ಲೇಖಕ: admin

ಮಡಿಕೇರಿ ಮಾ.5 NEWS DESK :  ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕೆಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್.ಆರ್.ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ನೇಮಕಾತಿಗೊಂಡು ಕೊಡಗು ವಿಶ್ವ ವಿದ್ಯಾನಿಲಯ ಚಿಕ್ಕಅಳುವಾರ ಹಾಗೂ ಅದರ ಘಟಕ ಫೀಲ್ಡ್ ಮಾರ್ಷಲ್  ಕಾರ್ಯಪ್ಪ  ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳುಗಳಿಂದ ವೇತನವಾಗಿರುವುದಿಲ್ಲ. ಮಡಿಕೇರಿಯಲ್ಲಿ ಕಾಲೇಜು ಉಪನ್ಯಾಸಕರು ಕಳೆದ ಐದಾರು ದಿನಗಳಿಂದ ಪ್ರತಿಭಟನಾ ನಿರತರಾಗಿದ್ದು, ಸಾರ್ವಜನಿಕರೂ ವಿವಿಯ ಬಗ್ಗೆ ಹತಾಶರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ವಿಶ್ವವಿದ್ಯಾನಿಲಯವು ತಕ್ಷಣವೇ ವಿವಿಯ ಆರ್ಥಿಕ ಶ್ವೇತಪತ್ರವನ್ನು ಸಾರ್ವಜನಿಕವಾಗಿ ಹೊರಡಿಸಬೇಕು. ವಿವಿಯ ಆರ್ಥಿಕ ಪುನರ್ಶ್ಚೇತನದ ದೃಷ್ಟಿಯಿಂದ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಡಾ.ಎಸ್.ಆರ್.ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಮಾ.5 NEWS DESK  : ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವರ ವಾರ್ಷಿಕ ಉತ್ಸವ ಪ್ರಯುಕ್ತ  ನೆರ್ಪು ಪ್ರಯುಕ್ತ “ಎತ್ತು ಪೊರಾಟ” ಶ್ರದ್ಧಾಭಕ್ತಿಯಿಂದ ನಡೆಯಿತು. ಕುಂದಾ ಮುಗುಟಗೇರಿ ಸಮೀಪದಲ್ಲಿರುವ ನಾಡ್ ದೇವಾಲಯ ಎಂದು ಖ್ಯಾತಿ ಪಡೆದಿರುವ ಶ್ರೀ ಈಶ್ವರ ದೇವಸ್ಥಾನ ಸಮೀಪದ ಅಂಬಲದಲ್ಲಿ ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಅರ್ವತೋಕ್ಲು ಹಾಗೂ ಈಚೂರು ಈ ಆರು ಊರುಗಳ ತಕ್ಕಮುಖ್ಯಸ್ಥರು ಸೇರಿದಂತೆ ಶ್ರೀ ಈಶ್ವರ ದೇವಸ್ಥಾನದ ದೇವತಕ್ಕರು, ಭಂಡಾರ ತಕ್ಕರು ಆಯಾಯ ಊರುಗಳಿಂದ ತರಲಾಗಿದ್ದ ದವಸಧಾನ್ಯಗಳನ್ನು ಎತ್ತು ಪೊರಾಟದ ಮೂಲಕ ತರಲಾಯಿತು. ದೇವಸ್ಥಾನಕ್ಕೆ ಎತ್ತು ಪೊರಾಟ ಬರುತ್ತಿದ್ದಂತೆ ಚೆಂಡೆ ಮದ್ದಳೆಯೊಂದಿಗೆ ಬರಮಾಡಿಕೊಂಡ ದೇವಸ್ಥಾನದ ಮುಖ್ಯ ಅರ್ಚಕರು ಎತ್ತುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆರು ಊರುಗಳಿಂದ ತರಲಾಗಿದ್ದ ದವಸಧಾನ್ಯಗಳನ್ನು ದೇವಸ್ಥಾನಕ್ಕೆ ಅರ್ಪಿಸಲಾಯಿತು.  ನಂತರ ನೆರ್ಪು ಪ್ರಯುಕ್ತ ದೇವರ ಉತ್ಸವ ಮೂರ್ತಿಯನ್ನು ಹೊತ್ತು ವಿವಿಧ ಪೂಜಾವಿಧಿ ವಿಧಾನಗಳೊಂದಿಗೆ ಚೆಂಡೆ ವಾದ್ಯಕ್ಕೆ ಹೆಜ್ಜೆ ಹಾಕಲಾಯಿತು. ಅಲಂಕಾರ ಪೂಜೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು…

Read More

ವಿರಾಜಪೇಟೆ ಮಾ.5  NEWS DESK : ಕೋಟೆಕೊಪ್ಪ ಗ್ರಾಮದ ಶ್ರೀ ಬೈತೂರೇಶ್ವರ ದೇವಾಲಯದ ಬನದಲ್ಲಿ ವಾರ್ಷಿಕ ಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ಬನದ ಬೈತೂರೇಶ್ವರ ದೇವರಿಗೆ ಮಹಾಪೂಜೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಹಬ್ಬ ಸಂಪನ್ನಗೊಂಡಿತು. ಬಳಿಕ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು, ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.4 NEWS DESK  : 2023-24ನೇ ಸಾಲಿನ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‍ಚೇರ್ ಗಳನ್ನು ನೀಡುವ ಸಲುವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೈಹಿಕ ವಿಕಲಚೇತನರಾಗಿರುವ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮಥ್ರ್ಯ ಹೊಂದಿರದ ಶೇ.75 ಕ್ಕಿಂತ ಹೆಚ್ಚಿನ ದೈಹಿಕ ಅಂಗವೈಕಲ್ಯತೆಯನ್ನು ಹೊಂದಿರುವ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್‍ಚೇರ್‍ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.7 ಕೊನೆಯ ದಿನವಾಗಿದೆ. ಈ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ. 08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ  ತಿಳಿಸಿದ್ದಾರೆ.

Read More

ಬೆಂಗಳೂರು ಮಾ.4 NEWS DESK : ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಧಾನಸೌಧ ಪೊಲೀಸ್ ಠಾಣೆಯ ಪೊಲೀಸರು ಇಂದು ಸಂಜೆ ಬಂಧಿಸಿದ್ದಾರೆ. ದೆಹಲಿ ಮೂಲದ ಇಲ್ತಿಯಾಜ್, ಆರ್‌.ಟಿ. ನಗರದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಬಂಧಿತ ಆರೋಪಿಗಳಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇತ್ತೀಚಿಗೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರು ಗೆಲುವು ಸಾಧಿಸಿದ ಸಂದರ್ಭ ಪಾಕಿಸ್ತಾನದ ಪರ ಘೋಷಣೆ ಕೇಳಿ ಬಂದಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.

Read More

ಮಡಿಕೇರಿ ಮಾ.4 NEWS DESK : ಬಿಜೆಪಿ ಮಡಿಕೇರಿ ನಗರ ಮಂಡಲದ ವತಿಯಿಂದ ಬೂತ್ ಸಂಖ್ಯೆ 203 (ಮುಳಿಯ ಲೇ ಔಟ್ )ಮತ್ತು 204 ರಲ್ಲಿ ಗ್ರಾಮ ಚಲೋ ಕಾರ್ಯಕ್ರಮ ನಡೆಯಿತು. ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಹಾಗೂ ಕೊಡಗು ಮೈಸೂರು ಕ್ಷೇತ್ರದ  ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಸಾಧನೆಯ ಕೈಪಿಡಿಯನ್ನು ಮತದಾರರ ಮನೆ ಮನೆಗೆ ತಲುಪಿಸಲಾಹಿತು. ಮಡಿಕೇರಿ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ ಅವರ ನೇತೃತ್ವದಲ್ಲಿ ಪ್ರಚಾರ ಅಭಿಯಾನ ನಡೆಯಿತು. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನಗರಸಭೆಯ ಬಿಜೆಪಿ ಸದಸ್ಯರುಗಳು ಹಾಜರಿದ್ದರು.

Read More

ಮಡಿಕೇರಿ ಮಾ.4 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳನ್ನು ಸಮಾನ ರೀತಿಯಲ್ಲಿ ಪರಿಗಣಿಸುತ್ತಿದ್ದು, ಪಕ್ಷಕ್ಕಾಗಿ ದುಡಿದವರಿಗೆ ಸೂಕ್ತ ಸ್ಥಾನಮಾನ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಜೆ.ಎಲ್.ಜನಾರ್ಧನ್ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ, ಕೆಲವರು ವೈಯುಕ್ತಿಕ ಕಾರಣಗಳಿಗಾಗಿ ಅಸಮಾಧಾನಿತರ ಸಭೆ ಎಂದು ಪ್ರತಿಬಿಂಬಿಸಿಕೊಂಡು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡಿದ್ದಾರೆ ಹೊರತು ಮಡಿಕೇರಿ ಶಾಸಕರ ಬಗ್ಗೆ ಯಾರಿಗೂ ಅವಿಶ್ವಾಸವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಘಟಕದ ಪದಾಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಲಾಗಿದೆ. ಒಬ್ಬೊಬ್ಬರು ಎರಡೆರಡು ಸ್ಥಾನ ಹೊಂದಿರುವ ಉದಾಹರಣೆಯೂ ಇದೆ. ಉತ್ಸಾಹಿ ಶಾಸಕರಾಗಿರುವ ಡಾ.ಮಂತರ್ ಗೌಡ ಅವರು ಒಂದು ಜಾತಿ, ಜನಾಂಗಕ್ಕೆ ಸೀಮಿತವಾಗದೆ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಅತ್ಯಂತ ವಿಶ್ವಾಸದಿಂದ ನಡೆಸಿಕೊಳ್ಳುತ್ತಿದ್ದಾರೆ. ಅಲ್ಲದೆ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅಭಿವೃದ್ಧಿಗೆ…

Read More

ಮಡಿಕೇರಿ ಮಾ.4 NEWS DESK : ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಪ್ರು ರವೀಂದ್ರ ಕರೆ ನೀಡಿದ್ದಾರೆ. ಮಡಿಕೇರಿಯ ಬಿಜೆಪಿ ಕಚೇರಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಸಮರ್ಥ ಆಡಳಿತವನ್ನು ನೀಡಿದೆ. ಇನ್ನು ಮುಂದೆಯೂ ದೇಶದ ಅಭ್ಯುದಯಕ್ಕಾಗಿ ಮೋದಿ ಅವರ ನಾಯಕತ್ವದ ಅಗತ್ಯವಿದೆ. ರಾಷ್ಟçದ ಹಿತಕ್ಕಾಗಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಪಣವನ್ನು ನಾವೆಲ್ಲರೂ ತೊಡಬೇಕು. ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗೆಲುವಿಗಾಗಿ ಅವಿರತ ಶ್ರಮ ವಹಿಸಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಕೊಡಗು ಮತ್ತು ಮಂಗಳೂರು…

Read More

ವಿರಾಜಪೇಟೆ ಮಾ.4 NEWS DESK : ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಯೋಜನೆಯಲ್ಲಿ ನಡೆಸಲಾದ 5, 6 ಮತ್ತು 7ನೇ ತರಗತಿ ಜೂನಿಯರ್ ವಿಭಾಗದ ಆನ್ಲೈನ್ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲೂಕು ಮಟ್ಟದಲ್ಲಿ ವಿ.ಬಾಡಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜೆ.ಆರ್. ಸೂರ್ಯ ಪ್ರಥಮ ಸ್ಥಾನ ಪಡೆದು ರೂ 3000 ನಗದು ಬಹುಮಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾನೆ. ಡಯಟ್ ಕೂಡಿಗೆಯಲ್ಲಿ ಮಾ.7 ರಂದು ನಡೆಯುವ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಈ ವಿದ್ಯಾರ್ಥಿ ಸೋಮವಾರಪೇಟೆ ಮತ್ತು ಮಡಿಕೇರಿ ತಾಲೂಕಿನಿಂದ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಲಿದ್ದಾನೆ.

Read More

ಮಡಿಕೇರಿ ಮಾ.4 NEWS DESK : ಕೊಡಗು ಜಿಲ್ಲೆಯಲ್ಲಿ ನಡೆದ ಪಲ್ಸ್ ಪೋಲಿಯೋ ಹನಿ ಇದುವರೆಗೆ 37,747 ಮಕ್ಕಳಿಗೆ ಲಸಿಕೆಯನ್ನು ಕಾರ್ಯಕ್ರಮದಲ್ಲಿ ನೀಡಲಾಗಿದ್ದು, ಒಟ್ಟಾರೆ ಶೇ.103.15 ಪ್ರಗತಿ ಸಾಧಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 33,332 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 103.32 ರಷ್ಟು, ನಗರ ಪ್ರದೇಶದಲ್ಲಿ ಒಟ್ಟು 4415 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.107.87ರಷ್ಟು ಪ್ರಗತಿ ಸಾಧಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 10,503 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.104.83 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 8016 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 106.14 ರಷ್ಟು ಹಾಗೂ ನಗರ ಪ್ರದೇಶದಲ್ಲಿ 2487 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.100 ರಷ್ಟು ಪ್ರಗತಿ ಸಾಧಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು 11,978 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ 104.10 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 11587 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 103.32 ರಷ್ಟು ನಗರ ಪ್ರದೇಶದಲ್ಲಿ 391 ಮಕ್ಕಳಿಗೆ ಲಸಿಕೆಯನ್ನು…

Read More