ಲೇಖಕ: admin

ಮಡಿಕೇರಿ ಜ.14 : ಬೆಂಗಳೂರಿನ ಕೊಡಗು ಗೌಡ ಸಮಾಜದಲ್ಲಿ ಬೆಂಗಳೂರಿನ ಎಲ್ಲಾ ಗೌಡ ಸಮಾಜ ಮತ್ತು ಒಕ್ಕಲಿಗ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ಜ.14 ರಂದು ನಡೆಯಿತು. ಕೊಡಗಿನಲ್ಲಿ ನಡೆಯುತ್ತಿರುವ ಕೊಡವ ಲ್ಯಾಂಡ್ ಬೇಡಿಕೆ ಹಾಗೂ ಡಾ.ಸುಬ್ರಮಣ್ಯಂ ಸ್ವಾಮಿ ಅವರು ಕೊಡವರ ಪರವಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಹೂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಕೊಡವರನ್ನು ಪರಿಶಿಷ್ಟ ಜಾತಿ ಎಂದು ಪರಿಗಣಿಸಬೇಕೆನ್ನುವ ಒತ್ತಾಯವಿರುವ ಬಗ್ಗೆ ಸಮಗ್ರ ಚರ್ಚೆ ನಡೆಯಿತು. ಕೊಡಗಿನಲ್ಲಿ ಶೇ.80 ರಿಂದ 90 ರಷ್ಟು ಮಂದಿ ಗೌಡರು, ಒಕ್ಕಲಿಗರು, ಹಿಂದುಳಿದ ವರ್ಗದವರು ಹಾಗೂ ಇತರೆ ಜನಾಂಗದವರು ವಾಸಿಸುತ್ತಿದ್ದಾರೆ. ಕೇವಲ ಅಲ್ಪಸಂಖ್ಯಾತ ವರ್ಗಕ್ಕೆ ಪ್ರತ್ಯೇಕ ರಾಜ್ಯ ಅಥವಾ ಸ್ವಾಯತ್ತತೆ ನೀಡುವುದು ಎಷ್ಟು ಸಮಂಜಸ ಎಂದು ಸಮಾಲೋಚಿಸಲಾಯಿತು. ಸರಕಾರ ಇಂತಹ ಬೇಡಿಕೆಗಳಿಗೆ ಮಣಿದರೆ, ಜನಾಂಗೀಯ ಸಂಘರ್ಷಕ್ಕೆ ಒಳಗಾಗುವ ಪರಿಸ್ಥಿತಿ ಉದ್ಭವವಾಗಬಹುದು ಎಂದು ಸಭೆ ಆತಂಕ ವ್ಯಕ್ತಪಡಿಸಿತು. ಹಾಗಾಗಿ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ನಾವೆಲ್ಲರೂ ರಾಷ್ಟ್ರದ ಐಕ್ಯತೆಗಾಗಿ, ಸಂವಿಧಾನದ ಮೂಲಭೂತ ತತ್ವಗಳಿಗೆ ಧಕ್ಕೆಯಾಗದ…

Read More

ಮಡಿಕೇರಿ ಜ.14 : ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಹುಲ್ಲು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರಪೇಟೆ ಸಮೀಪ ಯಡೂರು ಗ್ರಾಮದ ಮಾರಿಗುಡಿ ಜಂಕ್ಷನ್ ನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕುಂದಳ್ಳಿ ಗ್ರಾಮದ ಪ್ರವೀಣ್ ಎಂಬುವವರು ತಮ್ಮ ಟ್ರ್ಯಾಕ್ಟರ್ ನಲ್ಲಿ ಬಸವನಕಟ್ಟೆಯಿಂದ ಹುಲ್ಲನ್ನು ತುಂಬಿಸಿ, ತೆರಳುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಗೊಂಡು ಬೆಂಕಿ ಕಾಣಿಸಿಕೊಂಡಿತು. ಹುಲ್ಲು ಸಂಪೂರ್ಣ ನಾಶವಾಗಿದ್ದು, ಬೇರೆ ಯಾವುದೇ ಅನಾಹುತ ಸಂಭವಿಸಿಲ್ಲ.

Read More

ಮಡಿಕೇರಿ ಜ.14 : ಸೋಮವಾರಪೇಟೆ ಪುಷ್ಪಗಿರಿ ಜೇಸೀ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎಸ್.ಆರ್.ವಸಂತ್ ಅವರನ್ನು ಸನ್ಮಾನಿಸಲಾಯಿತು. ಸಂಕಪ್ಪ ಸಭಾಂಗಣದಲ್ಲಿ ನಡೆದ ಜೇಸೀ ಪದಗ್ರಹಣ ಸಮಾರಂಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಲೋಮನ್ ಡೇವಿಡ್, ನಿಕಟಪೂರ್ವ ಅಧ್ಯಕ್ಷ ಸುರೇಶ್ ಮಾವುಟ್ಕರ್, ಕುಶಾಲನಗ ಶ್ರೀ ಕಾವೇರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜುಕುಮಾರ್, ದಕ್ಷಿಣ ಕೊಡಗು ಛಾಯಾಗ್ರಹಕರ ಸಂಘದ ಮಾಜೀ ಅಧ್ಯಕ್ಷ ರವೀಂದ್ರ ರೈ, ಸೋಮವಾರಪೇಟೆ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿನಯ್‌ಕುಮಾರ್ ಸೇರಿದಂತೆ ಇತರರು ವಸಂತ್ ಅವರನ್ನು ಸನ್ಮಾನಿಸಿದರು. ಜೇಸಿ ನಿಕಟಪೂರ್ವ ಅಧ್ಯಕ್ಷೆ ಎಂ.ಎ.ರುಬೀನಾ ಉಪಸ್ಥಿತರಿದ್ದರು.

Read More

ಮಡಿಕೇರಿ ಜ.14 : ಸೋಮವಾರಪೇಟೆಯ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಪಟ್ಟಣದ ವೃತ್ತದಲ್ಲಿರುವ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವ ಶಕ್ತಿಯಿಂದ ಮಾತ್ರ ದೇಶದ ಬೆಳವಣಿಗೆ ಸಾಧ್ಯ. ಯುವ ಸಮುದಾಯದ ಮೇಲೆ ಸ್ವಾಮಿ ವಿವೇಕಾನಂದರು ಅದಮ್ಯ ವಿಶ್ವಾಸ ಇಟ್ಟಿದ್ದರು. ಇವರ ಜೀವನ ಚರಿತ್ರೆಯೇ ಯುವ ಜನಾಂಗಕ್ಕೆ ಪ್ರೇರಣೆಯಾಗಬೇಕು ಎಂದರು. ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಸಮಾಜದ ಮೇಲೆ ಅತೀವ ಕಾಳಜಿ, ಧರ್ಮ ಶ್ರದ್ಧೆಯೊಂದಿಗೆ ಭಾರತದ ಪ್ರಾಚೀನ ಸಂಸ್ಕೃತಿಯನ್ನು ಜಗತ್ತಿಗೆ ತೋರಿಸಿದ ಕೀರ್ತಿ ವಿವೇಕಾನಂದರಿಗೆ ಸಲ್ಲಬೇಕು ಎಂದು ತಿಳಿಸಿದರು. ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಪಿ.ಕೆ.ರವಿ, ರೋಟರಿ ಸಂಸ್ಥೆ ಅಧ್ಯಕ್ಷ ನಂಗಾರು ವಸಂತ್, ಕಾರ್ಯದರ್ಶಿ ಚೇತನ್, ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ಮಾಜೀ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್,…

Read More

ಮಡಿಕೇರಿ ಜ.14 : ಭಾರತ ದೇಶದ ಮಹಾಗ್ರಂಥ ಎನಿಸಿಕೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನವನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಕೆಪಿಸಿಸಿ ವಕ್ತಾರ ಹಾಗೂ ಸಮಾಜ ಸೇವಕ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಪೊನ್ನಂಪೇಟೆಯ ಕೆಪಿಎಸ್ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ 10ನೇ ತರಗತಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಶ್ರಮಿಸಿದ ಶಿಕ್ಷಕರು, ಉಪನ್ಯಾಸಕರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನವನ್ನು ಸರಳವಾಗಿ, ಅರ್ಥವಾಗುವ ರೀತಿಯಲ್ಲಿ ಪಠ್ಯ ಪುಸ್ತಕಗಳಲ್ಲಿ ಅಳವಡಿಸಿಕೊಳ್ಳಬೇಕು. ಇದಕ್ಕೆ ಕೇಂದ್ರ ಹಾಗೂ ರಾಜ್ಯದ ಶಿಕ್ಷಣ ಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಕೇತ್ ಪೊವಯ್ಯ ಹೇಳಿದರು. ಸಂವಿಧಾನದಲ್ಲಿರುವ ಅಂಶಗಳು ಅನುಷ್ಠಾನಗೊಳ್ಳಬೇಕು, ಪ್ರತಿಯೊಬ್ಬರು ಸಂವಿಧಾನವನ್ನು ಪ್ರೀತಿಸಿ ಗೌರವಿಸಬೇಕು. ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಾಗಿ ಇಂದು ಇಡೀ ವಿಶ್ವದಲ್ಲಿ ನಮ್ಮ ದೇಶವನ್ನು ಗೌರವದಿಂದ ಕಾಣಲು ಸಾಧ್ಯವಾಗಿದೆ. ಬಡತನದ ನಿರ್ಮೂಲನೆ, ಯುವ ಸಮೂಹಕ್ಕೆ ಉದ್ಯೋಗಾವಕಾಶ, ಸಮಾನತೆ ಇವೆಲ್ಲವೂ ಸಂವಿಧಾನದಿಂದ ನಮಗೆ ದೊರಕಿದೆ…

Read More

ಮಡಿಕೇರಿ ಜ.14 : ಕೊಡಗು ಜಿಲ್ಲೆಯ ಲೆಫ್ಟಿನೆಂಟ್ ಐಶ್ವರ್ಯ ಎ.ಜಿ(24) ಹಾಗೂ ಮಧ್ಯಪ್ರದೇಶದ ಸೆಹೋರ್ ನ ಲೆಫ್ಟಿನೆಂಟ್ ಉತ್ಕರ್ಷ್ ಬಿ.ಶರ್ಮಾ(27) ಅವರು ಲಖನೌ ನಗರದ 11 ಜಿಆರ್‌ಆರ್‌ಸಿ ಠಾಕೂರ್ ಷಿಯೋದಾತ್ ಸಿಂಗ್ ಪರೇಡ್ ಮೈದಾನದಲ್ಲಿ ಜನವರಿ 15 ರಂದು ನಡೆಯುವ 76ನೇ ಸೇನಾ ದಿನದ ಪರೇಡ್ ನಲ್ಲಿ ಸೇನಾ ತುಕಡಿಯನ್ನು ಮುನ್ನಡೆಸಲಿದ್ದಾರೆ. ಐಶ್ವರ್ಯ ಮಡಿಕೇರಿಯ ಉದ್ಯಮಿ ಗಣೇಶ್ ಹಾಗೂ ಮೋಂತಿ ಗಣೇಶ್ ಅವರ ಪುತ್ರಿ. ಬಿಬಿಎ ಪದವೀಧರರಾಗಿರುವ ಐಶ್ವರ್ಯಾ ಅವರು ಎನ್‌ಸಿಸಿಯಲ್ಲಿದ್ದಾಗ ಸಿ ಪ್ರಮಾಣ ಪತ್ರವನ್ನು ಹೊಂದಿದ್ದಾರೆ. 2017ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಂದು ಎನ್‌ಸಿಸಿ ತುಕಡಿಯನ್ನು ಮುನ್ನಡೆಸಿದ್ದರು. ಎನ್‌ಸಿಸಿ ಇವರಿಗೆ ಸೇನಾ ಅಧಿಕಾರಿಯಾಗಲು ಪ್ರೇರೇಪಿಸಿತು.

Read More

ಮಡಿಕೇರಿ ಜ.14 : ಕೊಡಗು ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ ಕಾಫಿ ಬೆಳೆ ನಷ್ಟವಾಗಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಕಾಫಿ ಮಂಡಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗ ವಿರಾಜಪೇಟೆಯಲ್ಲಿ ಶಾಸಕರನ್ನು ಭೇಟಿಯಾಗಿ ಅಕಾಲಿಕ ಮಳೆಯಿಂದ ಉಂಟಾದ ಅಪಾರ ನಷ್ಟದ ಕುರಿತು ಮನವಿ ಪತ್ರದ ಮೂಲಕ ಮನವರಿಕೆ ಮಾಡಿದರು. ಈ ಸಂದರ್ಭ ಮಾತನಾಡಿದ ಪೊನ್ನಣ್ಣ ನಷ್ಟದ ಸಮೀಕ್ಷೆ ಬಗ್ಗೆ ಭರವಸೆ ನೀಡಿದರು. ಕಾಪಿ ಕೇಂದ್ರ ಸರಕಾರದ ವಾಣಿಜ್ಯ ಸಚಿವಾಲಯದಡಿಯಲ್ಲಿ ಬರುತ್ತಿದ್ದು, ಅಕಾಲಿಕ ಮಳೆಯಿಂದ ಉಂಟಾಗಿರುವ ಕಾಫಿ ಬೆಳೆಗಾರರ ಸಂಕಷ್ಟವನ್ನು ಕೇಂದ್ರವೇ ಪರಿಗಣನೆ ಮಾಡಬೇಕಾಗಿದೆ ಎಂದರು. ::: ಜಿಲ್ಲಾಧಿಕಾರಿಗಳಿಗೆ ಮನವಿ ::: ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಬೆಳೆ ನಷ್ಟದ ಬಗ್ಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿತು. ಕಳೆದ ಮಳೆಗಾಲದಲ್ಲಿ ಕೊಳೆರೋಗಕ್ಕೆ ತುತ್ತಾದ ಕಾಫಿ ಬೆಳೆಯ ನಷ್ಟದ ಸಮೀಕ್ಷೆ ನಡೆಸಲು…

Read More

ನಾಪೋಕ್ಲು ಜ.14 : ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಎ.ಹಾರಿಸ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 2 ವರ್ಷಗಳ ಹಿಂದೆ ನನ್ನನ್ನು ಶಾಲೆಯ ಪೋಷಕರು ಸರ್ವಾನುಮತದಿಂದ ಅವಿರೋಧವಾಗಿ ಸಮಿತಿಗೆ ಆಯ್ಕೆ ಮಾಡಿದ್ದರು. ನನ್ನ ಅವಧಿಯಲ್ಲಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ಶ್ರಮಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದು ಹೇಳಿದ್ದಾರೆ.

Read More

ಮಡಿಕೇರಿ ಜ.13 : ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದ್ದು, ಮೂಲಭೂತ ಸೌಲಭ್ಯಗಳ ಕೊರತೆ ಗ್ರಾಮಸ್ಥರನ್ನು ಕಾಡಿದೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ. “ಆಮ್ ಆದ್ಮಿ ಪಾರ್ಟಿಯ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದ ಭಾಗವಾಗಿ ಮಡಿಕೇರಿ ತಾಲ್ಲೂಕಿನ ವಿವಿಧೆಡೆ ಸಂಚರಿಸಿದ ಅವರು ಜಿಲ್ಲೆಯ ಗ್ರಾಮಗಳನ್ನು ಕಾಡುತ್ತಿರುವ ಕೊರತೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಕಟ್ಟೆಮಾಡು, ಮರಗೋಡು, ಹಾಕತ್ತೂರು, ಮೇಕೇರಿ, ಕೆ.ನಿಡುಗಣೆ, ಗಾಳಿಬೀಡು, ವಣಚಲು, ಕಾಟಕೇರಿ, ಮದೆ, ಬೆಟ್ಟತ್ತೂರು, ಬಲ್ಲಮಾವಟಿ, ಎಮ್ಮೆಮಾಡು, ಪಾರಾಣೆ ಮತ್ತು ಮೂರ್ನಾಡು ಗ್ರಾಮಗಳಿಗೆ ಭೇಟಿ ನೀಡಲಾಗಿದೆ. ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಸರ್ಕಾರಿ ಶಾಲೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಕೊರತೆ ಕಂಡು ಬಂದಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು, ಮೂಲಭೂತ ಸೌಲಭ್ಯದ ಅಗತ್ಯತೆಯು ಇದೆ. ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆಯಿಂದ ಆರೋಗ್ಯ ಕೇಂದ್ರಗಳೇ ರೋಗಗ್ರಸ್ತವಾಗಿವೆ ಎಂದು ಆರೋಪಿಸಿದರು. ಕಲ್ಮಕಾಡು, ಹಮ್ಮಿಯಾಲ, ವಣಚಲು, 1ನೇ ಮೊಣ್ಣಂಗೇರಿ, ಕಾಲೂರು ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ…

Read More

ಮಡಿಕೇರಿ,ಜ.13  : ಮಡಿಕೇರಿ ನಗರದ ಕಾವೇರಿ ಬಡಾವಣೆ, ವಿಜಯನಗರ ಬಡಾವಣೆ,ಡೈರಿ ಫಾರಂ, ಕನ್ನಿಕೆ ಬಡಾವಣೆ ಟಿ.ಜಾನ್ ಬಡಾವಣೆ, ಪ್ರಕೃತಿ ಬಡಾವಣೆಗಳನ್ನೊಳಗೊಂಡ ಶ್ರೀ ವಿಜಯ ವಿನಾಯಕ ಗೌಡ ಒಕ್ಕೂಟದ 9ನೇ ವರ್ಷದ ಸಂತೋಷ ಕೂಟ ಜ.15 ರಂದು ನಡೆಯಲಿದೆ. ಕೊಡಗು ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಕೂಟದ ಅಧ್ಯಕ್ಷ ಕುರಿಕಡ ಆನಂದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಕುದುಕುಳಿ ಮಿಲನ ಭರತ್ ಪಾಲ್ಗೊಳ್ಳುವರು. ಒಕ್ಕೂಟದ ಸದಸ್ಯರು ಹಾಗೂ ಮಕ್ಕಳಿಗೆ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದೆಂದು ಒಕ್ಕೂಟದ ಕಾರ್ಯದರ್ಶಿ ಕಾನೆಹಿತ್ಲು ಮೊಣ್ಣಪ್ಪ ತಿಳಿಸಿದ್ದಾರೆ.

Read More