ಲೇಖಕ: admin

ಮಡಿಕೇರಿ ಜ.4 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜ.10 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಜನವರಿ, 12 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಜ.4 : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ” ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜ.17 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…

Read More

ಮಡಿಕೇರಿ ಜ.4 : ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮಂತ್ರಾಲಯ, ಮಂಗಳೂರು ಭಾರತ ಸರ್ಕಾರದ ಅಧೀನದಲ್ಲಿ, ಒಂದು ದಿನದ ಪಿ.ಎಂ.ವಿಶ್ವಕರ್ಮ ಯೋಜನೆಯ ಅರಿವು ಕಾರ್ಯಕ್ರಮವು ನಡೆಯಿತು. ಸೆಮಿನಾರ್ ಕಂ ಅವೆರ್‌ನೆಸ್ ಪ್ರೋಗ್ರಾಂ ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ಭಾಗವಹಿಸಿದ ಕುಶಲಕರ್ಮಿಗಳು, ಟೈಲರ್‌ಗಳು ಇವರುಗಳು ಈ ಯೋಜನೆಯಡಿಯಲ್ಲಿ ನೋಂದಾಯಿಸಿ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಂದು ಕುಶಲಕರ್ಮಿಗಳು ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು. ಮಂಗಳೂರು, ಎಂಎಸ್‍ಎಂಇ. ಡಿ.ಎಫ್.ಒ, ಜಂಟಿ ನಿರ್ದೇಶಕರಾದ ಕೆ.ದೇವರಾಜ್ ಅವರು ಈ ಯೋಜನೆಯ ಬಗ್ಗೆ ಸವಿವರವಾಗಿ ಮಾತನಾಡಿ, ಯೋಜನೆಯ ಲಾಭ ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ.ದಿನೇಶ್ ಅವರು ಈ ಯೋಜನೆಯ ಅನುಷ್ಠಾನದ ಸ್ಥಿತಿಗತಿಗಳ ಬಗ್ಗೆ ತಿಳಿಸಿದರು. ಅಧಿವೇಶನದ ಸಮಯದಲ್ಲಿ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್, ಲೀಡ್ ಬ್ಯಾಂಕ್‍ನ ದಯಾವತಿ ಅವರು ಹಣಕಾಸಿನ ಶಿಸ್ತಿನ ಬಗ್ಗೆ, ಯೋಜನೆಗೆ ಸಂಬಂಧಿಸಿದಂತೆ ಸಾಲ ಬಿಡುಗಡೆಗಾಗಿ ದಾಖಲಾತಿಗಳನ್ನು ಹೇಗೆ ಹೊಂದಾಣಿಕೆ ಮಾಡಿಕೊಳ್ಳಬೇಕು…

Read More

ಮಡಿಕೇರಿ ಜ.4 : ನಗರದ ಗಾಂಧಿ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರಪಿತ ಮಹಾತ್ಮ ‘ಗಾಂಧೀಜಿಯವರ ಸ್ಮಾರಕ ಉದ್ಯಾನವನ’ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಪರಿಶೀಲಿಸಿದರು. ಆದಷ್ಟು ಶೀಘ್ರ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವರು ನಿರ್ದೇಶನ ನೀಡಿದರು. ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ 50 ಲಕ್ಷ ರೂ. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ ಸಹ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭ ಭರವಸೆ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಕಾಮಗಾರಿ ತ್ವರಿತವಾಗಿ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಶಾಸಕರ ಅನುದಾನದಡಿ ಸಾಧ್ಯವಾದಷ್ಟು 10 ಲಕ್ಷ ರೂ. ವರೆಗೆ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು. ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಅನುದಾನ…

Read More

ಮಡಿಕೇರಿ ಜ.4 : ಸ್ವಾತಂತ್ರ್ಯದ 100 ನೇ ವರ್ಷಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಾಗಿದೆ. ಈ ದೃಷ್ಟಿಕೋನವು ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ, ಪರಿಸರ ಸುಸ್ಥಿರತೆ ಮತ್ತು ಸೇರಿದಂತೆ ಅಭಿವೃದ್ಧಿಯ ವಿವಿಧ ಅಂಶಗಳನ್ನು ಒಳಗೊಂಡಿದೆ ಉತ್ತಮ ಆಡಳಿತ. ಈ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಭಾರತದ ಯುವಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರು ಭಾರತದಲ್ಲಿನ ಅತಿದೊಡ್ಡ ಜನಸಂಖ್ಯಾ ಗುಂಪು, ಮತ್ತು ಅವರು ಸಾಮಥ್ರ್ಯ ಮತ್ತು ಶಕ್ತಿಯಿಂದ ತುಂಬಿದ್ದಾರೆ. ವಿಕ್ಷಿತ್ ಭಾರತ್@ 2047 ಅಭಿಯಾನಕ್ಕಾಗಿ ಯುವಕರಿಂದ ಆಲೋಚನೆಗಳನ್ನು ಒಳಗೊಂಡಂತೆ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಯುವಕರನ್ನು ತೊಡಗಿಸಿಕೊಳ್ಳಲು ಸರ್ಕಾರವು ಹಲವಾರು ಉಪಕ್ರಮಗಳನ್ನು ಪ್ರಾರಂಭಿಸಿದೆ. ನಮ್ಮ ಭಾರತ ವೀಕ್ಷಿತ್ ಭಾರತ್@2047 ಕುರಿತ ಭಾಷಣ ಸ್ಪರ್ಧೆಯನ್ನು ಜಿಲ್ಲೆ, ರಾಜ್ಯ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ನೆಹರು ಯುವ ಕೇಂದ್ರಕ್ಕೆ ನೀಡಿದೆ. ಭಾಷಣ ಸ್ಪರ್ಧೆಯು ಹಿಂದಿ, ಇಂಗ್ಲೀಷ್, ಕನ್ನಡ ಭಾಷೆಗಳಲ್ಲಿ ಇರಲಿದ್ದು,ಭಾಷಣದ ಅವಧಿ 7 ನಿಮಿಷ ರಾಜ್ಯ ಮಟ್ಟದ…

Read More

ಮಡಿಕೇರಿ ಜ.4 : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲೂ ಸ್ಪರ್ಧಿಸಲಿದ್ದು, ಆಸಕ್ತ ಸ್ಪರ್ಧಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವಮೂರ್ತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಶನವು ಜ.6 ಮತ್ತು 7 ರಂದು ಪಕ್ಷದ ಬೆಂಗಳೂರಿನ ಕಚೇರಿಯಲ್ಲಿ ನಡೆಯಲಿದೆ. ಈ ವಿಚಾರದ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿ ಈಗಾಗಲೇ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದೆಂದು ತಿಳಿಸಿದರು. ಆಕಾಂಕ್ಷಿಗಳು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿರಬಾರದು. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರಬಾರದು. ಪಕ್ಷದ ಸಿದ್ದಾಂತಗಳಿಗೆ ಬದ್ದರಾಗಿರಬೇಕು. ಜನಪರ ಕಾಳಜಿ, ಸಂವಿಧಾನದಲ್ಲಿ ನಂಬಿಕೆ, ರಾಜ್ಯದ ಅಭಿವೃದ್ಧಿಯ ಚಿಂತನೆ ಇರುವವರು ಆಕಾಂಕ್ಷಿಗಳ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ 9611720802 ಸಂಪರ್ಕಿಸಬಹುದಾಗಿದೆ ಎಂದ ಅವರು, ಸಂದರ್ಶನದ ನಂತರ ರಾಜ್ಯ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯಾರ್ಥಿಗಳೆಂದು ಘೋಷಿಸುತ್ತದೆ ಎಂದರು. ಕೆಆರ್‍ಎಸ್ ಪಕ್ಷವು ಪಕ್ಷದ ಆರಂಭದಿಂದಲೂ…

Read More

ಮಡಿಕೇರಿ ಜ.4 : ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಗ್ರಾಮ ಸಭೆಯು ಜ.6 ರಂದು ಗ್ರಾ.ಪಂ ಅಧ್ಯಕ್ಷರಾದ ಮಂಜುಳಾ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ವಾಲ್ನೂರು ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ನೋಡಲ್ ಅಧಿಕಾರಿಯಾಗಿ ಚೆಟ್ಟಳ್ಳಿ ಪಶು ವೈದ್ಯಾಧಿಕಾರಿ ಡಾ.ಸಂಜೀವ್ ಕುಮಾರ್ ಆರ್.ಸಿಂದೆ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಭಾಗವಹಿಸಲಿದ್ದು, ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಗ್ರಾಮಸ್ಥರು, ಮಹಿಳೆಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದೆ.

Read More

ಮಡಿಕೇರಿ ಜ.4 :  ನಾಪೋಕ್ಲು  ಸಮೀಪದ ಬಲಮುರಿ ಸೇತುವೆ ಬಳಿಯ ಹೊಳೆಮುಡಿ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊದ್ದೂರು ಗ್ರಾಮದ ಮುಜೀಬ್ ರೆಹಮಾನ್(28), ಬಲಮುರಿ ನಿವಾಸಿಗಳಾದ ಅಮೀರ್ ಕೆ.ಎಂ(29) ಹಾಗೂ ಇರ್ಫಾನ್ ಎಸ್.ಎ.(29) ಬಂಧಿತ ಆರೋಪಿಗಳು. ಇವರ ಬಳಿಯಲ್ಲಿದ್ದ 275 ಗ್ರಾಂ ಗಾಂಜಾ, 3 ಮೊಬೈಲ್, ಒಂದು ಆಟೋ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್‍ಪಿ ಆರ್.ವಿ. ಗಂಗಾಧರಪ್ಪ, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಾಪೋಕ್ಲು ಎಸ್‍ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

Read More

ಪುತ್ತೂರು ಜ.4 : ಮೂರು ಹೊತ್ತು ಊಟ, ತಲೆಯ ಮೇಲೊಂದು ಸೂರು, ಅಗತ್ಯ ಬಟ್ಟೆ ಬರೆ ಇವು ಮಾನವನ ಜೀವನದ ಮೂಲ ಆವಶ್ಯಕತೆಗಳು. ಇದನ್ನೇ ಹೊಂದಿಸಿಕೊಳ್ಳುವುದಕ್ಕೆ ಅಸಾಧ್ಯವಾದ ಅನೇಕ ಕುಟುಂಬಗಳು ನಮ್ಮ ಸುತ್ತಮುತ್ತಲಿವೆ. ಅವರನ್ನು ಗುರುತಿಸಿ ಅವಶ್ಯಕತೆಗನುಗುಣವಾಗಿ ಸಹಾಯ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಗ್ರಾಮ ವಿಕಾಸ ಯೋಜನೆಯ ಆಶ್ರಯದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು, ಕುಳ ಗ್ರಾಮ ಪಂಚಾಯತ್ ಹಾಗೂ ಇತರ ದಾನಿಗಳ ಸಹಕಾರದೊಂದಿಗೆ ಕುಳ ಗ್ರಾಮದ ಸೆಕೆಹಿತ್ಲುವಿನಲ್ಲಿ ನಿರ್ಮಿಸಿದ ಮನೆಯನ್ನು ಫಲಾನುಭವಿಗಳಾದ ಗೀತಾ ಈಶ್ವರ ನಲಿಕೆ ಅವರಿಗೆ ಹಸ್ತಾಂತರಿಸುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ನಾವು ಪಡೆದ ಒಂದಶವನ್ನಾದರೂ ಸಮಾಜಕ್ಕೆ ನೀಡುವ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು. ಪುತ್ತೂರಿನ ಮಾಸ್ಟರ್ ಪ್ಲಾನರಿಯ ಆಕಾಶ್…

Read More

ಮಡಿಕೇರಿ ಜ.4 :  ಬೆಂಗಳೂರು ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಭಾಗದಿಂದ ಮುಖ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಎಸ್.ಪೊನ್ನಣ್ಣ  ಅವರನ್ನು  ಬೆಂಗಳೂರು ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಭಾಗದಿಂದ ಸನ್ಮಾನಿಸಲಾಯಿತು.

Read More