ಮಡಿಕೇರಿ ಮಾ.3 NEWS DESK : ಕಾಂಗ್ರೆಸ್ ಪಕ್ಷ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಎಂದಿಗೂ ಕಡೆಗಣಿಸಿಲ್ಲ, ಆರಂಭದ ಹಂತದಲ್ಲಿ ಶಾಸಕರುಗಳಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ದೊರೆತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೂ ಸೂಕ್ತ ಸ್ಥಾನ ಸಿಗಲಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಬಜೆಗುಂಡಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರ ಸರ್ವ ಕಾರ್ಯಕರ್ತರಿಗೂ ಸಮಾನ ಗೌರವ ಮತ್ತು ಸ್ಥಾನಮಾನ ನೀಡಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ, ಯಾರೂ ಊಹಾಪೋಹಗಳಿಗೆ ಕಿವಿಗೊಡಬಾರದು. ಸಧ್ಯದಲ್ಲೇ ಲೋಕಸಭಾ ಚುನಾವಣೆ ಬರಲಿದ್ದು, ಪ್ರತಿಯೊಬ್ಬ ಕಾರ್ಯಕರ್ತ ಮೈಸೂರು- ಕೊಡಗು ಕ್ಷೇತ್ರವನ್ನು ಗೆಲ್ಲುವ ಪಣ ತೊಡಬೇಕು ಎಂದು ಕರೆ ನೀಡಿದ್ದಾರೆ. ನಿಗಮ ಮಂಡಳಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಎಲ್ಲಾ ಸ್ಥಾನಗಳಿಗೆ ಪದಾಧಿಕಾರಿಗಳ ನೇಮಕವಾಗಿಲ್ಲ. ಸುಮಾರು 70 ಸ್ಥಾನಗಳಿಗೆ ಮಾತ್ರ ಆಯ್ಕೆಯಾಗಿದ್ದು, ಇನ್ನೂ 40 ಸ್ಥಾನಗಳಿಗೆ ನೇಮಕವಾಗಬೇಕಾಗಿದೆ. ಮುಂದೆ ನಡೆಯುವ ಆಯ್ಕೆ ಪ್ರಕ್ರಿಯೆ ಸಂದರ್ಭ ಕೊಡಗಿಗೆ ಪ್ರಾತಿನಿಧ್ಯ ದೊರೆಯಲಿದೆ. ಅದರಲ್ಲೂ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ ಸಿಗುವುದು ಖಚಿತವಾಗಿದೆ…
ಲೇಖಕ: admin
ಮಡಿಕೇರಿ ಮಾ.3 NEWS DESK : ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ಅರಣ್ಯ ಭಾಗದಲ್ಲಿ ಅತಿಕ್ರಮಣ ಪ್ರವೇಶವಾಗಿದೆ ಎಂದು ಆರೋಪಿಸಿ ಕುಡಿಯುವ ನೀರು ಸರಬರಾಜಿನ ಸಾಮಾಗ್ರಿಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡ ಪ್ರಕರಣವನ್ನು ಇತ್ಯರ್ಥ ಪಡಿಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಿಕೊಟ್ಟ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕ್ರಮ ಸ್ವಾಗತಾರ್ಹವಾಗಿದ್ದು, ಗ್ರಾಮಸ್ಥರ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕಾಂಗ್ರೆಸ್ ಸೇವಾ ಕಚೇರಿಯ ಭಾಗಮಂಡಲ ಹೋಬಳಿ ಅಧ್ಯಕ್ಷ ಕೆ.ಸಿ.ವೆಂಕಟೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರೋಪಾಯಗಳನ್ನು ಸೂಚಿಸುವ ಶಾಸಕ ಪೊನ್ನಣ್ಣ ಅವರ ಕಾರ್ಯವೈಖರಿ ಬಗ್ಗೆ ಗ್ರಾಮಸ್ಥರಿಗೆ ತೃಪ್ತಿ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾಗಮಂಡಲ ಗ್ರಾ.ಪಂ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿದ್ದು, ದೇವರ ಕಾಡು ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನೀರಿನ ಪಂಪ್, ಮೋಟಾರ್ ಹಾಗೂ ಪೈಪ್’ಗಳನ್ನು ವಶಪಡಿಸಿಕೊಂಡಿತ್ತು. ಜೊತೆಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೆ…
ಮಡಿಕೇರಿ ಮಾ.3 NEWS DESK : ಶನಿವಾರ ಕೆಲಸಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಮನೆಗೆ ಮರಳದೆ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಮಡಿಕೇರಿ ಹೊರ ವಲಯದ ಗಾಳಿಬೀಡು ಗ್ರಾಮದ ನಿಶಾನಿ ಬೆಟ್ಟದಲ್ಲಿ ನಡೆದಿದೆ. ಗಾಳಿಬೀಡು ಗ್ರಾಮದ ನಿವಾಸಿ ಅಪ್ಪಚ್ಚ(60) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಪ್ರವಾಸಿಗರು ಟ್ರಕ್ಕಿಂಗ್ ಗಾಗಿ ನಿಶಾನಿ ಬೆಟ್ಟಕ್ಕೆ ಹೋಗುತ್ತಿದ್ದ ಸಂದರ್ಭ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ದಾಳಿಯಿಂದ ಅಪ್ಪಚ್ಚ ಅವರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಶವ ದೊರೆತ ಪ್ರದೇಶದಲ್ಲಿ ಆನೆ ಸಂಚರಿಸಿರುವ ಕುರುಹು ಪತ್ತೆಯಾಗಿದೆ. ಅಪ್ಪಚ್ಚ ಅವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಹೋಗಿದ್ದವರು ಮನೆಗೆ ಮರಳಿರಲಿಲ್ಲ. ಮನೆಯವರು ರಾತ್ರಿಯವರೆಗೂ ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಆದರೆ ಇಂದು ಮುಂಜಾನೆ ಅಪ್ಪಚ್ಚ ಅವರ ಮೃತದೇಹ ಪ್ರವಾಸಿಗರಿಗೆ ಗೋಚರಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಮಾ.3 NEWS DESK : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರಿಗೆ ಡಿಕ್ಕಿಯಾಗಿ ಮಗುಚಿಕೊಂಡ ಘಟನೆ ಪೊನ್ನಂಪೇಟೆಯ ಕಾನೂರಿಗೆ ತೆರಳುವ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅದೇ ರಸ್ತೆಯಲ್ಲಿ ತೆರಳುತ್ತಿದ್ದವರೊಬ್ಬರು ಚೆಸ್ಕಾಂ ಗೆ ಕರೆ ಮಾಡಿ ವಿದ್ಯುತ್ ಸ್ಥಗಿತಗೊಳಿಸಿ ಅವಘಡಕ್ಕೀಡಾದ ಕಾರಿನ ಚಾಲಕನನ್ನು ರಕ್ಷಿಸಿದರು. ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಿಟ್ಟೂರು ಕಾರ್ಮಾಡು ಅರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಅಭಿಯಾನ ನಡೆಯಿತು. ಕಾರ್ಯಕ್ರಮಕ್ಕೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮ್ಮಣಿ ದೀಪ ಚಾಲನೆ ನೀಡಿದರು. ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ ಮಾತನಾಡಿ ಪೋಲಿಯೋ ಹನಿ ಹಾಕುವ ಮೂಲಕ ಐದು ವರ್ಷದೊಳಗಿನ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಗ್ರಾ.ಪಂ ಸದಸ್ಯ ಕಾಟಿಮಾಡ ಶರೀನ್ ಮುತ್ತಣ್ಣ ಮಾತನಾಡಿ ಭಾರತವು ಪೋಲಿಯೊ ಮುಕ್ತ ದೇಶವಾಗಿದೆ. ಕೆಲವು ದೇಶಗಳಲ್ಲಿ ಇನ್ನೂ ಪೋಲಿಯೋ ರೋಗದ ಭೀತಿ ಇದ್ದು, ಪೋಲಿಯೊ ಹನಿ ಹಾಕುವ ಅಭಿಯಾನದಲ್ಲಿ ಕೈ ಜೋಡಿಸಿ ರಾಷ್ಟ್ರದ ಅರೋಗ್ಯ ಸುರಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಪಂಚಾಯಿತಿ ಸದಸ್ಯರಾದ ಪಡಿಞರಂಡ ಕವಿತಾ ಪ್ರಭು ಹಾಗೂ ಬಾಳೆಲೆ ಸಮುದಾಯ ಆರೋಗ್ಯ ಅಧಿಕಾರಿ ನಿಯಾಜ್ ಮಗುವಿಗೆ ಪೋಲಿಯೋ…
ಮಡಿಕೇರಿ ಮಾ.3 NEWS DESK :‘ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ಭಾನುವಾರ ಚಾಲನೆ ನೀಡಿದರು. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ (ಜಿಲ್ಲಾಸ್ಪತ್ರೆ) ಶಿಶುವಿಗೆ ಪೋಲಿಯೊ ಹನಿ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಕ್ಕಳಿಗೆ ವಿಕಲತೆ ತಪ್ಪಿಸುವಲ್ಲಿ 1995 ರಿಂದ ಪೋಲಿಯೊ ಹನಿ ನೀಡುತ್ತಾ ಬರಲಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸಕರಿಸುವಂತೆ ಮನವಿ ಮಾಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್ ಅವರು ಮಾತನಾಡಿ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಹನಿ ಕೊಡಿಸಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಬೇಡ ಎಂದು ಕೋರಿದರು. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಮಾತನಾಡಿ ಭಾತರವು ಈಗಾಗಲೇ ಪೋಲಿಯೊ ಮುಕ್ತವಾಗಿದೆ. ಆದರೂ ಹತ್ತಿರದ ರಾಷ್ಟ್ರಗಳಲ್ಲಿ ಪೋಲಿಯೊ ಕಾಣಿಕೊಂಡಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಐದು…
ಮಡಿಕೇರಿ ಮಾ.3 NEWS DESK : ಪಲ್ಸ್ ಪೊಲಿಯೋ ಅಭಿಯಾನದ ಅಂಗವಾಗಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 5 ವಷ೯ದೊಳಗಿನ ಪುಟಾಣಿಗಳಿಗೆ ಪೋಲಿಯೋ ಹನಿ ಹಾಕಲಾಯಿತು. ಮಡಿಕೇರಿ ನಗರದ ಅಶೋಕಪುರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾಯ೯ಕ್ರಮದಲ್ಲಿ 5 ವಷ೯ದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು. ಈ ಸಂದಭ೯ ಮಾತನಾಡಿದ ರೋಟರಿ ವಲಯ 6 ರ ಸಹಾಯಕ ಗವನ೯ರ್ ದೇವಣಿರ ತಿಲಕ್, ಅಂತರರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೋ ನಿವಾರಣೆಗಾಗಿ ರೋಟರಿ ಸಂಸ್ಥೆಯು ಬೃಹತ್ ಆಂದೋಲನ ಕೈಗೊಂಡಿದೆ. ಇದರ ಪರಿಣಾಮವಾಗಿಯೇ ಇಂದು ಬಹುತೇಕ ದೇಶಗಳಲ್ಲಿ ಪೊಲಿಯೋ ಕಣ್ಮರೆಯಾಗಿದೆ ಎಂದು ತಿಳಿಸಿದರು. ರೋಟರಿ ಮಿಸ್ಟಿ ಹಿಲ್ಸ್ ನ ಪಲ್ಸ್ ಪೊಲಿಯೋ ಯೋಜನೆಯ ನಿದೇ೯ಶಕ ಡಾ.ಚೇತನ್ ಶೆಟ್ಟಿ ಮಾತನಾಡಿ, ಪೊಲಿಯೋ ನಿರೋಧಕ ಲಸಿಕೆಯಲ್ಲಿ ಬಹಳಷ್ಟು ಆರೋಗ್ಯಕಾರಿ ಅಂಶಗಳಿದೆ. ಪೋಲಿಯೋ ಹನಿ ಹಾಕುವ ಮಗುವಿನಲ್ಲಿ ರೋಗ ನಿರೋಧಕ ಶಕ್ತಿಯು ಪ್ರಬಲವಾಗಿ ರೂಪುಗೊಳ್ಳುತ್ತದೆ. ಹೀಗಾಗಿ 5 ವಷ೯ದೊಳಗಿನ ಪ್ರತೀ ಮಗುವೂ ಪೊಲಿಯೋ ಹನಿ ಹಾಕಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮಿಸ್ಟಿ ಹಿಲ್ಸ್…
ಮಡಿಕೇರಿ ಮಾ.3 NEWS DESK : ಮೂರ್ನಾಡುವಿನ ಎಂ.ಬಾಡಗ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿ ನೀಡಲಾಯಿತು. ಪೋಷಕರು ಲಸಿಕಾ ಕೇಂದ್ರಕ್ಕೆ ಮಕ್ಕಳನ್ನು ಉತ್ಸಾಹದಿಂದ ಕರೆದುಕೊಂಡು ಬಂದರು. ಎಂ.ಬಾಡಗ 1 ರ ಅಂಗನವಾಡಿ ಕಾರ್ಯಕರ್ತೆ ಜಯಂತಿ ಬಿ.ಬಿ, ಎಂ.ಬಾಡಗ 2 ರ ಅಂಗನವಾಡಿ ಕಾರ್ಯಕರ್ತೆ ಭವ್ಯ, ಅರೋಗ್ಯ ಕಾರ್ಯಕರ್ತೆ ಲಲಿತ ಹಾಗೂ ಆಶಾ ಕಾರ್ಯಕರ್ತೆ ಚಂದ್ರಿಕಾ ಉಪಸ್ಥಿತರಿದ್ದರು.
ಮಡಿಕೇರಿ ಮಾ.2 NEWS DESK : ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದೊಂದಿಗೆ ಸಮುದಾಯ ಶಿಕ್ಷಣ ಅತ್ಯಂತ ಅವಶ್ಯವಾಗಿದ್ದು, ಅದನ್ನು ಎನ್.ಎಸ್.ಎಸ್ ಕಲಿಸುತ್ತದೆ ಎಂದು ಕೊಡಗು ಜಿಲ್ಲಾ ಎನ್.ಎಸ್.ಎಸ್ ನೋಡಲ್ ಅಧಿಕಾರಿ ವನಿತ್ ಕುಮಾರ್ ಅಭಿಪ್ರಾಯ ಪಟ್ಟರು. ಪೊನ್ನಂಪೇಟೆ ಸಮೀಪದ ಹಳಿಗಟ್ಟು ಸಿ.ಐ.ಟಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಹಳಿಗಟ್ಟು ಸ.ಹಿ.ಪಾ.ಶಾಲೆಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಅಧುನಿಕ ಯುಗದಲ್ಲಿ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಸಮುದಾಯದ ಶಿಕ್ಷಣದಿಂದ ವಿದ್ಯಾರ್ಥಿಗಳು ದೂರವಾಗುತ್ತಿದ್ದಾರೆ. ಮೊಬೈಲ್, ಕಂಪ್ಯೂಟರ್ ಹಿಡಿದು ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸಮುದಾಯದ ಜನರೊಂದಿಗೆ ಹೇಗೆ ಮಾತನಾಡಬೇಕು, ಮಾನವಿಯತೆಯನ್ನು ಹೇಗೆ ರೂಪಿಸಿಕೊಳ್ಳಬೇಕು, ಕೃಷಿ ಚಟುವಟಿಕೆ ತೊಡಗಿಕೊಳ್ಳುವುದು ಹೇಗೆ?, ಜನರ ಕಷ್ಟಗಳನ್ನು ಅರಿತು ಹೇಗೆ ಸಮಸ್ಯೆ ಬಗ್ಗೆ ಹರಿಸಬೇಕು ಎಂಬುದನ್ನು ತಿಳಿಯಲು ಎನ್.ಎಸ್.ಎಸ್ ಶಿಬಿರ ಸಹಕಾರಿಯಾಗಿದೆ ಎಂದು ಹೇಳಿದರು. ಮಹಾತ್ಮ ಗಾಂಧಿ 100 ಜನ್ಮ ದಿನದಂದು ಪಾರಂಭವಾದ ಈ ಯೋಜನೆ 6 ಲಕ್ಷಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಹೊಂದಿ ಶಿಸ್ತು,…
ಮಡಿಕೇರಿ ಮಾ.2 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್.ಎಲ್.ಎಂ) ಸಂಜೀವಿನಿ ಯೋಜನೆ, ಕೊಡಗು ಜಿ.ಪಂ ವತಿಯಿಂದ ಮಾ.5 ರಿಂದ ಮಾ.7ರ ವರೆಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದ ಬಾಲಭವನದ ಆವರಣದಲ್ಲಿ ನಡೆಯಲಿರುವ ಮೇಳಕ್ಕೆ ಜಿಲ್ಲೆಯ ಎಲ್ಲಾ ಗ್ರಾ.ಪಂ ಮಟ್ಟದ ಒಕ್ಕೂಟಗಳಲ್ಲಿ ಇರುವ ಗ್ರಾಮೀಣ ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ.






