ಕಾರ್ಕಳ ಏ.1 NEWS DESK : ಕರ್ನಾಟಕದ ಸುಂದರ ಕರಾವಳಿ ಪ್ರದೇಶವಾದ ಕಾರ್ಕಳವು ಸಾಂಸ್ಕೃತಿಕ ವೈಭವ, ಪ್ರಕೃತಿ ಸೌಂದರ್ಯ ಮತ್ತು ಶಾಂತ ವಾತಾವರಣಕ್ಕೆ ಪ್ರಸಿದ್ಧಿ. ಇದೇ ಊರಲ್ಲಿ ರಹಸ್ಯ ಸಂಚು ಮತ್ತು ಸತ್ಯದ ಹುಡುಕಾಟದಿಂದ ತುಂಬಿರುವ ಒಂದು ವಿಭಿನ್ನ ಕಥೆ ಮೂಡಿಬರುತ್ತದೆ ಅದೇ ‘ಡಿಟೆಕ್ಟಿವ್ ದಿವಾಕರ್’. ಈ ತುಳು ಚಲನಚಿತ್ರದ ಟೀಸರ್ ಲಾಂಚ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಡಾಕ್ಟರ್ ರವೀಂದ್ರ ಶೆಟ್ಟಿ ಬಜಗೋಳಿ ಅವರು ಉದ್ಘಾಟಿಸಿ ಮಾತನಾಡಿ, “ನಮ್ಮ ನೆಲದ ಕಥೆಯನ್ನು ಹೇಳುವ ಈ ಚಲನಚಿತ್ರವು ಮುಂದಿನ ತಲೆಮಾರಿಗೆ ಒಂದು ಉತ್ತಮ ಸಂದೇಶವನ್ನು ನೀಡಲಿದೆ “ಎಂದು ತಿಳಿಸುತ್ತಾ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಚಲನಚಿತ್ರದ ಸಹ ನಿರ್ಮಾಪಕರಾದ ವಿಭಾ ಪ್ರೊಡಕ್ಷನ್ ನ ಅಶ್ವತ್ ಎಸ್.ಎಲ್ . “ಈ ಚಲನಚಿತ್ರವು ಒಂದು ಹೊಸ ಕಥಾಹಂದರವನಿಟ್ಟುಕೊಂಡು ನಿರ್ಮಾಣವಾಗಿದ್ದು ಕಾರ್ಕಳದ ಗತಿಸಿ ಹೋದ ಘಟನೆಗಳನ್ನು ಮತ್ತೆ ನೆನಪಿಸುವ, ರಹಸ್ಯಗಳನ್ನು ಅನಾವರಣಗೊಳಿಸುವ ಈ ಕಥೆ ಪ್ರೇಕ್ಷಕರಿಗೆ…
ಲೇಖಕ: admin
ಮಡಿಕೇರಿ ಏ.1 NEWS DESK : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರುಗಳೊಂದಿಗೆ ಮನೆ ಮನೆಗೆ ತೆರಳಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಯೋಜನೆಗಳು ಮನೆ ಮನೆಗೆ ತಲುಪಿದ್ದು, ಈ ಬಾರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿರಲಿದ್ದಾರೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದರು.
ಮಡಿಕೇರಿ ಏ.1 NEWS DESK : ಭಾಗಮಂಡಲ ಮೂಲದ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಕೆ.ಬಿ.ರೀಮಾ ಅವರು ಮಂಡಿಸಿದ “ಗ್ರೋಥ್ & ಕ್ಯಾರೆಕ್ಟರೈಷೇಶನ್ ಆಫ್ ಡೈವೆಲೆಂಟ್ ಕ್ಯಾಟ್ಅಯಾನ್ಸ್ ಡೋಪ್ಡ್ ಟಾಟ್ರೇಟ್ ಸಿಂಗಲ್ ಕ್ರಿಸ್ಟಲ್ಸ್ ” ವಿಷಯಕ್ಕೆ ಮಂಗಳೂರು ವಿವಿಯಿಂದ ಪಿಹೆಚ್ ಡಿ ಪದವಿ ಲಭಿಸಿದೆ. ರೀಮಾ ಅವರು ಪ್ರಸ್ತುತ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮಂಗಳೂರು ವಿವಿ ಕಾಲೇಜು ಭೌತಶಾಸ್ತ್ರ ಪ್ರಾಧ್ಯಾಪಕ ಡಾ. ಜಗನ್ನಾಥ ನೆತ್ತಾರ್ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ನಿವೃತ್ತ ಉಪ ತಹಶೀಲ್ದಾರ್ ಕೆದಂಬಾಡಿ ಎಸ್.ಬಾಲಕೃಷ್ಣ , ನಿವೃತ್ತ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಎಸ್.ಯು.ಸಾವಿತ್ರಿ ಅವರ ಪುತ್ರಿ. ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನಹಿತ್ಲು ದಿ. ಕೆ.ಡಿ.ಜಯಪ್ರಕಾಶ್ ಅವರ ಪತ್ನಿಯಾಗಿದ್ದಾರೆ.
ಕಣಿವೆ ಏ.1 NEWS DESK : ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಡಾ.ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದ ವತಿಯಿಂದ ಆಚರಿಸಲಾಯಿತು. ಶ್ರೀಗಳ ಭಾವಚಿತ್ರವನ್ನು ಪೂಜಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ನೆರೆದ ಭಕ್ತರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭ ಗುಡ್ಡೆಹೊಸೂರು ವೀರಶೈವ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ, ಕಾರ್ಯದರ್ಶಿ ದಾಕ್ಷಾಯಿಣಿ, ಸಿದ್ದಗಂಗಾ ಭಕ್ತ ಮಂಡಳಿ ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಮುಖರಾದ ಶುಭಶೇಖರ, ಉದ್ಯಮಿ ಮೌರ್ಯ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಾಗರ್, ಸಹಕಾರ ಸಂಘದ ಉಪಾಧ್ಯಕ್ಷ ಕಾಶಿ, ಹುಲುಸೆ ವೀರಶೈವ ಸಮಾಜದ ಅಧ್ಯಕ್ಷ ಶಿವನಂಜಪ್ಪ, ಕವಿತಾ, ವೈಶಾಲಿ, ಚಿದಾನಂದ, ಗಣೇಶ, ಚಿಮ್ಮಣ್ಣ, ಶಿಕ್ಷಕ ಪುಟ್ಟರಾಜು, ಸಂಪತ್, ಮೊದಲಾದವರು ಇದ್ದರು. ಕಾರ್ಯಕ್ರಮದ ಪ್ರಯುಕ್ತ ವೃತ್ತವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
ಮಡಿಕೇರಿ ಏ.1 NEWS DESK : ಬ್ಯಾರಿ ಅಕಾಡಮಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಒಂದು ಸಂಸ್ಥೆಗೆ ಸೀಮಿತ ಅಲ್ಲ ಬದಲಾಗಿ ಬ್ಯಾರಿ ಭಾಷೆ, ಕಲೆ ಸಂಸ್ಕ್ರತಿಯನ್ನು ಬಿಂಬಿಸುವ ವೇದಿಕೆಯಾಗಿದೆ. ಸಾಹಿತ್ಯ , ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡವರನ್ನು ಸಮ್ಮೇಳನದಲ್ಲಿ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ, ಸಮ್ಮೇಳನದ ಭಾಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಬ್ಯಾರಿ ಸಮುದಾಯದ ಅಭಿವೃದ್ಧಿಗಾಗಿ ಎಲ್ಲರೂ ಸಹಕರಿಸಬೇಕೆಂದು ಹಿರಿಯ ಸಾಹಿತಿ ಬಿ.ಎ.ಶಂಷುದ್ದೀನ್ ಕರೆ ನೀಡಿದರು. ಏ.28 ರಂದು ಮಡಿಕೇರಿಯಲ್ಲಿ ಕರ್ನಾಟಕ ಬ್ಯಾರಿ ಅಕಾಡಮಿ ಹಾಗೂ ಕೊಡಗು ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನದ ಭಾಗವಾಗಿ ಮಡಿಕೇರಿಯ ಕಮ್ಯುನಿಟಿ ಸಭಾಂಗಣದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಾಮಾಜಿಕ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಮಹಿಳೆಯರು, ಮಕ್ಕಳು ಹಾಗೂ ಯುವಕರಿಗೆ ವಿವಿಧ ಸ್ಪರ್ದೆಗಳು, ಸಮ್ಮೇಳನದಂದು ಕವಿಗೋಷ್ಟಿ, ವಿಚಾರ ಸಂಕೀರಣ, ವಿಚಾರ ಗೋಷ್ಠಿ ಕಾರ್ಯಕ್ರಮಗಳು ನಡೆಯಲಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.…
ಮಡಿಕೇರಿ ಏ.1 NEWS DESK : ದಾವಣಗೆರೆ ಉಪ ಚುನಾವಣೆ ಹಿನ್ನೆಲೆ ದಾವಣಗೆರೆ ಕಾಂಗ್ರೆಸ್ ಚುನಾವಣಾ ಪ್ರಚಾರದ ಕಚೇರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ನೀಡಿದರು. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಚುನಾವಣಾ ಪ್ರಚಾರ ನಡೆಸಲು ದಾವಣಗೆರೆ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಗೆ ನೀಡಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಏ.1 : ಪ್ರಕೃತಿ ಪ್ರಿಯರ ಸ್ವರ್ಗ, ಕಾವೇರಿ ನದಿಯ ತವರು ಜಿಲ್ಲೆ ಕೊಡಗಿನ ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧನೆಯನ್ನು ನಾಪೋಕ್ಲುವಿನ ಯವಕಪಾಡಿ ಗ್ರಾಮದ ಅರೆಯಡ ಗಿರೀಶ್ ತಿಮ್ಮಯ್ಯ ಅವರು ಮಾಡಿದ್ದಾರೆ. ಸಮುದ್ರ ಮಟ್ಟದಿಂದ 1748 ಮೀಟರ್ ಎತ್ತರದಲ್ಲಿರುವ ತಡಿಯಂಡಮೋಳ್ ನ್ನು ಏರುವುದು ಸುಲಭದ ಮಾತಲ್ಲ, ಅದರಲ್ಲೂ 100 ಬಾರಿ ಬೆಟ್ಟವನ್ನೇರುವುದೆಂದರೆ ಅದು ಮಹಾ ಸಾಧನೆಯೇ ಸರಿ. 1994ರ ಅವಧಿಯಲ್ಲಿ ತಡಿಯಂಡಮೋಳ್ ಬೆಟ್ಟವನ್ನು ಏರಲೆಂದೇ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಆ ಸಂದರ್ಭ ಯವಕಪಾಡಿ ಗ್ರಾಮದ ಅಪ್ಪಾರಂಡ ಅಪ್ಪಣ್ಣ ಎಂಬುವವರ ಮನೆಯಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರೊಬ್ಬರು ಹಣ ಪಡೆದು ಆಶ್ರಯ ಮತ್ತು ಆತಿಥ್ಯ ನೀಡುವಂತೆ “ಹೋಂಸ್ಟೇ” ಪರಿಕಲ್ಪನೆಯನ್ನು ಪರಿಚಯಿಸಿದರು. ಅಂದಿನಿoದ ಅಪ್ಪಾರಂಡ ಅಪ್ಪಣ್ಣ ಅವರು “ಪ್ಯಾಲೇಸ್ ಎಸ್ಟೇಟ್” ಹೆಸರಿನ ಹೋಂಸ್ಟೇ ಮೂಲಕ ಚಿರಪರಿಚಿತರಾದರು. ಹೋಂಸ್ಟೇಗೆ ದಿನದಿಂದ ದಿನಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾದಂತೆ ತಡಿಯಂಡಮೋಳ್ ಗೆ ಸಾಗುವ ಪ್ರವಾಸಿಗರಿಗೆ ಗೈಡ್ ವೊಬ್ಬರ…
ಮಡಿಕೇರಿ ಏ.1 NEWS DESK : ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಏ.2 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.
ಮಡಿಕೇರಿ ಏ.1 NEWS DESK : ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಕಾರದೊಂದಿಗೆ ಮಡಿಕೇರಿ ಯೂತ್ ಕ್ರಿಕೆಟ್ ಕ್ಲಬ್(ಎಂವೈಸಿಸಿ) ವತಿಯಿಂದ ವಿವಿಧ ವಯೋಮಿತಿಯ ಮಂಗಳೂರು ವಿಭಾಗದ ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಪ್ರತಿಭಾವಂತ ಆಟಗಾರರ ಆಯ್ಕೆ ಪ್ರಕ್ರಿಯೆ ಏ.6 ಮತ್ತು 7 ರಂದು ಮರಗೋಡು ಶಾಲಾ ಮೈದಾನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಂವೈಸಿಸಿ ಅಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ ಆಯ್ಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿ, ಬಾಲಕರ 14, 16 ಮತ್ತು 19 ವರ್ಷದೊಳಗಿನ ತಂಡಗಳಿಗೆ ಆಟಗಾರರ ಆಯ್ಕೆ ಪ್ರಕ್ರಿಯೆ ಏ.6 ರಂದು ನಡೆಯಲಿದ್ದು, ಬಾಲಕಿಯರ 15 ಮತ್ತು 19 ವರ್ಷದೊಳಗಿನ ತಂಡಗಳ ಆಯ್ಕೆ ಪ್ರಕ್ರಿಯೆ ಏ.7 ರಂದು ನಡೆಯಲಿದೆ. ಆಯ್ಕೆ ಪ್ರಕ್ರಿಯೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆಯೆಂದು ತಿಳಿಸಿದರು. ಶಾಲಾ ಪರೀಕ್ಷೆಗಳ ಹಿನ್ನೆಲೆ ಪ್ರತಿಭಾವಂತರು ಆಯ್ಕೆಯಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಬಾಲಕರ 14 ವರ್ಷದೊಳಗಿನ ಆಯ್ಕೆಯಲ್ಲಿ ಆರಂಭಿಕ ದಿನದಂದು ಪಾಲ್ಗೊಳ್ಳಲು ಸಾಧ್ಯವಾಗದವರಿಗೆ ಏ.17 ರಂದು ಅವಕಾಶವನ್ನ…
ಮಡಿಕೇರಿ, NEWS DESK ಏ.1 : ಓಂಕಾರೇಶ್ವರ ವ್ಯವಸ್ಥಾಪನಾ ಸಮಿತಿಯ ಉಸ್ತುವಾರಿಯಲ್ಲಿರುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಶ್ರೀ ಕೋಟೆ ಮಹಾಗಣಪತಿ ದೇವಾಲಯಗಳ ಅಭಿವೃದ್ಧಿಗೆ ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಒಟ್ಟು ರೂ 1 ಕೋಟಿ ಅನುದಾನವನ್ನು ಸರಕಾರದಿಂದ ಒದಗಿಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದ್ದಾರೆ. ಮಡಿಕೇರಿಯಲ್ಲಿ ಭೇಟಿ ಮಾಡಿದ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಗೂ ಸದಸ್ಯರುಗಳಾದ ಅಂಬೆಕಲ್ ಕುಶಾಲಪ್ಪ, ಪ್ರಕಾಶ್ ಆಚಾರ್ಯ ಮತ್ತು ಜಿ.ರಾಜೇಂದ್ರ ಇವರುಗಳು ಮಾಡಿದ ಮನವಿಗೆ ಸ್ಪಂದಿಸಿ ಶಾಸಕರು ಈ ಭರವಸೆ ನೀಡಿದರು. ಸರಕಾರದಿಂದ ತನಗೆ ಶಾಸಕರ ಅನುದಾನ ದೊರಕುವ ಮೂಲದಿಂದ ರೂ. 50 ಲಕ್ಷ ಹಾಗೂ ಮುಜರಾಯಿ ಇಲಾಖೆಯಿಂದ ಸಚಿವ ರಾಮಲಿಂಗಾ ರೆಡ್ಡಿ ಅವರ ಮೂಲಕ ರೂ. 50 ಲಕ್ಷ, ಹೀಗೆ ಒಟ್ಟು ರೂ. 1 ಕೋಟಿ ಒದಗಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಈಗಾಗಲೇ ಸಮಿತಿಯಿಂದ ಸುಮಾರು ರೂ. 36…






