂಭಿವಾಗಿರುವ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಹಕ್ಕೆ, ಮರೂರು ಗ್ರಾಮಸ್ಥರು ಹಿಟಾಚಿ ತಡೆಹಿಡಿದು ಕಾಮಗಾರಿ ನಿಲ್ಲಿಸಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿದರು. ಹುಲುಸೆಯಲ್ಲಿ ನಾಯಿಗಳ ಸಂರಕ್ಷಣಾ ಕೇಂದ್ರ ಸ್ಥಾಪಿಸಲು ಅರಣ್ಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನುಮತಿ ಪಡೆದಿಲ್ಲ. ಕಾಮಗಾರಿ ಕಾರಣ ಅಪಾರ ಪ್ರಮಾಣದಲ್ಲಿ ಮರಗಳ ಹನನ ನಡೆಯಲಿದೆ, ಪರಿಸರಕ್ಕೆ ಹಾನಿ ಉಂಟಾಗಲಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.…
ಮಡಿಕೇರಿ NEWS DESK ಜ.4 : ವಿರಾಜಪೇಟೆ ನಗರ ಠಾಣೆ ಮತ್ತು ವಿರಾಜಪೇಟೆ ಗ್ರಾಮಾಂತರ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವ ಕುರಿತು ಚರ್ಚಿಸಿ ಸೂಚನೆಗಳನ್ನು ನೀಡಿದರು.
ಮಡಿಕೇರಿ NEWS DESK ಜ.4 : ಮಾನವ ಕಳ್ಳ ಸಾಗಾಣಿಕೆ ತಡೆ, ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸೂಚನೆ ನೀಡಿದ್ದಾರೆ. ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದ ಅವರು ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಮುಂತಾದ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಶುಭಾ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜ.4 : ಮಡಿಕೇರಿಯ ಇಂದಿರಾನಗರದ ನಿವಾಸಿ, ಶ್ರೀಮಾರಿಯಮ್ಮ ದೇವಾಲಯದ ಪೂಜಾರಿ ಹೆಚ್.ಕೆ.ವಸಂತ(47) ಅವರು ಡಿ.27ರಂದು ನಿಧನ ಹೊಂದಿದರು. ಇಂದಿರಾನಗರದ ಶ್ರೀಮಾರಿಯಮ್ಮ ದೇವಾಲಯ ಸಮಿತಿ ಹಾಗೂ ಇತರ ಸಂಘಗಳು ಸಂತಾಪ ಸೂಚಿಸಿವೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.






