ಮಡಿಕೇರಿ ಮಾ.5 NEWS DESK : ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಗಿದಿದ್ದು, ಮೊದಲ ಹಂತದಲ್ಲಿ ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಎರಡನೇ ಹಂತದಲ್ಲಿ ಬಿಎ ಪದವಿಯ ಫಲಿತಾಂಶವನ್ನು ಸಹ ಅತೀ ಶೀಘ್ರವಾಗಿ ಪ್ರಕಟಿಸಲಾಗುತ್ತದೆ. ಕೊಡಗು ವಿಶ್ವವಿದ್ಯಾಲಯದ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಜ.25 ರಿಂದ ಆರಂಭಗೊಂಡು ಬಿಎ ಪದವಿಯ ಕೊನೆಯ ಪರೀಕ್ಷೆಯು ಮಾ.4 ರಂದು ಪೂರ್ಣಗೊಂಡಿದೆ. ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಎಫ್‌ಎಂಕೆಎಂಸಿ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಬಹುಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳಿಗೆ…
ಲೇಖಕ: admin
ಪುತ್ತೂರು ಮಾ.5 NEWS DESK : ಕಾರ್ಪೋರೇಟ್ ಸಂಸ್ಥೆಗಳು ಬಯಸುವ ತಂತ್ರಜ್ಞಾನಗಳು ಪಠ್ಯಕ್ರಮದ ಮೂಲಕ ತಮ್ಮನ್ನು ತಲಪಲು ಒಂದೆರಡು ವರ್ಷಗಳು ಬೇಕಾಗುತ್ತದೆ. ಆ ಸಮಯದಲ್ಲಿ ಮತ್ತಷ್ಟು ಬೆಳವಣಿಗೆಗಳು ನಡೆದು ಹೋಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ಪೂರಕ ವಿಷಯಗಳನ್ನು ಕಲಿಯುವುದು ಅತೀ ಅಗತ್ಯ ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಆಂತರ್ಯ-2024ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಇಂಟರ್ನೆಟ್, ವೃತ್ತಪತ್ರಿಕೆಗಳು, ಆನ್ ಲೈನ್ ಕೋರ್ಸುಗಳು, ವಿಚಾರಸಂಕಿರಣಗಳು, ಕಾರ್ಯಾಗಾರಗಳು ಮುಂತಾದವುಗಳಿಂದ ನಾವು ಹೊಸ ಹೊಸ ವಿಷಯಗಳನ್ನು ಕಲಿತುಕೊಳ್ಳಬಹುದು. ಕಲಿಯುವುದನ್ನು ಸರಿಯಾಗಿ ಕಲಿತು ಪರಿಣತರಾದರೆ ಅದು ಜೀವನದ ಔನ್ನತ್ಯಕ್ಕೆ ದಾರಿಯಾಗುತ್ತದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ ವಿದ್ಯಾರ್ಥಿಗಳ…
ಪುತ್ತೂರು ಮಾ.5 NEWS DESK : ನಮ್ಮ ಪ್ರತಿಯೊಂದು ದೈನಂದಿನ ವ್ಯವಹಾರಗಳಲ್ಲಿ ನಾವು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಬಳಕೆ ಮಾಡುತ್ತೇವೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ನಾವು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗ ಹಾಗೂ ಐಎಸ್‌ಟಿಇ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ ವಿಕಸಿತ ಭಾರತಕ್ಕಾಗಿ ಸ್ಥಳೀಯ ತಂತ್ರಜ್ಞಾನಗಳು ಎನ್ನುವ ವಿಷಯಾಧಾರಿತ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವಿದ್ಯಾರ್ಥಿಗಳು ಸ್ಥಳೀಯ ಸಾರ್ವಜನಿಕರ, ರೈತರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಅದಕ್ಕೆ ಪೂರಕವಾದ ಪರಿಹಾರಗಳನ್ನು ಕಂಡುಹುಡುಕುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ತನ್ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಸಮಾರAಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಪಠ್ಯಕ್ರಮಕ್ಕೆ ಪೂರಕವಾಗಿ ಅನೇಕ ವಿಷಯಗಳು ಜಾಲತಾಣಗಳಲ್ಲಿ…
ಮಡಿಕೇರಿ ಮಾ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ 2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ “ಹೆಣ್ಣುಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಾಗಾರ” ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದೇರ್ಶಕ ನಟರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಸ್ತುತ ದಿನಗಳಲ್ಲಿ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಈ ಕುರಿತು ಮಕ್ಕಳಿಗೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಆದ್ದರಿಂದ ಮಕ್ಕಳು ಹೆಚ್ಚು ಓದಿನ ಕಡೆ ಆಸಕ್ತಿ ವಹಿಸಬೇಕು ಮತ್ತು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಒಂದು ಮಗುವು ತಾಯಿಯ ಗರ್ಭದಲ್ಲಿರುವಾಗಲೇ ಮಗು ಹಕ್ಕುಗಳನ್ನು ಪಡೆಯಲು ಅರ್ಹವಾಗಿರುತ್ತದೆ. ಲಿಂಗ ಪತ್ತೆ ಕಾನೂನು ಪ್ರಕಾರ ಅಪರಾಧ. ಮಗುವಿಗೆ ಹೃದಯ ಬಡಿತ ಶುರುವಾದ ಸಮಯದಿಂದಲೇ…
ಬೆಂಗಳೂರು, ಮಾ.5 : ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿಯಾಗಿ 140 ಕೋಟಿ ರೂ.ಗಳ ಜೊತೆಗೆ 70 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು.ಇದು ಸರ್ಕಾರದಿಂದ ನೀಡುವ ಅನುದಾನವಾಗಿದೆ ಎಂದರು. ಕರ್ನಾಟಕದಲ್ಲಿ ಈ ವರ್ಷ ಬರಗಾಲವಿದ್ದು, 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದು, 194 ತೀವ್ರ ಬರಗಾಲ ಪೀಡಿತವಾಗಿವೆ. ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು. ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಿದೆ. ಈವರೆಗೆ 646 ಸಭೆಗಳನ್ನು…
ಮಡಿಕೇರಿ ಮಾ.5 NEWS DESK : ಪೊನ್ನಂಪೇಟೆ ತಾಲ್ಲೂಕಿನ ತಾವಳಗೇರಿ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಉಪಟಳ ತೀವ್ರಗೊಂಡಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ತಡಿಯಂಗಡ ಕಂಬ ಕರುಂಬಯ್ಯ ಎಂಬುವವರಿಗೆ ಸೇರಿದ ಗಬ್ಬದ ಹಸು ಹುಲಿ ದಾಳಿಗೆ ಬಲಿಯಾಗಿದೆ. ಮೇಯಲು ಬಿಟ್ಟಿದ್ದ ಹಸು ಸೋಮವಾರ ರಾತ್ರಿಯೂ ಮನೆಗೆ ಬಂದಿರಲಿಲ್ಲ. ಇಂದು ಬೆಳಗ್ಗೆ ಹಸುವಿನ ಮೃತದೇಹ ಪತ್ತೆಯಾಗಿದ್ದು, ಹುಲಿ ದಾಳಿಯಾಗಿರುವುದು ಖಚಿತವಾಗಿದೆ. ಪೊನ್ನಂಪೇಟೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹುಲಿ ಉಪಟಳವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಮಾ.5 NEWS DESK : “ಜಾಗೃತಿ ಕಿರಣ” ಕನ್ನಡ ಪಾಕ್ಷಿಕ ಪತ್ರಿಕೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ಬಿ.ಎಸ್, ಉಪಾಧ್ಯಕ್ಷೆ ದಿವ್ಯ ರೇಖಾ ಬಿ.ಎಸ್ ಹಾಗೂ ಅಭಿವೃದ್ಧಿ ಅಧಿಕಾರಿ ಕೆ.ಎಂ.ಚಂದ್ರಮೌಳಿ ಅವರುಗಳಿಗೆ ರಾಜ್ಯ ಮಟ್ಟದ “ಗ್ರಾಮ ಮಿತ್ರ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ನಡೆದ ಪತ್ರಿಕೆಯ ದಶಮಾನೋತ್ಸವ ಸಮಾರಂಭದಲ್ಲಿ ಸ್ಥಳೀಯ ಶಾಸಕ ಭರತ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯದ ವಿವಿಧ ಗ್ರಾ.ಪಂ ಮಟ್ಟದಲ್ಲಿ ದಕ್ಷತೆ ಮತ್ತು ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವವರನ್ನು ಗುರುತಿಸಿ “ಗ್ರಾಮ ಮಿತ್ರ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು “ಜಾಗೃತಿ ಕಿರಣ” ಪತ್ರಿಕೆಯ ಪ್ರಧಾನ ಸಂಪಾದಕ ಯಾಳ್ಪಿ ವಲಿಭಾಷ ಇದೇ ಸಂದರ್ಭ ತಿಳಿಸಿದರು.
ವಿರಾಜಪೇಟೆ ಮಾ.5 NEWS DESK : ವಿರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯ ನಿಯಮಿತ ಸಂಸ್ಥೆಯ ಶತಮಾನೋತ್ಸವ ಸಮಾರಂಭ ಮಾ.10 ರಂದು ವಿರಾಜಪೇಟೆಯಲ್ಲಿ ನಡೆಯಲಿದೆ ಎಂದು ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯ ನಿಯಮಿತದ ಅಧ್ಯಕ್ಷ ಮಾಣಿಯಪಂಡ ರೋಹಿತ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ 1ಒ.30 ಗಂಟೆಗೆ ವಿರಾಜಪೇಟೆ ಕೊಡವ ಸಮಾಜದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. 1918ರಲ್ಲಿ ಕೇವಲ 50 ಶಿಕ್ಷಕ ಸದಸ್ಯರನ್ನು ಒಳಗೊಂಡು ಸ್ಥಾಪನೆಯಾದ ಸಂಸ್ಥೆ 1920ರಲ್ಲಿ ಸಹಕಾರ ಕಾನೂನು ರೀತಿಯಲ್ಲಿ ನೊಂದಾವಣಿ ಮಾಡಲಾಯಿತು. ನಷ್ಟದ ಹಾದಿಯಲ್ಲಿದ್ದ ಸಂಘವನ್ನು ವಿರಾಜಪೇಟೆಗೆ ಸ್ಥಳಾಂತರಿಸಿ 1948ರಲ್ಲಿ ವಿರಾಜಪೇಟೆಯ ಹೃದಯ ಭಾಗದಲ್ಲಿ 39 ಸೆಂಟ್ ಜಾಗ ಖರೀದಿಸಿ ಸಂಘವನ್ನು ಪುನಶ್ಚೇತನ ಗೊಳಿಸಲಾಯಿತು. ಇದೀಗ 1770 ಸದಸ್ಯ ಬಲವನ್ನು ಹೊಂದಿದ್ದು ಶಿಕ್ಷಕರು ಮಾತ್ರ ಸದಸ್ಯತ್ವ ಹೊಂದುವ ಅವಕಾಶ ಇದೆ. ಪ್ರಸ್ತತ ಸಂಘವು ಒಟ್ಟು ರೂ 4,37,815.00 ಸದಸ್ಯರ ಪಾಲು ಬಂಡಲಾಳ ಮತ್ತು ಸರ್ಕಾರದ ಪಾಲು…
ಚೆಟ್ಟಳ್ಳಿ ಮಾ.5 NEWS DESK : ಮಹಾಶಿವರಾತ್ರಿಯ ಅಂಗವಾಗಿ ಮಾ.8 ರಂದು ಚೆಟ್ಟಳ್ಳಿಯ ಈರಳೆವಳಮುಡಿ ಗ್ರಾಮದಲ್ಲಿರುವ ಪಂಚಮುಖಿ ವಾಯುಪುತ್ರ ಮೂರ್ತಿಗೆ, ಸಹಕಾರ ಸಂಘದ ಮುಖ್ಯ ಕಚೇರಿಯಲ್ಲಿರುವ ಶ್ರೀ ವಿನಾಯಕ, ಪಶುಪತಿನಾಥ, ಕಾವೇರಿ ಮಾತೆಗೆ, ಶ್ರೀ ಕೃಷ್ಣ, ಗೋಮಾತೆ, ವಿಘ್ನೇಶ್ವರ ವೀರಾಂಜನೇಯ, ಮಹಾವಿಷ್ಣು ಮೂರ್ತಿಗೆ ನಾಲ್ಕನೇ ವರ್ಷದ ವಿಶೇಷ ಪೂಜೆ ನಡೆಯಲಿದೆ ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಶ್ರೀ ವೀರಾಂಜನೇಯ ಯುವಕ ಸಂಘ, ಶ್ರೀ ಗೌರಿ ಗಣೇಶೋತ್ಸವ ಸಮಿತಿ, ಕೂಡ್ಲೂರು ಶ್ರೀ ವಿನಾಯಕ ದೇವಾಲಯ ಸಮಿತಿ ಸಂಯುಕ್ತ ಆಶ್ರಯದಲ್ಲಿ ಮಾ.8 ರಂದು ಸಂಜೆ 5 ಗಂಟೆಗೆ ಮಹಾಂಗಳಾರತಿ ನಡೆಯಲಿದೆ. ನಂತರ ಛದ್ಮವೇಷದಾರಿ ಮಕ್ಕಳೊಂದಿಗೆ ಸಹಕಾರ ಸಂಘದ ಮುಖ್ಯ ಕಚೇರಿಯಿಂದ ಶ್ರೀ ನರೇಂದ್ರಮೋದಿ ಸಹಕಾರ ಭವನದ ವರೆಗೆ ಮೆರವಣಿಗೆ ನಡೆಯಲಿದೆ. ಜಾಗರಣೆ ಪ್ರಯುಕ್ತ ಸಂಜೆ 7 ಗಂಟೆಗೆ ಗೋಣಿಕೊಪ್ಪಲಿನ ಖ್ಯಾತ ಯುವಗಾಯಕ ಸಿ.ವಿ.ಅನ್ವಿತ್ ಕುಮಾರ್ ಹಾಗೂ ದೀಪಿಕಾ ಆಚಾರ್ಯ ಅವರಿಂದ …
ಕಡಂಗ ಮಾ.5 NEWS DESK : ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಚೆರುಪುಝ ಪುಳಿಂಙೋಂ ಔಲಿಯಾಕಳ ಹೆಸರಿನಲ್ಲಿ ವರ್ಷಂಪ್ರತಿ ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ ನಲ್ಲಿ ನಡೆಸಿಕೊಂಡು ಬರುವ ಉರೂಸ್ ಸಮಾರಂಭವು ಈ ಬಾರಿ ಏ.20 ಮತ್ತು 21 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಯಕೋಲ್ ಮಸ್ಜಿದುಲ್ ರಹ್ಮಾನ್ ಮತ್ತು ರೌಳತುಲ್ ಉಲೂಂ ಆಡಳಿತ ಮಂಡಳಿ ತಿಳಿಸಿದೆ. ವರದಿ : ನೌಫಲ್ ಕಡಂಗ






