ಲೇಖಕ: admin

ಮಡಿಕೇರಿ ಮಾ.8 NEWS DESK : ಕೊಡಗು ಜಿಲ್ಲೆಯಾದ್ಯಂತ ಮಹಾ ಶಿವರಾತ್ರಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಎಲ್ಲಾ ದೇವಾಲಯಗಳಲ್ಲಿ ಶಿವ ಆರಾಧನೆ ಶ್ರದ್ಧಾಭಕ್ತಿಯಿಂದ ನಡೆಯಿತು. ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಹೋಮ ಹವನಾದಿ, ಅಭಿಷೇಕ, ಮಂತ್ರ ಪಠಣ, ಅಲಂಕಾರ ಪೂಜೆ, ಮಹಾಪೂಜೆ ಸೇರಿದಂತೆ ವಿಶೇಷ ಧಾರ್ಮಿಕ ಕೈಂಕರ್ಯಗಳೊಂದಿಗೆ ಶಿವನನ್ನು ಪೂಜಿಸಲಾಯಿತು. ಭಕ್ತರು ಉಪವಾಸ ವ್ರತದೊಂದಿಗೆ ಶಿವ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ದೇವಾಲಯಗಳಲ್ಲಿ ಜಾಗರಣೆ ಪ್ರಯುಕ್ತ ಭಜನೆ ಮತ್ತು ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಡಿಕೇರಿ ಸಮೀಪದ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರುಗಿತು. ಶಿವರಾತ್ರಿ ಹಿನ್ನೆಲೆ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪುಜಾ ಕೈಂಕರ್ಯಗಳು ನೆರವೇರಿತು. ಗ್ರಾಮದ 8 ದಿಕ್ಕುಗಳಿಂದ ಈಶ್ವರ ಆರಾಧನೆಯ ವಿಶೇಷ ಸೇವೆಯಾಗಿ ಹೊರೆ ಕಾಣಿಕೆ ಮೆರವಣಿಗೆ ಆಕರ್ಷಣಿಯವಾಗಿ ನಡೆಯಿತು. ಗ್ರಾಮದ 8 ದಿಕ್ಕುಗಳಿಂದ ಮಹಿಳೆಯರು…

Read More

ಮಡಿಕೇರಿ ಮಾ.8 NEWS DESK : ಕೊಡಗಿನ ವೀರ ಪುತ್ರ, ವೀರಸೇನಾನಿ ಪದ್ಮಭೂಷಣ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಅತ್ಯಾಕರ್ಷಕವಾದ ಮತ್ತು ಯುವ ಸಮೂಹಕ್ಕೆ ಪ್ರೇರಣಾ ದಾಯಕವಾದ ನೂತನ ಪ್ರತಿಮೆಯನ್ನು ಶುಕ್ರವಾರದಂದು ನಗರದಲ್ಲಿ ಸಕಲ ಗೌರವಗಳೊಂದಿಗೆ ಮರುಸ್ಥಾಪನೆ ಮಾಡಲಾಯಿತು. ಜಿಲ್ಲಾಡಳಿತ, ನಗರಸಭೆಯ ಉಸ್ತುವಾರಿಯಲ್ಲಿ ನಿರ್ಮಾಣಗೊಂಡ ನೂತನ ವೃತ್ತದಲ್ಲಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಪ್ರತಿಮೆಯನ್ನು, ಪುಷ್ಪನಮನದ ಮೂಲಕ ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಅವರು ಅನಾವರಣಗೊಳಿಸಿದರು. ನೂತನ ಪ್ರತಿಮೆ ಅನಾವರಣದ ಸಂದರ್ಭ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭ ಐದು ದಶಕಗಳ ಹಿಂದೆ ಜ.ತಿಮ್ಮಯ್ಯ ಅವರ ಪ್ರತಿಮೆ ಸ್ಥಾಪನೆಗೆ ಕಾರಣರಾಗಿದ್ದ ಮಾಜಿ ಸಚಿವ ಎಂ.ಸಿ. ನಾಣಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಎಂಎಲ್‍ಸಿ ವೀಣಾ ಅಚ್ಚಯ್ಯ, ಮಡಿಕೇರಿ ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಫೀ.ಮಾ. ಕಾರ್ಯಪ್ಪ ಮತ್ತು…

Read More

ಮಡಿಕೇರಿ ಮಾ.8 NEWS DESK :  ಅಂತರರಾಷ್ಟ್ರೀಯ ಮಹಿಳಾ ದಿನವಾದ ಇಂದು ಕೊಡವ ಮಹಿಳೆಯರ ಸಾಂವಿಧಾನಿಕ ಸಬಲೀಕರಣಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಸಂಘಟನೆ ಧರಣಿ ಸತ್ಯಾಗ್ರಹ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಿದ ಸಿಎನ್‍ಸಿ ಪ್ರಮುಖರು ಕೊಡವ ಮಹಿಳೆಯರು ಆದಿಮಸಂಜಾತ ಅತ್ಯಂತ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗದ ವೀರ ಪರಂಪರೆ, ಸಂಸ್ಕೃತಿ ಮತ್ತು ಆಚಾರ ವಿಚಾರಗಳ ಉಳಿವಿಗಾಗಿ ನೀಡಿದ ಕೊಡುಗೆಗಳನ್ನು ಪ್ರತಿಪಾದಿಸಿದರು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮಾತನಾಡಿ ಈ ಬಾರಿಯ ಅಂತರರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ವಿಶ್ವಸಂಸ್ಥೆ ವಿಶ್ವ ಮಹಿಳೆಯರ ಹೂಡಿಕೆಯ ಪ್ರಗತಿಯನ್ನು ವೇಗಗೊಳಿಸುವ ಧ್ಯೇಯವಾಕ್ಯವನ್ನು ಘೋಷಿಸಿದೆ. ಇದು ಸಾಕಾರಗೊಳ್ಳಬೇಕಾದರೆ ವಿಶ್ವರಾಷ್ಟ್ರ ಸಂಸ್ಥೆಯ ಚಾರ್ಟರ್ ಅಡಿಯಲ್ಲಿ ನಮ್ಮ ರಾಷ್ಟ್ರದ ಇತರ ಮಹಿಳೆಯರಿಗೆ ಸಮಾನವಾಗಿ ಕೊಡವ ಮಹಿಳೆಯರ ಸಾಂವಿಧಾನಿಕ ಸಬಲೀಕರಣ ಅಗತ್ಯ ಎಂದರು. ಶಾಸನ ರೂಪಿಸುವ ಸಂಸ್ಥೆಗಳಲ್ಲಿ ಅಂದರೆ ಸಂಸತ್ತು, ರಾಜ್ಯ ಅಸೆಂಬ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಪ್ರಸ್ತಾವಿತ 33 ಪ್ರತಿಶತ ಸೀಟುಗಳಲ್ಲಿ ಕೊಡವ ಮಹಿಳೆಯರಿಗೆ ಪ್ರತ್ಯೇಕ…

Read More

ಬೆಂಗಳೂರು ಮಾ.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ರೂ. 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ರೂ. 8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ರೂ. 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ. ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ರೂ. 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ‘ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ…

Read More

ಕುಶಾಲನಗರ ಮಾ.8 NEWS DESK : ಕೂಡುಮಂಗಳೂರು ಗ್ರಾ.ಪಂ‌‌ ನ ಸುಂದರನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದ ಹಿನ್ನಲೆ ಟ್ಯಾಂಕರ್ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಯಿತು. ಕೂಡುಮಂಗಳೂರು ಗ್ರಾ.ಪಂ ನ‌ ಸುಂದರನಗರದಲ್ಲಿ ಕಳೆದ‌ ಎಂಟು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಭವಿಸಿದ್ದ ಹಿನ್ನಲೆ ಟ್ಯಾಂಕರ್ ನ ಮೂಲಕ ನೀರು ಸರಬರಾಜು ಮಾಡಲಾಯಿತು. ಪಂಚಾಯಿತಿಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಹಿನ್ನಲೆ ಈ ಸಮಸ್ಯೆ ತಲೆದೂರಿದ್ದು, ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್, ಸುಂದರನಗರ ಹಾಗೂ ವಿನಾಯಕ ಬಡಾವಣೆಯಲ್ಲಿ ಹೆಚ್ಚು ನೀರಿನ‌ ಸಮಸ್ಯೆಯಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಹಾಗೆಯೇ ತಾತ್ಕಾಲಿಕವಾಗಿ ಖಾಸಗಿ ಕೊಳವೆ ಬಾವಿಗಳಿಂದ ಪೈಲ್ ಸಂಪರ್ಕ ಕೊಟ್ಟು ನೀರು ಪೂರೈಸಲಾಗುತ್ತಿದೆ ಎಂದ ಅವರು, ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ ಯೋಜನೆಯು ಸಂಪೂರ್ಣ ಕಳಪೆ ಹಾಗೂ ಅಪೂರ್ಣವಾಗಿದೆ. ಇದರ ಕಾರಣವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.…

Read More

ನಾಪೋಕ್ಲು ಮಾ.8 NEWS DESK : ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯು ಪಂಚಾಯತಿ ಅಧ್ಯಕ್ಷ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಹೊದ್ದೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರಾದ ಕೃತಿಕಾರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇದ್ದು, ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧ್ಯಕ್ಷರು ಸೂಚನೆ ನೀಡಿದರು. ವಿದ್ಯುತ್ ಸಮಸ್ಯೆ ಕುರಿತು ಸಸ್ಕ್ ಮುರ್ನಾಡು ಅಭಿಯಂತರರು ಮಾಹಿತಿ ನೀಡಿದರು, ಪಂಚಾಯತಿ ವ್ಯಾಪ್ತಿಯಲ್ಲಿ ಟ್ರಾನ್ಸ್ಫಾರ್ಮರ್ ಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಬಗ್ಗೆ ಸದಸ್ಯರಾದ ಹಮೀದ್, ಮೊಣ್ಣಪ್ಪ, ಟೈನಿ ಗಮನ ಸೆಳೆದರು. ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಕುರಿತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಭಿಯಂತರರಾದ ರಘು ಮಾಹಿತಿ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ…

Read More

ಮಡಿಕೇರಿ ಮಾ.8 NEWS DESK : ಕೊಡಗಿನ ವೀರ ಪುತ್ರ, ವೀರಸೇನಾನಿ ಪದ್ಮಭೂಷಣ ಜನರಲ್ ಕೆ.ಎಸ್. ತಿಮ್ಮಯ್ಯನವರ ಅತ್ಯಾಕರ್ಷಕವಾದ ಮತ್ತು ಯುವ ಸಮೂಹಕ್ಕೆ ಪ್ರೇರಣಾ ದಾಯಕವಾದ ನೂತನ ಪ್ರತಿಮೆಯನ್ನು ನಗರದಲ್ಲಿ ಸಕಲ ಗೌರವಗಳೊಂದಿಗೆ ಮರುಸ್ಥಾಪನೆ ಮಾಡಲಾಯಿತು. ಜಿಲ್ಲಾಡಳಿತ, ನಗರಸಭೆಯ ಉಸ್ತುವಾರಿಯಲ್ಲಿ ನಿರ್ಮಾಣಗೊಂಡ ನೂತನ ವೃತ್ತದಲ್ಲಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಪ್ರತಿಮೆಯನ್ನು, ಪುಷ್ಪನಮನದ ಮೂಲಕ ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಅವರು ಅನಾವರಣಗೊಳಿಸಿದರು. ಸಂದರ್ಭ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾಜಿ ಸಚಿವ ಎಂ.ಸಿ. ನಾಣಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಎಂಎಲ್‍ಸಿ ವೀಣಾ ಅಚ್ಚಯ್ಯ, ಮಡಿಕೇರಿ ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಫೀ.ಮಾ. ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಫೋರಂ ಅಧ್ಯಕ್ಷರಾದ ಕರ್ನಲ್ ಕಂಡ್ರತಂಡ ಸುಬ್ಬಯ್ಯ, ಕೊಡಗು ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಮೇ.ಜ. ಬಿ.ಎ.ಕಾರ್ಯಪ್ಪ…

Read More

ಮಡಿಕೇರಿ ಮಾ.8 NEWS DESK :  ಪದ್ಮಭೂಷಣ ವೀರ ಸೇನಾನಿ ಭಾರತದ ಹೆಮ್ಮೆಯ ಪ್ರತೀಕ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡಗು ಗಡಿ ಭಾಗ ಕುಶಾಲನಗರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ  ಗೌರವಪೂರ್ವಕವಾಗಿ ಬರಮಾಡಿಕೊಂಡು ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಮಾ.8 NEWS DESK : ವಿರಾಜಪೇಟೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವದರಿಂದ ಶಾಸಕ ಎ.ಎಸ್.ಪೊನ್ನಣ್ಣ  ಅವರು ತಮ್ಮ ಪೊನ್ನಮ್ಮ ಸುಬ್ಬಯ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾತ್ಕಾಲಿಕವಾಗಿ ಮೂರು ತಿಂಗಳ ಮಟ್ಟಿಗೆ ನಗರಕ್ಕೆ ಉಚಿತ ಕುಡಿಯುವ ನೀರಿನ ಸರಬರಾಜು ಟ್ಯಾಂಕರನ್ನು ಒದಗಿಸಿದ್ದಾರೆ. ಇವರ ಈ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.           

Read More

ಮಡಿಕೇರಿ ಮಾ.8 NEWS DESK  : ಕೇಂದ್ರ ಸರ್ಕಾರದ ಕಾರ್ಮಿಕ ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ 2021 ರ ಆಗಸ್ಟ್ 26 ರಿಂದ ನೋಂದಾಯಿಸಲಾಗುತ್ತಿದೆ. 2022 ರ ಮಾರ್ಚ್ 31 ರವರೆಗೆ ನೋಂದಣಿಯಾದ ಮತ್ತು 2022 ರ ಮಾರ್ಚ್ 31 ರೊಳಗೆ ಅಪಘಾತಗೊಂಡು ಮರಣ ಹೊಂದಿದ/ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ, ಅಸಂಘಟಿತ ಕಾರ್ಮಿಕರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಪಘಾತ ಪರಿಹಾರ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು:-ಮರಣ ಹೊಂದಿದ್ದಲ್ಲಿ, ನಾಮನಿರ್ದೇಶಿತರ ಆಧಾರ್ ಕಾರ್ಡ್, ಇ-ಶ್ರಮ್ (ಯು.ಎ.ಎನ್) ಕಾರ್ಡ್, ಮರಣ ಪ್ರಮಾಣ ಪತ್ರ, ಮರಣ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್.ಐ.ಆರ್, ಮರಣೋತ್ತರ ಪರೀಕ್ಷೆಯ ವರದಿ, ಫಲಾನುಭವಿಯು ಅಪ್ರಾಪ್ತ ವಯಸ್ಕರಾಗಿದ್ದಲ್ಲಿ, ಜಿಲ್ಲಾ ನ್ಯಾಯಾಲಯವು ನೀಡಿದ ಪಾಲಕನ ಅಧಿಕಾರ ಪ್ರಮಾಣ ಪತ್ರವನ್ನು ಹಾಜರು ಪಡಿಸಬೇಕು. ಶಾಶ್ವತ ದುರ್ಬಲತೆ ಅಥವಾ…

Read More