ಲೇಖಕ: admin

ಮಡಿಕೇರಿ ಮಾ.7 NEWS DESK : ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಳೆ ಕೂಡಿಗೆ ಬಳಿ ನಡೆದಿದೆ. ಚಿಕ್ಕತ್ತೂರಿನ ಶ್ರೀನಿವಾಸ್ ಅಲಿಯಾಸ್ ಅಪ್ಪು(24), ಕಣಿವೆಯ ಹಕ್ಕೆ ಸಚಿನ್(23) ಹಾಗೂ ಮುಳ್ಳುಸೋಗೆ ಜನತಾಕಾಲನಿ ವಿನೋದ್(24) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಐವರು ಸ್ನೇಹಿತರು ಕಾವೇರಿ ನದಿ ಬಳಿ ಕಾರು ನಿಲ್ಲಿಸಿ ಸ್ನಾನಕ್ಕೆ ತೆರಳಿದ ಸಂದರ್ಭ ಓರ್ವ ಆಳವಾದ ಪ್ರದೇಶದಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ತೆರಳಿದ ಮತ್ತೋರ್ವ ಮುಳುಗುವುದನ್ನು ನೋಡಿ ರಕ್ಷಿಸಲು ಇನ್ನೊಬ್ಬ ಸ್ನೇಹಿತ ಮುಂದಾದ ಸಂದರ್ಭ ಮೂವರೂ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಶ್ರೀನಿವಾಸ್ ದೇಹ ಪತ್ತೆಯಾಗಿದ್ದು, ಕುಶಾಲನಗರ ಆಸ್ಪತ್ರೆಗೆ ಸಾಗಿಸಿದ ಸಂದರ್ಭ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ್ದಾರೆ. ಇನ್ನುಳಿದ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಘಟನೆ ಮಧ್ಯಾಹ್ನದ ವೇಳೆ ನಡೆದಿದ್ದು,…

Read More

ಮಡಿಕೇರಿ ಮಾ.7 NEWS DESK :  ವಿರಾಜಪೇಟೆ ವಿಧಾಸಭಾ ಕೇತ್ರದ ಪೆರಾಜೆ ಗ್ರಾಮ ಪಂಚಾಯತ್  ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಪೆರಾಜೆ ಗ್ರಾ.ಪಂ ಕಚೇರಿಯಲ್ಲಿ ಪಂಚಾಯತ್  ವ್ಯಾಪ್ತಿಯ ಪುತ್ಯ ಪೆರಾಜೆ ಶಾಲೆಯ ಪಕ್ಕದಿಂದ ನಿಡ್ಯಮಲೆ ಲಿಂಕ್ ರಸ್ತೆಯ ಅಭಿವೃದ್ಧಿ, ⁠ಪೆರಂಗಾಜೆ ಕುಟುಂಬಸ್ಥರ ರಸ್ತೆ ಅಭಿವೃದ್ಧಿ,  ಕುಂಡಾದು ರಸ್ತೆಯ ಪೀಚೆ ಕುಟುಂಬಸ್ಥರ ಮನೆಯ ಹತ್ತಿರ ರಸ್ತೆ ಅಭಿವೃದ್ಧಿ, ಪೇತಾಜೆ – ಪುಲ್ಲಾಜೆ ರಸ್ತೆ ಅಭಿವೃದ್ಧಿ, ⁠ಬಂಗಾರಕೋಡಿ – ಚಾಮಕಜೆ ಗಿರಿಜನ ಕಾಲೋನಿ ರಸ್ತೆ ಅಭಿವೃದ್ಧಿ, ⁠ಕನ್ನಡ ಪೆರಾಜೆ ರಸ್ತೆ ಅಭಿವೃದ್ಧಿ, ವ್ಯಯಾನಾಟು ಕುಲವಾನ್ ದೇವಸ್ಥಾನ ಅಭಿವೃದ್ಧಿ,  ⁠ಪುತ್ಯ ಉಳ್ಳಾಕುಲು ದೇವಸ್ಥಾನದ ತಡೆ ಗೋಡೆ ನಿರ್ಮಾಣ, ಅಡ್ಕ ಕುಟುಂಬಸ್ಥರ ಐನ್ ಮನೆ ಪಕ್ಕ ತಡೆಗೋಡೆ, ಪೆರಂಗಾಜೆ ಕುಟುಂಬಸ್ಥರ ಐಎನ್ ಮನೆ ಅಭಿವೃದ್ಧಿ, ಪೆರಾಜೆ ಮಸೀದಿಯ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು. ಇದಕ್ಕು ಮೊದಲು ಚೆಂಬು…

Read More

ವಿರಾಜಪೇಟೆ  ಮಾ.7 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚಿಗೆ ನಡೆದ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಕೊಡಗಿನ ಹಾಕತ್ತೂರಿನ ಸಿನಾನ್ ತಂಡಕ್ಕೆ ಬೆಸ್ಟ್ ಪೇಪರ್ ಪ್ರೆಸೆಂಟೇಷನ್ ಪ್ರಶಸ್ತಿ ಲಭಿಸಿದೆ. ಮೂಲತಃ ಕೊಡಗು ಜಿಲ್ಲೆಯ ಹಾಕತ್ತೂರಿನವರಾದ ಮೈಸೂರಿನ ಮಹಾರಾಜ ಇನ್ಸ್ಟಿಟ್ಯೂಟ್ ನ ಎಂ. ಬಿ.ಎ.ವಿದ್ಯಾರ್ಥಿ ಸಿನಾನ್ ಹಾಗೂ ಅದೇ ಕಾಲೇಜಿನ ಅಗಮ್ಯ ರುಬೆನ್  ಮಂಡಿಸಿದ ಎ ಸ್ಟಡಿ ಕಸ್ಟಮರ್ಸ್ ಟುವರ್ಡ್ಸ್ ಆನ್ಲೈನ್ ಶಾಪಿಂಗ್, ವಿಥ್ ಸ್ಪೆಷಲ್ ರೆಫರೆನ್ಸ್ ಟು ಅಮೆಜಾನ್ ಮೈಸೂರ್ ಸಿಟಿ ಎಂಬ ವಿಷಯಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಶರಣಪ್ಪ ವಿ.ಹಲಸೆ  ಉತ್ತಮ ಸಂಶೋಧನೆ ಮಂಡನೆ ಪ್ರಶಸ್ತಿ  ನೀಡಿ ಗೌರವಿಸಿದೆ. ಸಿನಾನ್ ಹಾಕತ್ತೂರುವಿನ ಎಂ.ಎಂ.ಅಬ್ಬಾಸ್ ಹಾಗೂ ಪಿ.ಹೆಚ್. ಹಜಾರ ದಂಪತಿಗಳ ಪುತ್ರ. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಹಳೆ ವಿದ್ಯಾರ್ಥಿ.

Read More

ಮಡಿಕೇರಿ ಮಾ.7 NEWS DESK : ವೇತನ ಪಾವತಿಗಾಗಿ ಆಗ್ರಹಿಸಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಧರಣಿ ಏಳನೆಯ ದಿನವೂ ಮುಂದುವರೆಯಿತು. ನೂತನ ಕುಲಪತಿಗಳಾದ ಪ್ರೊ. ಪಿ.ಎಲ್.ಧರ್ಮ ಅವರು ಧರಣಿ ನಿರತ ಉಪನ್ಯಾಸಕರೊಂದಿಗೆ ದೂರವಾಣಿಯ ಮೂಲಕ ಮಾತನಾಡಿದರು. ಧರಣಿಯನ್ನು ಹಿಂತೆಗೆದುಕೊಳ್ಳಲು ಮನವಿ ಮಾಡಿದರು. ನಂತರ ಈ ಬಗ್ಗೆ ಚರ್ಚೆ ನಡೆಸಿದ ಉಪನ್ಯಾಸಕರು ವೇತನ ಪಾವತಿ ವ್ಯವಸ್ಥೆಯಲ್ಲಿ ಹಲವು ಗೊಂದಲಗಳು ಇರುವುದರಿಂದ, ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುವ ಅಧಿಕಾರಿಗಳೊಂದಿಗೆ ಮುಖತ:  ಮಾತುಕತೆ ನಡೆಸಿ ನಿರ್ಧಾರಕ್ಕೆ ಬರಲು ಸಾಧ್ಯ ಎನ್ನುವ ಕಾರಣದಿಂದ ಧರಣಿಯನ್ನು ಮುಂದುವರೆಸಿದರು.

Read More

ಮಡಿಕೇರಿ ಮಾ.7 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸರ್ವರಿಗೂ ಸಮಾನ ಹಕ್ಕುಗಳನ್ನು ಸಂವಿಧಾನ ನೀಡಿದೆ. ಇದರ ಆಧಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಇದು ಹಕ್ಕುಗಳ ಪ್ರತಿಪಾದನೆಯೇ ಹೊರತು ಅಲ್ಪಸಂಖ್ಯಾತರ ಓಲೈಕೆಯಲ್ಲ ಎಂದು ತಿಳಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಅಭ್ಯುದಯ ಮತ್ತು ರಕ್ಷಣೆಗೆ ಆಡಳಿತ ವ್ಯವಸ್ಥೆ ಬದ್ಧವಾಗಿರಬೇಕೆನ್ನುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವಾಗಿದೆ. ಇದನ್ನು ಕಾಂಗ್ರೆಸ್ ಸರ್ಕಾರ ಪರಿಪಾಲನೆ ಮಾಡುತ್ತಿದೆಯೇ ಹೊರತು ಓಲೈಕೆ ರಾಜಕಾರಣ ಮಾಡುತ್ತಿಲ್ಲ. ವಿನಾಕಾರಣ ಸಂಸದರು ಧರ್ಮ ಆಧಾರಿತ ರಾಜಕಾರಣ ಮಾಡುತ್ತಿದ್ದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಲು ವಿಷಯಗಳಿಲ್ಲದೆ ಭಾವನಾತ್ಮಕವಾಗಿ ಮತದಾರರನ್ನು ಸೆಳೆಯುವ…

Read More

ಬೆಂಗಳೂರು ಮಾ.7 NEWS DESK : ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ನಿರ್ಣಯಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಸಮಾರಂಭದಲ್ಲಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ – ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಈ ಸಮಾರಂಭದಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ, ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕರಾದ…

Read More

ಮಡಿಕೇರಿ ಮಾ.7 NEWS DESK : ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ರೈತ ಮೋರ್ಚಾದ ಅಧ್ಯಕ್ಷರಾಗಿ ಮಚ್ಚಂಡ ಪ್ರಕಾಶ್ ಆಯ್ಕೆಯಾಗಿದ್ದಾರೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆ ಮೇರೆಗೆ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಾಪೋಕ್ಲು ಮಾ.7  NEWS DESK : ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಭಕ್ತಜನ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಕಲ್ಯಾಟಂಡ ಮುತ್ತಪ್ಪ ಮಾತನಾಡಿ, ವರ್ಷಕ್ಕೊಮ್ಮೆ ನಡೆಯುವ ಮಹಾಸಭೆಗೆ ಸದಸ್ಯರು ಎಲ್ಲರೂ ಹಾಜರಾಗಬೇಕು. ಅಭಿವೃದ್ಧಿಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡಬೇಕು ಎಂದರು. ಸಂಘದ ನಿರ್ದೇಶಕ ಕಲಿಯಂಡ ಹ್ಯಾರಿಮಂದಣ್ಣ ಮಾತನಾಡಿ, ಭಕ್ತರ ಹಣದಲ್ಲಿ ಭಕ್ತ ಜನ ಸಂಘ ದೇವಾಲಯದ ಅಭಿವೃದ್ಧಿ ಕಾರ್ಯ ಮಾಡಿದ್ದು, ಮುಜರಾಯಿ ಇಲಾಖೆಯೊಂದಿಗೆ ಭಕ್ತ ಜನ ಸಂಘ ಸೇರಿಕೊಂಡು ದೇವಾಲಯದ ಅಭಿವೃದ್ಧಿ ಆಗಬೇಕು ಎಂದರು. ಸದಸ್ಯ ಜಿ.ರಾಜೇಂದ್ರ ಮಾತನಾಡಿ, ಹಿಂದಿನ ವಾರ್ಷಿಕ ಮಹಾಸಭೆಯಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಮರಳಿ ಪಡೆಯಲು ಶಾಸಕರು ಮುಖ್ಯಮಂತ್ರಿಗಳೊಂದಿಗೆ ವ್ಯವಹರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಈ ಬಗ್ಗೆ ಏನು ಬೆಳವಣಿಗೆಗಳಾಗಿವೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಎಲ್ಲಾ ತಕ್ಕ ಮುಖ್ಯಸ್ಥರ ಸಭೆ…

Read More

ಮಡಿಕೇರಿ ಮಾ.7 NEWS DESK : ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದಿಂದ ವತಿಯಿಂದ ಮಾ.17 ರಂದು ಪ್ರಕೃತಿ ಅಧ್ಯಯನ ಮತ್ತು ಚಾರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಸದಸ್ಯರು ಹಾಗೂ ಸಾರ್ವಜನಿಕರು ಮಾ.14 ರ ಒಳಗೆ ಈ ಸಂಖ್ಯೆಗಳನ್ನು 9449699869 (ಅಯ್ಯಣ್ಣ), 9448896556 (ರಾಜಶೇಖರ್) ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.7 NEWS DESK : ನದಿ ಮತ್ತು ನದಿ ಮೂಲಗಳಿಂದ ಪಂಪ್ ಸೆಟ್ ಬಳಸಿ ನೀರು ತೆಗೆಯುವುದನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ್ದು, ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ಮನವಿ ಮಾಡಿದೆ. ಗೋಣಿಕೊಪ್ಪದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಮಂಡಲದ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮುದ್ಯಡ ಮಂಜು ಗಣಪತಿ ಹಾಗೂ ಕುಟ್ಟಂಡ ಅಜಿತ್, ಕೊಡಗಿನಲ್ಲಿ ಕಾಫಿ ಬೆಳೆಯನ್ನೇ ನಂಬಿಕೊಂಡು ಹೆಚ್ಚಿನ ಸಂಖ್ಯೆಯ ಬೆಳೆಗಾರರು ಹಾಗೂ 2ಲಕ್ಷಕ್ಕೂ ಅಧಿಕ ಕಾರ್ಮಿಕರು ಜೀವನ ಸಾಗಿಸುತ್ತಿದ್ದಾರೆ. ವರ್ಷಕ್ಕೆ ಒಂದು ಬಾರಿ ಕಾಫಿ ತೋಟಕ್ಕೆ ನೀರು ಹಾಕುವ ಸಮಯ ಇದಾಗಿದೆ. ಆದರೆ ಇದೀಗ ಜಿಲ್ಲಾಡಳಿತ ದಿಢೀರ್ ಆಗಿ ನದಿಮೂಲಗಳಿಂದ ನೀರು ತೆಗೆಯದಂತೆ ಆದೇಶ ಹೊರಡಿಸಿದ್ದು, ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ಗಮನ ಸೆಳೆದರು. ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಿಂದ ಬೆಳೆಗಾರರು ಪಂಪ್ ಸೆಟ್ ಬಳಸಿ…

Read More