ಮಡಿಕೇರಿ ಮಾ.7 NEWS DESK : ನದಿ ಮತ್ತು ನದಿ ಮೂಲಗಳಿಂದ ಪಂಪ್ ಸೆಟ್ ಬಳಸಿ ನೀರು ತೆಗೆಯುವುದನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ್ದು, ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ಮನವಿ ಮಾಡಿದೆ. ಗೋಣಿಕೊಪ್ಪದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಮಂಡಲದ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮುದ್ಯಡ ಮಂಜು ಗಣಪತಿ ಹಾಗೂ ಕುಟ್ಟಂಡ ಅಜಿತ್, ಕೊಡಗಿನಲ್ಲಿ ಕಾಫಿ ಬೆಳೆಯನ್ನೇ ನಂಬಿಕೊಂಡು ಹೆಚ್ಚಿನ ಸಂಖ್ಯೆಯ ಬೆಳೆಗಾರರು ಹಾಗೂ 2ಲಕ್ಷಕ್ಕೂ ಅಧಿಕ ಕಾರ್ಮಿಕರು ಜೀವನ ಸಾಗಿಸುತ್ತಿದ್ದಾರೆ. ವರ್ಷಕ್ಕೆ ಒಂದು ಬಾರಿ ಕಾಫಿ ತೋಟಕ್ಕೆ ನೀರು ಹಾಕುವ ಸಮಯ ಇದಾಗಿದೆ. ಆದರೆ ಇದೀಗ ಜಿಲ್ಲಾಡಳಿತ ದಿಢೀರ್ ಆಗಿ ನದಿಮೂಲಗಳಿಂದ ನೀರು ತೆಗೆಯದಂತೆ ಆದೇಶ ಹೊರಡಿಸಿದ್ದು, ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ಗಮನ ಸೆಳೆದರು. ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಿಂದ ಬೆಳೆಗಾರರು ಪಂಪ್ ಸೆಟ್ ಬಳಸಿ…
ಲೇಖಕ: admin
ಸೋಮವಾರಪೇಟೆ ಮಾ.7 NEWS DESK : ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಕೀಳರಿಮೆಯಿಂದ ಹೊರಬರಬೇಕು. ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೂ ಸಿಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಝೀವಲ್‍ಖಾನ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ‘ಮಕ್ಕಳ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸದೊಂದಿಗೆ ಉನ್ನತ ಶಿಕ್ಷಣ ಪಡೆದ ಶೇ.80ರಷ್ಟು ಮಂದಿ ಸರ್ಕಾರಿ ಕೆಲಸದಲ್ಲಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಹೆಚ್ಚಿನ ಹಣವನ್ನು ಖರ್ಚುಮಾಡುತ್ತಿದೆ. ಮಕ್ಕಳ ಇಂತಹ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಮಕ್ಕಳ ಸಾಹಿತ್ಯ ಸಂಭ್ರಮದ ಉದ್ದೇಶ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡಬೇಕು ಹಾಗೂ ಮಕ್ಕಳನ್ನು ಗ್ರಂಥಾಲಯದ ಕಡೆಗೆ ಸೆಳೆಯಬೇಕು. ಓದುವುದರ ಮೂಲಕ ಮಕ್ಕಳು ಜ್ಞಾನ ಸಂಪಾದಿಸಿಕೊಳ್ಳಬೇಕು. ಮಕ್ಕಳು ಸಾಮಾಜಿಕವಾಗಿ ಬೆಳೆಯಬೇಕು. ಹೊಸತನದೊಂದಿಗೆ ಬೆಳೆಯಬೇಕು ಎಂದು ಹೇಳಿದರು. ಪ್ರತಿಮಕ್ಕಳಲ್ಲೂ…
ಸೋಮವಾರಪೇಟೆ ಮಾ.7 NEWS DESK : 4.80 ಕೋಟಿ ರೂ ವೆಚ್ಚದ ಹಾನಗಲ್ಲು ಗ್ರಾಮದ ದುದ್ದುಗಲ್ಲು ಶ್ರೀ ಮಲ್ಲಿಕಾರ್ಜುನ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮತ್ತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ದೇವಾಲಯದ ನೀಲನಕ್ಷೆಯಂತೆ ದುದ್ದುಗಲ್ಲು ಹೊಳೆಯಿಂದ ದೇವಾಲಯದವರೆಗೆ ಮೆಟ್ಟಿಲು ಹಾಗೂ ರಸ್ತೆ ನಿರ್ಮಾಣ ಆಗಬೇಕಿರುವ ಹಿನ್ನೆಲೆ, ರಾಜ್ಯ ಜಲಸಂಪನ್ಮೂಲ ಇಲಾಖಾ ಸಚಿವ ಡಿ.ಕೆ. ಶಿವಕುಮಾರ್ ಅವರ ಗಮನ ಸೆಳೆದ ಹಿನ್ನೆಲೆ ಕಾಮಗಾರಿಗೆ 4.80 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಕಾಂಕ್ರಿಟ್ ರಸ್ತೆ, ಸೋಪಾನಂ ಕಟ್ಟೆ, ತಡೆಗೋಡೆ, ಫೆನ್ಸಿಂಗ್, ಇಂಟರ್ ಲಾಕ್, ವಾಹನ ನಿಲುಗಡೆಗೆ ಸ್ಥಳಾವಕಾಶ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಮಂಥರ್ ಗೌಡ ಹೇಳಿದರು. ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶ್ರೀ ಶಂಭುನಾಥ ಸ್ವಾಮೀಜಿ ಅವರು, ಶಾಶ್ವತವಾಗುವಂತಹ ಕ್ಷೇತ್ರವನ್ನಾಗಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವನ್ನು ನಿರ್ಮಿಸಲಾಗುವುದು. ಇದರೊಂದಿಗೆ ಮಠವನ್ನೂ ನಿರ್ಮಿಸಿ, ದಾಸೋಹ,…
ಮಡಿಕೇರಿ ಮಾ.7 NEWS DESK : ಮಡಿಕೇರಿ ನಗರಸಭೆಯ ಉಸ್ತುವಾರಿಯಲ್ಲಿ ನಡೆದ ನೂತನ ಜನರಲ್ ತಿಮ್ಮಯ್ಯ ವೃತ್ತದ ಕಾಮಗಾರಿ ಪೂರ್ಣಗೊಂಡಿದೆ. ಆಕರ್ಷಕ ವೃತ್ತ ಮತ್ತು ದೇಶದ ಹೆಮ್ಮೆಯ ವೀರಪುತ್ರ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಸಂಘ, ಸಂಸ್ಥೆಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಯೋಧರು, ಮಾಜಿ ಯೋಧರು ಸೇರಿದಂತೆ ಸರ್ವರು ಪಾಲ್ಗೊಳ್ಳುವಂತೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮನವಿ ಮಾಡಿದ್ದಾರೆ. ವೃತ್ತದ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದ ಅವರು ಮಾ.8 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಗುವುದು. ನಂತರ ಭವ್ಯ ಮೆರವಣಿಗೆಯಲ್ಲಿ ನೂತನ ವೃತ್ತಕ್ಕೆ ತಂದು ಅನಾವರಣಗೊಳಿಸಲಾಗುವುದು ಎಂದು ತಿಳಿಸಿದರು. ವೃತ್ತದ ಅಭಿವೃದ್ಧಿಗಾಗಿ ಸುಮಾರು 17.14 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 4 ಲಕ್ಷ ರೂ.ಗಳನ್ನು ನೀಡಿದೆ. ಕೆಆರ್‍ಐಡಿಎಲ್ ಕಾಮಗಾರಿಯನ್ನು ನಿಭಾಯಿಸಿದೆ. ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿ ರಾಜ್…
ಕುಶಾಲನಗರ ಮಾ.7 NEWS DESK : ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಗೊಂದಿಬಸವನಹಳ್ಳಿಯಲ್ಲಿ 10 ಲಕ್ಷದ ರೂಪಾಯಿ ವೆಚ್ಚದ ಸುಬ್ರಮಣ್ಯ ಕಾಫಿ ಕ್ಯೂರಿಂಗ್ ವರ್ಕ್ಸ್ ರಸ್ತೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
ಬೀದರ್ ಮಾ.7 NEWS DESK : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣ: ಸುಳಿವು ದೊರೆತಿದೆ. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್.ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ :: ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು. ಅಂಬೇಡ್ಕರ್ ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ :: ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ…
ಕುಶಾಲನಗರ ಮಾ.7 NEWS DESK : ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 3.95 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
ಪುತ್ತೂರು ಮಾ.7 NEWS DESK : ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯಗಳಲ್ಲಿ ಪರಿಣತರೇ ಆಗಿರುತ್ತಾರೆ. ಸೂಕ್ತ ಅವಕಾಶಗಳು ಹಾಗೂ ಸರಿಯಾದ ವೇದಿಕೆಗಳು ಸಿಕ್ಕಿದಾಗ ಅವರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಚತುರಂ ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ಪ್ರಕಾಶ್ ಕುಮಾರ್.ಪಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಇಇಇ ವಿದ್ಯಾರ್ಥಿ ವಿಭಾಗ ಇದರ ಆಶ್ರಯದಲ್ಲಿ ನಡೆದ ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ಚತುರಂ ಗೆ ಚಾಲನೆ ನೀಡಿ ಮಾತಾಡಿದರು. ಎಷ್ಟೋ ವಿದ್ಯಾರ್ಥಿಗಳು ತಮ್ಮಲ್ಲಿ ಪ್ರತಿಭೆಗಳಿದ್ದರೂ ಹಿಂಜರಿಕೆಯಿಂದ ಹಿಂದುಳಿಯುತ್ತಾರೆ ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸಗಳು ನಿರಂತರ ನಡೆಯಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ ಪ್ರತಿಯೊಬ್ಬನಿಗೂ ಜೀವನದಲ್ಲಿ ಒಂದು ಗುರಿಯಿರಬೇಕು, ನಮ್ಮ ಶಕ್ತಿ ವಿಶೇಷಗಳನ್ನು…
ಮಡಿಕೇರಿ ಮಾ.7 NEWS DESK : ಕೊಡಗು ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ನದಿ ಹಾಗೂ ನದಿ ಮೂಲಗಳಿಂದ ಅಕ್ರಮ/ ಅನಧಿಕೃತವಾಗಿ ಖಾಸಗಿ ಚಟುವಟಿಕೆಗಳಿಗೆ ಪಂಪ್‍ಸೆಟ್ ಬಳಸಿ ಅಥವಾ ಕಾಲುವೆಗಳ ಮುಖಾಂತರ ನದಿ ನೀರನ್ನು ಇತರೆ ಉದ್ದೇಶಕ್ಕೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಮಾ.7 NEWS DESK : ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮಡಿಕೇರಿ ನಗರದ ಚೈನ್ ಗೇಟ್ ಬಸ್ ತಂಗುದಾಣವನ್ನು ಇಂದು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು. ಮೈಸೂರು ರಸ್ತೆ ಮತ್ತು ಗೌಡ ಸಮಾಜ ರಸ್ತೆಯಿಂದ ಬರುತ್ತಿದ್ದ ವಾಹನಗಳ ನಡುವೆ ಅಪಘಾತವಾಗಿ ಸಾವು, ನೋವುಗಳು ಸಂಭವಿಸುತ್ತಿತ್ತು. ಅಪಘಾತಕ್ಕೆ ಈ ಬಸ್ ತಂಗುದಾಣವೇ ಕಾರಣ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು. ಇತ್ತೀಚೆಗೆ ಯುವಕನೋರ್ವ ಅಪಘಾತದಿಂದ ಮೃತಪಟ್ಟಿದ್ದು, ಅಪಘಾತಕ್ಕೆ ನಾನೇ ಕಾರಣ ಎಂದು ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೂ ನಡೆದಿತ್ತು. ಈ ಹಿನ್ನೆಲೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ಸೂಚನೆ ಮೇರೆಗೆ ಬಸ್ ತಂಗುದಾಣವನ್ನು ತೆರವುಗೊಳಿಸಲಾಗಿದೆ. ಪರ್ಯಾಯವಾಗಿ ಬೇರೆಡೆ ಬಸ್ ತಂಗುದಾಣ ನಿರ್ಮಿಸಲು ನಗರಸಭೆ ನಿರ್ಧರಿಸಿದೆ.






